ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದಿಂದ ಸಂಭ್ರಮಾಚರಣೆ

ಮೈಸೂರು: ಮೈಸೂರಿನ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ಜಾತ್ಯಾತೀತ ಜನತಾದಳದ 25ನೇ ವರ್ಷದ ಬೆಳ್ಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಮೈಸೂರಿನ ಹೊಸ ಹುಂಡಿ ರಿಂಗ್ ರಸ್ತೆಯಲ್ಲಿ ಜೆಡಿಎಸ್ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮವನ್ನು ಅಧ್ಯಕ್ಷ ಪ್ರದೀಪ್ ಕೃಷ್ಣೇಗೌಡ ನೇತೃತ್ವದಲ್ಲಿ ಆಚರಿಸಲಾಯಿತು.

ವರುಣ ಜೆಡಿಎಸ್ ಅಧ್ಯಕ್ಷ ಬಾಲಕೃಷ್ಣ, ಎಂ.ಚಂದ್ರಶೇಖರ, ಪ್ರಸನ್ನ, ನಾಗರಾಜು ಹಾಗೂ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಎಲ್ಲಾ ಸೇರಿ ಸಿಹಿ ಹಂಚಿ ಸಂಭ್ರಮಿಸಿದರು.

ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದಿಂದ ಸಂಭ್ರಮಾಚರಣೆ Read More

ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬ: ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ,ಹಣ್ಣು ಹಂಪಲು ವಿತರಣೆ

ಮೈಸೂರು: ಕರ್ನಾಟಕದ ಏಕೈಕ ಪ್ರಾದೇಶಿಕ ಪಕ್ಷ ಜನತಾದಳ (ಜಾತ್ಯತೀತ) 25 ವರ್ಷಗಳ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿಪುರಂನಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ತಿಂಡಿ, ಹಣ್ಣು,ಹಂಪಲು ಹಂಚಲಾಯಿತು.

ಈ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಿ.ಜಿ.ಸಂತೋಷ್, ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ ನಗರ ಪಾಲಿಕೆ ಮಾಜಿ ಸದಸ್ಯೆ ಶೋಭಾ, ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ, ಮುಖಂಡರಾದ ಯದುನಂದನ್, ರಾಮು ಹಾಜರಿದ್ದರು.

ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬ: ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ,ಹಣ್ಣು ಹಂಪಲು ವಿತರಣೆ Read More

ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ

ಮೈಸೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು ಅರಮನೆ ಮುಂಭಾಗ ಇರುವ ಕೋಟೆ ಆಂಜನೇಯ ಸ್ವಾಮಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ನರಸಿಂಹಸ್ವಾಮಿ, ನಗರ ಕಾರ್ಯಾಧ್ಯಕ್ಷ ಎಸ್. ಪ್ರಕಾಶ್ ಪ್ರಿಯಾದರ್ಶನ್, ನಗರ ಮಹಿಳಾ ಅಧ್ಯಕ್ಷೆ ಪ್ರೇಮಾ ಶಂಕರಗೌಡ, ಚಾಮರಾಜ ಕ್ಷೇತ್ರದ ಅಧ್ಯಕ್ಷ ಪಿ ಮಂಜುನಾಥ್, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಎಂ ಎನ್ ರಾಮು, ನಗರ ಪಾಲಿಕೆ‌ ಮಾಜಿ ಸದಸ್ಯ ಎಸ್ ಬಿ ಎಂ ಮಂಜು, ಚಾಮರಾಜ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಶಿವರಾಜ್, ಬಿಜೆಪಿ ಚಾಮರಾಜ ಕ್ಷೇತ್ರದ ಎಸ್ ಸಿ ಮೋರ್ಚಾ ಅಧ್ಯಕ್ಷ ಹರೀಶ್, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಪ್ರದೀಪ್ ಕೃಷ್ಣೆಗೌಡ, ಜೆಡಿಎಸ್, ಬಿಜೆಪಿ ಮುಖಂಡರುಗಳಾದ ಸಚಿನ್, ಬಿ ಎಂ ಕೃಷ್ಣಗೌಡ ಕೆ ಆರ್ ನಗರ, ಸೊಸೈಟಿ ಲೋಕೇಶ್, ಕೋದಂಡ, ಜೆ ಪ್ರಕಾಶ್, ಶಿವಪ್ರಸಾದ್, ಸೋಮೇಗೌಡ, ಸೊಸೈಟಿ ವಿಜಿ, ಜಯರಾಮಗೌಡ ಮುಂತಾದರು ಹಾಜರಿದ್ದರು.

ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ Read More

ಭದ್ರಾವತಿ ತಾಲ್ಲೂಕು ರಾಕ್ಷಸರ ಕೈನಲ್ಲಿ ಸಿಲುಕಿದೆ – ನಿಖಿಲ್ ಕುಮಾರಸ್ವಾಮಿ

ಭದ್ರಾವತಿ: ಭದ್ರಾವತಿ ತಾಲ್ಲೂಕು ರಾಕ್ಷಸರ ಕೈಗೆ ಹೋಗಿ ಸಿಲುಕಿದೆ,ಇದನ್ನ ರಾಮ ರಾಜ್ಯ ಕ್ಷೇತ್ರವನ್ನಾಗಿ ಮಾಡಬೇಕು,ಅಂತಹ ಪರಿವರ್ತನೆ ಮಾಡುವ ಶಕ್ತಿ ಕ್ಷೇತ್ರದ ಜನತೆಗೆ ಇದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭದ್ರಾವತಿ ಶಾಸಕರ ಬಿ.ಕೆ ಸಂಗಮೇಶ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಿಸ್ಟರ್ ಶಾಸಕರೇ ಇವತ್ತಿನ ದಿನಾಂಕ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನೀವೇನಾದರೂ ಶಾಸಕರಾದರೆ ಭದ್ರಾವತಿಗೆ ನನ್ನ ಜೀವನದಲ್ಲಿ ಕಾಲಿಡೋದಿಲ್ಲ ಎಂದು ನಿಖಿಲ್ ಶಪಥ ಮಾಡಿದರು.

ಭದ್ರಾವತಿ ತಾಲ್ಲೂಕಿನಲ್ಲಿ ಆಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ. ಅಹಂಕಾರ ಇವೆಲ್ಲಾವನ್ನ ಮೆಟ್ಟಿ ನಿಲ್ಲುವಂತ ಶಕ್ತಿ ಕ್ಷೇತ್ರದ ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿದೆ, ಅಪ್ಪಾಜಿ ಗೌಡರು ಅದನ್ನ ಎಲ್ಲರ ರಕ್ತದ ಕಣ ಕಣದಲ್ಲೂ ರೂಡಿಸಿದ್ದಾರೆ ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು

ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಪಾರದರ್ಶಕ ವಾಗಿ ಕೆಲಸ ಮಾಡುವುದಕ್ಕೆ ಕೈ ಕಟ್ಟಿಹಾಕಿ ಕ್ಷೇತ್ರದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್, ಮಟ್ಕಾ ಮತ್ತಿತರ ದಂಧೆಗಳಿಗೆ ಎಡೆ ಮಾಡಿದ್ದಾರೆ, ಯುವ ಸಮುದಾಯವನ್ನ ಅವರ ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಶಾಸಕ ಬಿ.ಕೆ ಸಂಗಮೇಶ್ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಕ್ಷೇತ್ರದಲ್ಲಿ ಅಪ್ಪಾಜಿಗೌಡರನ್ನ ಅನೇಕ ಬಾರಿ ಶಾಸಕರನ್ನಾಗಿ ಮಾಡಿದ್ದೀರಿ. ಕ್ಷೇತ್ರದಲ್ಲಿ ಒಬ್ಬ ಹೆಣ್ಣು ಮಗಳಿಗೆ ನೀವು ಧಮ್ಕಿ ಹಾಕಿದ್ರೆ ಮನೆಗೆ ಹೋಗಿ ಸೇರ್ಕೊಳ್ತಾರೆ ಅಂತ ನಿಮ್ಮ ಮನಸ್ಸಿನಲ್ಲಿ ಇದ್ರೆ ಅದು ನಿಮ್ಮ ಕನಸು, ಶಾರದಾ ಅಪ್ಪಾಜಿಗೌಡರ ಜೊತೆ ದೇವೇಗೌಡರು, ಕುಮಾರಣ್ಣ, ನಿಖಿಲ್ ಕುಮಾರಸ್ವಾಮಿ, ಇದಕ್ಕಿಂತ ಮಿಗಿಲಾಗಿ ಕ್ಷೇತ್ರದ ಜನತೆ ಇದ್ದಾರೆ ಎಂದು ತಿಳಿಸಿದರು.

