ಶ್ರವಣದೋಷ ಮಕ್ಕಳು ಶಾಲೆಯಿಂದ ದೂರ ಉಳಿವುದು ದುರದೃಷ್ಟಕರ-ನಾಗೇಂದ್ರ

ಮೈಸೂರು: ಮಕ್ಕಳ ದಿನಾಚರಣೆಯನ್ನು ಜೀವಧಾರ ರಕ್ತನಿಧಿ ಕೇಂದ್ರದಿಂದ ಶ್ರವಣದೋಷವುಳ್ಳ ಮಕ್ಕಳಿಗೆ
ಉಚಿತ ಶೂ ವಿತರಿಸಿ ಉಚಿತ ರಕ್ತದ ಗುಂಪು ಪರೀಕ್ಷೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮೈಸೂರಿನ ತಿಲಕ್ ನಗರದಲ್ಲಿರುವ ಶ್ರವಣ ದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಿ, ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ 60ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ಶೂ ವಿತರಿಸಲಾಯಿತು.

ನಂತರ ಉಚಿತ ರಕ್ತದ ಗುಂಪು ಪರೀಕ್ಷೆ ಮಾಡಿಸಲಾಯಿತು.

ಈ ವೇಳೆ ಮಾತನಾಡಿದ
ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಅವರು,ಪೋಷಕರ ಅತಿಯಾದ ಆರೈಕೆ ಹಾಗೂ ಭಯದಿಂದಾಗಿ ಅನೇಕ ಶ್ರವಣದೋಷ ಮಕ್ಕಳು ಶಾಲೆಯಿಂದ ದೂರ ಉಳಿಯುತ್ತಿರುವುದು ದುರದೃಷ್ಟಕರ ಎಂದು ವಿಷಾದಿಸಿದರು.

ಪೋಷಕರು ಯಾವುದೇ ಆತಂಕ ಇಟ್ಟುಕೊಳ್ಳದೆ ಶ್ರವಣದೋಷ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಆಗ ಮಾತ್ರ ಅವರು ಎಲ್ಲರಂತೆ ಕಲಿತು ವಿದ್ಯಾವಂತರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಹೇಳಿದರು.

ಶ್ರವಣ ದೋಷವುಳ್ಳ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ಮಾರ್ಗದರ್ಶನ ಹಾಗೂ ಶಿಕ್ಷಣ ಕೊಡಿಸಿದಲ್ಲಿ ಸಾಮಾನ್ಯ ಮಕ್ಕಳಂತೆ ಜ್ಞಾನಾರ್ಜನೆ ಸಾಧ್ಯ ಎಂದು ನಾಗೇಂದ್ರ ತಿಳಿಸಿದರು ‌

ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ರವೀಂದ್ರ, ರಂಗಸ್ವಾಮಿ, ಜೀವದಾರ ರಕ್ತ ನಿಧಿ ಕೇಂದ್ರ ನಿರ್ದೇಶಕ ಗಿರೀಶ್, ಶಾಲೆಯ ನಿರ್ವಾಹಕರಾದ ಮೀರಜ್ ಅಹಮದ್, ಕೇಬಲ್ ವಿಜಿ, ಕೆಂಪಣ್ಣ, ಸೂರಜ್, ಸದಾಶಿವ್ ಹಾಗೂ ಶಾಲೆಯ ಶಿಕ್ಷಕ ವೃಂದ ಹಾಜರಿದ್ದರು.

