ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ:9 ಸಾವು

ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ, ಒಂಭತ್ತು ಮೃತಪಟ್ಟಿದ್ದಾರೆ.

ಈ ಸ್ಪೋಟದಲ್ಲಿ 27 ಜನರು ಗಾಯಗೊಂಡಿದ್ದು‌ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು.

ಆ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದ್ದು, ಒಂಭತ್ತು ಜನರು ಮೃತಪಟ್ಟು 27 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರು ಪೊಲೀಸರು ಮತ್ತು ವಿಧಿವಿಜ್ಞಾನ ಅಧಿಕಾರಿಗಳು.

ಬಂಧಿತ ವೈದ್ಯ ಮುಜಮ್ಮಿಲ್ ಗನೈ ಅವರ ಬಾಡಿಗೆ ನಿವಾಸದಿಂದ ವಶಪಡಿಸಿಕೊಂಡ 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳ ಭಾಗವಾಗಿರುವ ಈ ವಸ್ತುವನ್ನು ನಡೆಯುತ್ತಿರುವ ತನಿಖೆಯ ಭಾಗವಾಗಿ ಮಾದರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ:9 ಸಾವು Read More

ಜಮ್ಮು- ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಮೇಘಸ್ಫೋಟ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿ,ನಾಲ್ಕೈದು ಜನ ಮೃತಪಟ್ಟಿದ್ದಾರೆ.

ಆರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿ ಕೂಡಾ ಹಾನಿಯಾಗಿದೆ.

ಕಥುವಾ ಜಿಲ್ಲೆಯ ಘಾಟಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಹಲವಾರು ಮನೆಗಳು ಮಣ್ಣಿನಡಿ ಮುಚ್ಚಿಹೋಗಿವೆ. ಪ್ರವಾಹದ ನೀರು ಎಲ್ಲೆಡೆ ಆವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಗೂ ಹಾನಿಯಾಗಿದೆ.

ಕಥುವಾದ ಪೊಲೀಸ್ ಠಾಣೆಯೊಂದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ರೈಲ್ವೆ ಹಳಿಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳಲ್ಲೂ ಭೂಕುಸಿತ ಸಂಭವಿಸಿದೆ. ಲಖನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಲ್ವಾನ್-ಹುಟ್ಲಿಯಲ್ಲಿಯೂ ಭೂಕುಸಿತವಾಗಿದೆ.

ಭಾರಿ ಮಳೆಯಿಂದಾಗಿ ನದಿಗಳ ಮಟ್ಟ ಹೆಚ್ಚಾಗಿದೆ. ಉಜ್ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಡಳಿತ ಜನರು ನದಿಗಳ ಬಳಿಗೆ ಹೋಗದಂತೆ ಎಚ್ಚರಿಕೆ ನೀಡಿದೆ.

ಕಿಶ್ತ್ವಾರ್‌ನಲ್ಲಿ ಇನ್ನೂ ನೂರಾರು ಜನರು ಕಾಣೆಯಾಗಿದ್ದಾರೆ. ಮಚ್ಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಪ್ರವಾಹ ಸಂಭವಿಸಿದೆ. ಅನೇಕರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಈವರೆಗೆ 167 ಜನರನ್ನು ರಕ್ಷಿಸಲಾಗಿದೆ ಅವರಲ್ಲಿ 38 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು- ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಮೇಘಸ್ಫೋಟ Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ:40 ಮಂದಿ ಸಾ*ವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿ 40 ಮೃತಪಟ್ಟಂತಾಗಿದೆ

ಈವರೆಗೆ ಇಬ್ಬರು ಸಿಐಎಸ್ಎಫ್ ಜವಾನರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರೆ, 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 220 ಮಂದಿ ನಾಪತ್ತೆಯಾಗಿದ್ದು ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ಕಿಶ್ತ್ವಾರದ ಚಶೋತಿಯಲ್ಲಿರುವ ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, ಭಕ್ತರು ತೀರ್ಥಯಾತ್ರೆ ಕೈಗೊಳ್ಳುವ ಹಾದಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಯಾತ್ರಿಕರನ್ನ ಸ್ಥಳಾಂತರ ಮಾಡಲಾಗುತ್ತಿದೆ.

ಮೇಘಸ್ಫೋಟವಾದ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್‌ ತಿಳಿಸಿದೆ.