ಜನತಾ ದಳ ಪಕ್ಷದ ಕಾರ್ಯಕರ್ತರು ಹೆದರಿ ಓಡಿ ಹೋಗುವ ಸಂಸ್ಕೃತಿ ನಮ್ಮದಲ್ಲ, ಕಾಂಗ್ರೆಸ್ ಪಕ್ಷ ಕಳೆದ ಎರಡು ವರ್ಷಗಳ ಆಡಳಿತದಲ್ಲಿ ಸ್ವತಂತ್ರ್ಯವಾಗಿ, ಪಾರದರ್ಶಕವಾಗಿ ಕೆಲಸ ಮಾಡುವಂತಹ ಸಂಸ್ಥೆಗಳನ್ನು ಕೈ ಕಟ್ಟಾಕಿ,ತಮಗೆ ಬೇಕಾದಂತಹ ರೀತಿಯಲ್ಲಿ ಬಳಕೆ ಮಾಡಿಕೊಂಡಿರುವ ಸಾಕಷ್ಟು ನಿದರ್ಶನ ನಮ್ಮ ಕಣ್ಮುಂದೆ ಇದೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ಸಂಖ್ಯಾ ಬಲ ಕುಸಿಯುತ್ತಿದೆ ಎಂದು ಸವಾಲು ಹಾಕಿದ್ದಾರೆ. ಅವರ ಸವಾಲನ್ನು ನಾವೆಲ್ಲರೂ ಪ್ರೀತಿಯಿಂದ ಸ್ವೀಕರಿಸಿ, ಮುಂಬರುವ 2028 ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅವರಿಗೆ ತಕ್ಕ ಉತ್ತರ ಕೊಡೋಣ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಗೌಡರು ನಿಮ್ಮೆಲ್ಲರ ಸಹಕಾರದಿಂದ 2028ಕ್ಕೆ ಶಾಸಕರಾಗಿ ಆಯ್ಕೆ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಶಾರದಾ ಪೂರ್ಯನಾಯ್ಕ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕರಾದ ಸುರೇಶ್ ಗೌಡ ಮತ್ತಿತರರು ಹಾಜರಿದ್ದರು.

ಭದ್ರಾವತಿ ತಾಲ್ಲೂಕು ರಾಕ್ಷಸರ ಕೈನಲ್ಲಿ ಸಿಲುಕಿದೆ – ನಿಖಿಲ್ ಕುಮಾರಸ್ವಾಮಿ Read More

ಕಾಂಗ್ರೆಸ್ ನವರು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ-ನಿಖಿಲ್ ಕುಮಾರಸ್ವಾಮಿ

ಯಾದಗಿರಿ: ನಮ್ಮ ಪಕ್ಷದ‌ ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವದಿಲ್ಲ,
ಕಾಂಗ್ರೆಸ್ ನವರು ಮೊದಲು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್,
ಕಾಂಗ್ರೆಸ್ ಶಾಸಕ ಉದಯ್ ಅವರು ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆಂದು ಹೇಳಿದಕ್ಕೆ ಈ ರೀತಿ ತಿರುಗೇಟು ನೀಡಿದರು.

