ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಶೂನ್ಯ : ಬಸವರಾಜ ಬೊಮ್ಮಾಯಿ ಟೀಕೆ

ಹುಬ್ಬಳ್ಳಿ,ಮಾ.8: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಳ್ಳದ ಕೇವಲ ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ5 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ, ಆದರೆ ಖರ್ಚು ಮಾಡಿಲ್ಲ‌, ಎಸ್‌ ಸಿ ಪಿ ಟಿಎಸ್ ಪಿ ಹಣವನ್ನೂ ಖರ್ಚು ಮಾಡುವುದಿಲ್ಲ. ಕಳೆದ ವರ್ಷ ಆದಾಯ ಸಂಗ್ರಹದಲ್ಲಿ 10 ಸಾವಿರ ಕೋಟಿ ಕಡಿಮೆ ಸಂಗ್ರಹ ಮಾಡಿದ್ದಾರೆ. ಬಂಡವಾಳ ವೆಚ್ಚ ಕೂಡ ಕಡಿಮೆ ಮಾಡಿದ್ದಾರೆ ಎಂದು ಟೀಕಿಸಿದರು.

ಈ ವರ್ಷ ಹಣಕಾಸಿನ ಪರಿಸ್ಥಿತಿ ಸುಧಾರಿಸುವ ಯಾವುದೇ ದಿಟ್ಟ ಕ್ರಮ ಇಲ್ಲ. ಹೀಗಾಗಿ ಹೆಚ್ಚಿನ ಸಾಲ ತೆಗೆದುಕೊಳ್ಳುವುದೇ ಇವರ ಸಾಧನೆಯಾಗಿದೆ ಎಂದು ಲೇವಡಿ ಮಾಡಿದರು.

ಈ ಬಜೆಟ್ ಕರ್ನಾಟಕವನ್ನು ಇನ್ನಷ್ಟು ಸಾಲದ ಕೂಪಕ್ಕೆ ನೂಕಿದೆ, ಹಾಗಾಗಿ ಇದೊಂದು ಜನ ವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ ಇದಾಗಿದೆ ಎಂದು ಆರೋಪಿಸಿದರು.

ಕಿತ್ತೂರು ಕರ್ನಾಟಕ ಭಾಗಕ್ಕೆ ಶೂನ್ಯ ಕೊಡುಗೆ ನೀಡಿದ್ದು, ಇದು ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಎಂದು ಬಸವರಾಜ ಬೊಮ್ಮಾಯಿ ದೂರಿದರು.

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಶೂನ್ಯ : ಬಸವರಾಜ ಬೊಮ್ಮಾಯಿ ಟೀಕೆ Read More

ಜೋಸೆಫ್ ಲೋಬೋ ಅವರಿಗೆ ರೈತ ರತ್ನ ರಾಷ್ಟ್ರೀಯ ಪ್ರಶಸ್ತಿ

ಹುಬ್ಬಳ್ಳಿ: ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ವಿಶ್ವ ವಿಜಯ ಪತ್ರಿಕೆಯ 20ನೇ ವಾರ್ಷಿಕೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ನಗರ ಬೈರಿ ದೇವರ ಕೊಪ್ಪಳ ಡಾ. ಬಿಆರ್ ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವ ವಿಜಯ ಪತ್ರಿಕೆಯ 20ನೇ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.

ವಾರ್ಷಿಕೋತ್ಸವ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು

ಪ್ರಶಸ್ತಿ ಪುರಸ್ಕೃತರಲ್ಲಿ ಕೃಷಿ ಸಾಧಕ ಜೋಸೆಫ್ ಲೋಬೋ ಶಂಕರಪುರ ಅವರು ಪ್ರಮುಖರು. ಅವರಿಗೆ ರೈತ ರತ್ನ ರಾಷ್ಟ್ರೀಯ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು‌ ಅಂತರಾಷ್ಟ್ರೀಯ ಪಾಲಿಭಾಷಾ ತಜ್ಞರು ಶ್ರೀ ಪಬ್ಬಸ್ವರವಿತಿ ಪಾಲಿವಿಜ್ಞಾ ಮುನಿಯ ಅವರು ವಹಿಸಿದ್ದರು.

ಗಂಗಾವತಿ ಸಿಲ್ಕ್ ಪ್ಯಾಲೇಸ್ ನ ಆನಂದ್ ಬಸವರಾಜ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಕ.ರಾ.ನಿ.ನೌ ಸಂಘದ ಬಿ.ಎ ಪಾಟೀಲ್ ಹಾಗೂ ಪ್ರಗತಿಪರ ರೈತರು, ಉಪನ್ಯಾಸಕರು ಪತ್ರಿಕೆಯ ಪ್ರಧಾನ ಸಂಪಾದಕರು ಡಿ.ಎಂ.ಬುರಡಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಜೋಸೆಫ್ ಲೋಬೋ ಅವರಿಗೆ ರೈತ ರತ್ನ ರಾಷ್ಟ್ರೀಯ ಪ್ರಶಸ್ತಿ Read More

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ

ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌ ಎಂದು ಎಚ್ಚರಿಸಿದ್ದಾರೆ.

ಡಿ.ಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೊ ಅವರಿಗೇ ಕೇಳಬೇಕು ಎಂದು ಹೇಳಿದರು

ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ವಿವಿಧ ಹಗರಣದಗಳು ಕೇಳಿ ಬಂದಿವೆ ಹಾಗಾಗಿ ಹೆಚ್ಚು ದಿನ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿ ಉಳಿಯುವುದಿಲ್ಲ ಎಂದು ತಿಳಿಸಿದರು.

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ Read More