ಗಾಂಧೀಜಿ ದೇಶ, ವಿಶ್ವ ಕಂಡ ಅತ್ಯುತ್ತಮ ಅಹಿಂಸಾ ನಾಯಕ-ಡಾ. ಡಿ ತಿಮ್ಮಯ್ಯ

ಮೈಸೂರು: ಗಾಂಧೀಜಿ ಅವರು ಈ ದೇಶ, ವಿಶ್ವ ಕಂಡ ಅತ್ಯುತ್ತಮ ಶಾಂತಿ ಮತ್ತು ಅಹಿಂಸ ನಾಯಕ ಎಂದು ವಿಧಾನ ಪರಿಷತ್ ಸದಸ್ಯ ಡಾ. ಡಿ ತಿಮ್ಮಯ್ಯ ತಿಳಿಸಿದರು.

ಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ ಜಯಂತಿ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಶ್ರೀ ಮಹಾತ್ಮ ಗಾಂಧೀಜಿ ಸದ್ಭಾವನಾ ಪ್ರಶಸ್ತಿ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಯಾರು ಪರಮಾತ್ಮನನ್ನು ನೋಡಿಲ್ಲ. ಪರಮಾತ್ಮನನ್ನು ನಾವು ಶಕ್ತಿ ಕೊಡು ಎಂದು ಕೇಳಿಕೊಳ್ಳುತ್ತೇವೆ. ಆದರೆ ಮಹಾ ಆತ್ಮ, ಮಹಾತ್ಮ ನಮ್ಮ ದೇಶದ 150 ಕೋಟಿ ಜನರಿಗೆ ಶಕ್ತಿಯನ್ನು ನೀಡಿದವರು ಎಂದು ಬಣ್ಣಿಸಿದರು.

ಗಾಂಧೀಜಿರವರ ತ್ಯಾಗ, ಹೋರಾಟ, ಶ್ರಮವನ್ನು ಈ ದೇಶದಲ್ಲಿ ಯಾರು ನೆನಪಿಸಿಕೊಳ್ಳುತ್ತಿಲ್ಲ.ಇಂದು ಭಾರತ ವಿಶ್ವದಲ್ಲಿ ಆರ್ಥಿಕತೆಯಲ್ಲಿ ಮೂರನೇ ಸ್ಥಾನಕ್ಕೆ ಹೋಗಲು ಇವರ ಆಶೀರ್ವಾದ, ಸಂಕಲ್ಪವೇ ಕಾರಣ. ಮಹಾತ್ಮ ಗಾಂಧೀಜಿ ಅವರ ತ್ಯಾಗ ಶಾಂತಿ ಅಹಿಂಸ ಮಾರ್ಗವನ್ನು ಭಾರತೀಯರೆಲ್ಲರೂ ನೆನೆಸಿಕೊಳ್ಳಲೇಬೇಕು ಎಂದು ಹೇಳಿದರು.

ಗಾಂಧೀಜಿಯವರ ಆದರ್ಶಗಳನ್ನು ನಾವೆಲ್ಲರೂ ಆಳವಡಿಸಿಕೊಳ್ಳಬೇಕು ಕರ್ನಾಟಕ ಸೇನಾ ಪಡೆ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಡಾ. ಡಿ ತಿಮ್ಮಯ್ಯ ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಾಂಧಿವಾದಿ, ನಿವೃತ್ತ ಪ್ರಸಾರಾಂಗ ನಿರ್ದೇಶಕ ಕೆ.ಟಿ ವೀರಪ್ಪ, ಕೆ ಆರ್ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ. ಎಲ್ ದೇವೇಗೌಡ, ಸಮಾಜ ಸೇವಕರಾದ ಕೆ ಆರ್ ಧನ್ಯಕುಮಾರ್, ಕಿಯೋನಿಕ್ಸ್ ಸುಜುಕಿ ವ್ಯವಸ್ಥಾಪಕ ನಿರ್ದೇಶಕ ಬಾಲಾಜಿ ಪಿ ಎಸ್, ಓಂ ಶ್ರೀ ಸಾಯಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ರಾಣಿಪ್ರಭ ಹೆಚ್ ಪಿ, ಹಿರಿಯ ಸಾಹಿತಿ ಡಾ. ಪುಷ್ಪ ಎಂ ಅಯ್ಯಂಗಾರ್, ನಂದನ ಸ್ಪೆಷಾಲಿಟಿ ಆಸ್ಪತ್ರೆಯ ಖ್ಯಾತ ನೇತ್ರ ರೋಗ ತಜ್ಞ ಡಾ. ಸುಧಿಂದ್ರ ಆರ್, ಧಾರ್ಮಿಕ ಮುಖಂಡ ಡಾ. ಶ್ರೀಷಾ ಭಟ್ ಅವರುಗಳಿಗೆ ಶ್ರೀ ಮಹಾತ್ಮ ಗಾಂಧೀಜಿ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ವೇಳೆ ಮಹಾರಾಣಿ ವಿಜ್ಞಾನ ಕಾಲೇಜಿನ ಸುಮಾರು 40 ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಅವರು ಮಹಾತ್ಮ ಗಾಂಧೀಜಿ ಕುರಿತು ಮಾತನಾಡಿದರು.

