ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಅಡಗುತಾಣ ಧ್ವಂಸ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭಾರೀ ಕಾರ್ಯಾಚರಣೆ ನಡೆಸಿ,ಉಗ್ರರ ಅಡಗು ತಾಣ ಪತ್ತೆ ಹಚ್ಚಿ ಉಡೀಸ್ ಮಾಡಿದೆ.

ದೋಡಾ ಜಿಲ್ಲೆಯಲ್ಲಿ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ, ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದಿದೆ.

ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ನಡೆಸಿದವು.

ಶೋದ ಕಾರ್ಯಾಚರಣೆ ವೇಳೆ ಉಗ್ರರ ಅಡಗುತಾಣ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಯಾರನ್ನು ಬಂಧಿಸಿಲ್ಲ, ಆದರೆ, ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ ಪಕ್ಕದ ಕಿಶ್ತ್‌ವಾರ್ ಜಿಲ್ಲೆಯ ಗುರಿನಾಲ್, ಥಾಥ್ರಿ ಮತ್ತು ಚತ್ರೂ ಅರಣ್ಯದಲ್ಲಿ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಅಡಗುತಾಣ ಧ್ವಂಸ Read More

ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ- ಐವರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ‌ ಚಕಮಕಿಯಲ್ಲಿ ಐವರು ಉಗ್ರರು ಬಲಿಯಾಗಿದ್ದಾರೆ.

ಇದೇ‌ ವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರು ತಂಗಿರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯ ಪ್ರಾರಂಭಿಸಿದ್ದರು.

ಗುರುವಾರ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಚಿನಾರ್ ಕಾರ್ಪ್ಸ್ ತಿಳಿಸಿದೆ.

ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ- ಐವರು ಉಗ್ರರು ಬಲಿ Read More

ಸೇನಾಪಡೆ ದಾಳಿಗೆ ಇಬ್ಬರು ಉಗ್ರರು ಕತಂ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಲಿ ಪಡೆದಿವೆ.

ಉಗ್ರರು ಸೂಪೋರ್‌ ಪ್ರದೇಶದಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಉಗ್ರರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.

ಈ ಭಾಗದಲ್ಲಿ ಸೇನೆ ಗುರುವಾರ ರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಿದ್ದು ಇಂದೂ ಕೂಡಾ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಭದ್ರತಾಪಡೆ ವಶಪಡಿಸಿಕೊಂಡಿದೆ.

ಸೇನಾಪಡೆ ದಾಳಿಗೆ ಇಬ್ಬರು ಉಗ್ರರು ಕತಂ Read More

ಜಮ್ಮು- ಕಾಶ್ಮೀರ ವಿಧಾನಸಭೆಯಲ್ಲಿ ಹೈಡ್ರಾಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಗುರುವಾರ ನಾಟಕೀಯ ವಿದ್ಯಮಾನ ನಡೆದಿದ್ದು, ವಿಪಕ್ಷ ನಾಯಕರು
ವಾಗ್ವಾದ ನಡೆಸಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸುವುದರ ವಿರುದ್ಧ ಪ್ರತಿಭಟನೆಯ ವೇಳೆ ಬಾವಿಗೆ ನುಗ್ಗಿದ ಪ್ರತಿಪಕ್ಷ ಸದಸ್ಯರನ್ನು ಹೊರಹಾಕಲು ಸ್ಪೀಕರ್ ಸೂಚಿಸಿದ ನಂತರ ಬಿಜೆಪಿ ಶಾಸಕರು ಮತ್ತು ಮಾರ್ಷಲ್‌ಗಳ ನಡುವೆ ವಾಗ್ವಾದ ನಡೆಯಿತು.

ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರ ನಿರ್ದೇಶನದ ಮೇರೆಗೆ ಮೂವರು ಬಿಜೆಪಿ ಶಾಸಕರನ್ನು ಪ್ರತ್ಯೇಕಗೊಳಿಸಲಾಯಿತು.

ಬೆಳಗ್ಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ನಿನ್ನೆ ಅಂಗೀಕರಿಸಿದ ನಿರ್ಣಯದ ವಿರುದ್ಧ ಪ್ರತಿಭಟಿಸಿದ್ದರಿಂದ ಗದ್ದಲ ಉಂಟಾಯಿತು.

ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ ಅವರು ನಿರ್ಣಯದ ಮೇಲೆ ಮಾತನಾಡುತ್ತಿದ್ದಾಗ, ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು.

ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಕೂಡ ಸದನದ ಬಾವಿಗೆ ಹಾರಿ ಬ್ಯಾನರ್ ಕಿತ್ತು ಹಾಕಿದರು. ಗದ್ದಲ ನಡುವೆಯೇ ಸ್ಪೀಕರ್ ಕಲಾಪವನ್ನು 15 ನಿಮಿಷಗಳ ಕಾಲ ಮುಂದೂಡಿದರು. ಆದರೆ, ಸದನ ಮುಂದೂಡಿದ ಬಳಿಕವೂ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರಿಸಿದರು.

ಮತ್ತೆ ಕಲಾಪ ಆರಂಭವಾದಾಗ, ಸ್ಪೀಕರ್ ಅವರು ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳಲು ವಿರೋಧ ಪಕ್ಷದ ಸದಸ್ಯರನ್ನು ವಿನಂತಿಸಿದರೂ ಸಹ ಬಿಜೆಪಿ ಸದಸ್ಯರು ಪ್ರತಿಭಟನೆಯನ್ನು ಮುಂದುವರೆಸಿದರು.ಆಗ ಸ್ಪೀಕರ್,ನೀವು ನಿಯಮಗಳನ್ನು ಮೀರುತ್ತಿದ್ದೀರಿ, ಕೆಲ ಸದಸ್ಯರ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ, ನಿಮ್ಮ ವರ್ತನೆ ಬೇಸರ ತರಿಸುತ್ತಿದೆ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಾಳೆಗೆ ಕಲಾಪ ಮುಂದೂಡಿದರು.

