ಡಾ ರಘುರಾಂ ಕೆ ವಾಜಪೇಯಿ ಅವರಿಗೆಕರ್ನಾಟಕ ಸೇನಾ ಪಡೆಯಿಂದ ಶುಭ ಹಾರೈಕೆ

ಮೈಸೂರು: ಮೈಸೂರಿನ ಹಿರಿಯ ಸಂಸ್ಕೃತಿ ಪೋಷಕರು ಹಾಗೂ ಸಮಾಜ ಸೇವಕರಾದ ಡಾ ‌ ರಘುರಾಂ ಕೆ ವಾಜಪೇಯಿ ಅವರ 70ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಶುಭ ಕೋರಲಾಯಿತು.

ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ನೇತೃತ್ವದಲ್ಲಿ ಶುಭ ಹಾರಿಸಲಾಯಿತು.

ವಾಜಪೇಯಿ ಅವರು ಮೈಸೂರು ಕಂಡಂತಹ ಅತ್ಯದ್ಭುತ ವಿಚಾರವಂತರು,ಮೈಸೂರಿನಲ್ಲಿ ಯಾವುದೇ ಸಭೆ ಸಮಾರಂಭಗಳು ನಡೆದರೂ, ಈ ಸಮಾರಂಭಗಳಲ್ಲಿ ಯಾವುದೇ ವಿಚಾರವಾಗಿ ಲೀಲಾಜಾಲವಾಗಿ ಮಾತನಾಡುತ್ತಾರೆ ಎಂದು ತೇಜೇಶ್ ಲೋಕೇಶ್ ಗೌಡ ಮತ್ತಿತರರು ಬಣ್ಣಿಸಿದರು.

ನಮ್ಮ ಮೈಸೂರಿನ ಗೂಗಲ್ ಎಂದೇ ಹೇಳಬಹುದು. ಬಹಳಷ್ಟು ವಿಚಾರಗಳನ್ನು ತಿಳಿದುಕೊಂಡಿರುವ ಇವರು ನಮ್ಮ ನಾಡಿನ ಸಂಸ್ಕೃತಿ ಪೋಷಕರು ಹಾಗೂ ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷರಾದ ತೇಜೇಶ್ ಲೋಕೇಶ್ ಗೌಡ, ಗೋಲ್ಡನ್ ಸುರೇಶ್, ಪ್ರಭಾಕರ್, ಹನುಮಂತಯ್ಯ, ಜ್ಯೋತಿ ಅವರುಗಳು ರಘು ರಾಮ್ ವಾಜಪೇಯಿ ದಂಪತಿಗಳಿಗೆ ಶಾಲು, ಹಾರ ಹಾಕಿ, ಕಿರು ಕೊಡುಗೆ ನೀಡಿ ಶುಭ ಹಾರೈಸಿದರು.

ಡಾ ರಘುರಾಂ ಕೆ ವಾಜಪೇಯಿ ಅವರಿಗೆಕರ್ನಾಟಕ ಸೇನಾ ಪಡೆಯಿಂದ ಶುಭ ಹಾರೈಕೆ Read More

ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕ ಸೇ ಪಡೆ ಪ್ರತಿಭಟನೆ

ಮೈಸೂರು, ಜು.1: ಆಷಾಢ ದಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯವರು ಪ್ರತಿಭಟನೆ ನಡೆಸಿದರು.

ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ವಿಫಲವಾಗಿರುವ ಶ್ರೀ ಚಾಮುಂಡೇಶ್ವರಿ ಬೆಟ್ಟ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ, ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತಾದಿಗಳಿಗೆ ಡ್ರೈ ಫ್ರೂಟ್ಸ್ ,ಬಾದಾಮಿ ಹಾಲು ನೀಡಿ ಅರ್ಧ ಗಂಟೆ ಒಳಗಡೆ ದರ್ಶನ ಮಾಡಿಸುತ್ತೇವೆ ಎಂದು ಹೇಳಿತ್ತು,ಆದರೆ ಇಲ್ಲಿ ಯಾವುದೂ ಇಲ್ಲ. ಜಿಲ್ಲಾಡಳಿತ ಮೆಟ್ಟಿಲು ಹತ್ತಿ ಬಂದವರನ್ನು ಕುರಿ ದೊಂಬಿಗೆ ತುಂಬುವ ಹಾಗೆ ತುಂಬುತ್ತಿದ್ದು ಇದು ಅತ್ಯಂತ ಖಂಡನೀಯ ಎಂದು ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಆಕ್ರೋಶ‌ ವ್ಯಕ್ತಪಡಿಸಿದರು.

ಇಲ್ಲಿ ಯಾವ ವ್ಯವಸ್ಥೆಯೂ ಸರಿಯಾಗಿ ಇಲ್ಲ. 5-6 ಗಂಟೆಗಳ ಕಾಲ ಕ್ಯೂ ನಲ್ಲಿ ನಿಂತಿದ್ದರೂ, ಕುಡಿಯಲು ಒಂಚೂರು ನೀರು ಇಲ್ಲ ಹಾಗೂ ಮೆಟ್ಟಿಲು ಹತ್ತಿ ಬರುವರಿಗೆ ಶೌಚಾಲಯಗಳಂತೂ ಇಲ್ಲವೇ ಇಲ್ಲ ಎಂದು ಆರೋಪಿಸಿದರು.

ಜೊತೆಗೆ ಪ್ರತಿವರ್ಷ ಇರುತ್ತಿದ್ದ ದಾಸೋಹ, ಊಟದ ವ್ಯವಸ್ಥೆಯು ಸಹ ಮೊದಲಿದ್ದ ಸ್ಥಳದಲ್ಲಿ ಇಲ್ಲ. ಸಮರ್ಪಕವಾಗಿಲ್ಲ, ಹಿಂದಿನ ವರ್ಷಗಳಲ್ಲಿ ವಾರಕ್ಕೊಬ್ಬ ಭಕ್ತಾದಿಗಳು ಬಹಳ ಅಚ್ಚುಕಟ್ಟಾಗಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದರು. ಈ ಬಾರಿ ಬೆಟ್ಟದ ಪ್ರಾಧಿಕಾರ ದುಡ್ಡು ಹೊಡೆಯಲು ತಾನೇ ಮಾಡಿದೆ. ಜೊತೆಗೆ ಡ್ರೈ ಫ್ರೂಟ್ಸ್ ಹೆಸರಿನಲ್ಲೂ ಹಣ ಲೂಟಿ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಭಕ್ತಾದಿಗಳೇ 2000 ರೂ. ಇದ್ದರೆ ಬೆಟ್ಟಕ್ಕೆ ಬನ್ನಿ. ಇಲ್ಲವಾದರೆ ಮನೆಯಿಂದಲೇ ತಾಯಿಗೆ ಕೈ ಮುಗಿದು ಬಿಡಿ, ಎನ್ನುವಂತಿತ್ತು ಜಿಲ್ಲಾಡಳಿತದ ವ್ಯವಸ್ಥೆ ಎಂದು ಟೀಕಿಸಿದರು.