ಮಹಾತ್ಮ ಗಾಂಧೀಜಿ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಟಿ.ಜಿ ಆದಿಶೇಷಗೌಡ, ಮೈಸೂರು ಮಹಾನಗರ ಪಾಲಿಕೆ, ವಲಯ 3ರ ಸಹಾಯಕ ಆಯುಕ್ತ ಎಂ ಸಂದೀಪ್, ಹಿರಿಯ ಸಮಾಜ ಸೇವಕ ಡಾ. ರಘುರಾಂ ಕೆ ವಾಜಪೇಯಿ, ಕರ್ನಾಟಕ ರಾಜ್ಯಾಧ್ಯಕ್ಷ ಶ್ರೀನಿವಾಸ ಗೌಡ, ಮೈಸೂರು ಜಿಲ್ಲಾ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಕೃಷ್ಣಪ್ಪ, ಹನುಮಂತಯ್ಯ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ವರಕೂಡು ಕೃಷ್ಣೇಗೌಡ, ಪ್ರಭಾಕರ್, ನೇಹ, ಭಾಗ್ಯಮ್ಮ, ಜ್ಯೋತಿ, ಗೀತಾ ಗೌಡ, ಡಾ. ಶಾಂತರಾಜೇ ಅರಸ್, ಮೊಗಣ್ಣಾಚಾರ್, ಬಸವರಾಜು, ಕುಮಾರ್, ರಘು ಅರಸ್, ರವೀಶ್, ವಿಷ್ಣು ಮತ್ತಿತರರು ಉಪಸ್ಥಿತರಿದ್ದರು.

ಗಾಂಧೀಜಿ ದೇಶ, ವಿಶ್ವ ಕಂಡ ಅತ್ಯುತ್ತಮ ಅಹಿಂಸಾ ನಾಯಕ-ಡಾ. ಡಿ ತಿಮ್ಮಯ್ಯ Read More

ನಾಡು,ದೇಶ ಕಂಡ ಮಹಾನ್ ಇಂಜಿನಿಯರ್ ಸರ್.ಎಂ.ವಿ-ಸಿ.ಎನ್ ಮಂಜೇಗೌಡ

ಮೈಸೂರು: ನಮ್ಮ ನಾಡು,ದೇಶ ಕಂಡ ಮಹಾನ್ ಇಂಜಿನಿಯರ್, ತಮ್ಮ ಬುದ್ದಿವಂತಿಕೆ ಹಾಗೂ ಕೆಲಸದಿಂದಲೇ ವಿಶ್ವ ವಿಖ್ಯಾತರಾದವರು ಸರ್.ಎಂ. ವಿಶೇಶ್ವರಯ್ಯನವರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ ಬಣ್ಣಿಸಿದರು.

ಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಂಜೇಗೌಡರು ಮಾತನಾಡಿದರು.

ಬ್ರಿಟೀಷರಿಂದ ಸರ್ ಎಂಬ ಬಿರುದನ್ನು ಪಡೆದವರು, ಮುಂಬೈ ನಲ್ಲಿ ಚಾಕಚಕ್ಯತೆಯಿಂದ ಕೆಲಸ ಮಾಡುತ್ತಿದ್ದ ವಿಶ್ವೇಶ್ವರಯ್ಯನವರನ್ನು ಮೈಸೂರಿಗೆ ಕರೆಯಿಸಿಕೊಂಡ ನಾಲ್ವಡಿ ಸವರು ಕನ್ನಂಬಾಡಿ ಕಟ್ಟೆಯ ಉಸ್ತುವಾರಿ ನೀಡಿ, ಕಟ್ಟೆಯನ್ನು ಅದ್ಬುತವಾಗಿ ನಿರ್ಮಾಣ ಮಾಡಿದರು ಎಂದು ಸ್ಮರಿಸಿದರು.

