ಪ್ರಿಯತಮನ ಜತೆ ಸೇರಿ ತಾಯಿಯ ಕೊಂ*ದ 16 ರ ಪೋರಿ!

ಹೈದರಾಬಾದ್: ಏನ್ ಕಾಲ ಬಂತೋ ಏನು ಕಥೆಯೊ ಸಣ್ಣ,ಪುಟ್ಟವರೆಲ್ಲ ಕೊಲೆಗಡುಕರಾಗ್ತಾ ಇದಾರೆ!

ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ಹೋಗಲು ಬಿಡದೆ ವಿರೋಧ ಮಾಡಿದ್ದಕ್ಕೆ ಪಾಪಿ ಮಗಳು ಜನ್ಮ ಕೊಟ್ಟ ತಾಯಿಯನ್ನೇ ಕೊಂದಿದ್ದಾಳೆ.

ಇನ್ನೂ 16 ವರ್ಷ, 10ನೇ ತರಗತಿ ಓದುತ್ತಿದ್ದ ಹುಡುಗಿ ತನ್ನ ಪ್ರಿಯತಮನೊಂದಿಗೆ ಸೇರಿ ತನ್ನನ್ನು ಹೆತ್ತು,ಹೊತ್ತು ಸಾಕಿ ಬೆಳೆಸಿದ ಅಮ್ಮನನ್ನು ಕೊಂದಿದ್ದಾಳೆ!.

ಇಂತಹ ಹೇಯ ಘಟನೆ ಹೈದರಾಬಾದ್ ನ ಜೀಡಿಮೆಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಗೆ ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಯುವಕನೊಬ್ಬನ ಪರಿಚಯವಾಗಿ,ಪ್ರೀತಿಗೆ ತಿರುಗಿದೆ,ಆತನಿಗೂ ಒಪ್ಪಗೆ ಆಗಿ ಚಾಟಿಂಗ್ ನಲ್ಲಿದ್ದರು.

ಜೂನ್​ 19 ರಂದು ಬಾಲಕಿ ಮನೆ ಬಿಟ್ಟು ಹೋಗಿದ್ದಳು.ಆಕೆ ಹೋದ ವಿಚಾರ ಗೊತ್ತಾಗಿ ತಾಯಿ ಅದೇ ದಿನ ಪೊಲೀಸರಿಗೆ ದೂರು ನೀಡಿದ್ದರು.ಹುಡುಕಾಟ ನಡೆಸಿದ ಪೊಲೀಸರು ಜೂ. 20 ರಂದು ಬಾಲಕಿಯನ್ನು ಪತ್ತೆ ಮಾಡಿ ಕರೆತಂದು ತಾಯಿಗೆ ಒಪ್ಪಿಸಿದ್ದರು.

ಅಂದಿನಿಂದ, ಈ ವಿಷಯವಾಗಿ ತಾಯಿ ಮತ್ತು ಮಗಳ ನಡುವೆ ಜಗಳವಾಗುತ್ತಿತ್ತು. ತಾಯಿ ಮಗಳ ಪ್ರೀತಿಯನ್ನು ಒಪ್ಪಿಕೊಳ್ಳದೆ ಇನ್ನೂ ಚಿಕ್ಕ ವಯಸ್ಸು ಓದು,ಮುಂದೆ‌ ಬಾ ನಂತರ ನೋಡೋಣ,ಈ ಪ್ರೀತಿ ಗೀತಿ ಎಲ್ಲಾ‌ಬುಡು ಎಂದು ಹೇಳಿದ್ದಾರೆ.ಇದರಿಂದ ಕೋಪಗೊಂಡ ಪುತ್ರಿ, ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿ ಈ ವಿಷಯವನ್ನು ತನ್ನ ಪ್ರಿಯಕರನಿಗೆ ತಿಳಿಸಿದ್ದಾಳೆ.

ಸೋಮವಾರ ಮಧ್ಯರಾತ್ರಿ ಪ್ರಿಯಕರ ತನ್ನ ಸಹೋದರನೊಂದಿಗೆ ಬಾಲಕಿಯ ಮನೆಗೆ ಬಂದಿದ್ದಾನೆ.

ನಂತರ ಮೂವರೂ ಸೇರಿ ತಾಯಿಯ ಕುತ್ತಿಗೆಗೆ ಹಗ್ಗ ಕಟ್ಟಿ, ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಬಾಲಕಿಯ ಪ್ರಿಯಕರ ಮತ್ತು ಆತನ ಸಹೋದರ ಅಲ್ಲಿಂದ ಪರಾರಿಯಾಗಿದ್ದರು.