ಶ್ರವಣದೋಷ ಮಕ್ಕಳು ಶಾಲೆಯಿಂದ ದೂರ ಉಳಿವುದು ದುರದೃಷ್ಟಕರ-ನಾಗೇಂದ್ರ Read More

ಜೀವದಾರ ರಕ್ತ ನಿಧಿ ಕೇಂದ್ರಕ್ಕೆಅತ್ಯುತ್ತಮ ರಕ್ತ ನಿಧಿ ಕೇಂದ್ರ ಪ್ರಶಸ್ತಿ

ಮೈಸೂರು: ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೈಸೂರಿನ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ
ಅತ್ಯುತ್ತಮ ರಕ್ತ ನಿಧಿ ಕೇಂದ್ರ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಬೆಂಗಳೂರು ನಗರ ಜಿಲ್ಲಾ ಕರ್ನಾಟಕ ರಾಜ್ಯ ರಕ್ತ ಸಂಚಲನಾ ಪರಿಷತ್ ಬೆಂಗಳೂರು, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ,ಬೆಂಗಳೂರು ನಗರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ
ರಕ್ತ ನಿಧಿ ಕೇಂದ್ರ ಎಂದು
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ಅವರಿಗೆ ಅಭಿನಂದನಾ ಪತ್ರ ನೀಡಿ ಅತ್ಯುತ್ತಮ ರಕ್ತ ನಿಧಿ ಕೇಂದ್ರ ಎಂದು ಬಿರುದು ನೀಡಿ ಗೌರವಿಸಲಾಯಿತು.

ಜೀವದಾರ ರಕ್ತ ನಿಧಿ ಕೇಂದ್ರಕ್ಕೆಅತ್ಯುತ್ತಮ ರಕ್ತ ನಿಧಿ ಕೇಂದ್ರ ಪ್ರಶಸ್ತಿ Read More

ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ- ಎಲ್ ಆರ್ ಮಹದೇವಸ್ವಾಮಿ ಭವಿಷ್ಯ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಮುಂದಿನ ಮುಖ್ಯಮಂತ್ರಿ‌ ಯಾಗುವುದು ಖಚಿತ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಮಾಜಿ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ತಿಳಿಸಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅಭಿಮಾನಿ ಬಳಗದ ವತಿಯಿಂದ ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರವನ್ನು
ಸ್ವತಹ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ ಅವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಚಾಮುಂಡೇಶ್ವರಿ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಮಹದೇವಸ್ವಾಮಿ ಶುಭ ಕೋರಿದರು.

ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದು ಭವಿಷ್ಯ ನುಡಿದರು.

50ಕ್ಕೂ ಹೆಚ್ಚು ಕಾರ್ಯಕರ್ತರು
ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಜಗದೀಶ್, ಮೂಡ ಮಾಜಿ ಸದಸ್ಯರಾದ ಲಕ್ಷ್ಮೀದೇವಿ,ಜೀವದಾರ‌ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಬಿಜೆಪಿ ಮುಖಂಡರಾದ ವಕೀಲ ಶಿವರಾಜ್, ಶಿವರಾಜ್, ಕುಮಾರಸ್ವಾಮಿ, ಹರೀಶ್ ಮತ್ತಿತರರು ಹಾಜರಿದ್ದರು.

ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ- ಎಲ್ ಆರ್ ಮಹದೇವಸ್ವಾಮಿ ಭವಿಷ್ಯ Read More

ರಕ್ತದಾನ ಮಾಡುವ ಮೂಲಕ ಅಪ್ಪು ಸ್ಮರಣೆ

ಮೈಸೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ 4ನೇ ವರ್ಷದ ಪುಣ್ಯ ಸ್ಮರಣೆಯನ್ನು
ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಹಾಗೂ ಜೀವದಾರರ ರಕ್ತನದಿ ಕೇಂದ್ರಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನ್ಯೂ ಸಯ್ಯೋಜಿ ರಾವ್ ರಸ್ತೆ
ಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ 4ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ 30ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಡಾ. ಪುನೀತ್ ರಾಜಕುಮಾರ್ ರವರನ್ನು ಸ್ಮರಿಸಿದರು.

ಈ ವೇಳೆ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡರು,ನಮ್ಮ ಬದುಕು ಬೆಳಕಾಗಬೇಕು ಬದಕು ಬಯಲಾಗ ಬೇಕು ಇದುವೆ ಜೀವನ ಎಂದು ಹೇಳಿದರು.