ಕೋಟ್ಯಂತರ ಇಂಜಿನೀಯರ್ ಗಳು ದೇಶದಲ್ಲಿ ಇದ್ದರೂ ಸರ್ ಎಂ ವಿಶ್ವೇಶ್ವರಯ್ಯ ಅವರು ಹುಟ್ಟಿದ ದಿನವನ್ನು ಸರ್ಕಾರ ಇಂಜಿನೀಯರ್ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದರೆ ಅವರ ಕೊಡುಗೆ, ಸಾಧನೆಗಳು ಅಪಾರ ಎಂಬುದು ಅರಿವಾಗುತ್ತದೆ ಎಂದು ಹೇಳಿದರು.

ಅವರ ಪ್ರಾಮಾಣಿಕ, ನಿಸ್ವಾರ್ಥ ಸೇವೆಯಿಂದಲೇ ಭಾರತ ರತ್ನ ಪ್ರಶಸ್ತಿ ನೀಡಿರುವುದು, ನಮಗೆ, ಕನ್ನಡಿಗರಿಗೆ ಹೆಮ್ಮೆಯ ವಿಚಾರ. ಇಂತಹ ಮಹನೀಯರ ತತ್ವ, ಆದರ್ಶಗಳನ್ನು ಈಗಿನ ಇಂಜಿನೀಯರ್ ಗಳು ಅಳವಡಿಸಿಕೊಳ್ಳಬೇಕು ಎಂದು ಮಂಜೇಗೌಡ ಕರೆ ನೀಡಿದರು.

ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಇಂಜಿನೀಯರ್ ಆಗಿ ಬಂದಂತಹ ವಿಶ್ವೇಶ್ವರಯ್ಯ ಅವರು ಕನ್ನಂಬಾಡಿ ಕಟ್ಟೆ ಸೇರಿದಂತೆ ಹಲವಾರು ಅಣೆಕಟ್ಟುಗಳು ಹಾಗೂ ರಸ್ತೆಗಳ ನಿರ್ಮಾಣಕ್ಕೆ ಕಾರಣರಾದರು ಎಂದು ಬಣ್ಣಿಸಿದರು.

ಮಹಾರಾಜರ ಸಹಕಾರದಿಂದ ಅನೇಕ ಕೈಗಾರಿಕೆಗಳು, ವಿದ್ಯುಚ್ಛಕ್ತಿ ಸ್ಥಾವರ,ಮೈಸೂರು ಬ್ಯಾಂಕ್ ಸೇರಿದಂತೆ ಹಲವಾರು ಸಂಸ್ಥೆಗಳನ್ನು ಸ್ಥಾಪಿಸಿದರು. ಇಂತಹ ಮಹನೀಯರ ದಿನಾಚರಣೆಯನ್ನು ಮುಂದಿನ ವರ್ಷದಿಂದ ಸರ್ಕಾರ ಜಿಲ್ಲಾಡಳಿತದ ವತಿಯಿಂದ ಆಚರಣೆ ಮಾಡಬೇಕು ಎಂದು ಆಗ್ರಹಿಸಿದರು.