ಆಗ ಸುನಿಲ್ ಶರ್ಮ ನ್ಯಾಷನಲ್ ಕಾನ್ಫರೆನ್ಸ್‌ ನಾಯಕರ ವಿಶೇಷ ಸ್ಥಾನಮಾನದ ನಾಟಕವು ಕೊನೆಗೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದರು.ಇದು ಆಡಳಿತ ಪಕ್ಷದ ಸದಸ್ಯರನ್ನು ಕೆರಳಿಸಿತು.

ನಿನ್ನೆ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಆರ್ಟಿಕಲ್ 370 ಮರುಸ್ಥಾಪನೆಯ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿದ ನಂತರ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು. ಬಿಜೆಪಿ ಸದಸ್ಯರು ಬಲಿದಾನ್ ಹುವೇ ಜಹಾನ್ ಮುಖರ್ಜಿ ವೋ ಕಾಶ್ಮೀರ ಹಮಾರಾ ಹೈ ಎಂದು ಘೋಷಣೆಗಳನ್ನುಕೂಗಿದರು, ಆಗ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು “ಜಿಸ್ ಕಾಶ್ಮೀರ್ ಕೋ ಖೂನ್ ಸೇ ಸೀಂಚಾ, ವೋ ಕಾಶ್ಮೀರ್ ಹಮಾರಾ ಹೈ” ಎಂದು ಹೇಳಿದರು.

ಗದ್ದಲ ಮುಂದುವರಿದಾಗ ಸ್ಪೀಕರ್ ಅವರು ಏನನ್ನೂ ದಾಖಲಿಸಬಾರದು ಅಥವಾ ವರದಿ ಮಾಡಬಾರದು ಎಂದು ನಿರ್ದೇಶನ ನೀಡಿದರು. ನಂತರ ಸ್ಪೀಕರ್ ಅವರು ಬಾವಿಗೆ ನುಗ್ಗಿದ ಬಿಜೆಪಿ ಸದಸ್ಯರನ್ನು ಮಾರ್ಷಲ್ ಮಾಡುವಂತೆ ಸೂಚಿಸಿದರು, ಇದು ವಿಧಾನಸಭೆ ಮಾರ್ಷಲ್‌ಗಳು ಮತ್ತು ಬಿಜೆಪಿ ಶಾಸಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.

ಬಿಜೆಪಿಯ ಏಕೈಕ ಮಹಿಳಾ ಶಾಸಕಿ ಶಗುನ್ ಪರಿಹಾರ್ ಅವರನ್ನು ಎದುರಿಸಲು ಮಹಿಳಾ ಮಾರ್ಷಲ್‌ಗಳನ್ನು ಕರೆಸಲಾಯಿತು. ಆಡಳಿತ ನಾಯಕರ ಛೇಂಬರ್ ನಲ್ಲಿ ಬಡಿದಾಟದ ನಡುವೆ ಬಿಜೆಪಿಯ ಮೂವರು ಶಾಸಕರನ್ನು ಸದನದಿಂದ ಹೊರ ಹಾಕಲಾಯಿತು.

ಜಮ್ಮು- ಕಾಶ್ಮೀರ ವಿಧಾನಸಭೆಯಲ್ಲಿ ಹೈಡ್ರಾಮ Read More

ಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ಭಾಷಣದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಅಕ್ಟೋಬರ್ 1ರಂದು ನಡೆಯಲಿರುವ ಕೊನೇ ಹಂತದ ಚುನಾವಣೆಗೆ ಕಥುವಾದಲ್ಲಿ ಬಿರುಸಿನ ಪ್ರಚಾರ ನಡೆಸಿದೆ.

ಚುನಾವಣಾ ಪ್ರಚಾರದ ಸಭೆಯಲ್ಲಿ ಭಾಷಣ ಮಾಡುತ್ತಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರು ಏಕಾಏಕಿ ಅಸ್ವಸ್ಥರಾದರು‌.

ತಕ್ಷಣ ವೇದಿಕೆಯಲ್ಲಿದ್ದ ನಾಯಕರು ಅವರನ್ನು ಹಿಡಿದುಕೊಂಡು ನೀರನ್ನು ಕುಡಿಸಿದರು.ಆಗ ಸುಧಾರಿಸಿಕೊಂಡ ಖರ್ಗೆ ಮತ್ತೆ ಮಾತನಾಡಲು ಪ್ರಯತ್ನಿಸಿದರು ಆದರೆ ಸಾಧ್ಯವಾಗಲಿಲ್ಲ,ನಂತರ ಕುರ್ಚಿಯಲ್ಲಿ ಕುಳಿತೇ ಭಾಷಣ ಮಾಡಿದರು.

ನಿರಂತರ ಪ್ರಯಾಣದಿಂದಾದ ಆಯಾಸದಿಂದಾಗಿ ಮಲ್ಲಿಕಾರ್ಜುನ ಖರ್ಗೆಯವರು ಅಸ್ವಸ್ಥತರಾದರು ಮುಂದಿನ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿಲ್ಲ ರೆಸ್ಟ್ ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ Read More