ವಸತಿ ಯೋಜನೆ: ಶೀಘ್ರ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ

ಮೈಸೂರು: ಹೆಚ್. ಡಿ.ಕೋಟೆ ಹಾಗೂ ಹುಣಸೂರು ತಾಲೂಕಿನ ಬಸವ, ಅಂಬೇಡ್ಕರ್, ಪಿಎಂಎವೈ ಮತ್ತು ಪಿಎಂ ಜನ್ಮನ್ ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿಯಲ್ಲಿರುವ ಹಾಗೂ ಪ್ರಾರಂಭವಾಗದಿರುವ ಮನೆಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ, ಚಕ್ಕೋಡನಹಳ್ಳಿ ಹಾಗೂ ಅಣ್ಣೂರು ಗ್ರಾಮ ಪಂಚಾಯಿತಿ ಹಾಗೂ ಹುಣಸೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯಿತಿಯಲ್ಲಿರುವ ನಾಗಾಪುರ-4ನೇ ಹಾಡಿಗೆ ಭೇಟಿ ಕೊಟ್ಟು ಪರಿಶೀಲಿಸಿದರು.

ಮನೆಗಳ ಪರಿಶೀಲನೆ ಸಂದರ್ಭದಲ್ಲಿ ಕೆಲವು ಫಲಾನುಭವಿಗಳು ಮನೆಗಳನ್ನು ಪೂರ್ಣಗೊಳಿಸದಿರುವುದು ಕಂಡು ಬಂದಿದ್ದು, ತುರ್ತಾಗಿ ಪ್ರಗತಿ ಸಾಧಿಸುವಂತೆ ಹಾಗೂ ಪೂರ್ಣಗೊಂಡ ಮನೆಗಳ ಜಿಯೋ ಟ್ಯಾಗ್ ಅನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮವಹಿಸುವಂತೆ ಪಿಡಿಒ ಅವರಿಗೆ ತಾಖೀತು ಮಾಡಿದರು

2018ರ ಸಮೀಕ್ಷೆ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳ ಅನುಮೋದನೆ ಪಡೆದುಕೊಂಡು, ಅನರ್ಹರನ್ನು ರದ್ದುಗೊಳಿಸಲು ಸಭಾ ನಡವಳಿಯೊಂದಿಗೆ ಒಂದು ವಾರದೊಳಗೆ ತಾ.ಪಂ ಕಚೇರಿಗೆ ಸಲ್ಲಿಸಲು ಪಿಡಿಒ ರವರಿಗೆ ಸೂಕ್ತ ನಿರ್ದೇಶನ ನೀಡಿ ಪ್ರಸ್ತಾವನೆಯನ್ನು ಪಡೆದುಕೊಂಡು ಅನರ್ಹರನ್ನು ರದ್ದಗೊಳಿಸಲು ಸೂಕ್ತ ಕ್ರಮವಹಿಸಲು ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಬಳಿಕ ಅನುಮೋದನೆಗೊಂಡಿರುವ ಮನೆಗಳ ಫಲಾನುಭವಿಗಳೊಂದಿಗೆ ಚರ್ಚಿಸಿ, ಈಗಾಗಲೇ ಪಿಎಂಎವೈ ಅಡಿ ಮೊದಲನೇ ಕಂತಿನ ಅನುದಾನ ಮಂಜೂರಾಗಿದ್ದರೂ, ಈವರೆವಿಗೂ ಯಾವ ಕಾರಣಕ್ಕಾಗಿ ಮನೆ ಪೂರ್ಣಗೊಳಿಸಿಲ್ಲವೆಂದು ಯುಕೇಶ್ ಪ್ರಶ್ನಿಸಿದರು.

