ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಪದಾಧಿಕಾರಿಗಳಾಗಿ ನೇಮಕಗೊಂಡ ವಿವಿಧ ಪದಾಧಿಕಾರಿಗಳಿಗೆ ಮೇ.7ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಅಭಿನಂದನಾ ಸಮಾರಂಭದ ಜೊತೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೆ ನೂತನ ಸದಸ್ಯತ್ವ ಪಡೆದ ಸದಸ್ಯರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನು ಕೃಷ್ಣಮೂರ್ತಿಪುರಂನ ಶ್ರೀರಾಮಮಂದಿರದಲ್ಲಿ ನಾಳೆ ಸಂಜೆ 5.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್. ಎನ್ ಶ್ರೀಧರಮೂರ್ತಿ ತಿಳಿಸಿದ್ದಾರೆ.
ವಿಪ್ರ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಹೆಚ್. ಎನ್ ಶ್ರೀಧರಮೂರ್ತಿ ಮನವಿ ಮಾಡಿದ್ದಾರೆ.
ಮೈಸೂರು: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರಾಣತೆತ್ತ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪದಾಧಿಕಾರಿಗಳು ಸಾಮೂಹಿಕ ಶಾಂತಿ ಮಂತ್ರ ಜಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಗುರುವಾರ ಸಂಜೆ ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಂಘದ ಆವರಣದಲ್ಲಿ ಸಾಮೂಹಿಕ ಶಾಂತಿಮಂತ್ರ ಜಪಿಸಿ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಪ್ರವಾಸಿಗರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ವಿವಿಧಡೆಯಿಂದ ಆಗಮಿಸಿದ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರಗಾಮಿ ಚಟುವಟಿಕೆ ನಡೆಸಿರುವುದನ್ನು ಈ ವೇಳೆ ತೀವ್ರವಾಗಿ ಖಂಡಿಸಲಾಯಿತು.
ದಾಳಿ ವೇಳೆ ಮೃತಪಟ್ಟ ಮೂವರು ಕನ್ನಡಿಗರ ಭಾವಚಿತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಪಾಕಿಸ್ತಾನವು ನೇರವಾಗಿ ಯುದ್ಧ ಮಾಡಲು ಧೈರ್ಯವಿಲ್ಲದೆ ಇಂತಹ ದುಶ್ಕೃತ್ಯಗಳನ್ನು ನಡೆಸುತ್ತಿದೆ, ಕಾಶ್ಮೀರದಲ್ಲಿ ಭಯೋತ್ಪಾದನೆ ಉಂಟು ಮಾಡಿ ಅದನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ವೇದಿಕೆ ಪದಾಧಿಕಾರಿಗಳು ಕಿಡಿಕಾರಿದರು.
ಆದರೆ ಪಾಪಿಸ್ತಾನದ ಪ್ರಯತ್ನ ಎಂದಿಗೂ ಸಫಲವಾಗುವುದಿಲ್ಲ,ಕೇಂದ್ರ ಸರ್ಕಾರವು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕು, ಕಾಶ್ಮೀರ ಕಣಿವೆಗಳಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆಗಳನ್ನು ನಿರ್ಮೂಲನೆ ಮಾಡುವ ಮೂಲಕ ಪ್ರಾಣ ಕಳೆದುಕೊಂಡಿರುವ ಪ್ರವಾಸಿಗರ ಆತ್ಮಕ್ಕೆ ಶಾಂತಿ ದೊರಕುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಡಾಕ್ಟರ್ ಲಕ್ಷ್ಮೀದೇವಿ, ಬ್ರಾಹ್ಮಣ ಸಂಘದ ಗ್ರಾಮಾಂತರ ಅಧ್ಯಕ್ಷರಾದ ಗೋಪಾಲ್ ರಾವ್, ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ನಗರಪಾಲಿಕೆ ಮಾಜಿ ಸದಸ್ಯರಾದ ಮ ವಿ ರಾಮಪ್ರಸಾದ್,ಎಂ.