ಕರ್ನಾಟಕ ಕಾಯಕ ರತ್ನ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಚಂದ್ರಕಾಂತ ಆಯ್ಕೆ

ಬೀದರ್: ತ್ರಿಭಾಷಾ ವಚನ ಗಾಯನದ ಪರಿಣತಿಯನ್ನು ಗುರುತಿಸಿ ಬೀದರಿನ ವಿಶ್ವ ಕನ್ನಡಿಗರ ಸಂಸ್ಥೆಯು ಹೈದರಾಬಾದ್ ಪ್ರಗತಿನಗರದ ನಿವಾಸಿ, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ. ಚಂದ್ರಕಾಂತ ಅವರನ್ನು ರಾಷ್ಟ್ರೀಯ ಮಟ್ಟದ ಕರ್ನಾಟಕ ಕಾಯಕ ರತ್ನ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗೋರಚಿಂಚೋಳಿ ಗ್ರಾಮದ ಜಿ. ಚಂದ್ರಕಾಂತ, ಬಾಲ್ಯದಿಂದಲೂ ಭಜನೆ ಮತ್ತು ನಾಟಕದ ಬಗ್ಗೆ ಒಲವು ಹೊಂದಿದ್ದರು.

ಸೌಭಾಗ್ಯ ಲಕ್ಷ್ಮೀ ಸಾಮಾಜಿಕ ನಾಟಕದಲ್ಲಿ ಬಾಲ ನಟನಾಗಿ ನಟಿಸಿದ್ದಾರೆ. ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಅವರು ಸರ್ಕಾರದ ವಾರ್ತಾ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಮನೆಯಲ್ಲಿಯೇ ಸಂಗೀತ ಕಲಿಯಲು ಪ್ರಾರಂಭಿಸಿದರು.
ಮಹಾನ್ ಮಾನವತಾವಾದಿ ಬಸವೇಶ್ವರರ ವಚನಗಳ ಸಾರವನ್ನು ಇತರ ಭಾಷಿಕರು ಮತ್ತು ಧಾರ್ಮಿಕರಿಗೂ ತಲುಪಿಸುವ ಉದ್ದೇಶದಿಂದ, ಅವರು ಕನ್ನಡ, ಹಿಂದಿ, ಮರಾಠಿ, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿವಿಧ ರಾಗಗಳಲ್ಲಿ ಸುಮಾರು 20-25 ವಚನಗಳನ್ನು ಹಾಡುವರು.

ಇದಲ್ಲದೆ ಅವರು ಗಜಲ್‌ಗಳು, ಜಾನಪದ ಗೀತೆಗಳು, ಕನ್ನಡ ಗೀತೆಗಳು ಮತ್ತು ಮರಾಠಿ ಅಭಂಗಗಳನ್ನು ಸಹ ಹಾಡುತ್ತಾರೆ. ಅವರು ವಿಶ್ವ ವಿಖ್ಯಾತ ಮೈಸೂರು ದಸರಾ, ಹಂಪಿ ಉತ್ಸವ ಸೇರಿದಂತೆ ವಿವಿಧ ರಾಜ್ಯ ಮಟ್ಟದ ಉತ್ಸವಗಳಲ್ಲಿ ತ್ರಿಭಾಷಾ ವಚನ ಮತ್ತು ಗಜಲ್‌ಗಳ ಗಾಯನ ಮಾಡಿದ್ದಾರೆ. ಅವರು ಆಲ್ ಇಂಡಿಯಾ ರೇಡಿಯೋದಿಂದ ಹಿಂದೂಸ್ತಾನಿ ಸುಗಮ ಸಂಗೀತದಲ್ಲಿ “ಬಿ” ದರ್ಜೆಯನ್ನು ಸಹ ಪಡೆದಿದ್ದಾರೆ.

ರಾಷ್ಟ್ರೀಯ ಮಟ್ಟದ ಕರ್ನಾಟಕ ಕಾಯಕ ರತ್ನ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಒಟ್ಟು 16 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಹೇಳಿದ್ದಾರೆ.