ಉಳ್ಳ ಭಕ್ತಾದಿಗಳ, ಭಕ್ತ ಪರಾಕಾಷ್ಠೆಯ ಹೆಸರಲ್ಲಿ ವಿಶೇಷ ದರ್ಶನದಿಂದ ಸರ್ಕಾರ 2000 ರೂ ಲೂಟಿ ಮಾಡುತ್ತಿದೆ. ಈ ವಿಶೇಷ ದರ್ಶನದಿಂದಾಗಿ ಸರ್ಕಾರ ಉಳಿದ ಭಕ್ತಾದಿಗಳನ್ನು ಕಡೆಗಣಿಸುತ್ತಿದೆ.

ಬರೀ ಆಷಾಡ ಶುಕ್ರವಾರಕ್ಕೆ ಮಾತ್ರ ಸೀಮಿತವಾಗಿದ್ದ, ( ಖಾಸಾಗಿ ವಾಹನಗಳಿಗೆ ಪ್ರವೇಶ ನಿಶಿದ್ಧವಾಗಿದ್ದ ) ಈ ವ್ಯವಸ್ಥೆಯನ್ನು ಈ ವರ್ಷ 2000 ರೂ. ವಿಶೇಷ ದರ್ಶನದಿಂದಾಗಿ ಶನಿವಾರ ಭಾನುವಾರಗಳಿಗೂ ವಿಸ್ತರಿಸಿದೆ, ಸ್ಥಳೀಯ ಅಂಗಡಿ ವ್ಯಾಪಾರಿಗಳನ್ನು ತನ್ನ ಸ್ವಾರ್ಥಕ್ಕೊಸ್ಕರ ಈ 3 ದಿನಗಳು ಮುಚ್ಚಿಸಿ, ಅವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ನಾಡದೇವಿ ತಾಯಿ ಚಾಮುಂಡೇಶ್ವರಿ ಮಹಾರಾಜರ ಹಾಗೂ ಸಾರ್ವಜನಿಕ ಭಕ್ತಾದಿಗಳ ಸ್ವತ್ತು. ಸರ್ಕಾರ ಈ ರೀತಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಇಷ್ಟೆಲ್ಲಾ ಅನಾನುಕೂಲ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.

ಕೂಡಲೇ ಚಾಮುಂಡೇಶ್ವರಿ ಬೆಟ್ಟ ಪ್ರಾಧಿಕಾರ ಹಾಗೂ ಸರ್ಕಾರ ಉಚಿತ ದರ್ಶನಕ್ಕೆ ಹಾಗೂ ಮೆಟ್ಟಿಲು ಹತ್ತಿ ಬರುವ ಭಕ್ತಾದಿಗಳಿಗೆ ಸಮರ್ಪಕವಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ ಹಾಗೂ ಬೇಗ ದರ್ಶನ ಮಾಡಿಸುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು. ಗೋಲ್ಡನ್ ಸುರೇಶ್, ಪ್ರಭುಶಂಕರ್, ಪ್ರಜೀಶ್, ಸಿಂದುವಳ್ಳಿ ಶಿವಕುಮಾರ್, ಮಧುವನ ಚಂದ್ರು, ಬೋಗಾದಿ ಸಿದ್ದೇಗೌಡ, ಶಿವಲಿಂಗಯ್ಯ, ನೇಹಾ , ಭಾಗ್ಯಮ್ಮ, ಪದ್ಮ, ಕೃಷ್ಣೇಗೌಡ, ಗಿರೀಶ್, ನಾಗರಾಜು, ಹನುಮಂತಯ್ಯ, ತಾಯೂರು ಗಣೇಶ್, ಕುಮಾರ್ ಗೌಡ, ನಾರಾಯಣ ಗೌಡ, ಆನಂದ್ ಗೌಡ, ಬಸವರಾಜು, ಗೀತಾ ಗೌಡ, ಪ್ರಭಾಕರ್, ಮೂರ್ತಿ ಲಿಂಗಯ್ಯ, ರಘು ಅರಸ್, ರಘು ಆಚಾರ್, ನಿತ್ಯಾನಂದ, ದರ್ಶನ್ ಗೌಡ, ಸ್ವಾಮಿ ಗೌಡ, ಗಣೇಶ್ ಪ್ರಸಾದ್, ಪರಿಸರ ಚಂದ್ರು, ಚಂದ್ರಶೇಖರ್, ವಿಷ್ಣು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕ ಸೇ ಪಡೆ ಪ್ರತಿಭಟನೆ Read More

ಶಂಕರಾಚಾರ್ಯರು ದೇಶ ಕಂಡ ಮಹಾನ್ ನಾಯಕರು-ಸಿ.ಎನ್ ಮಂಜೇಗೌಡ

ಮೈಸೂರು: ಶಂಕರಾಚಾರ್ಯರು ನಮ್ಮ ದೇಶ ಕಂಡ ಮಹಾನ್ ನಾಯಕರು ಎಂದು ವಿಧಾನ ಪರಿಷತ್ ಸದಸ್ಯರಾದ ಸಿ.ಎನ್ ಮಂಜೇಗೌಡ ತಿಳಿಸಿದರು.

ಇಂದು ಕರ್ನಾಟಕ ಸೇನಾ ಪಡೆ ವತಿಯಿಂದಮೈಸೂರಿನ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿಶ್ವ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತಿ ಕಡಿಮೆ ಅವಧಿಯಲ್ಲಿ ದೇಶವನ್ನು ಎರಡು ಬಾರಿ ಬರೀ ಕಾಲ್ನಡಿಗೆಯಲ್ಲೇ ಸಂಚರಿಸಿ ಹಿಂದೂ ಧರ್ಮವನ್ನು ಪ್ರಚಾರ ಮಾಡಿ ಬೆಳೆಸಿದರು, ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದರು,ಅಂತಹ ಶಂಕರಾಚಾರ್ಯರನ್ನು ಪ್ರತಿಯೊಬ್ಬ ಭಾರತೀಯರು ನೆನೆಯಬೇಕು
ಎಂದು ಹೇಳಿದರು.