ಕಾಂಗ್ರೆಸ್ ಶಾಸಕರೇ ಈಗ ಸಾರ್ವಜನಿಕ ವಲಯದಲ್ಲಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ,ಜನತಾದಳದ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆಂದು ಹೇಳುತ್ತಿದ್ದಾರೆ,
ಜೆಡಿಎಸ್ ಪಕ್ಷದ ಶಾಸಕರೆಲ್ಲ ನಮ್ಮ ಕುಟುಂಬದ ಸದಸ್ಯರಿದ್ದ ಹಾಗೇ,
ಎಲ್ಲಾ ಜೆಡಿಎಸ್ ಶಾಸಕರು ನಿರಂತರವಾಗಿ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಶಾಸಕರಿಗೆ ಬರುವ ಆಫರ್ ಗಳನ್ನು ಶಾಸಕರು ನಮ್ಮ ಗಮನಕ್ಕೆ ತರುತ್ತಾರೆ,
ಕಾಂಗ್ರೆಸ್ ಮೊದಲು ತಮ್ಮವರನ್ನು ಉಳಿಸಿಕೊಳ್ಳಲಿ,ತಮ್ಮ ಸರಕಾರದ ಕುರ್ಚಿ ಭದ್ರಪಡಿಸಿಕೊಳ್ಳಬೇಕಿದೆ,
ಕಾಂಗ್ರೆಸ್ ಶಾಸಕರೇ ಕಾಂಗ್ರೆಸ್ ಬಿಟ್ಟು ಹೋಗುವ ವಾತಾವರಣ ಸೃಷ್ಟಿಯಾಗಿದೆ,
ಇನ್ನು ಜೆಡಿಎಸ್ ನವರು ಕಾಂಗ್ರೆಸ್ ಯಾಕೆ ಹೋಗುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.

ಕಾಂಗ್ರೆಸ್ ನವರು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ-ನಿಖಿಲ್ ಕುಮಾರಸ್ವಾಮಿ Read More

ಜೆಡಿಎಸ್ ಮುಖಂಡ ಸತೀಶ್ ಗೌಡರ ಜನುಮದಿನ ಆಚರಿಸಿದ ಅಭಿಮಾನಿಗಳು

ಮೈಸೂರು: ಎಚ್ ಡಿ ಕುಮಾರಸ್ವಾಮಿ ಅಭಿಮಾನಿ ಬಳಗ ಹಾಗೂ ಆಟೋ ಚಾಲಕರ ಅಭಿಮಾನಿ ಬಳಗದ ವತಿಯಿಂದ ಜೆಡಿಎಸ್ ಯುವ ಮುಖಂಡರು ಮತ್ತು ಎಚ್ ಡಿ ಕುಮಾರಸ್ವಾಮಿ ಬಳಗದ ನಗರ ಪ್ರಧಾನ ಕಾರ್ಯದರ್ಶಿ ಸತೀಶ್ ಗೌಡ ಅವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು.

ಸತೀಶ್ ಗೌಡರಿಗೆ ಪೇಟ ತೊಡಿಸಿ,ಶಾಲು ಹೊದಿಸಿ,ಮಣಿಗಳ ಹಾರ ಹಾಕಿ ಮುಖಂಡರುಗಳು ಸಂತಸಪಟ್ಟರು.

ಈ‌ ವೇಳೆ ಕೇಕ್ ಕತ್ತರಿಸಿ ಸತೀಶ್ ಗೌಡರಿಗೆ ತಿನ್ನಿಸಿ, ಎಲ್ಲರಿಗೂ ವಿತರಿಸಿ ಅಭಿಮಾನಿಗಳು ಸಂಭ್ರಮಿಸಿದರು.