ಅವರಲ್ಲಿ ಶ್ರೀ ಚಂದ್ರಕಾಂತ ಒಬ್ಬರು. 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಡಿಸೆಂಬರ್ 9, ಮಂಗಳವಾರ ಬೀದರಿನ ಶ್ರೀ ಚೆನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಕಾಯಕ ರತ್ನ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಚಂದ್ರಕಾಂತ ಆಯ್ಕೆ Read More

ಕಲಬುರಗಿ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ನಿಧನ

ಕಲಬುರಗಿ: ಮಂಗಳವಾರ ಸಂಜೆ ಜೇವರ್ಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ ನಡೆದ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ, ಸಹೋದರ ಶಂಕರ ಬೀಳಗಿ ಹಾಗೂ ಮತ್ತೊಬ್ಬ ಸೋದರ ಸಂಬಂಧಿ ಮೃತಪಟ್ಟಿದ್ದರು.

ಮತ್ತೊಬ್ಬರು‌ ಮಹಾಂತೇಷ ಅವರ ಸ್ನೇಹಿತ ಈರಣ್ಣ ಶಿರಸಂಗಿ ಗಂಭೀರವಾಗಿ
ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಬುಧವಾರ ಬೆಳಿಗ್ಗೆ ಅವರು ಕೂಡಾ ಮೃತಪಟ್ಟಿದ್ದು ಅಪಘಾತದಲ್ಲಿ ನಾಲ್ವರು ಮೃತಪಟ್ಟಂತಾಗಿದೆ.

ಕಲಬುರಗಿ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ನಿಧನ Read More

ಅಪಘಾತ: ಬೆಸ್ಕಾಂ ಎಮ್‌ ಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ನಿಧನ

ಕಲಬುರಗಿ: ಕಲಬುರಗಿ ಯ ಜೇವರ್ಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ
ಬೆಸ್ಕಾಂ ಎಮ್‌ಡಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ವಿಜಯಪುರದಿಂದ ಕಲಬುರಗಿಗೆ ಸಂಬಂಧಿಕರ ಮದುವೆ ಕಾರ್ಯಕ್ಕೆ ತೆರಳುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ‍ಬೀಳಗಿ ಅವರ ಇನ್ನೋವಾ ಕಾರು ಮರಕ್ಕೆ ಅಪ್ಪಳಿಸಿದೆ.

ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು.

ಆಸ್ಪತ್ರೆಗೆ ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಡಿಎಚ್‌ಒ ಶರಣಬಸಪ್ಪ ಕ್ಯಾತನಾಳ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರಿಗೆ 51 ವರ್ಷ. ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಅಪಘಾತ: ಬೆಸ್ಕಾಂ ಎಮ್‌ ಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ನಿಧನ Read More

ಕಲಬುರಗಿ ಯಲ್ಲಿ 350 ಮಂದಿ ಪಥಸಂಚಲನಕ್ಕೆ ಕೋರ್ಟ್‌ ಅಸ್ತು

ಕಲಬುರ್ಗಿ: 100 ವರ್ಷದ ಸಂಭ್ರಮಾಚರಣೆಯ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸುವ ಪಥಸಂಚಲನದಲ್ಲಿ 300 ಜನ ಮಾತ್ರ ಭಾಗವಹಿಸಬೇಕು ಎಂಬ ಪೊಲೀಸ್ ‌ಇಲಾಖೆ ಆದೇಶಕ್ಕೆ ಹಿನ್ನಡೆಯಾಗಿದೆ.

ಈ ಮೊದಲು ಸರ್ಕಾರ 300 ಜನರಿಗೆ ಅವಕಾಶ ನೀಡಿತ್ತು,ಆದರೆ ಸಂಘದಲ್ಲಿ ಹೆಚ್ಚಿನ ಜನ ಇದ್ದಾರೆ, ಆದ್ದರಿಂದ ಹೆಚ್ಚು ಜನ ಭಾಗವಹಿಸಲು ಅವಕಾಶ ಮಾಡಿಕೊಡಬೇಕು, ಸಮಯದ ಮಿತಿಯನ್ನು ಹೆಚ್ಚಿಸಬೇಕು ಎಂದು ಸಂಘದ ಸದಸ್ಯರು ಕೋರ್ಟ್​ಗೆ ಮನವಿ ಮಾಡಿದ್ದರು.