ಶಂಕರರು ಮನುಕುಲದ ಒಳಿತಿಗಾಗಿ ಶ್ರಮಿಸಿದರು. ಇಂತಹ ಮಹನೀಯರ ಹೆಸರಿನಲ್ಲಿ ಕರ್ನಾಟಕ ಸೇನಾ ಪಡೆ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಡಾ. ಸಿ ವೆಂಕಟೇಶ್ -ಸಹಕಾರಕ್ಷೇತ್ರ, ಬಿ ಎಸ್ ರವಿಶಂಕರ್ – ಪೊಲೀಸ್ ಕ್ಷೇತ್ರ,ರಾಘವನ್ ಜಿ ಜಿ – ಹೋಟೆಲ್ ಉದ್ಯಮ ಕ್ಷೇತ್ರ,ಶೇಷಾದ್ರಿ ಕೆ – ಸಮಾಜ ಸೇವಾಕ್ಷೇತ್ರ, ಬಾಲಸುಬ್ರಮಣ್ಯ ಪಿ – ಮಾಹಿತಿ ವಿಜ್ಞಾನ ಕ್ಷೇತ್ರ, ಡಾ. ವಿಶ್ವನಾಥ್ ಎಚ್.ಎಸ್ – ಸರ್ಕಾರಿ ಕ್ಷೇತ್ರ, ಡಾ. ಶ್ರೀಷಾ ಭಟ್ – ಧಾರ್ಮಿಕ ಕ್ಷೇತ್ರ, ಎಂ ಎಸ್ ಮಹೇಶ್ – ಇಂಜಿನಿಯರ್ ಕ್ಷೇತ್ರ, ಶ್ರೀ ನಿಧಿ ಕುದರ್ ಸಿ ಎಸ್ – ಕೃಷಿ ಕ್ಷೇತ್ರ,ಶ್ರೀರಾಮ ಶೆಟ್ಟಿ ಎಸ್ – ಶಿಕ್ಷಣ ಕ್ಷೇತ್ರ ಇವರುಗಳಿಗೆ ಶ್ರೀ ಶಂಕರಾಚಾರ್ಯ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಮಾರು 40 ವಿದ್ಯಾರ್ಥಿಗಳಿಗೆ ಅಖಿಲ ಭಾರತ ಕಾಂಗ್ರೆಸ್ ಸಮಾಜ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಪಿ ಲಕ್ಷ್ಮಣ್ ಪ್ರಭು ಅವರು ಪ್ರತಿಭಾ ಪುರಸ್ಕಾರ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ರಾಜ್ಯಾಧ್ಯಕ್ಷ ಚಾ .ರಂ. ಶ್ರೀನಿವಾಸ ಗೌಡ, ಗೋಲ್ಡನ್ ಸುರೇಶ್, ನೇಹಾ, ಮೊಗಣ್ಣಾಚಾರ್, ಕೇದಾರ್ ವಂದಿತ್, ಹನುಮಂತಯ್ಯ ಸಿಂದುವಳ್ಳಿ ಶಿವಕುಮಾರ್, ಶಾಂತರಾಜೇ ಅರಸ್, ಪ್ರಭುಶಂಕರ, ಭಾಗ್ಯಮ್ಮ, ಪದ್ಮ, ಪ್ರಭಾಕರ್, ಅಂಬಾ ಅರಸ್, ತಾಯೂರು ಗಣೇಶ್, ಬಸವರಾಜು, ನಂದಕುಮಾರ್, ರಘು ಅರಸ್, ರವಿ ನಾಯಕ್, ನಾಗರಾಜ್, ದರ್ಶನ್ ಗೌಡ, ವಿಷ್ಣು ಮಹದೇವಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಶಂಕರಾಚಾರ್ಯರು ದೇಶ ಕಂಡ ಮಹಾನ್ ನಾಯಕರು-ಸಿ.ಎನ್ ಮಂಜೇಗೌಡ Read More

ಎಪಿಎಂಸಿ ನಿಯಮ ಉಲ್ಲಂಘಿಸಿದ ಅಂಗಡಿಗಳನ್ನು ತೆರವುಗೊಳಿಸಿ:ತೇಜೇಶ್

ಮೈಸೂರು: ಮೈಸೂರಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ಬೆಳೆದ ಉತ್ಪನ್ನಗಳನ್ನು ಹೊರತು ಪಡಿಸಿ ಅನ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಕರ್ನಾಟಕ ಸೇನಾಪಡೆ ಒತ್ತಾಯಿಸಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿ ತೇಜೇಶ್ ಲೋಕೇಶ್ ಗೌಡ ಮಾತನಾಡಿದರು.

ಈಗ ನಿವೇಶನ ಪಡೆದ ವ್ಯಾಪಾರಿಗಳು ಎಪಿಎಂಸಿ ಇಲಾಖೆಯ ನಕ್ಷೆ ,ಪ್ಲಾನ್, ಕಾಯ್ದೆ, ನಿಯಮದ ಆಶೋತ್ತರಗಳಿಗೆ ವಿರುದ್ಧವಾಗಿ, ನಿವೇಶನವನ್ನು ಹಲವಾರು ಭಾಗಗಳನ್ನಾಗಿ ವಿಂಗಡಿಸಿ, ಮಳಿಗೆಗಳನ್ನು ನಿರ್ಮಿಸಿ ಅಧಿಸೂಚಿತವಲ್ಲದ ವ್ಯಾಪಾರ ವಹಿವಾಟು ನಡೆಸಲು, ಕಾನೂನು ಬಾಹಿರವಾಗಿ ಬಾಡಿಗೆಗೆ ನೀಡಿರುವುದು ಕಂಡುಬಂದಿದೆ ಎಂದು ಹೇಳಿದರು.

ಈ ಅಕ್ರಮವನ್ನು ಎಪಿಎಂಸಿ ಅಧಿಕಾರಿಗಳು ಹಾಗೂ ರಾಜಕಾರಣಿಗಳು ತಡೆಯದೆ ಎಪಿಎಂಸಿ ಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ

ಇದರಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪ್ರತಿದಿನ ಸಲ್ಲಬೇಕಾದ ಲಕ್ಷಾಂತರ ಎಪಿಎಂಸಿ ಶುಲ್ಕ (ಸೆಸ್) ಪಾವತಿಯಾಗದೆ ಸರ್ಕಾರಕ್ಕೆ ನಷ್ಟವಾಗುತ್ತಿದೆ ಎಂದು ಹೇಳಿದರು.

ಎಪಿಎಂಸಿ ಲೈಸೆನ್ಸ್ ಹೊಂದಿರುವ ವ್ಯಾಪಾರಿಯು ಸತತವಾಗಿ ಮೂರು ವರ್ಷ ಗಳು ವ್ಯಾಪಾರ, ವಹಿವಾಟು ನಡೆಸದೆ ಹಾಗೂ ಆರ್‌ಎಂಸಿ ಶುಲ್ಕ (ಸೆಸ್) ಪಾವತಿಸದೆ ಇದ್ದಲ್ಲಿ, ಎಪಿಎಂಸಿಯು ವ್ಯಾಪಾರಿಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಿ ನಿವೇಶನದಲ್ಲಿ ನಿರ್ಮಿಸಿರುವ ಕಟ್ಟಡವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಪೂರ್ಣ ಅಧಿಕಾರ ಹೊಂದಿದೆ.

