ಬೃಹತ್ ಶ್ರೀ ವೈಷ್ಣವ ಸಮಾವೇಶಕ್ಕೆ ಮನೆ ಮನೆಗೆ ತೆರಳಿ ಕರಪತ್ರ ನೀಡಿ ಆಹ್ವಾನ

ಮೈಸೂರು: ನವಂಬರ್ 24ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಶ್ರೀ ವೈಷ್ಣವ ಸಮಾವೇಶಕ್ಕೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಮನೆ,ಮನೆಗೆ ತೆರಳಿ ಆಹ್ವಾನ ಪತ್ರಿಕೆ ನೀಡಲಾಯಿತು.

ಯತಿರಾಜ ಮಠದ ಜಗತ್ ಗುರುಗಳಾದ ಶ್ರೀ ಯಧುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್
ರವರ ಆಶಯ ಹಾಗೂ ಸಂಕಲ್ಪದಂತೆ
ಶ್ರೀ ಯತಿರಾಜ ಮಠ ಹಾಗೂ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾದ ವತಿಯಿಂದ ನವಂಬರ್ 24ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀ ರಾಮಾನುಜ ವಿಶ್ವ ವಿಜಯೋತ್ಸವ ನಮ್ಮ ನಡೆ ರಾಮಾನುಜರ ಕಡೆಗೆ ಎಂಬ ವೇದವಾಕ್ಯದೊಂದಿಗೆ ಬೃಹತ್ ಶ್ರೀ ವೈಷ್ಣವ ಸಮಾವೇಶ ನಡೆಯಲಿದೆ.

ಚಾಮುಂಡಿಪುರಂ, ಕೃಷ್ಣಮೂರ್ತಿಪುರಂ ಸೇರಿದಂತೆ ಮತ್ತಿತರೆಡೆ‌ ಮನೆಗಳಿಗೆ ತರಳಿ ಮುಖಂಡರುಗಳನ್ನು ಭೇಟಿ ನೀಡಿ ಕರಪತ್ರ ನೀಡಿ ಬೃಹತ್ ಶ್ರೀ ವೈಷ್ಣವ ಸಮಾವೇಶಕ್ಕೆ
ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ,ನಗರ ಪಾಲಿಕೆ ಸದಸ್ಯರಾದ ಎಂ ಡಿ ಪಾರ್ಥಸಾರಥಿ , ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಎಂ ಆರ್ ಕೇಶವ್ ಪ್ರಸಾದ್, ಮಾಧವ ರಾವ್ ಮತ್ತಿತರರು ಹಾಜರಿದ್ದರು.

ಬೃಹತ್ ಶ್ರೀ ವೈಷ್ಣವ ಸಮಾವೇಶಕ್ಕೆ ಮನೆ ಮನೆಗೆ ತೆರಳಿ ಕರಪತ್ರ ನೀಡಿ ಆಹ್ವಾನ Read More