ಮಹಾಜನ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ
ಮೈಸೂರು: ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ವತಿಯಿಂದ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ
ಅಪರಾಧ ತಡೆ ಮಾಸಾಚಾರಣೆ ಹಮ್ಮಿಕೊಳ್ಳಲಾಯಿತು.
ಈ ವೇಳೆ ಜಯಲಕ್ಷ್ಮಿ ಪುರಂ ಠಾಣೆಯ ಸಬ್ ಇನ್ಸ್ಪೆಕ್ಟರ್ ನಾರಾಯಣ್ ಅವರು ಮಾತನಾಡಿ ಸೈಬರ್ ವಂಚನೆ, ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ದುರ್ಬಳಕೆ ಮತ್ತು ಆನ್ಲೈನ್ ಗೇಮಿಂಗ್ ಚಟಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇಂತಹ ಚಟುವಟಿಕೆಗಳು ಎಲ್ಲಾದರೂ ಕಂಡುಬಂದರೆ ಯಾವುದೇ ಸಂಧರ್ಬದಲ್ಲಿ ಪೋಷಕರ ಸಹಾಯದಿಂದ ಪೊಲೀಸರಿಗೆ ದೂರು ನೀಡಿ ನಿಮ್ಮ ಜವಾಬ್ದಾರಿ ಮೆರೆಯಬೇಕು ಎಂದು ನಾರಾಯಣ್ ಸಲಹೆ ನೀಡಿದರು.
ಕಾಲೇಜು ಪ್ರಾಂಶುಪಾಲ ವಿಶಕಂಠಮೂರ್ತಿ ಅವರು ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ದುಷ್ಟ ಚಟಗಳಿಗೆ ಬಲಿಯಾಗುವುದಿಲ್ಲ ಎಂದು ಸಾಕ್ಷಿಕರಿಸಲು ನಾನು ಪ್ರತಿಯೊಂದು ದಿನವೂ ಖುದ್ದಾಗಿ ವೀಕ್ಷಿಸುತ್ತೇನೆ ನಮ್ಮ ವಿದ್ಯಾರ್ಥಿ ಗಳು ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಆಟೋಟಗಳಲ್ಲಿ ಬಹಳ ಚಟುವಟಿಕೆಯಿಂದ ಇದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆದರೂ ನಾವು ಮುಂದಿನದಿನಗಳಲ್ಲಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಸಮಿತಿ ರಚಿಸಿ ತಕ್ಷಣ ಕಾರ್ಯರಂಭ ಮಾಡುತ್ತೇವೆ ಮತ್ತು ಪೋಷಕರ ಜೊತೆ ಈ ಸಂಬಂಧ ಸಭೆ ಮಾಡಿ ಅವರ ಸಹಾಯವನ್ನು ಪಡೆದು ಉತ್ತಮ ವಾತಾವರಣ ನಿರ್ಮಿಸುತ್ತೇವೆ ಇದಕ್ಕೆ ನಮ್ಮ ಆಡಳಿತ ಮಂಡಳಿಯವರು ಸಹಾ ಬಹಳ ಸಹಕಾರಿ ಯಾಗಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಸ್ವಾಮಿ ಗೌಡ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ ಆರ್. ರಾಘವೇಂದ್ರ ಮತ್ತು ಎಲ್ಲ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.