ನಿವೇಶನಗಳಲ್ಲಿ ಕಟ್ಟಡ ನಿರ್ಮಿಸುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವಿಭಜಿಸಬಾರದು ಹಾಗೂ ಬೇರೆಯವರಿಗೆ ಬಾಡಿಗೆಗೆ ನೀಡಬಾರದು, ಇನ್ನಿತರ ಯಾವುದೇ ವಸ್ತುಗಳನ್ನು ಮಾರಾಟ ಮಾಡಬಾರದು, ಜೊತೆಗೆ ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚಿನ ವಿದ್ಯುತ್ ಮೀಟರ್ ಇರಬಾರದೆಂದು ನಿಯಮವಿದೆ.

ಮೈಸೂರಿನ ಸ್ಥಳೀಯ ರೈತರ ಭೂಮಿಯನ್ನು ವಶಪಡಿಸಿಕೊಂಡು ಇಲ್ಲಿ ಎಪಿಎಂಸಿ ಮಾರುಕಟ್ಟೆ ಸ್ಥಾಪನೆಯಾಗಿದೆ. ಈಗ ನೋಡಿದರೆ ಸ್ಥಳೀಯ ಸಗಟು ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ನಿವೇಶನವನ್ನು ಮಂಜೂರು ಮಾಡದೆ, ಲಕ್ಷಾಂತರ ರೂ ಲಂಚ ನೀಡಿರುವ ಹಾಗೂ ಜ್ಯೇಷ್ಠತೆ ಹೊಂದಿಲ್ಲದವರಿಗೆ ಕಾನೂನು ಬಾಹಿರವಾಗಿ ಎಪಿಎಂಸಿಗೆ ಒಳಪಡದ ವಸ್ತುಗಳನ್ನು ಅಂದರೆ, ಚಿಲ್ಲರೆ ದಿನಸಿ ವ್ಯಾಪಾರಿಗಳಿಗೆ, ತಂಬಾಕು ಉತ್ಪನ್ನ ವ್ಯಾಪಾರಿಗಳಿಗೆ, ಪ್ಲಾಸ್ಟಿಕ್ ವ್ಯಾಪಾರಿಗಳಿಗೆ, ಕಬ್ಬಿಣದ ವ್ಯಾಪಾರಿಗಳಿಗೆ, ತಂಪು ಪಾನೀಯ ವ್ಯಾಪಾರಿಗಳಿಗೆ ಹಾಗೂ ಇನ್ನಿತರ ಎಪಿಎಂಸಿ ಕಾಯ್ದೆಯ ವ್ಯಾಪ್ತಿಗೆ ಒಳಪಡದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ದೂರಿದ್ದಾರೆ.

20.05.2025 ರಂದು ಮಾರುಕಟ್ಟೆ ಪ್ರಾಂಗಣದಲ್ಲಿ ಕೆಲವು ವರ್ತಕರುಗಳು ಅಧಿಸೂಚಿತ ಕೃಷಿ ಉತ್ಪನ್ನಗಳ ಉತ್ಪನ್ನಗಳನ್ನು ಮಾರಾಟ ಮಾಡದೆ, ಅಧಿಸೂಚಿತವಲ್ಲದ ವಸ್ತುಗಳನ್ನು ಮಾರುತ್ತಿದ್ದು,ಆ ಅಂಗಡಿಗಳನ್ನು ತೆರವುಗೊಳಿಸಲು 31.05.2025 ರ ವರೆಗೆ ಗಡುವು ನೀಡಲಾಗಿತ್ತು ಹಾಗೂ ಈ ವ್ಯಾಪಾರಿಗಳನ್ನು ಮುಖ್ಯ ಪ್ರಾಂಗಣದಿಂದ ಹೊರಗಡೆಗೆ ಸ್ಥಳಾಂತರಿಸಲು ಸೂಚಿಸಲಾಗಿತ್ತು.

ಆದರೂ ಇದುವರೆಗೆ ಯಾವುದೇ ಅಂಗಡಿಯನ್ನು ಅವರು ತೆರವುಗೊಳಿಸಿಲ್ಲ ಇದೇ ರೀತಿ ಕಳೆದ ವರ್ಷವೂ 16.11.2024 ರಂದು ಈ ವಿಚಾರವಾಗಿ ಆದೇಶವನ್ನು ಹೊರಡಿಸಿ, ತಿಳುವಳಿಕೆ ಪತ್ರವನ್ನು ಕಾರ್ಯದರ್ಶಿಗಳು ನೀಡಿದ್ದರೂ ಸಹ ಯಾರು ತೆರವುಗೊಳಿಸಿಲ್ಲ.

ಆದುದರಿಂದ ಈ ಕೂಡಲೇ ಕಟ್ಟುನಿಟ್ಟಾದ ಕ್ರಮವನ್ನು ಕೈಗೊಂಡು ಅಧಿಸೂಚಿತವಲ್ಲದ ಉತ್ಪನ್ನಗಳನ್ನು ಶಾಶ್ವತವಾಗಿ ಕೃಷಿ ಮಾರುಕಟ್ಟೆ ಪ್ರಾಂಗಣ ದಿಂದ ತೆರವುಗೊಳಿಸಬೇಕೆಂದು ಒತ್ತಾಯಿಸಿದರು.

7 ದಿನಗಳ ಗಡುವನ್ನು ನೀಡುತ್ತಿದ್ದು ಅಷ್ಟ ರಲ್ಲಿ ಈ ಅಂಗಡಿಗಳು ತೆರವಾಗದಿದ್ದರೆ ಕೃಷಿ ಉತ್ಪನ್ನ‌ ಮಾರುಕಟ್ಟೆ ಸಮಿತಿ ಕಚೇರಿ ಮುಂಬಾಗ ದೊಡ್ಡ ಮಟ್ಟದಲ್ಲಿ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ದಯಾನಂದ್ ಎಂವಿ, ಹನುಮಂತಯ್ಯ ಹಾಗೂ ವರಕೂಡು ಕೃಷ್ಣೇಗೌಡ ಎಚ್ಚರಿಸಿದರು.