ಈ‌ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ, ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದು
ದುರಂತ ನೆನೆದು ಮೃತರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟದಿಂದ ಉಂಟಾದ ದುರಂತದ ಹಿನ್ನೆಲೆಯಲ್ಲಿ, ನಾಳೆ ಸಂಜೆ ʻಅಟ್ ಹೋಮ್ʼ ಟೀ ಪಾರ್ಟಿಯನ್ನ ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಬೆಳಗಿನ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ರದ್ದು ಮಾಡಲು ನಿರ್ಧರಿಸಿದ್ದು, ಔಪಚಾರಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ:40 ಮಂದಿ ಸಾ*ವು Read More

ಕಂದಕಕ್ಕೆ ಉರುಳಿದ ಸಿ ಆರ್ ಪಿ ಎಫ್ ವಾಹನ:ಮೂವರು ಯೋಧರು ಸಾವು

ಜಮ್ಮು: ಕೇಂದ್ರ ಮೀಸಲು ಪೊಲೀಸ್​ ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಮೃತಪಟ್ಟ ಘಟನೆ
ಜಮ್ಮು ಮತ್ತು ಕಾಶ್ಮೀರದ ಉಧಂಪುರ್​​ ಜಿಲ್ಲೆಯ ನಲ್ಹಾದಲ್ಲಿ ನಡೆದಿದೆ.

ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 10.30ಕ್ಕೆ ಅಪಘಾತ ಸಂಭವಿಸಿದೆ. 23 ಮಂದಿ ಸಿಆರ್​ಪಿಎಫ್​ ಯೋಧರು ಬಸಂತ್​ ಘರ್​ನಿಂದ ವಾಪಸಾಗುತ್ತಿದ್ದರು.

ಜಮ್ಮು ಮತ್ತು ಕಾಶ್ಮೀರದವರೇ ಆಗಿರುವ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್, ಉಧಂಪುರ​​ ಜಿಲ್ಲಾಧಿಕಾರಿಯಿಂದ ಈ ಬಗ್ಗೆ ಮಾಹಿತಿ ಪಡೆದಿದ್ದು, ಗಾಯಗೊಂಡ ಯೋಧರಿಗೆ ಎಲ್ಲ ರೀತಿಯ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿದ ಸಿ ಆರ್ ಪಿ ಎಫ್ ವಾಹನ:ಮೂವರು ಯೋಧರು ಸಾವು Read More

ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್

ಶ್ರೀನಗರ: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.

ಆಪರೇಷನ್ ಮಹಾದೇವ್ ಅಡಿಯಲ್ಲಿ ಶ್ರೀನಗರದಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ.

ದಾಳಿಯ ಮಾಸ್ಟರ್​ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿವೆ.

ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ,ಮೂವರು ಉಗ್ರರನ್ನು ಗುಂಡಿಕ್ಕಿ ಕೊಂದಿವೆ.

ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರ ಪ್ರಾಣವನ್ನು ಕಳೆದುಕೊಂಡಿದ್ದರು.

ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್ Read More

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ

ಜಮ್ಮು: ಭಾರೀ ಮಳೆಯಿಂದ
ಜಮ್ಮು- ಕಾಶ್ಮೀರದ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾದ ಕೂಡಲೇ ಭೀತರಾದ ಜನರು, ಅಪಾಯದಿಂದ ತಪ್ಪಿಸಿಕೊಳ್ಳಲು ಅತ್ತಿತ್ತ ಓಡಲು ಹೆಣಗಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ವೀಡಿಯೋದಲ್ಲಿ ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ವಿಡಿಯೋದಲ್ಲಿ ಕಾಣುತ್ತದೆ.

ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥನ ದರ್ಶನ ಪಡೆದಿದ್ದಾರೆ.

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ Read More

ಜೈಶ್-ಎ-ಮೊಹಮ್ಮದ್‌ ಕಮಾಂಡರ್ ಸೈಫುಲ್ಲಾ ಸೇರಿ ಮೂವರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್‌ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.

ಉಗ್ರರ ಒಳನುಸುಳುವಿಕೆ ತಡೆಯಲು ಗುಡ್ಡಗಾಡು ಪ್ರದೇಶಗಳಲ್ಲಿ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾರ್ಯಾಚರಣೆಯ ಎರಡನೇ ದಿನ ಏ.11ರಂದು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಭಯೋತ್ಪಾದಕರನ್ನು ಪತ್ತೆಹಚ್ಚುವ ಕಾರ್ಯಾಚರಣೆ ಇಂದೂ ಸಹ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆಗೊಳಗಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಜೈಶ್-ಎ-ಮೊಹಮ್ಮದ್‌‌ ನ ಉನ್ನತ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ತ್ವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಉಗ್ರರ ಶೋಧದ ವೇಳೆ ಭದ್ರತಾ ಸಿಬ್ಬಂದಿ ಭಯೋತ್ಪಾದಕರು ಅಡಗಿರುವುದನ್ನು ಪತ್ತೆಹಚ್ಚಿದ್ದರು. ಈ ವೇಳೆ ಎರಡು ಕಡೆಯಿಂದ ಗುಂಡಿನ ದಾಳಿ ನಡೆದಿದೆ.