ಆ ಸಂದರ್ಭದಲ್ಲಿ ಜೆಡಿಎಸ್ ಸಮಾಜ ಸೇವಾ ಜಿಲ್ಲಾ ಯುವ ವಿಭಾಗದ ಅಧ್ಯಕ್ಷರೂ ಎಚ್ ಡಿ ಕುಮಾರಸ್ವಾಮಿ ಅಭಿಮಾನ ಬಳಗದ ನಗರ ಅಧ್ಯಕ್ಷರಾದ ಆನಂದ್ ಗೌಡ ಕೆ ಆರ್ ಮಿಲ್ ಕಾಲೋನಿ, ಜೆಡಿಎಸ್ ನಗರ ಸಂಘಟನಾ ಕಾರ್ಯದರ್ಶಿ ಮತ್ತು ಎಚ್‍.ಡಿ ಕುಮಾರಸ್ವಾಮಿ ಅಭಿಮಾನಿ ಬಳಗದ ನಗರ ಸಂಘಟನಾ ಕಾರ್ಯದರ್ಶಿ ಕೋದಂಡ ಬಂಬೂ ಬಜಾರ್, ಮೆದರ್ ಬ್ಲಾಕ್, ಸತೀಶ್ ಗೌಡ ಅವರ ಸ್ನೇಹಿತರುಗಳಾದ ಶ್ರೀಧರ್,ಪ್ರದೀಪ್ ಗೌಡ,ಸಿದ್ದಪ್ಪ,ವೆಂಕಟೇಶ್,
ಶ್ರೀನಿವಾಸ್,ಕಿರಣ್,ವಿಜಯ್,ವೇಣು,ನಟರಾಜ್,ಕುಮಾರ್,ಉದಯ್,ಪೆರುಮಾಳ್, ರಮೇಶ್ ನಾಯ್ಡು,ಮಂಜು ಗ್ಯಾಸ್, ಸುಂದರ್,ನಂದೀಶ್,ಸುರೇಶ್,ಭಾಸ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

ಜೆಡಿಎಸ್ ಮುಖಂಡ ಸತೀಶ್ ಗೌಡರ ಜನುಮದಿನ ಆಚರಿಸಿದ ಅಭಿಮಾನಿಗಳು Read More

ನಾಳೆ ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ

ಮೈಸೂರು, ಮಾ.5: ಜೆಡಿಎಸ್ ವತಿಯಿಂದ ಮಾ.6ರ ಬೆಳಿಗ್ಗೆ 10 ಗಂಟೆಗೆ ಮೈಸೂರು ಗಾಂಧಿ ವೃತ್ತ ದ ಸಮೀಪ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನೀತಿ ತಾರತಮ್ಯ,ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಘಟಕದ ಸೂಚನೆ ಮೇರೆಗೆ ಜಿಲ್ಲಾ ಜೆಡಿಎಸ್ ಹಮ್ಮಿಕೊಂಡಿರುವ
ಈ ಪ್ರತಿಭಟನೆಗೆ ಮಾಜಿ ಸಚಿವರು ಹಾಲಿ ಮಾಜಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು,ಮೈಸೂರ್ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು,ಮಾಜಿ ಸದಸ್ಯರು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಹಾಲಿ ಮಾಜಿ ಅಧ್ಯಕ್ಷರು ಸದಸ್ಯರು ಮತ್ತು ಪಕ್ಷದ ಎಲ್ಲಾ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು‌ ಭಾಗವಹಿಸಲಿದ್ದಾರೆ.

ನಾಳೆ ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ Read More

ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು: ಹೆಚ್.ಡಿ.ಡಿ ಆರೋಪ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದರು.

ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ ಎಂದು ಕಡಕ್ಕಾಗಿ ಹೇಳಿದರು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.

ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎಂಬುದು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದರು ‌

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ; ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು‌ ಕಾರ್ಯಕರ್ತರಿಗೆ ಮನವಿ ಮಾಡಿದರು.

ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು: ಹೆಚ್.ಡಿ.ಡಿ ಆರೋಪ Read More

ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಟೀಕಾಪ್ರಹಾರ

ಬೆಂಗಳೂರು: ದಲಿತ ಸಮಾಜಕ್ಕೆ ಸೇರಿದ ನಿಂಗನಿಗೆ ಸಿಗಬೇಕಿದ್ದ ಬದಲಿ ನೀವೇಶನಗಳನ್ನು ಅಕ್ರಮವಾಗಿ ರಾಜಕೀಯ ಅಧಿಕಾರ ದುರ್ಬಳಕೆ ಮಾಡಿ ಕಬಳಿಸಿದಾಗ ಅಹಿಂದ ನೆನಪಾಗಲಿಲ್ಲವೇ ಸಿದ್ದಹಸ್ತ ಸಿದ್ದರಾಮಯ್ಯ ನವರೇ ಎಂದು ಜೆಡಿಎಸ್ ಪ್ರಶ್ನಿಸಿದೆ.

ಮುಡಾ ಹಗರಣ ಬುಡಕ್ಕೆ ಬಂದಿರುವಾಗ ನಿಮಗೆ ಅಹಿಂದ ನೆನಪಾಗುತ್ತಿದೆ ಅಲ್ಲವೆ? ಮೆತ್ತಿಕೊಂಡಿರುವ ಕಪ್ಪುಮಸಿ ಅರ್ಥಾತ್ ವೈಟ್ನರ್ ಮರೆಮಾಚಲು ಸ್ವರಕ್ಷಣೆಗಾಗಿ ಹಾಸನದಲ್ಲಿ ಸಮಾವೇಶ ಮಾಡಿಕೊಂಡ ಡೋಂಗಿವಾದಿ ನೀವು ಎಂದು ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ.

ಅಂದು ಜೆಡಿಎಸ್ ವೇದಿಕೆಯಲ್ಲಿಯೇ ಅಹಿಂದ ಸಮಾವೇಶ ಮಾಡಿದ್ದರೇ ಹೆಚ್‌.ಡಿ.ದೇವೇಗೌಡರು ನಿಮ್ಮನ್ನು ಯಾಕೆ ಉಚ್ಛಾಟಿಸುತ್ತಿದ್ದರು ನಾನು ಎಂಬ ಅಹಂನಿಂದ ಪಕ್ಷ ವಿರೋಧಿ ಚಟುವಟಿಕೆ, ಪಿತೂರಿ ನಡೆಸಿದ್ದಕ್ಕೆ ನಿಮ್ಮನ್ನು ಉಚ್ಛಾಟಿಸಲಾಯಿತು ತಿಳಿದುಕೊಳ್ಳಿ

ನಿವೃತ್ತಿಯಾಗಿದ್ದ ಸ್ವಜಾತಿ ಐಪಿಎಸ್ ಅಧಿಕಾರಿಯೊಬ್ಬರನ್ನು ಗೃಹ ಇಲಾಖೆ ಸಲಹೆಗಾರಾಗಿ ನೇಮಿಸಿಕೊಂಡು, ಆ ಇಲಾಖೆ ನಿರ್ವಹಿಸುತ್ತಿದ್ದ ದಲಿತ ನಾಯಕ ಡಾ.ಜಿ.ಪರಮೇಶ್ವರ್‌ ಅವರನ್ನು ಹತ್ತಿಕ್ಕಿದಾಗ ಅಹಿಂದ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದೆ.

ದಲಿತ ಸಮಾಜದ ಜಿಲ್ಲಾಧಿಕಾರಿಯಾಗಿದ್ದ ಶಿಖಾ ಅವರ ಮೇಲೆ ನಿಮ್ಮ ಆಪ್ತ ಮರೀಗೌಡ ಹಲ್ಲೆ ನಡೆಸಿದರೂ ಸ್ವಜಾತಿ ವ್ಯಾಮೋಹಕ್ಕೆ ಒಳಗಾಗಿ ಆತನನ್ನ ರಕ್ಷಣೆ ಮಾಡಿದಾಗ ಅಹಿಂದ ನೆನಪಾಗಲಿಲ್ಲ, ಕನಿಷ್ಠ ನಾಚಿಕೆಯೂ ಆಗಲಿಲ್ಲ ಅಲ್ಲವೆ

ಮುಡಾದಲ್ಲಿ ಮುಕ್ಕಿ ತಿಂದಿರುವ ಬೊಗಳೆ ಭಾಷಣಕಾರ ಜಾತಿವಾದಿ ಭ್ರಷ್ಟಾರಾಮಯ್ಯಗೆ ಅಹಿಂದ ಎಂಬುದು ಒಂದು ರಕ್ಷಾಕವಚ ಅಷ್ಟೇ.