ಬೆಳಿಗ್ಗೆ ಸ್ಥಳೀಯರಿಗೆ ವಿಷಯ ಗೊತ್ತಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ಬಾಲಾನಗರ ಡಿಸಿಪಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಿಯತಮನ ಜತೆ ಸೇರಿ ತಾಯಿಯ ಕೊಂ*ದ 16 ರ ಪೋರಿ! Read More

ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಕಮಟು!

ಹೈದರಾಬಾದ್: ಬಹು ಭಾಷೆಗಳ ಚಿತ್ರಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ಹಾಡಿರುವ ಖ್ಯಾತ ಹಿನ್ನೆಲೆ ಮಂಗ್ಲಿಗೆ ಸಂಕಷ್ಟ ಎದುರಾಗಿದೆ.

ಅದೂ ಮಂಗ್ಲಿಯ ಬರ್ತ್​ಡೇ ಪಾರ್ಟಿಯಂದೇ ಸಂಕಷ್ಟ ಎದುರಾಗಿರುವುದು ದುರ್ದೈವವೇ ಸರಿ.

ಮಂಗ್ಲಿಯ‌ ಬರ್ತಡೆ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳು ಪತ್ತೆಯಾಗಿದೆ.

ಹೈದರಾಬಾದ್ ಪೊಲೀಸರು ಮಂಗ್ಲಿ ಮತ್ತು ಪಾರ್ಟಿಯಲ್ಲಿದ್ದ ಇತರೆ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಂಗ್ಲಿಯ ಹುಟ್ಟುಹಬ್ಬ‌ ನಿನ್ನೆ ತಡರಾತ್ರಿವರೆಗೂ ಸಾಗಿತ್ತು, ಪಾರ್ಟಿಯ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ.

ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯ ಮೇಲೆ ದಾಳಿ ನಡೆಸಿದ ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಿದ್ದು, ಮಾದಕ ವಸ್ತು ಸೇವಿಸಿರುವುದು ಖಚಿತ ವಾಗಿರುವುದರಿಂದ ಪ್ರಕರಣ ದಾಖಲಿಸಿದ್ದಾರೆ.

ಹೈದರಾಬಾದ್ ಪೊಲೀಸರ ಮಾದಕ ವಸ್ತು ನಿಗ್ರಹ ದಳದ ಸದಸ್ಯರು ದಾಳಿ ನಡೆಸಿದ್ದು, ಈ ವೇಳೆ ಪಾರ್ಟಿಯಲ್ಲಿ ಹಾಜರಿದ್ದವರ ರಕ್ತದ ಮಾದರಿಗಳನ್ನು ತೆಗೆದುಕೊಳ್ಳಲಾಗಿದ್ದು,ಆ ಪೈಕಿ ಒಂಬತ್ತು ಮಂದಿ ಮಾದಕ ವಸ್ತು ಸೇವಿಸಿರುವುದು ಖಚಿತವಾಗಿದೆ.ಅವರೆಲ್ಲ ಗಾಂಜಾ ಸೇವನೆ ಮಾಡಿದ್ದರು.

ಮಂಗ್ಲಿಯ ಪಾರ್ಟಿಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಕೆಲ ವಿದೇಶಿ ಮದ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗ್ಲಿ ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಪೊಲೀಸರಿಗೇ ಧಮ್ಕಿ ಹಾಕಿದ್ದಾರೆ.

ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಕಮಟು! Read More

ಥಿಯೇಟರ್ ನಲ್ಲಿ ಮಹಿಳೆ ಸಾವು ಪ್ರಕರಣ:ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು

ಹೈದರಾಬಾದ್: ಡಿಸೆಂಬರ್ 4 ರಂದು ಪುಷ್ಪಾ-2 ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ ಸಂಬಂಧ ಖ್ಯಾತ ನಟ ಅಲ್ಲು ಅರ್ಜುನ್ ಚಿಕ್ಕಡಪಲ್ಲಿ ಪೊಲೀಸರ ಮುಂದೆ ಹಾಜರಾಗಿ ‌ವಿಚಾರಣೆ ಎದುರಿಸಿದರು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು,ಅದರಂತೆ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರಾದರು.

ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯ ನಂತರ, ಮೃತ ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಡಿಸೆಂಬರ್ 13 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.

ಅವರಿಗೆ ತೆಲಂಗಾಣ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬಿಡುಗಡೆಗೂ ಮುನ್ನ ಚಂಚಲಗುಡ ಜೈಲಿನಲ್ಲಿ ರಾತ್ರಿಯನ್ನು ಕಳೆದಿದ್ದರು. ಜೈಲಿನಿಂದ ಹೊರಬಂದ ಬಳಿಕ ಅಲ್ಲು ಅರ್ಜುನ್ ಅವರು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದರು.

