ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ :ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ
ಮೈಸೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ವತಿಯಿಂದ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ 2025 ನೀಡಿ ಗೌರವಿಸಲಾಯಿತು.
ಮೈಸೂರಿನ ಜಿಲ್ಲಾ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೃಷಿ,ಹಾಡುಗಾರಿಕೆ,ನಾಟಕ ರಂಗ,ಚಿತ್ರನಟ, ಸಮಾಜ ಸೇವೆ, ಇತ್ಯಾದಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಇದೇ ವೇಳೆ ರಕ್ತದಾನ ಮಾಡಿ ಸಮಾಜಸೇವೆಯಲ್ಲಿ ತೊಡಗಿರುವ ರಕ್ತದಾನಿ ಮಂಜು ಅವರಿಗೆ ರಾಜ್ಯೋತ್ಸವ ಪುರಸ್ಕಾರ – 2025 ನೀಡಿ ಗೌರವಿಸಿ ಅಭಿನಂದಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ, ಪ್ರಶಸ್ತಿ ಪ್ರಧಾನ ಮಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಲತಾ ಮೋಹನ್,ಖಜಾಂಚಿ ಡಾ.ಚೀಲೂರು ಚಂದ್ರಶೇಖರ್,ಜಂಟಿ ಕಾರ್ಯದರ್ಶಿ
ಬಿ ಪ್ರಕಾಶ್,ಸಂಘಟನಾ ಕಾರ್ಯದರ್ಶಿ
ಕೆಂಪಣ್ಣ, ಲೋಕೇಶ್ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವಾರು ಪ್ರಶಸ್ತಿ ಪುರಸ್ಕರು ಭಾಗವಹಿಸಿದ್ದರು.