ಪ್ರತಿಕೂಲ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ನಡುವೆಯೂ ಸೈನಿಕರು ನಿರಂತರ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

ಜೈಶ್-ಎ-ಮೊಹಮ್ಮದ್‌ ಕಮಾಂಡರ್ ಸೈಫುಲ್ಲಾ ಸೇರಿ ಮೂವರು ಭಯೋತ್ಪಾದಕರ ಹತ್ಯೆ Read More

ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾಪ್ರಮಾಣ‌ವಚನ

ನವದೆಹಲಿ: ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ‌ ಹತ್ತು ವರ್ಷಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ ಬಳಿಕ ಆಯ್ಕೆಯಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣವಚನ ಬೋಧಿಸಿದರು.

ಒಮರ್ ಅಬ್ದುಲ್ಲಾ ಜೊತೆಗೆ ಶಾಸಕರಾದ ಸತೀಶ್ ಶರ್ಮಾ (ಸ್ವತಂತ್ರ), ಸಕಿನಾ ಇಟೂ, ಜಾವಿದ್ ದಾರ್, ಸುನ್ರಿಂದರ್ ಚೌಧರಿ ಮತ್ತು ಜಾವಿದ್ ರಾಣಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, ಎನ್‌ಸಿ ಸರ್ಕಾರವನ್ನು ಸೇರದೇ ಬಾಹ್ಯ ಬೆಂಬಲವನ್ನು ನೀಡಿದೆ. ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ, ಜಮ್ಮು ಕಾಶ್ಮೀರಕ್ಕೆ ರಾಜ್ಯತ್ವ ಮರುಸ್ಥಾಪನೆವರೆಗೂ ನಾವು ಸರ್ಕಾರದ ಭಾಗವಾಗುತ್ತಿಲ್ಲ, ನಾವು ಯಾವುದೇ ಸಚಿವ ಸ್ಥಾನ ಪಡೆಯುತ್ತಿಲ್ಲ, ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯವನ್ನು ತಾರಿಕ್ ಹಮೀದ್ ಕರ್ರಾ ತಳ್ಳಿಹಾಕಿದರು.

ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು,ಕಾಂಗ್ರೆಸ್ 6 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ.

ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾಪ್ರಮಾಣ‌ವಚನ Read More

ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಸಿಎಂ

ಶ್ರೀನಗರ: ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ.

ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ರಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ‌.

ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ. ಎನ್‌ಸಿ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರು 1977 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಅವರ ಮಗ ಫಾರೂಕ್ ಅಬ್ದುಲ್ಲಾ ಅವರು 1983, 1987 ಮತ್ತು 1996 ರಲ್ಲಿ ವಿಜಯಗಳಿಸಿದರು. ನಂತರ ಒಮರ್ ಅಬ್ದುಲ್ಲಾ ಅವರು 2008 ರಲ್ಲಿ ಈ ಕ್ಷೇತ್ರದಿಂದ ಆಯ್ಕೆಯಾದರು.

ಬುದ್ಗಾಮ್‌ನಲ್ಲಿ ಅಬ್ದುಲ್ಲಾ ಅವರು ಪಿಡಿಪಿಯ ಅಗಾ ಸೈಯದ್ ಮುಂತಜೀರ್ ಮೆಹದಿ ಮತ್ತು ಅವಾಮಿ ನ್ಯಾಷನಲ್ ಕಾನ್ಫರೆನ್ಸ್‌ನ ಅಗಾ ಸೈಯದ್ ಅಹ್ಮದ್ ಮೂಸ್ವಿ ಸೇರಿದಂತೆ 7 ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದರು.

ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು ಅಧಿಕಾರ ಹಿಡಿಯುವುದು ಖಚಿತವಾಗಿದೆ.

ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಸಿಎಂ Read More

ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಶನಿವಾರ ಮುಂಜಾನೆ ಮೂವರು ಉಗ್ರರು ಹತರಾಗಿದ್ದಾರೆ.

ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯ ಪ್ರದೇಶಗಳನ್ನು ಭದ್ರತಾ ಪಡೆ ಯೋಧರು ಸುತ್ತುವರೆದು ಕಾರ್ಯಾಚರಣೆ ಪ್ರಾರಂಭಿಸಿದರು.

ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿ ಅದರಲ್ಲಿ ಇಬ್ಬರು ಯೋಧರು ಹುತಾತ್ಮರಾದರೆ ಮತ್ತಿಬ್ಬರು ಗಾಯಗೊಂಡಿದ್ದಾರೆ.

ಈ ವೇಳೆ ಪ್ರತಿದಾಳಿ ನಡೆಸಿದ ಯೋಧರು ಶನಿವಾರ ಮುಂಜಾನೆ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್ Read More