ಎಪಿಎಂಸಿ ನಿಯಮ ಉಲ್ಲಂಘಿಸಿದ ಅಂಗಡಿಗಳನ್ನು ತೆರವುಗೊಳಿಸಿ:ತೇಜೇಶ್ Read More

ಕಮಲಹಸನ್ ಹೇಳಿಕೆ ಖಂಡಿಸಿಕರ್ನಾಟಕ ಸೇನಾಪಡೆ ಪ್ರತಿಭಟನೆ

ಮೈಸೂರು: ಬಹುಭಾಷಾ ನಟ ಕಮಲಹಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕರ್ನಾಟಕ ಸೇನಾಪಡೆ ಸದಸ್ಯರು ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮಾಡಿದರು.

ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ, ಸ್ವತಂತ್ರ ಲಿಪಿ ಹೊಂದಿರುವ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕನ್ನಡಿಗರ ಜೀವನಾಡಿ ಆಗಿರುವ ಹೆಮ್ಮೆಯ ಕನ್ನಡ ಭಾಷೆಗೆ ಕಮಲಹಾಸನ್ ಅವರು ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿ ಕನ್ನಡ ಭಾಷೆಗೆ ಅವಮಾನಿಸಿದ್ದಾರೆ ಎಂದು ಪ್ರತಭಟನಾ ನಿರತರು ಖಂಡಿಸಿದರು.

ನಮ್ಮ ಕನ್ನಡ ಭಾಷೆಯಲ್ಲಿ 52 ಅಕ್ಷರಗಳಿವೆ. ಆದರೆ ತಮಿಳು ಭಾಷೆಯಲ್ಲಿ ಬರೀ 18 ಅಕ್ಷರಗಳಿವೆ‌. ನಮ್ಮ ಕನ್ನಡ ಭಾಷೆಯಲ್ಲಿ ಕ ಖ ಗ ಘ ಙ, ಚ ಛ ಜ ಝ ಞ ಎಂಬಿತ್ಯಾದಿ ಅಕ್ಷರಗಳಿವೆ. ಆದರೆ ತಮಿಳಿನಲ್ಲಿ ಬರೀ ಕ, ಚ, ಟ, ಪ ಅಕ್ಷರಗಳಿವೆ. ಇದನ್ನು ಅರಿಯದ, ಭಾಷೆಗಳ ಬಗ್ಗೆ ಜ್ಞಾನ ಇಲ್ಲದ ಕಮಲಹಸನ್ ಈ ರೀತಿ ಹೇಳಿಕೆ ನೀಡಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಮ್ಮ ಕನ್ನಡ ಭಾಷೆ ದೇಶದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದು. ಬಹುಶಃ ಸಂಸ್ಕೃತ ಬಿಟ್ಟರೆ ಕನ್ನಡ ಭಾಷೆ ಬಹಳ ಪ್ರಾಚೀನ ಭಾಷೆ, ಅದಕ್ಕಾಗಿ ನಮ್ಮ ಕನ್ನಡಕ್ಕೆ, ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಇತ್ತೀಚೆಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಸಹ ನಮ್ಮ ಕನ್ನಡಕ್ಕೆ ಸಿಕ್ಕಿದೆ.

ಕೂಡಲೇ ಕಮಲಹಾಸನ್ ಕನ್ನಡಿಗರ ಹಾಗೂ ಕನ್ನಡ ಭಾಷೆಯ ಬಗ್ಗೆ ಕ್ಷಮೆ ಕೋರಬೇಕು ಇಲ್ಲದಿದ್ದಲ್ಲಿ ಮುಂದಿನ ವಾರ ತೆರೆ ಕಾಣಲಿರುವ ಅವರ ಸಿನಿಮಾವನ್ನು ರಾಜ್ಯಾದ್ಯಂತ ಬಹಿಷ್ಕಾರ ಮಾಡಿ ಬಿಡುಗಡೆಯಾಗದಂತೆ ತಡೆ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.

ಗೋಲ್ಡ್ ಸುರೇಶ್, ಪ್ರಭುಶಂಕರ, ನೇಹಾ, ಬೋಗಾದಿ ಸಿದ್ದೇಗೌಡ, ಕೃಷ್ಣಪ್ಪ, ಗಿರೀಶ್ ಹೆಚ್, ಸಿಂದುವಳ್ಳಿ ಶಿವಕುಮಾರ್, ತಾಯೂರ್ ಗಣೇಶ್, ಹನುಮಂತಯ್ಯ, ಮೂರ್ತಿ ಲಿಂಗಯ್ಯ, ದರ್ಶನ್ ಗೌಡ, ವರಕೂಡು ಕೃಷ್ಣೇಗೌಡ,ರವೀಶ್, ಪ್ರಭಾಕರ್ , ನಾಗರಾಜಾ ಚಾರ್, ಶಿವರಾಂ ಗೌಡ, ರಘು ಅರಸ್, ಎಳನೀರು ರಾಮಣ್ಣ, ಗಣೇಶ್ ಪ್ರಸಾದ್, ವಿಷ್ಣು ಮತ್ತಿತರರು ಪಾಲ್ಗೊಂಡಿದ್ದರು.

ಕಮಲಹಸನ್ ಹೇಳಿಕೆ ಖಂಡಿಸಿಕರ್ನಾಟಕ ಸೇನಾಪಡೆ ಪ್ರತಿಭಟನೆ Read More

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ಮೈಸೂರು ಪಾಕ್‌ ಹಂಚಿ ಸಂಭ್ರಮ

ಮೈಸೂರು: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಹಿನ್ನೆಲೆಯಲ್ಲಿ,
ಕರ್ನಾಟಕ ಸೇನಾಪಡೆ ವತಿಯಿಂದ ಮೈಸೂರು ಪಾಕ್ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಮುಂಭಾಗ ಇಂದು ನೂರಾರು ಮಂದಿಗೆ ಮೈಸೂರು ಪಾಕ್ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ ಜಿ ಗಂಗಾಧರ್, ಸುರೇಶ್ ಗೋಲ್ಡ್, ಪ್ರಭಾಕರ್, ಕುಮಾರ್ ಗೌಡ, ಪ್ರಭುಶಂಕರ, ಬೋಗಾದಿ ಸಿದ್ದೇಗೌಡ, ಪ್ರಜೀಶ್, ಶಿವಲಿಂಗಯ್ಯ, ಕೃಷ್ಣಪ್ಪ, ಸಿಂದುವಳ್ಳಿ ಶಿವಕುಮಾರ್ , ಹನುಮಂತಯ್ಯ, ನಂದಕುಮಾರ್, ಚಂದ್ರಶೇಖರ್, ರವೀಶ್, ರವಿ ನಾಯಕ್ ಮುಂತಾದವರು ಹಾಜರಿದ್ದರು.