ಕೂಡಲೇ ಅರ್ಧಕ್ಕೆ ನಿಲ್ಲಿಸಿರುವ ಕಾಮಗಾರಿಯನ್ನು ತಮಗೆ ನೀಡಿರುವ ಸಮಯವಕಾಶದಲ್ಲಿ ಉತ್ತಮ ಗುಣಮಟ್ಟವುಳ್ಳ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳುವಂತೆ ಹಾಗೂ ಸರ್ಕಾರ ಜನರಿಗಾಗಿ ನೀಡುತ್ತಿರುವ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಈ ವೇಳೆ ಜಿಲ್ಲಾ ಮುಖ್ಯ ಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ,ಹೆಚ್.ಡಿ ಕೋಟೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ , ಹುಣಸೂರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಹೆಚ್.ಡಿ ಕೋಟೆ ತಾಲೂಕಿನ ಸಹಾಯಕ ನಿರ್ದೇಶಕ ( ಗ್ರಾ ಉ) ರಘುನಾಥ್ ಕೆ.ಎಂ, ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲೇಶ್, ಹುಣಸೂರು ತಾಲ್ಲೂಕು ಮಟ್ಟದ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ವಸತಿ ಯೋಜನೆ: ಶೀಘ್ರ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ Read More

ಜೀತ ಪದ್ಧತಿ ಕಂಡುಬಂದರೆ ಕಠಿಣ ಶಿಕ್ಷೆ-ಸಿವಿಲ್ ನ್ಯಾಯಾಧೀಶ ದಿನೇಶ್

ಮೈಸೂರು, ಮಾ.6: ಜೀತ ಪದ್ಧತಿಯ ನಿರ್ಮೂಲನಾ ಕಾಯ್ದೆ ಜಾರಿಯಲ್ಲಿದ್ದರೂ, ಹಲವೆಡೆ ಬಲವಂತದ ಜೀತ ಪದ್ಧತಿ ಕಂಡುಬರುತ್ತಿದೆ ಆದ್ದರಿಂದ ಕಾನೂನಿನಲ್ಲಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ದಿನೇಶ್ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜೀತ ಪದ್ದತಿ ನಿರ್ಮೂಲನೆ ದಿನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜೀತ ಪದ್ದತಿ ನಿಷೇಧ ಕುರಿತು ಅಧಿಕಾರಿಗಳಿಗೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 50 ಅಧಿಕಾರಿಗಳನ್ನು ಜೀತ ಪದ್ಧತಿಯ ನಿರ್ಮೂಲನಾ ಅಧಿಕಾರಿಗಳನ್ನಾಗಿ ನೇಮಿಸಿದೆ, ಎಲ್ಲಾ ಇಲಾಖೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳು ಜೀತ ಪದ್ಧತಿಯ ಕಾರ್ಮಿಕರು ಕಂಡು ಬಂದಲ್ಲಿ ಅವರ ರಕ್ಷಣೆ ಮಾಡುವುದು ಮತ್ತು ಪುರ್ನವಸತಿ ಒದಗಿಸಿಕೊಡುವುದು ಅವರ ಕರ್ತವ್ಯ ಎಂದು ತಿಳಿಸಿದರು.

ಜೀತಪದ್ಧತಿ ತಡೆಗಟ್ಟುವಿಕೆಗೆ ಹೆಚ್ಚಿನ ಒತ್ತು ನೀಡಬೇಕು, ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮವಹಿಸಬೇಕೆಂಬುದರ ಬಗ್ಗೆ ವಿಷಯವನ್ನು ತಜ್ಞರು ಕಾರ್ಯಾಗಾರದಲ್ಲಿ ತಿಳಿಸಿಕೊಡಲಿದ್ದು, ಅದರನ್ವಯ ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲೂ ಕೂಡ ಜೀತಪದ್ಧತಿ ಚಾಲ್ತಿಯಲ್ಲಿರುವುದು ಅತ್ಯಂತ ವಿಷಾಧನೀಯ ಎಂದು ಹೇಳಿದರು.