ನೂರು ವರ್ಷ ಬದುಕಿದರೆ ಅದು ಸಾರ್ಥಕವಾಗಲಾರದು, ಯಾರಿಗಾಗಿ ನಾನು ಬದುಕಿದ್ದೇನೆ,ಯಾವ ಸೇವೆಯನ್ನ ಮಾಡಿದ್ದೇನೆ ಎಂಬ ನಿದರ್ಶನದ ಮೇಲೆ ಬದುಕು ಸಾರ್ಥಕವಾಗಬೇಕು ಎಂದು ಅಭಿಪ್ರಾಯ ಪಟ್ಟರು.

ನಮ್ಮ ಬದುಕು ಪ್ರದರ್ಶನವಾಗಬಾರದು, ನಮ್ಮ ಬದುಕು ನಿರ್ದರ್ಶನವಾಗಬೇಕು ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಅಪ್ಪುಎಂದು ನಾರಾಯಾಣಗೌಡ ಬಣ್ಣಿಸಿದರು.

ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಮಾತನಾಡಿ,ಪುನೀತ್ ಸಾವಿಗೂ ಮೊದಲು ರಾಜ್ಯದ ಬಹಳಷ್ಟು ಜನತೆಗೆ ಅವರು ಮಾಡಿದ್ದ ಸಾಮಾಜಿಕ ಸೇವೆ ಗೊತ್ತಿರಲಿಲ್ಲ. ಬಲಗೈಯಲ್ಲಿ ಮಾಡಿದ ದಾನ ಎಡಗೈಗೆ ತಿಳಿಯಬಾರದು ಎಂಬ ರೀತಿಯಲ್ಲಿ ಅಸಹಾಯಕರ ನೆರವಿಗೆ ನಿಂತಿದ್ದರು. ಚಿತ್ರಗಳು ಹಾಗೂ ಸಾಮಾಜಿಕ ಸೇವೆ ಮೂಲಕ ಮುಗಿಲೆತ್ತ ರಕ್ಕೆ ಬೆಳೆದು ನಿಂತರು ಎಂದು ಸ್ಮರಿಸಿದರು.

ಜೀವದರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬ್ಲಡ್ ಆನ್ ಕಾಲ್ ಕ್ಲಬ್ ಮೈಸೂರು ದೇವೇಂದ್ರ ಪರಿಹರಿಯ ಪರಿಹಾರಿಯ, ಸದಾಶಿವ್, ನಾಗಮಣಿ,ದರ್ಶನ್, ನವೀನ್, ಮಮತಾ ಮತ್ತಿತರರು ಹಾಜರಿದ್ದರು.

ರಕ್ತದಾನ ಮಾಡುವ ಮೂಲಕ ಅಪ್ಪು ಸ್ಮರಣೆ Read More

ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿಯ ವಿಭಿನ್ನ ಪ್ರಯತ್ನ

ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಗಣೇಶನ ವೇಷದಾರಿ ಧರಿಸಿ ರಕ್ತದಾನದ ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು.