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ಮೈಸೂರು ಪಾಕ್‌ ಹಂಚಿ ಸಂಭ್ರಮ Read More

ಕರ್ನಾಟಕ ಸೇನಾ ಪಡೆಯ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಮೈಸೂರಿನ ವಿಜಯನಗರದಲ್ಲಿರುವ, ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಡುಗಡೆ ಮಾಡಲಾಯಿತು.

ಯೋಗಾ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಡಾ. ಭಾಷ್ಯಂ ಸ್ವಾಮೀಜಿ
ಅವರ ದಿವ್ಯ ಸಾನಿಧ್ಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಕರ್ನಾಟಕ ಸೇನಾ ಪಡೆಯ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಈ ವೇಳೆ ಯೋಗಾ ನರಸಿಂಹಸ್ವಾಮಿ ದೇವಸ್ಥಾನದ ಶ್ರೀನಿವಾಸ್,
ಡಾ. ರಘುರಾಂ ಕೆ ವಾಜಪೇಯಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಸಿ ಜಿ ಗಂಗಾಧರ್, ಎಂ ಬಿ ಮಂಜೇಗೌಡ, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್ ಜಯಪ್ರಕಾಶ್, ಎಂ ಎನ್ ದೊರೆಸ್ವಾಮಿ, ಮಡ್ಡೀಕೆರೆ ಗೋಪಾಲ್, ಶ್ರೀ ಲಕ್ಷ್ಮಿ ನಾರಾಯಣ ಶೆಣೈ, ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಡಾ. ಮೊಗಣ್ಣಾಚಾರ್, ಡಾ. ಶಾಂತರಾಜೇಅರಸ್, ಕೃಷ್ಣಪ್ಪ, ಪ್ರಭುಶಂಕರ, ನೇಹಾ, ಪ್ರಜೀಶ್, ನಾಗರಾಜು, ವರಕೂಡು ಕೃಷ್ಣೇಗೌಡ, ಸಿಂದುವಳ್ಳಿ ಶಿವಕುಮಾರ್ ಹನುಮಂತಯ್ಯ ,ಸುಬ್ಬೇಗೌಡ, ಡಾ. ನರಸಿಂಹೇ ಗೌಡ, ಪದ್ಮಾ, ಪ್ರಭಾಕರ್, ಶಿವಲಿಂಗಯ್ಯ, ನಂದಕುಮಾರ್, ಕುಮಾರ್, ರಘು ಅರಸ್, ಮಹಾದೇವ ಸ್ವಾಮಿ, ಗಣೇಶ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ಸೇನಾ ಪಡೆಯ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ Read More

ನೆಲದ ಇತಿಹಾಸ ಅರಿಯುವ ಪಠ್ಯಕ್ರಮ ಶಿಕ್ಷಣದಲ್ಲಿ ಅಳವಡಿಸಿ:ರಘು ಕೌಟಿಲ್ಯ

ಮೈಸೂರು: ನಮ್ಮ ಮುಂದಿನ ಪೀಳಿಗೆ ಇತಿಹಾಸವನ್ನು ಅರಿಯುವ ನಿಟ್ಟಿನಲ್ಲಿ ಈ ನೆಲದ ಇತಿಹಾಸವನ್ನು ಅರಿಯುವಂತಹ ಪಠ್ಯಕ್ರಮವನ್ನು ಶಿಕ್ಷಣದಲ್ಲಿ ಅಳವಡಿಸಬೇಕೆಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಆರ್‌. ರಘು ತಿಳಿಸಿದರು.

ನಗರದಲ್ಲಿ ಕರ್ನಾಟಕ ಸೇನಾ ಪಡೆ ಕರ್ನಾಟಕ ಏಕೀಕರಣ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಕೆಂಗಲ್ ಹನುಮಂತಯ್ಯ, ನಿಜಲಿಂಗಪ್ಪ ಹಾಗೂ ಕುವೆಂಪು ಅವರ ಸ್ಮರಣೆ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದವರು ಹಾಗೂ ಕನ್ನಡ ನಾಡನ್ನು ಕಟ್ಟಿ ಬೆಳೆಸಿದವರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ಸಾಮರಸ್ಯದ ಹೆಸರಿನಲ್ಲಿ ಆಕ್ರಮಣಕಾರಿ ಪ್ರವೃತ್ತಿ ಬೆಳೆಸಿಕೊಳ್ಳದೇ ಇತಿಹಾಸದಲ್ಲಿ ಸಾಕಷ್ಟು ತ್ಯಾಗ ಮಾಡಿದೆ. ಗಡಿ ಪ್ರದೇಶಗಳಲ್ಲಿ ಉದಕಮಂಡಲ(ಊಟಿ), ಕಾಸರಗೋಡು, ಹೊಸೂರು, ನಿಪ್ಪಾಣಿ, ಮೊದಲಾದ ಅಚ್ಚ ಕನ್ನಡ ಪ್ರದೇಶಗಳನ್ನು ರಾಜಕೀಯ ಹಿತಾಸಕ್ತಿ ಇಲ್ಲದೇ ಕಳೆದುಕೊಂಡಿತು, ಕನ್ನಡ ಸಂಸ್ಕೃತಿ ಉಳಿಸಿಕೊಳ್ಳಲು ಎಚ್ಚೆತ್ತುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಬ್ರಿಟಿಷರು ಇಂಗ್ಲೀಷ್‌ ಹೇರಿದರೆ, ಉತ್ತರ ಭಾರತದವರು ಹಿಂದಿ ಭಾಷೆಯನ್ನು ಹೇರುತ್ತಿದ್ದಾರೆ. ರಾಷ್ಟ್ರಭಾಷೆಯ ಕಲ್ಪನೆಯಿಲ್ಲದ ಕೆಲವರು ಕನ್ನಡವೂ ಹಿಂದಿಯಷ್ಟೇ ಮಾನ್ಯತೆ ಹೊಂದಿರುವ ರಾಷ್ಟ್ರ ಭಾಷೆ ಎಂಬ ವಾಸ್ತವ ಸ್ಥಿತಿ ಅರಿತುಕೊಂಡಿಲ್ಲ ಎಂದು ರಘು ಬೇಸರಪಟ್ಟರು.