ಇದು ಸೂಕ್ಷ್ಮ ವಿಚಾರವಾಗಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಎಲ್ಲಾ ಅಧಿಕಾರಿಗಳು ಒಗ್ಗಟ್ಟಾಗಿ ಜೀತಪದ್ಧತಿ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸರ್ಕಾರದಿಂದ ಜೀತಪದ್ಧತಿ ನಿರ್ಮೂಲನೆಗೆ ನಿಗದಿಪಡಿಸಿರುವ ಎಸ್.ಒ.ಪಿ.ಯಂತೆ ಮತ್ತು ಸರ್ಕಾರದ ಆದೇಶದಂತೆ ಸಮಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕಾಗಿರುತ್ತದೆ ಎಂದು ತಿಳಿಸಿದರು.

ಹೆಚ್.ಡಿ.ಕೋಟೆ ತಾಲ್ಲೂಕಿನ ಜೀವಿಕ ಸಂಸ್ಥೆ, ಸಂಪನ್ಮೂಲ ವ್ಯಕ್ತಿ ಬಸವರಾಜು, ಉಪಕಾರ್ಯದರ್ಶಿ ಸವಿತಾ ಬಿ.ಎಂ., ಡಾ.ಎಂ.ಕೃಷ್ಣರಾಜು, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಜೀವಿಕ ಸಂಸ್ಥೆಯ ತಂಡದವರು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜೀತ ಪದ್ಧತಿ ಕಂಡುಬಂದರೆ ಕಠಿಣ ಶಿಕ್ಷೆ-ಸಿವಿಲ್ ನ್ಯಾಯಾಧೀಶ ದಿನೇಶ್ Read More

ಕೇತುಪುರ ಗ್ರಾ ಪಂಗೆ ಜಿ ಪಂ ಸಿಇಒ ಗಾಯಿತ್ರಿಧಿಡೀರ್ ಭೇಟಿ

ಮೈಸೂರು‌: ಟಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ‌‌
ನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಧಿಡೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಕೇತುಪುರ ಗ್ರಾಮದ ಬಹುಗ್ರಾಮ ಕುಡಿಯುವ ನೀರು ಸ್ಥಾವರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಸ್ಥಾವರದ ಜಾಕ್ ವೆಲ್ ಸುತ್ತ ಸ್ವಚ್ಛಗೊಳಿಸಿ, ರಿಟೈನಿಂಗ್ ವಾಲ್ ನಿರ್ಮಿಸುವಂತೆ ಸೂಚಿಸಿದರು.

ಪ್ಯಾನಲ್ ಬೋರ್ಡ್ ದುರಸ್ತಿಯಾಗಿದ್ದು ಕೂಡಲೇ ಸರಿಪಡಿಸಲು ಕ್ರಮ ವಹಿಸುವಂತೆ ಆದೇಶಿಸಿದರು.

ನೀರಿನ ಶುದ್ಧೀಕರಣ ಘಟಕ ಅರಣ್ಯದಿಂದ ಸುತ್ತುವರೆದಿದ್ದು ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ ಅಲ್ಲಿನ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಘಟಕದ ಸುತ್ತ ಸೋಲಾರ್ ಫೆನ್ಸಿಂಗ್ ಅಳವಡಿಸಿಕೊಳ್ಳುವಂತೆ ಗಾಯಿತ್ರಿ ಸಲಹೆ ನೀಡಿದರು.

ಮುಖ್ಯ ರಸ್ತೆಯಿಂದ ನೀರಿನ ಶುದ್ಧಿಕರಣ ಘಟಕಕ್ಕೆ ಬರುವ ರಸ್ತೆಯು ಅರಣ್ಯ ಇಲಾಖೆಯ ಸುಪರ್ದಿಗೆ ಬರುವುದರಿಂದ ಅರಣ್ಯ ಇಲಾಖೆಗೆ ಪತ್ರ ಬರೆದು ಅನುಮತಿ ಪಡೆದು ರಸ್ತೆ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮಸ್ಥರಿಗೆ ಬೋರ್ ವೆಲ್ ನೀರನ್ನು ಕೊಡುವುದರ ಬದಲಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಸರಬರಾಜು ಮಾಡುವ ನದಿ ನೀರನ್ನು ಟ್ಯಾಂಕುಗಳಿಗೆ ಹರಿಸಿ, ಅದೇ ನೀರನ್ನು ಜನರಿಗೆ ಕೊಡುವಂತೆ ಪಿಡಿಒ ಗೆ ಸೂಚಿಸಿದರು.

ನಂತರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಇ ಹಾಜರಾತಿಯನ್ನು ವೆಬ್ ತಂತ್ರಾಂಶದಲ್ಲಿ ಪರಿಶೀಲಿಸಿ ತಡವಾಗಿ ಹಾಜರಾತಿ ನಮೂದಿಸುತ್ತಿರುವ ಸಿಬ್ಬಂದಿಗಳಿಗೆ ನೋಟಿಸ್ ನೀಡಲು ಸಿಇಒ ಆದೇಶಿಸಿದರು.

ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಆಹಾರವನ್ನು ಸ್ವತಃ ತಾವೇ ಸೇವಿಸಿ ಆಹಾರ ಗುಣಮಟ್ಟವನ್ನು ಗಾಯಿತ್ರಿ ಪರಿಶೀಲಿಸಿದರು.

ಕೇತುಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶೌಚಾಲಯ, ಆಟದ ಮೈದಾನ, ಶಾಲಾ ಕಾಂಪೌಂಡ್, ಶಾಲಾ ಕೊಠಡಿಗಳನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು‌

ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಿ. ಎಸ್. ಅನಂತರಾಜು, ಪಿ ಆರ್ ಇ ಡಿ ಇಲಾಖೆಯ ಇ ಇ ವೀರೇಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎ ಇ ಇ ಹರ್ಷದ್ ಪಾಷಾ, ತಾಲ್ಲೂಕು ಯೋಜನಾಧಿಕಾರಿ ರಂಗಸ್ವಾಮಿ, ಪಿಡಿಒ ರವೀಂದ್ರ, ಕಾರ್ಯದಶಿ ಆಶಾಲತಾ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಕೇತುಪುರ ಗ್ರಾ ಪಂಗೆ ಜಿ ಪಂ ಸಿಇಒ ಗಾಯಿತ್ರಿಧಿಡೀರ್ ಭೇಟಿ Read More

ಆರೋಗ್ಯ ಕಾರ್ಯಕ್ರಮ ಯೋಜನೆಗಳ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ:ಕೆ.ಎಂ.ಗಾಯತ್ರಿ

ಮೈಸೂರು: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು, ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ ಸೂಚಿಸಿದರು.

ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಆರ್ಥಿಕ ವರ್ಷದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಎರಡನೇ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.

ಡಿಸೆಂಬರ್-2024ರ ಅಂತ್ಯಕ್ಕೆ ಎಲ್ಲಾ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶೇಕಡ 100 ರಷ್ಟು ಪ್ರಗತಿ ಸಾಧಿಸುವ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಸೊಸೈಟಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡಿ, ಸಮುದಾಯ ಮಟ್ಟದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ‌ ಎಂದು ನಿರ್ದೇಶನ ನೀಡಿದರು.

ತಾಯಿ ಮರಣ ಮತ್ತು ಶಿಶು ಮರಣಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮುದಾಯ ಮತ್ತು ಸಾಂಸ್ಥಿಕ ಮಟ್ಟದಲ್ಲಿ ವಿಮರ್ಶಾತ್ಮಕ ಪರಿಶೋಧನೆ ನಡೆಸಿ, ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕ್ರಮವಹಿಸಲು ಸೂಚಿಸಿದರು.

2024-25ನೇ ಸಾಲಿನ ಅಕ್ಟೋಬರ್-24ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕುಮಾರಸ್ವಾಮಿ, ಜಿಪಂ ಮುಖ್ಯ ಯೋಜನಾಧಿಕಾರಿಗಳು, ಎಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಆರೋಗ್ಯ ಕಾರ್ಯಕ್ರಮ ಯೋಜನೆಗಳ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ:ಕೆ.ಎಂ.ಗಾಯತ್ರಿ Read More