ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಒತ್ತುವರಿ ತಡೆಯಿರಿ:ಶ್ರೀವತ್ಸ ಆಗ್ರಹ

ಮೈಸೂರು: ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಹಾಗೂ ಒತ್ತುವರಿಗಳನ್ನು ತಡೆಯಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಮೈಸೂರು ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಲು ಕಾಡು ನಾಶ ಕಾರಣ, ಅಕ್ರಮ ಒತ್ತುವರಿ ಸಂಬಂಧ ಜನರ ಆಕ್ರೋಶ ಹೆಚ್ಚಾಗುವ ಮೊದಲು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅರಣ್ಯ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಲ್ಲಿ ರಾತ್ರಿ ವೇಳೆ ಫೈರ್ ಕ್ಯಾಂಪ್ ಹಾಕುತ್ತಾರೆ. ಇದರಿಂದ ಪ್ರಾಣಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಭಯದಿಂದಲೇ ಕಾಡುಪ್ರಾಣಿಗಳು ನಾಡಿನತ್ತ ಬರುತ್ತಿವೆ. ಇದಕ್ಕೆ ಅರಣ್ಯ ಇಲಾಖೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಎಲೆಕ್ಷನ್ ಕಮಿಷನರ್ ರಾಜಕೀಯ ಪುಡಾರಿ ರೀತಿ ವರ್ತನೆ ಮಾಡುತ್ತಿದ್ದಾರೆ ಎಂಬ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀವತ್ಸ, ಯತೀಂದ್ರ ಹೇಳಿಕೆಯನ್ನು ಖಂಡಿಸುತ್ತೇನೆ. ಯಾವ ಯಾವ ಸಮಯದಲ್ಲಿ ಸಂವಿಧಾನ ದುರುಪಯೋಗ ಆಯ್ತು ಎಂಬುದನ್ನು ಅವರೇ ಅರಿತುಕೊಳ್ಳಲಿ ಎಂದು ಟಾಂಗ್ ನೀಡಿದರು.

ನೀವು ಚುನಾವಣೆಯಲ್ಲಿ ಗೆದ್ದರೆ ಮತಗಳ್ಳತನ ಇಲ್ಲ. ಸೋತರೆ ಮಾತ್ರ ಮತಗಳ್ಳತನಾನ? ಈ ಬಗ್ಗೆ ನೀವೇ ಪರಾಮರ್ಶೆ ಮಾಡಬೇಕು ಎಂದು ಹೇಳಿದರು.

ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್ ಖರ್ಗೆ ಪದೇ ಪದೇ ಹೇಳಿಕೆ ಕೊಡುತ್ತಿದ್ದಾರೆ,ಅವರಿಗೆ ಯಾಕೆ ಅಷ್ಟು ಕೋಪ ಎಂದು ಶಾಸಕರು ಪ್ರಶ್ನಿಸಿದರು.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಕ್ಕೆ ಸರ್ಕಾರ ಮುಂದಾಗಿದೆ. ಇಷ್ಟಾದರೂ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಒಂದೇ ಒಂದು ಮಾತು ಆಡಿಲ್ಲ. ತಮ್ಮ ಮಗ ಎಂಬ ಕಾರಣಕ್ಕೆ ಹೇಳಿಕೆ ಕೊಡುತ್ತಿಲ್ಲವೇ? ಆರ್‌ಎಸ್‌ಎಸ್‌ ಚಟುವಟಿಕೆ ಬಗ್ಗೆ ನಿಮಗೆ ಗೊತ್ತಿಲ್ಲವೆ ಎಂದು ಕಾರವಾಗಿ ಪ್ರಶ್ನೆ ಮಾಡಿದರು.

ಈಗಿನ ಪರಿಸ್ಥಿತಿ ನೋಡಿದ್ರೆ ಖಂಡಿತ ಕ್ರಾಂತಿ ಆಗುತ್ತದೆ,ಅಂತಹ ಬೆಳವಣಿಗೆಗಳು ಕಾಂಗ್ರೆಸ್ ನಲ್ಲಿ ಕಾಣುತ್ತಿವೆ, ಸಿಎಂ ಬದಲಾವಣೆ ಆಗುವಂತ ಕಾಣುತ್ತಿದೆ, ನವೆಂಬರ್ ಕ್ರಾಂತಿ ಆಗೇ ಆಗುತ್ತದೆ ಎಂದು ಶ್ರೀವತ್ಸ ಹೇಳಿದರು.

ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಒತ್ತುವರಿ ತಡೆಯಿರಿ:ಶ್ರೀವತ್ಸ ಆಗ್ರಹ Read More

ಹರಿಶ್ಚಂದ್ರಘಾಟ್ ನಲ್ಲಿ ೧.೦೫ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶ್ರೀವತ್ಸ‌‌ ಚಾಲನೆ

ಮೈಸೂರು: ಕೆ.ಆರ್ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರ
ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು.

ಇದೇ ವೇಳೆ ಸ್ಮಶಾನದಲ್ಲಿ೧.೦೫ ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮಳೆ ಬಂದರೇ ನೀರು ನಿಂತು ಸಮಸ್ಯೆ ಉಂಟಾಗುತ್ತದೆ ಎಂಬ ಜನರ ದೂರಿಗೆ ಸ್ಪಂದಿಸಿ, ಮುಡಾ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಸ್ಮಶಾನದಲ್ಲಿ ಪರಿಶೀಲಿಸಿ, ಸಮಸ್ಯೆ ಪರಿಹಾರಕ್ಕೆ ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಸ್ಮಶಾನದ ಆವರಣದಲ್ಲಿ ಸುಮಾರು ೯೮ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಯೋಗ್ಯಾಸ್ ಉತ್ಪಾದನೆಯ ಕಾಮಗಾರಿಯನ್ನು ಪರಿಶೀಲಿಸಿ, ಅಗತ್ಯ ಮಾಹಿತಿ ಪಡೆದುಕೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆದೇಶಿಸಿದರು.

ಇದೇ ವೇಳೆ ಪಿಂಜರಾಪೋಲ್ ರಸ್ತೆಯಲ್ಲಿ ಸಂಚರಿಸಿ ಈ ಮಾರ್ಗದಲ್ಲಿ ಮಳೆ ನೀರು ಮುಂದಕ್ಕೆ ಹರಿಯದೇ ತೊಂದರೆ
ಯಾಗುತ್ತಿರುವುದಕ್ಕೆ ಮಾರ್ಗ ಮಧ್ಯೆ ಕೌಂಪೌಂಡ್ ನಿರ್ಮಾಣ ಮಾಡಿರುವುದೆ ಕಾರಣ ಎಂಬುದನ್ನು ತಿಳಿದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಮಳೆ ನೀರು ಸರಾಗವಾಗಿ ಹರಿಯಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶ್ರೀವತ್ಸ ನಿರ್ದೇಶಿಸಿದರು.

ಹರಿಶ್ಚಂದ್ರಘಾಟ್ ನಲ್ಲಿ ೧.೦೫ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶ್ರೀವತ್ಸ‌‌ ಚಾಲನೆ Read More

ಶ್ರೀವತ್ಸಾಗೆ ಶುಭ ಕೋರಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯವರು

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ಅವರ ಅಗ್ರಹಾರದಲ್ಲಿ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ನೆರವೇರಿಸಲಾಯಿತು.

ಈ‌ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶ್ರೀವತ್ಸ ಅವರಿಗೆ ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಲಾಯಿತು.

ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ ಡಿ ಗೋಪಿನಾಥ್,ಉಪಾಧ್ಯಕ್ಷೆ
ಎಂ ಎನ್ ಸೌಮ್ಯ, ಖಜಾಂಚಿ ಕೆ ನಾಗರಾಜ, ನಿರ್ದೇಶಕ ಮಂಡಲಿ ಸದಸ್ಯರಾದ ಸಿ. ವಿ ಪಾರ್ಥಸಾರಥಿ, ಹೆಚ್ ಎಸ್. ಪ್ರಶಾಂತ್ ತಾತಾಚಾರ್,ಎಂ ಆರ್
ಬಾಲಕೃಷ್ಣ ,ಹೆಚ್ ಪಿ.ಚೇತನ್,ಎನ್
ಪಣಿರಾಜ್, ವಿಕ್ರಂ ಅಯ್ಯಂಗಾರ್,ಪಿ
ಮಹಿಮ,ಎನ್ ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ,ಎಸ್ ರಾಜಮ್ಮ, ಎಂ. ಪಿ
ಶಾಶ್ವತಿ ನಾಯಕ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ಹಾಜರಿದ್ದರು.

ಶ್ರೀವತ್ಸಾಗೆ ಶುಭ ಕೋರಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯವರು Read More