ಡಿ ಪಾರ್ಥಸಾರಥಿ, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷರಾದ ಎಚ್ ಎನ್ ಶ್ರೀಧರರ್ಮೂರ್ತಿ,ಅರ್ಚಕ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ,ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ,ಟಿ ಎಸ್ ಅರುಣ್, ಜಯಸಿಂಹ ಶ್ರೀಧರ್,ವಿಜಯ್ ಕುಮಾರ್, ರಂಗನಾಥ್, ಪ್ರಶಾಂತ್,ಚಕ್ರಪಾಣಿ, ಸುಧೀಂದ್ರ,ಪುಟ್ಟಸ್ವಾಮಿ,ನಾಗರಾಜ್, ಸಿ ಎಸ್ ಚಂದ್ರಶೇಖರ್,ರವಿಶಂಕರ್,ಪುನೀತ್ ಕೂಡ್ಲೂರು,ಶ್ರೀಕಾಂತ್ ಕಶ್ಯಪ್, ವಾಸುದೇವಮೂರ್ತಿ,ಹರೀಶ್, ಸತ್ಯನಾರಾಯಣ್, ವಿಘ್ನೇಶ್ವರ ಭಟ್, ರಾಮು, ಭಾಗ್ಯಶ್ರೀ ಭಟ್,ಲತಾ ಬಾಲಕೃಷ್ಣ, ಸುಂದರಮೂರ್ತಿ,ಶ್ರೀನಿವಾಸ್ ಶರ್ಮಾ, ಪ್ರವೀಣ್ ಕುಮಾರ್,ಮಂಜುನಾಥ್ ಹಾಗೂ ಇನ್ನಿತರ ವಿಪ್ರ ಸಮುದಾಯದ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಮೈಸೂರು: ರಾಜ್ಯದಲ್ಲಿ ಬ್ರಾಹ್ಮಣ ಸಮಾಜದಲ್ಲಿನ ಒಳಪಂಗಡಗಳನ್ನು ಬೇರ್ಪಡಿಸಿ ಜಾತಿ ಗಣತಿ ಮಾಡಲಾಗಿದೆ ಇದು ಅನ್ಯಾಯ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ,
ಹೀಗಾಗಿ ಬ್ರಾಹ್ಮಣರು ಈ ಜಾತಿಗಣತಿಯನ್ನು ಒಪ್ಪುವುದಿಲ್ಲ ಎಂದು ಮಾಧ್ಯಮ ಹೇಳಿಕೆಯಲ್ಲಿ ವಿಕ್ರಂ ಅಯ್ಯಂಗಾರ್ ಕಡಕ್ಕಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಬ್ರಾಹ್ಮಣ ಸಮಾಜದ ಜನಸಂಖ್ಯೆ ಕಡಿಮೆ ಇದೆ. ಆದರೆ ಅದರಲ್ಲಿಯೇ ಒಳಪಂಗಡಗಳನ್ನು ವಿಂಗಡಿಸಿದ್ದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
ಸಮಾಜದ ಎಲ್ಲಾ ಜನಾಂಗದಲ್ಲೂ ಒಳ ಪಂಗಡಗಳಿವೆ. ಅದನ್ನು ಬಿಟ್ಟು ಕೆಲವು ಸಮಾಜಗಳಲ್ಲಿ ಮಾತ್ರ ಒಳ ಪಂಗಡಗಳನ್ನು ತೋರಿಸಿದ್ದಾರೆ. ಈ ಜಾತಿಗಣತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಜಾತಿ ಗಣತಿ ವರದಿ ಪರಿಷ್ಕರಣೆ ಮಾಡದಿದ್ದರೆ ಬ್ರಾಹ್ಮಣ ಸಮುದಾಯದವರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬ್ರಾಹ್ಮಣರ ಸಂಖ್ಯೆಯನ್ನು 15,64,741 ಜಾತಿಗಣತಿಯಲ್ಲಿ ತೋರಿಸಲಾಗಿದೆ. ಇದರಲ್ಲಿಯೇ ಹವ್ಯಕ ಬ್ರಾಹ್ಮಣರು 85,595 ಮತ್ತು ವೈಷ್ಣವ ಬ್ರಾಹ್ಮಣರು 16,286 ಎಂದು ಬೇರ್ಪಡಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿಯೇ 1.50 ಲಕ್ಷಕ್ಕಿಂತ ಅಧಿಕ ಬ್ರಾಹ್ಮಣರಿದ್ದಾರೆ. ಹಾಗಿದ್ದರೆ ರಾಜ್ಯದಲ್ಲಿ 15 ಲಕ್ಷ ಮಾತ್ರ ಬ್ರಾಹ್ಮಣರು ಇದ್ದಾರೆಯೇ ಎಂದು ವಿಕ್ರಂ ಅಯ್ಯಂಗಾರ್ ಪ್ರಶ್ನಿಸಿದ್ದಾರೆ.