ಈ ಕುರಿತು ಕಲಬುರ್ಗಿ ನ್ಯಾಯಾಲಯದ ನ್ಯಾಯಮೂರ್ತಿ ಎಂಜಿಎಸ್​ ಕಮಲ್ ಅವರ ನೇತೃತ್ವದಲ್ಲಿ ಮಹತ್ವದ ತೀರ್ಪು ಪ್ರಕಟಗೊಂಡಿದೆ.

ಪಥ ಸಂಚನದಲ್ಲಿ 350ಜನ ಮಾತ್ರ ಭಾಗವಹಿಸಬಹುದಾಗಿದೆ. ತದನಂತರ ಸೂರ್ಯಾಸ್ತ ಸಮಯ 5.45ರೊಳಗೆ ಪರೇಡ್​ ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ.

ಕೋರ್ಟ್​ ತೀರ್ಪಿನಂತೆ, 300 ಜನರಿಗೆ ಸರ್ಕಾರದಿಂದಲೇ ಈಗಾಗಲೇ ಪರವಾನಗಿ ನೀಡಲಾಗಿತ್ತು, ಅದಕ್ಕೆ ಹೆಚ್ಚುವರಿಯಾಗಿ ಇನ್ನೂ 50 ಜನರನ್ನು ಸೇರಿಸಲು ನ್ಯಾಯಾಲಯ ಅನುಮತಿ ನೀಡಿದೆ.

ಒಟ್ಟು 350 ಮಂದಿಗೆ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆ ಸುರಕ್ಷತಾ ಕಾರಣದಿಂದ ಕೆಲವು ನಿಯಮಗಳನ್ನು ವಿಧಿಸಿದೆ. ಅವುಗಳ ಪ್ರಕಾರ 50 ಮಂದಿ ಬ್ಯಾಂಡ್ ಬಳಗದವರು ಸೇರಿಕೊಳ್ಳಬಹುದು. ಪಥಸಂಚಲನದ ಸಮಯ ಮಧ್ಯಾಹ್ನ 3.30 ರಿಂದ ಸಂಜೆ 5.45ರವರೆಗೆ ಮಾತ್ರ ಎಂದು ಆದೇಶಿಸಿದೆ.

ಕೋರ್ಟ್​ ಆದೇಶದಂತೆ ಸಂಜೆ 5.45ರವರೆಗೆ ಮಾತ್ರ ಪಥಸಂಚಲನ ಅವಕಾಶ ದೊರೆತ ಕಾರಣ, ಅದಾದಮೇಲೆ ಪಥಸಂಚಲನ ನಿಲ್ಲಿಸಬೇಕು. ಯಾವುದೇ ಶಿಸ್ತಿನ ಉಲ್ಲಂಘನೆ ನಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.

ಕೋರ್ಟ್​ ಅನುಮತಿಗೆ ಜಿಲ್ಲಾಡಳಿತ ಕೂಡಾ ಒಪ್ಪಿಕೊಂಡಿದೆ, ಪಥಸಂಚಲನ ಮಾರ್ಗದಲ್ಲಿ ಹೆಚ್ಚಿನ ಭದ್ರತಾ ಪಡೆ ನಿಯೋಜನೆ ಮಾಡಲಾಗುತ್ತಿದ್ದು, ಜನಸಂಚಾರ ಪ್ರದೇಶಗಳಲ್ಲಿ ಟ್ರಾಫಿಕ್ ತಾತ್ಕಾಲಿಕವಾಗಿ ಮರುನಿರ್ದೇಶಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.

ಕಲಬುರಗಿ ಯಲ್ಲಿ 350 ಮಂದಿ ಪಥಸಂಚಲನಕ್ಕೆ ಕೋರ್ಟ್‌ ಅಸ್ತು Read More

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ರೈಡ್ ಮಾಡುವ ಮೂಲಕ ಶಾಕ್‌ ನೀಡಿದೆ.

ಬೀದರ್‌, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಚಳಿ ಬಿಡಿಸಿದ್ದಾರೆ.