ಅಹಿಂದ ಎಂಬ ಟ್ಯಾಗ್ ಇಟ್ಟುಕೊಂಡು ಇಷ್ಟೆಲ್ಲಾ ಮಾಡುತ್ತಿರುವ ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ ಎಂದು

ಮೂಲ ಕಾಂಗ್ರೆಸ್ಸಿಗರಿಗೆ ಅಧಿಕಾರ ತಪ್ಪಿಸಿ, ಸಮಾವೇಶಗಳ ಮೂಲಕ ಏಕವ್ಯಕ್ತಿ ಪ್ರದರ್ಶನ ಮಾಡುತ್ತಿರುವ ಲಜ್ಜೆಗೆಟ್ಟ ಸಿದ್ದಹಸ್ತ ಸಿದ್ದರಾಮಯ್ಯ

ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ ಸಿದ್ದಕುತಂತ್ರಿ ನೀವು.ಗುಂಪುಗಾರಿಕೆ ಷಡ್ಯಂತ್ರ ನಡೆಸಿ ರಾಜಕಾರಣದಿಂದ ಖರ್ಗೆಯವರನ್ನು ಬಲವಂತವಾಗಿ ದಿಲ್ಲಿ ರಾಜಕೀಯಕ್ಕೆ ತಳ್ಳಿದ ಪರಮ ಸ್ವಾರ್ಥಿ ನೀವು ಎಂದು ಜೆಡಿಎಸ್ ಸಿದ್ದರಾಮಯ್ಯ‌ ವಿರುದ್ದ ಟೀಕಿಸಿದೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದ ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರನ್ನು ಕೊರಟಗೆರೆ ಕ್ಷೇತ್ರದಲ್ಲಿ ಕುತಂತ್ರದಿಂದ ಸೋಲಿಸಿದಿರಿ.
ಸಿಎಂ ರೇಸ್‌ನಲ್ಲಿದ್ದ ಡಾ.ಪರಮೇಶ್ವರ್‌ ಅವರನ್ನು ಸ್ವಾರ್ಥಕ್ಕಾಗಿ ಸೋಲಿಸಿ ಮುಖ್ಯಮಂತ್ರಿ ಗಾದಿಗೇರಿದ ಕಪಟಿ ಎಂದು ತೀವ್ರವಾಗಿ‌‌ ಕಿಡಿಕಾರಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಟೀಕಾಪ್ರಹಾರ Read More

ಚಂದ್ರಶೇಖರ ಸ್ವಾಮಿಗಳ ಮೇಲೆ ಎಫ್.ಐ.ಆರ್;ಕಾನೂನಿನ ಚೌಕಟ್ಟೊಳಗೆ ಬಂದರೆ ಕ್ರಮ: ಸಿಎಂ

ಬೆಂಗಳೂರು, ಡಿ.1: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ, ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಇಲ್ಲವಾದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ‌ ಹೇಳಿದರು.

ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು, ನಾನು ಬಿಡಲಿಲ್ಲ ಎಂದು ಹೇಳಿದರು.

ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನೆ ಪ್ರಶ್ನಿಸಿದರು.

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ, ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ.ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ಸಿದ್ದು ತಿಳಿಸಿದರು.

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ಎಂದು ಸಿಎಂ ಪ್ರಶ್ನಿಸಿದರು, ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ,ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ,ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಚಂದ್ರಶೇಖರ ಸ್ವಾಮಿಗಳ ಮೇಲೆ ಎಫ್.ಐ.ಆರ್;ಕಾನೂನಿನ ಚೌಕಟ್ಟೊಳಗೆ ಬಂದರೆ ಕ್ರಮ: ಸಿಎಂ Read More