ಮೈಸೂರು: ನಾಡಿನ ಸಮಗ್ರ ದಾಸಸಾಹಿತ್ಯ ರಚನೆಯಲ್ಲಿ ಪುರಂದರ ದಾಸರು ಅಗ್ರಗಣ್ಯರು ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು.
ಪುರಂದರ ದಾಸರು ರಚಿಸಿದ ಪ್ರತಿಯೊಂದು ಹಾಡುಗಳು ನಮ್ಮ ಜೀವನವನ್ನು ಬದಲಿಸಬಲ್ಲದು ಎಂದು ಅವರು ತಿಳಿಸಿದರು.
ಪುರಂದರ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ನಗರದ ಯಾದವಗಿರಿ ಯಲ್ಲಿರುವ ಶ್ರೀ ಉತ್ತರಾದಿ ಮಠ, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪುರಂದರ ದಾಸರ ಜೀವನ ಚರಿತ್ರೆ ಕುರಿತು ವಿಕ್ರಂ ಅಯ್ಯಂಗಾರ್ ಮಾತನಾಡಿದರು.
15ನೇ ಶತಮಾನದಲ್ಲಿ ಜನಸಿಸಿದ ಪುರಂದರ ದಾಸರು ಸಾಕ್ಷಾತ್ ನಾರದ ಮಹರ್ಷಿಗಳ ಅವತಾರವೆಂದು ಪುರಾಣಗಳು ತಿಳಿಸತ್ತವೆ, ಪುರಂದರ ದಾಸರು ತಮ್ಮ ಜೀವಿತಾವಧಿಯವರೆಗೂ ನಾಡಿನ ಪ್ರತಿಯೊಂದು ಊರುಗಳಿಗೆ ಸಂಚರಿಸಿ ಸಮಾಜವನ್ನು ಉದ್ಧಾರ ಮಾಡಿದ ಮಹಾನ್ ಸಮಾಜ ಸುಧಾರಕ ಎಂದು ಬಣ್ಣಿಸಿದರು.
ಸುಮಾರು 4 ಲಕ್ಷ 7 ಸಾವಿರ ಕೀರ್ತನೆಗಳನ್ನು ರಚಿಸಿದ ಕೀರ್ತಿ ಪುರಂದರ ದಾಸರಿಗೆ ಸಲ್ಲುತ್ತದೆ ಎಂದು ವಿಕ್ರಂ ಅಯ್ಯಂಗಾರ್ ಹೇಳಿದರು.
ಕಾರ್ಯಕ್ರಮದಲ್ಲಿ ರಾಮಾನುಜ ಅಬ್ಯುದಯ ಸಹಕಾರ ಸಂಘದ ಅಧ್ಯಕ್ಷ ಎಚ್ ಕೆ ರಾಜಗೋಪಾಲ್, ಎಸ್ ಬಿ ವಾಸುದೇವಮೂರ್ತಿ, ಪ್ರಮೋದ್ ಆಚಾರ್, ನಾಗಭೂಷಣ್ ಆಚಾರ್, ಅನಂತ ಕೃಷ್ಣ,ಹೊಯ್ಸಳ ಕರ್ನಾಟಕ ನಿರ್ದೇಶಕರಾದ ರಂಗನಾಥ್, ಸುಚೇಂದ್ರ, ಶ್ರೀನಿವಾಸ್, ಮತ್ತಿತರರು ಪಾಲ್ಗೊಂಡಿದ್ದರು.