ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರ ಸಾಲ ಮನ್ನಾಗೆ ನಿಖಿಲ್ ಆಗ್ರಹ

ಕಲಬುರಗಿ: ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ ವ್ಯಾಪಕ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ,ಆದರೂ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮಾಡುವುದು ಬಿಟ್ಟರೆ ಬೇರೆ ಏನು ಮಾಡಲಿಲ್ಲ. ರಾಜ್ಯದಿಂದ ಕೃಷಿ ಸಚಿವರು ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಕೃಷಿ ಸಚಿವರು ರೈತರ ಸಂಕಷ್ಟವನ್ನು ಆಲಿಸಲಿಲ್ಲ ಎಂದು ಕಾಲ ಕಿಡಿ ಕಾರಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ಒಂದೇ ಒಂದು ಪ್ರದೇಶಕ್ಕೂ ಸಿಎಂ ಇದುವರೆಗೂ ಭೇಟಿ ನೀಡಿಲ್ಲ.ರಾಜ್ಯದ ಕೃಷಿ ಸಚಿವರಂತೂ ಅವರ ಮತಕ್ಷೇತ್ರ ಬಿಟ್ಟು ಹೊರಗೆ ಬಂದೇ ಇಲ್ಲ. ಕಲಬುರಗಿ ಜಿಲ್ಲೆಗಳನ್ನ ಕೃಷಿ ಸಚಿವರು ಮರತೇ ಬಿಟ್ಟಿದ್ದಾರೆ.ಈ ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದರೂ ಸಹ ಕೃಷಿ ಸಚಿವರು ಭೇಟಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಒಂದು ಲಕ್ಷದ ಐದು ಸಾವಿರ ಹೆಕ್ಟೇರ್ ಪ್ರದೇಶ ಹನಿಗೊಳಗಾಗಿದೆ. ಅದರಲ್ಲಿ 58 ಸಾವಿರ ಹೆಕ್ಟೇರ್ ತೊಗರಿ ಪ್ರದೇಶ ಹಾನಿಯಾಗಿದೆ. ಹತ್ತಿ, ಸೋಯಾಬಿನ್ ಅನೇಕ ಬೆಳೆಗಳು ನಾಶವಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ 50 ರಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷಕ್ಕೆ ಅಧಿಕಾರ ಇರಲಿ ಬಿಡಲಿ ರೈತರ ಪರವಾಗಿ ನಮ್ಮ ಬದ್ಧತೆಯನ್ನು ತೋರಿಸಿದ್ದೇವೆ. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಕೆಕೆಆರ್ ಡಿ ಬಿ ವತಿಯಿಂದ ಐದು ಸಾವಿರ ಕೋಟಿ ಹಣ ಅಭಿವೃದ್ಧಿ ಮಾಡಲು ಮೀಸಲಿಟ್ಟಿದ್ದೇವೆ ಎಂದು ಭಾಷಣ ಮಾಡುತ್ತಾರೆ. ಇಂತಹ ಸಮಯದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ಗಳನ್ನು ನೀಡುವುದರ ಮೂಲಕ ರೈತರ ಸಾಲದ ಹೊರೆಯನ್ನ ಕಡಿಮೆ ಮಾಡಬೇಕೆಂದು ನಿಖಿಲ್‌ ಒತ್ತಾಯಿಸಿದರು.

ಎನ್ ಡಿ ಆರ್ ಎಫ್ ನಿಯಮ ತಿದ್ದುಪಡಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂಬ ಪ್ರಿಯಾಂಕಾ ಖರ್ಗೆ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು.

ಈ ವಿಚಾರದಲ್ಲಿ ಆ ಸರಕಾರ ಈ ಸರಕಾರ ಎನ್ನದೇ ಹಾನಿಗೊಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ಕೊಡಬೇಕಿದೆ. ಈ ದಿಕ್ಕಿನಲ್ಲಿ ಎಲ್ಲರೂ ಒಂದಾಗಿ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರ ಸಾಲ ಮನ್ನಾಗೆ ನಿಖಿಲ್ ಆಗ್ರಹ Read More

ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ – ಸಿದ್ದರಾಮಯ್ಯ

ಕಲಬುರ್ಗಿ: ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರ ಜೊತೆ ಸಿಎಂ ಮಾತನಾಡಿದರು.

ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದ್ದು ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ,ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ, ಈ ಬಗ್ಗೆ ಚರ್ಚೆ ಮಾಡಲಾಗುವುದು, ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಸಿದ್ದು ಸ್ಪಷ್ಟಪಡಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ – ಸಿದ್ದರಾಮಯ್ಯ Read More

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಇಂಗಿತ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಬೇಡಿಕೆ ಬಹಳ ವರ್ಷಗಳದ್ದು,ಹಾಗಾಗಿ ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.

ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕೆಂಬ ಬೇಡಿಕೆಯನ್ನ ರೈತರು ಇಟ್ಟಿದ್ದಾರೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ, ವರದಿ ಬಂದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು ಎಂದು ಸಿಎಂ ಅಸಮಾಧಾನ ಪಟ್ಟರು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಇಂಗಿತ Read More

ಹನಿಟ್ರ್ಯಾಪ್ ಆರೋಪ ಕಲಬುರಗಿ ಕಾಂಗ್ರೆಸ್ ನಾಯಕಿ,ಪತಿ ಬಂಧನ

ಕಲಬುರಗಿ: ಮಾಜಿ ಸಚಿವರೊಬ್ಬರಿಗೆ ಹನಿಟ್ರಾಪ್ ಮಾಡಿದ ಆರೋಪದಲ್ಲಿ ಕಲಬುರಗಿ ಕಾಂಗ್ರೆಸ್ ‌ನಾಯಕಿ ಮತ್ತು ‌ಆಕೆಯ ಪತಿಯಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಸಿಸಿಬಿ ಪೊಲೀಸರು ಕಲಬುರಗಿ ನಲಪಾಡ್‌ ಬ್ರಿಗೇಡ್‌ ಅಧ್ಯಕ್ಷೆ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ ಶುವರಾಜ್ ಪಾಟೀಲ್ ನನ್ನು ಹನಿಟ್ರ್ಯಾಪ್ ಆರೋಪದ ಮೇಲೆ ಬಂಧಿಸಿದ್ದಾರೆ.

ಈಕೆ ಮೊದಲಿಗೆ ವಾಟ್ಸ್ ಆಪ್ ನಲ್ಲಿ ಮಾಜಿ ಸಚಿವರೊಂದಿಗೆ ಚಾಟ್ ಆರಂಭ ಮಾಡಿ ಸಲುಗೆ ಬೆಳೆಸಿಕೊಂಡು ನಂತರ ವಿಡಿಯೋ ಕಾಲ್ ಮಾಡಲು ಆರಂಭಿಸಿದ್ದಾಳೆ.

ನಂತರ ಖಾಸಗಿ ಕ್ಷಣಗಳನ್ನ ವಿಡಿಯೋ ಚಿತ್ರಿಕರಿಸಿಕೊಂಡು ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದಾಳೆ, ನನ್ನ ಬಳಿ ನಿಮ್ಮ ವಿಡಿಯೋ ಇದೆ. 20 ಲಕ್ಷ ಕೊಡಬೇಕು ಇಲ್ಲದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾಳೆ.

ಈ ಬಗ್ಗೆ ಮಾಜಿ ಸಚಿವರ ಪುತ್ರ ಸಿಸಿಬಿಗೆ ದೂರು ನೀಡಿದ್ದಾರೆ. ನಂತರ 20 ಲಕ್ಷ ನೀಡುವುದಾಗಿ ಈಕೆಯನ್ನು ಬೆಂಗಳೂರಿಗೆ ಕರೆಸಿ, ಹಣ ಪಡೆಯಲು ಬೆಂಗಳೂರಿಗೆ ಬಂದ ಮಂಜುಳಾ ಮತ್ತು ಆಕೆಯ ಪತಿ ಶಿವರಾಜ್ ಪಾಟೀಲ್ ನನ್ನು ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಹನಿಟ್ರ್ಯಾಪ್ ಆರೋಪ ಕಲಬುರಗಿ ಕಾಂಗ್ರೆಸ್ ನಾಯಕಿ,ಪತಿ ಬಂಧನ Read More

ಕೊಲೆ ಪ್ರಕರಣದ ತನಿಖೆ ಪರಿಶೀಲಿಸಲು ಎಸ್ ಪಿಗೆ ಸಿಎಂ ಸೂಚನೆ

ಕಲಬುರಗಿ: ಕಳೆದ ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಪರಿಶೀಲಿಸುವಂತೆ ರಾಯಚೂರು ಎಸ್‌ಪಿ ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕಲಬುರಗಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ವೇಳೆ ಕೊಲೆಯಾದ ಸಂಜಯ್ ಅವರ ಪತ್ನಿ ಶಾಂತಮ್ಮ ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡರು.

ಶಾಂತಮ್ಮ ಅವರ ನೋವಿಗೆ ಮರುಗಿದ ಸಿಎಂ,ತಕ್ಷಣ ದೂರವಾಣಿ ಕರೆ ಮಾಡಿ ರಾಯಚೂರು ಎಸ್ ಪಿ ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ನೀಡುವಂತೆ ಸೂಚಿಸಿದರು,ಜತೆಗೆ ಖುದ್ದಾಗಿ ಪರಿಶೀಲಿಸುವಂತೆ ಸೂಚಿಸಿದರು.

ನಂತರ ಈ ಬಗ್ಗೆ ತಮಗೆ ವರದಿ ನೀಡಬೇಕು, ಪ್ರಕರಣದ ತನಿಖೆ ಏನಾಯಿತು ಎಂಬ ಬಗ್ಗೆ ವರದಿ ಮಾಡಬೇಕು ಎಂದು ಸೂಚಿಸಿದರು.

ಕೊಲೆ ಪ್ರಕರಣದ ತನಿಖೆ ಪರಿಶೀಲಿಸಲು ಎಸ್ ಪಿಗೆ ಸಿಎಂ ಸೂಚನೆ Read More