ಜಿ ಡಿ ಹರೀಶ್ ಗೌಡರಿಗೆ ವಿವಿಧ ಸಂಘಟನೆಗಳ ಮುಖಂಡರ ಅಭಿನಂದನೆ

ಮೈಸೂರು: ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹುಣಸೂರಿನ ಶಾಸಕರಾದ ಜಿ ಡಿ ಹರೀಶ್ ಗೌಡರಿಗೆ ವಿವಿಧ ಸಂಘಟನೆಗಳ ಮುಖಂಡರು ಅಭಿನಂದನೆ ಸಲ್ಲಿಸಿದರು.

ಚಾಮರಾಜ ಜೋಡಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಕಚೇರಿಯಲ್ಲಿ ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ವಿಕ್ರಂ ಅಯ್ಯಂಗಾರ್, ಗುತ್ತಿಗೆದಾರರಾದ ದೇವು, ಬೈರತಿ ಲಿಂಗರಾಜು, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷರಾದ ಎಸ್‌ ಎನ್ ರಾಜೇಶ್, ಅಮಿತ್ ಹಾಗೂ ವಿವಿಧ ಸಂಘಟನೆಯ ಮುಖಂಡರು ಅಭಿನಂದನೆ ಸಲ್ಲಿಸಿ,ಶುಭ ಕೋರಿದರು.

ಜಿ ಡಿ ಹರೀಶ್ ಗೌಡರಿಗೆ ವಿವಿಧ ಸಂಘಟನೆಗಳ ಮುಖಂಡರ ಅಭಿನಂದನೆ Read More