ವಾಹನಸವಾರರು ಮತ್ತು ರಸ್ತೆ ಬದಿ ಇದ್ದ ಜನರಿಗೆ ಗಣೇಶ ವೇಷಧಾರಿ ಹಳೆ ಕೆಸರೆ ನಿವಾಸಿ ಲೋಹಿತ್ ಅವರು ರಕ್ತದಾನದ ಜಾಗೃತಿಯ ನಾಮಫಲಕ ಹಿಡಿದು ಕರಪತ್ರ ನೀಡಿ ವಿಶೇಷವಾಗಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ನಾವು ನಿರಂತರವಾಗಿ ರಕ್ತದಾನ ಬಗ್ಗೆ ಹಲವಾರು ರೀತಿ ಜಾಗೃತಿ ಮೂಡಿಸುತ್ತಾ ಬಂದಿದ್ದೇವೆ,ನಾಳೆ ಗೌರಿ ಗಣೇಶ ಹಬ್ಬ ಇರುವುದರಿಂದ ಒಂದು ವಿಭಿನ್ನವಾಗಿ ಸಾರ್ವಜನಿಕರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ರಕ್ತದಾನ ಮಹಾದಾನ. ಮೂಢನಂಬಿಕೆಯನ್ನು ಬಿಟ್ಟು
ಸಾರ್ವಜನಿಕರು ಸ್ವಯಂ ಪ್ರೇರಿತ ರಕ್ತದಾನ ಮಾಡಬಹುದು ಎಂದು ಹೇಳಿದರು.

ನೀವು ನೀಡುವ ರಕ್ತದಿಂದ ಇನ್ನೊಂದು ಜೀವ ಉಳಿಸಬಹುದು ದಯಮಾಡಿ ಯುವ ಪೀಳಿಗೆ ನಿರಂತರವಾಗಿ ಸ್ವಯಂ ಪ್ರೇರಿತ ರಕ್ತದಾನ ಮಾಡಬೇಕು ಎಂದು ಗಿರೀಶ್ ಮನವಿ ಮಾಡಿದರು.

ಗಿರೀಶ್ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಸಾಥ್ ನೀಡಿದರು, ಸೂರಜ್, ಸದಾಶಿವ್, ಚಂದ್ರು ಮತ್ತಿತರರು
ಹಾಜರಿದ್ದರು.

ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿಯ ವಿಭಿನ್ನ ಪ್ರಯತ್ನ Read More

ವಿಶ್ವ ಪುಸ್ತಕ ದಿನಾಚರಣೆ;ನಾಳೆ ಸೈಯದ್ ಇಸಾಕ್ ಗ್ರಂಥಾಲಯದಲ್ಲಿ ಪುಸ್ತಕ ಕೊಡುಗೆಕಾರ್ಯಕ್ರಮ

ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಉದಯಗಿರಿಯಲ್ಲಿರುವ
ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ ಹಾಗೂ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಏ. 23ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ನಾಗರಿಕರು ನಿಮ್ಮ ಮನೆಯಲ್ಲಿರುವ ಉಪಯೋಗಿಸಿರುವ ಕಥೆ, ಕಾದಂಬರಿ, ಕವನ, ಪಠ್ಯಪುಸ್ತಕ ಹಾಗೂ ಇನ್ನಿತರೆ
ಪುಸ್ತಕಗಳನ್ನು ನೀಡುವ ಮೂಲಕ ಅರ್ಥಪೂರ್ಣವಾಗಿ ಪುಸ್ತಕ ದಿನ ಆಚರಣೆ ಮಾಡೋಣ ಎಂದು ಮನವಿ ವಿಕ್ರಮ್ ಅಯ್ಯಂಗಾರ್ ಮನವಿ ಮಾಡಿದ್ದಾರೆ‌.

ಹೆಚ್ಚಿನ ಮಾಹಿತಿಗಾಗಿ ಮೊ. 9880752727
ಸಂಪರ್ಕಿಸಬಹುದು ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯುಬ್ ಖಾನ್, ಮಾಜಿ ಮೇಯರ್ ಸಂದೇಶ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡಿಕೇರಿ ಗೋಪಾಲ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮತ್ತಿತರರು ಭಾಗವಹಿಸಲಿದ್ದಾರೆ.

ವಿಶ್ವ ಪುಸ್ತಕ ದಿನಾಚರಣೆ;ನಾಳೆ ಸೈಯದ್ ಇಸಾಕ್ ಗ್ರಂಥಾಲಯದಲ್ಲಿ ಪುಸ್ತಕ ಕೊಡುಗೆಕಾರ್ಯಕ್ರಮ Read More