ಹಳೆಯ ಮೈಸೂರು ಸಂಸ್ಥಾನ ಕಟ್ಟಿದ ನಮ್ಮ ಮೈಸೂರು ಮಹಾರಾಜರ ಇತಿಹಾಸವನ್ನು ನಮ್ಮ ಮಕ್ಕಳಿಗೆ ತಿಳಿಸಿಕೊಡುವಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅಪಚಾರವೆಸಗಲಾಗಿದೆ. ಇನ್ನು ಮುಂದಾದರೂ ಈ ಲೋಪ ಸರಿಪಡಿಸುವ ಕಾರ್ಯ ಆಗಲೇಬೇಕಿದೆ ಎಂದು ಒತ್ತಾಯಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರನ್ನು ನಾಮಕರಣ ಮಾಡಲು ನಮ್ಮಿಂದ ಆಗಿಲ್ಲ, ಮಾನಸಗಂಗೋತ್ರಿಗೆ 800 ಎಕರೆ ಭೂಮಿ ಧಾರೆ ಎರೆದ ರಾಜಮನೆತನವನ್ನು ನಾವೆಷ್ಟು ಸ್ಮರಿಸಿಕೊಳ್ಳುತ್ತಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಕರ್ನಾಟಕ ಸೇನಾ ಪಡೆ ಈ ರೀತಿಯ ವಿಶಿಷ್ಟ ಕಾರ್ಯಕ್ರಮ ಆಯೋಜನೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ರಘು ಕೌಟಿಲ್ಯ ಪ್ರಶಂಸಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಾದ ಕೆವಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಖ್ಯಾತ ಮೂಳೆ ತಜ್ಞರಾದ ಡಾ. ನಂದೀಶ್ ಕುಮಾರ್ ಕೆ ಸಿ, ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಿ ಬಸಪ್ಪ, ಕೆಪಿಸಿಸಿ ಕಾರ್ಯದರ್ಶಿ ವರುಣಾ ಮಹೇಶ್ , ಕರ್ನಾಟಕ ತೆಂಗಿನ ನಾರಿನ ಅಭಿವೃದ್ಧಿ ನೌಕರರ ಸಂಘದ ರಾಜ್ಯಾಧ್ಯಕ್ಷ ಬಿ ಹೆಚ್ ಗೋವಿಂದೇಗೌಡ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ ಬಿ ಲಿಂಗರಾಜು, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಆಲತ್ತೂರು ಜಯರಾಮ್, ಮೈಸೂರು ಚಾಮರಾಜನಗರ ಒಕ್ಕಲಿಗರ ಸಂಘದ ನಿರ್ದೇಶಕ ಎ ಕುಮಾರ್, ಉಮ್ಮತ್ತೂರು ವೀರಗಾಸೆ ಕಲಾವಿದರಾದ ಎಂ ಜಯ ಕುಮಾರ್ ರವರಿಗೆ ಕರ್ನಾಟಕ ಸುವರ್ಣ ಸಂಭ್ರಮ ಸೇವಾ ಪ್ರಶಸ್ತಿಯನ್ನು
ಮೈಸೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್ ಟಿ ಜವರೇಗೌಡ ಅವರು ಪ್ರದಾನ ಮಾಡಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸುಮಾರು ಐವತ್ತು ವಿದ್ಯಾರ್ಥಿನಿಯರಿಗೆ ಕೆಪಿಸಿಸಿ ಸದಸ್ಯರಾದ ಆರ್ ಜೇಸುದಾಸ್ ಪ್ರತಿಭಾ ಪುರಸ್ಕಾರ ಮಾಡಿದರು.

ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಿರಿಯ ಸಂಸ್ಕೃತಿ ಪೋಷಕರಾದ ಡಾ. ರಘುರಾಮ್ ಕೆ ವಾಜಪೇಯಿ, ಮೈಸೂರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ ಶ್ರೀನಿವಾಸ ಗೌಡ, ಪ್ರಭುಶಂಕರ್, ಪ್ರೊ. ರಮೇಶ್ ಬಾಬು, ಕೃಷ್ಣಪ್ಪ, ನಾಗರಾಜು, ಶಿವಲಿಂಗಯ್ಯ, ಸಿಂದುವಳ್ಳಿ ಶಿವಕುಮಾರ್, ವರಕೂಡು ಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನೇಹಾ, ಹನುಮಂತಯ್ಯ,ಭಾಗ್ಯಮ್ಮ,ಪ್ರಭಾಕರ್, ಲಕ್ಷ್ಮೀ , ಭಾಗ್ಯಮ್ಮ,ಬೇಬಿ ರತ್ನ, ರಘು ಅರಸ್, ಕುಮಾರ್, ಗಣೇಶ್ ಪ್ರಸಾದ್, ರವೀಶ್, ವಿಷ್ಣು, ವಿಜಯೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ನೆಲದ ಇತಿಹಾಸ ಅರಿಯುವ ಪಠ್ಯಕ್ರಮ ಶಿಕ್ಷಣದಲ್ಲಿ ಅಳವಡಿಸಿ:ರಘು ಕೌಟಿಲ್ಯ Read More

ಬಿ ಪಿ ಎಲ್ ಕಾರ್ಡ್ ರದ್ದು ಖಂಡಿಸಿ ಕರ್ನಾಟಕ ಸೇನಾ ಪಡೆ ಸದಸ್ಯರ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರ, ಅವೈಜ್ಞಾನಿಕವಾಗಿ ಲಕ್ಷಾಂತರ ಬಡವರ ಬಿ ಪಿ ಎಲ್ ಕಾರ್ಡ್ ಗಳನ್ನು ರದ್ದು ಮಾಡುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಪ್ರತಿಭಟನೆ ನಡೆಸಿದರು.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬಡವರಿಗೆ ನೀಡಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಬಾರದೆಂದು ಆಗ್ರಹಿಸಿದರು.

ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಕರ್ನಾಟಕ ರಾಜ್ಯದ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ, ಬಡವರಿಗೆ ನೀಡಿರುವ ಬಿಪಿಎಲ್ ಕಾರ್ಡ್ ಗಳನ್ನು ಕಿತ್ತುಕೊಂಡು ಅವರ ಜೀವನವನ್ನೇ ನಾಶ ಮಾಡುತ್ತಿದೆ ಎಂದು ಕರ್ನಾಟಕ ಸೇನಾ ಪಡೆ
ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಜನತೆಗೆ ಐದು ಬಿಟ್ಟಿ ಭಾಗ್ಯಗಳನ್ನು ನೀಡಿ, ಈಗ ಆ ಭಾಗ್ಯಗಳಿಗೆ ಹಣ ಹೊಂದಿಸಲಾಗದೆ ಬಡವರ ಬಿಪಿಎಲ್ ಕಾರ್ಡನ್ನು ರದ್ದು ಮಾಡಿರುವುದು ಅತ್ಯಂತ ಶೋಚನೀಯ ಸಂಗತಿಯಾಗಿದೆ.