ಈ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ನಟನ ಬೆಂಬಲಿಗರು ಮಹಿಳೆಯ ಸಾವು ಸಂಪೂರ್ಣವಾಗಿ ಅಪಘಾತ ಎಂದು ಹೇಳಿದರೆ, ಅಧಿಕಾರಿಗಳು ಅರ್ಜುನ್ ಮತ್ತು ಅವರ ತಂಡದ ಬೇಜವಾಬ್ದಾರಿ ಎಂದು ದೂರಿದ್ದಾರೆ.

ಥಿಯೇಟರ್ ನಲ್ಲಿ ಮಹಿಳೆ ಸಾವು ಪ್ರಕರಣ:ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು Read More

ಮಹಿಳೆ ಸಾವು ಪ್ರಕರಣ‌:ಅಲ್ಲು ಅರ್ಜುನ್ ಬಂಧನ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲಿವುಡ್ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ.

ಕಳೆದ ವಾರ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ರಷ್ಮಿಕಾ ಮಂದಣ್ಣ ಮತ್ತಿತರರು ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.

ಆಗ ಅಲ್ಲು ಅರ್ಜುನ್ ಥಿಯೇಟರ್ ಗೆ ಬಂಧಿರುವ ವಿಷಯ ತಿಳಿದು ಅಭಿಮಾನಿಗಳು ಅವರನ್ನು ನೋಡಲು ಒಮ್ಮೆಗೆ ಸಿನೆಮಾ ಮಂದಿರದ ಒಳಗೆ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.ಆ ಸಂದರ್ಭದಲ್ಲಿ ಒಬ್ಬ ಮಹಿಳೆ ಉಸಿರುಗಟ್ಟಿ ನಿಧನ ಹೊಂದಿದ್ದರು.

ಈ ಹಿನ್ನೆಲೆಯಲ್ಲಿ ಚೀಕಟಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ.

ಮಹಿಳೆ ಸಾವು ಪ್ರಕರಣ‌:ಅಲ್ಲು ಅರ್ಜುನ್ ಬಂಧನ Read More

ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತ ಆತ್ಮಹತ್ಯೆ

ನಟಿ ಶೋಭಿತಾ ಆತ್ಮಹತ್ಯೆ

ಬೆಂಗಳೂರು: ಬ್ರಹ್ಮಗಂಟು ಧಾರವಾಹಿ ಖ್ಯಾತಿಯ‌ ನಟಿ ಶೋಭಿತ ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಟಿ ಶೋಭಿತಾ ಶಿವಣ್ಣ(30) ಅವರು ಹೈದರಾಬಾದ್‌ನ ಕೊಂಡಾಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಕಳೆದ ರಾತ್ರಿಯೇ ಸಾವನ್ನಪ್ಪಿರಬಹುದೆಂದು ಪೊಲೀಸರು ಶಂಕಿ ಸಿದ್ದಾರೆ.

ಹಾಸನದ ಸಕಲೇಶಪುರ ಮೂಲದ ಶೋಭಿತಾ, ಕಳೆದ ವರ್ಷವಷ್ಟೆ ವಿವಾಹವಾ ದ್ದರು.ನಂತರ ನಟನೆಯಿಂದ ದೂರ ಉಳಿದಿದ್ದರು.

ಬ್ರಹ್ಮಗಂಟು, ನಿನ್ನಿಂದಲೇ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದ ಶೋಭಿತಾ ‘ಜಾಕ್‌ಪಾಟ್’, ‘ಎರಡೊಂದ್ಲ ಮೂರು’, ‘ವಂದನಾ’, ‘ಅಟೆಂಪ್ಟ್‌ ಟು ಮರ್ಡರ್’ ಸೇರಿದಂತೆ ಹಲವು ಸಿನಿಮಾಗಳಲ್ಲೂ ನಟಿಸಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ,
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಬೆಂಗಳೂರಿಗೆ ರವಾನಿಸಲಾಗುತ್ತದೆ.

ಗಚ್ಚಿಬೌಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತ ಆತ್ಮಹತ್ಯೆ Read More

6 ಮಾವೋವಾದಿಗಳ ಹತ್ಯೆ: ಇಬ್ಬರು ಯೋಧರಿಗೆ ಗಾಯ

ಹೈದರಾಬಾದ್: ತೆಲಂಗಾಣ ರಾಜ್ಯದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ 6 ಮಂದಿ ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ.

ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.

ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆದು 6 ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ತಿಳಿಸಿದ್ದಾರೆ.

6 ಮಾವೋವಾದಿಗಳ ಹತ್ಯೆ: ಇಬ್ಬರು ಯೋಧರಿಗೆ ಗಾಯ Read More