ಬೀದರ್‌ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸುನಿಲ್ ಕುಮಾರ್ ಚಂದ್ರಪ್ರಭಾ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು,ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೀದರ್ ನಗರದ ಜೈಲ್ ಕಾಲೋನಿಯ ಎಸ್‌ಬಿಪಿ ನಗರದ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ದಾಖಲೆಗಳ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ.

ಅವರು ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಬಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಕಲಬುರ್ಗಿಯಲ್ಲಿ ಕರ್ತವ್ಯ ಮಾಡುತ್ತಿದ್ದಾರೆ. ಹೀಗಾಗಿ, ಕಲಬುರ್ಗಿಯ ಆರೋಗ್ಯ ಇಲಾಖೆಯ ಕಚೇರಿ ಹಾಗೂ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನಲ್ಲಿ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಲಾಗಿದ್ದು,ಎಇಇ ರಾಜೇಶ್ ಅವರ ಕಚೇರಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಹಿಂದಷ್ಟೇ ತುಮಕೂರಿನ ಕೆಐಎಡಿಬಿ ಕಚೇರಿಗೆ ರಾಜೇಶ್‌ ಬಂದಿದ್ದರು.

ಕೊಪ್ಪಳದಲ್ಲಿ ಎರಡು ಕಡೆ ದಾಳಿ ಲೋಕಾ ಅಧಿಕಾರಿಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶೇಕು ಚೌಹಾಣ್‌ಗೆ ಸೇರಿದ ಎರಡು ಮನೆ, ಅಭಿಷೇಕ್ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಮನೆಗಳ ಮೇಲೂ ದಾಳಿ ಮಾಡಲಾಗಿದೆ.

ಬಳ್ಳಾರಿಯ ಸ್ವಗ್ರಾಮ ಕಲ್ಲುಕಂಬದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು ಟೌನ್ ಆ್ಯಂಡ್ ರೂರಲ್ ಪ್ಲಾಬಿಂಗ್ ಆಫೀಸರ್ ಆಗಿರುವ ಮಾರುತಿ ಬಗಲಿ ಮೂಲತಃ ಬಳ್ಳಾರಿಯ ಕಲ್ಲುಕಂಬ ನಿವಾಸಿ. ಬಳ್ಳಾರಿ ಮಾತ್ರವಲ್ಲದೇ ರಾಜ್ಯದ ವಿವಿಧ ಕಡೆ ಮಾರುತಿ ಬಗಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪವಿದೆ.

ಕೊಪ್ಪಳದ ಡಿಸ್ಟ್ರಿಕ್ಟ್‌ ಇಂಡಸ್ಟ್ರಿಯಲ್‌ ಆ್ಯಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಶೆಕು ಚೌಹಾಣ್ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ‌

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್, ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಅವರುಗಳ ನಿವಾಸದಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ Read More

ಇಬ್ಬರು ಜೈಲಾಧಿಕಾರಿಗಳ ಅಮಾನತು

ಕಲಬುರಗಿ: ಕಲಬುರಗಿ ಕಾರಾಗೃಹದಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ.

ಕರ್ತವ್ಯಲೋಪ ಆರೋಪದಡಿ ಇಬ್ಬರು ಜೈಲರ್ ಗಳಾದ ಸೈನಾಜ್ ನಿಗೆವಾನ್, ಪಾಂಡುರಂಗ ಹರವಾಳ ಅವರನ್ನು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ
ಎಂದು ಕಲಬುರಗಿ ಜೈಲಿನ ಮುಖ್ಯ ಅಧೀಕ್ಷಕಿ ಡಾ.ಅನಿತಾ ತಿಳಿಸಿದ್ದಾರೆ.

ಕಲಬುರಗಿ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ, ಮದ್ಯ, ಮೊಬೈಲ್ ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳು ನೀಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕರಿಗಳು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು.

ಕೈದಿಗಳಿಗೆ ಕೆಲ ಸೌಲಭ್ಯ ಕೊಟ್ಟಿದ್ದು ಸಾಬೀತಾದ ಕಾರಣ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇಬ್ಬರು ಜೈಲಾಧಿಕಾರಿಗಳ ಅಮಾನತು Read More