ಒಂದು ಕಡೆ ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು, ಜನರಿಗೆ ಮಂಕುಬೂದಿ ಎರಚಿ, ಇನ್ನೊಂದು ಕಡೆ ಅದೇ ಜನರಿಗೆ ನೀಡಿರುವ ಅತಿ ಅವಶ್ಯಕವಾದ ಬಿಪಿಎಲ್ ಕಾರ್ಡ್ಗಳನ್ನು ಕಿತ್ತುಕೊಂಡು ಹೊಟ್ಟೆಯ ಮೇಲೆ ಹೊಡೆಯುತ್ತಿದೆ, ಬರೀ ಹಿಂದೂಗಳ ಕಾರ್ಡುಗಳನ್ನೇ ರದ್ದು ಮಾಡಿರುವುದು, ಈ ಸರ್ಕಾರ ಹಿಂದೂ ವಿರೋಧಿತನ ತೋರಿಸುತ್ತದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರಕ್ಕೆ ನಿಜವಾಗಿ ನೈತಿಕತೆ ಇದ್ದರೆ, ಅವೈಜ್ಞಾನಿಕವಾಗಿ ರದ್ದು ಮಾಡಿರುವ 11 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಸರಿಪಡಿಸಬೇಕು, ಇಲ್ಲವಾದ ಪಕ್ಷದಲ್ಲಿ ರಾಜ್ಯದ ಜನತೆ ತಮ್ಮ ಸರಕಾರಕ್ಕೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.
ಕೃಷ್ಣಪ್ಪ, ಪ್ರಭುಶಂಕರ್, ಪ್ರಜೀಶ್, ಸಿಂಧುವಳ್ಳಿ ಶಿವಕುಮಾರ್, ನಿತ್ಯಾನಂದ, ಡಾ . ಎಸ್ ಎ ನರಸಿಂಹೇಗೌಡ, ಕುಮಾರ್ ಗುರು ಮಲ್ಲಪ್ಪ ಕೆ.ಸಿ, ವಿಜಯೇಂದ್ರ, ಸ್ವಾಮಿ ಗೌಡ, ನೇಹಾ, ಮಂಜುಳಾ, ಭಾಗ್ಯಮ್ಮ, ಗಿರೀಶ್ ಹೆಚ್, ರಘು ಅರಸ್, ರಾಧಾ ಕೃಷ್ಣ, ಎಳನೀರು ರಾಮಣ್ಣ, ದರ್ಶನ್ ಗೌಡ, ಪ್ರದೀಪ್, ಪ್ರಭಾಕರ, ತ್ಯಾಗರಾಜ್, ಹನುಮಂತಯ್ಯ,ಆನಂದ್, ರವೀಶ್, ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.

ಬಿ ಪಿ ಎಲ್ ಕಾರ್ಡ್ ರದ್ದು ಖಂಡಿಸಿ ಕರ್ನಾಟಕ ಸೇನಾ ಪಡೆ ಸದಸ್ಯರ ಪ್ರತಿಭಟನೆ Read More

ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿ ಎಲ್ಲಾ ಕಡೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ಮುಂಭಾಗ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಎಲ್ಲಾ ಅಂಗಡಿ, ಮುಂಗಟ್ಟು, ವ್ಯಾಪಾರ ಮಳಿಗೆಗಳು, ಮಾಲ್ ಗಳು, ಖಾಸಗಿ ಕಚೇರಿಗಳು, ಶಾಲಾ-ಕಾಲೇಜು ಹಾಗೂ ಜಾಹೀರಾತು ಫಲಕಗಳು ಹಾಗೂ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕನ್ನಡವನ್ನು ಶೇ ೬೦ ಭಾಗ ಪ್ರಧಾನವಾಗಿ, ಕಡ್ಡಾಯವಾಗಿರಬೇಕೆಂದು ಒತ್ತಾಯಿಸಲಾಯಿತು.ಜತೆಗೆ ಕೂಡಲೇ ಮಹಾ ನಗರ ಪಾಲಿಕೆ ಈ‌ ಬಗ್ಗೆ ಕಟ್ಟುನಿಟ್ಟಾಗಿ ಆದೇಶ ಹೊರಡಿಸಬೇಕೆಂದು ಪ್ರತಿಭಟನಾ ನಿರತರು ಅಗ್ರಹಿಸಿದರು.

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ – ಕನ್ನಡ ಭಾಷೆಯೇ ಸಾರ್ವಭೌಮ ಭಾಷೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಬೇಕು ಹಾಗೂ ಕನ್ನಡದಲ್ಲಿ ವ್ಯವಹರಿಸಬೇಕು. ಕನ್ನಡ ಭಾಷೆ ಕಲಿಯಬೇಕು ಇಲ್ಲದಿದ್ದರೆ ನಾವು ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕನ್ನಡ ಬಳಸದ ಮಳಿಗೆಗಳಿಗೆ ನೋಟಿಸ್ ನೀಡಿ, ಒಂದು ತಿಂಗಳ ಕಾಲಾವಕಾಶ ಕೊಟ್ಟು ಆ ನಂತರ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಒಂದು ವೇಳೆ ಈ ಕೆಲಸ ನೀವು ಮಾಡದಿದ್ದರೆ, ಮತ್ತೆ ನಮ್ಮ ಸಂಘಟನೆ ಬೀದಿಗಿಳಿದು ಕನ್ನಡ ಬಳಸದ ನಾಮಪಲಕಗಳಿಗೆ ಮಸಿ ಬಳಿಯಲಾಗುವುದೆಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು. ಕೃಷ್ಣಯ್ಯ, ಪ್ರಭುಶಂಕರ್, ಪ್ರಜೀಶ್ ಪಿ, ವರಕೂಡು ಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನಾಗರಾಜು, ಸಿಂದುವಳ್ಳಿ ಶಿವಕುಮಾರ್, ಮಹದೇವ ಸ್ವಾಮಿ, ನಂದ ಕುಮಾರ್ ಗೌಡ, ಹನುಮಂತಯ್ಯ, ಮಂಜುಳ, ನೇಹ, ಭಾಗ್ಯಮ್ಮ, ಬೇಬಿ ರತ್ನ, ಎಳನೀರು ರಾಮಣ್ಣ, ರಾಮಕೃಷ್ಣೇಗೌಡ, ರಾಧಾಕೃಷ್ಣ, ರಘು ಅರಸ್, ಗುರು ಮಲ್ಲಪ್ಪ , ಹರೀಶ್ ,ಆನಂದ, ತ್ಯಾಗರಾಜ್, ರವೀಶ್, ಪ್ರಭಾಕರ, ಗಣೇಶ್ ಪ್ರಸಾದ್, ಸ್ವಾಮಿ ಗೌಡ, ವಿಷ್ಣು ಹಾಗೂ ರವಿ ನಾಯಕ ಮುಂತಾದವರು ಪಾಲ್ಗೊಂಡಿದ್ದರು.

ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ Read More