ಎಪಿಎನ್ ಪ್ರಾಪರ್ಟಿಸ್ ನ ಎ.ಪಿ. ನಾಗೇಶ್ ರವರು ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಕಾಮಗಾರಿ ಅಧ್ಯಕ್ಷರಾದ ಸಿ.ಜಿ ಗಂಗಾಧರ್,
ಹಿರಿಯ ಸಮಾಜ ಸೇವಕರಾದ ಡಾ. ರಘುರಾಂ. ಕೆ ವಾಜಪೇಯಿ, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್ ಜಯಪ್ರಕಾಶ್, ಗೋಲ್ಡನ್ ಸುರೇಶ್, ಪ್ರಭುಶಂಕರ್, ಕೃಷ್ಣಪ್ಪ, ಶಿವಲಿಂಗಯ್ಯ, ನೇಹಾ, ಪದ್ಮ, ಪ್ರಜೀಶ್, ಮನು ನಾಯಕ್, ವರಕೂಡು ಕೃಷ್ಣೇಗೌಡ, ಹನುಮಂತಯ್ಯ, ಮಂಜುಳ, ಸುಶೀಲ, ತಾಯೂರ್ ಗಣೇಶ್, ಪ್ರಭಾಕರ್, ತ್ಯಾಗರಾಜ್, ರಾಮಕೃಷ್ಣೇಗೌಡ, ಜ್ಯೋತಿ, ಕುಮಾರ್ ಗೌಡ, ನಂದಕುಮಾರ್, ರಘು ಅರಸ್, ಅಶೋಕ್ ಹನುಮಂತೇಗೌಡ, ಆನಂದ್ ಗೌಡ, ದರ್ಶನ್ ಗೌಡ, ಗಣೇಶ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ನಾಡು,ದೇಶ ಕಂಡ ಮಹಾನ್ ಇಂಜಿನಿಯರ್ ಸರ್.ಎಂ.ವಿ-ಸಿ.ಎನ್ ಮಂಜೇಗೌಡ Read More

ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ: ಪ್ರತಿಭಟನೆ

ಮೈಸೂರು: ನಾಡಿನ ಧಾರ್ಮಿಕ ಶಕ್ತಿ ಕೇಂದ್ರ, ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವ ವ್ಯಕ್ತಿಗಳು ಹಾಗೂ ದುಷ್ಟ ಶಕ್ತಿಗಳ ವಿರುದ್ಧ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿದರು.

ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯದ ಭಕ್ತರನ್ನು ಕೆರಳಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ಶವ ಸಂಸ್ಕಾರ ಮಾಡಲಾಗಿದೆ ಎಂದು ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಪ್ರತಿಭಟನೆ ವೇಳೆ ತೇಜೇಶ್ ಲೋಕೇಶ್ ಗೌಡ ಹೇಳಿದರು.

ಪ್ರಪಂಚದಲ್ಲಿ ಎಷ್ಟೇ ದೊಡ್ಡ ದೊಡ್ಡ ಮಸೀದಿ ಚರ್ಚ್ ಗಳು ಇದ್ದರೂ, ಹಸಿದವರಿಗೆ ಅನ್ನ ನೀಡುವುದು ಹಿಂದೂ ಮಠಗಳು ಮತ್ತು ದೇವಸ್ಥಾನಗಳು ಮಾತ್ರ.ಪ್ರತಿದಿನ ಲಕ್ಷಾಂತರ ಭಕ್ತರಿಗೆ ಅನ್ನ ನೀಡುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಪ್ಪು ಚುಕ್ಕೆ ತರಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷಾಂತರ ಭಕ್ತರು ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಕೆಲವರು ಸ್ನಾನ ಮಾಡುವಾಗ ನೇತ್ರಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಮೃತರಾಗಿ ರಬಹುದು.ಕೆಲವರು ಜೀವನದಲ್ಲಿ ಜಿಗುಪ್ಸೆಗೊಂಡು, ಇನ್ನೂ ಕೆಲವರು ಇಲ್ಲಿ ಸತ್ತರೆ ಮುಕ್ತಿ ಸಿಗತ್ತದೆಂದು ಆತ್ಮಹತ್ಯೆ, ಅನಾಹುತಗಳನ್ನು ಮಾಡಿಕೊಂಡಿರಬಹುದು. ಇದನ್ನೇ ನೆಪವಾಗಿಟ್ಟುಕೊಂಡು ಕೆಲವು ಅನ್ಯಧರ್ಮೀಯರು, ಅಹಿಷ್ಣುಗಳು, ದುಷ್ಟ ಶಕ್ತಿಗಳು ಶ್ರೀ ಕ್ಷೇತ್ರಕ್ಕೆ, ಧರ್ಮಾಧಿಕಾರಿಗಳಿಗೆ ಕೆಟ್ಟ ಹೆಸರು ತಂದು ನಮ್ಮ ಹಿಂದೂ ಧರ್ಮವನ್ನು, ಧಾರ್ಮಿಕ ಕ್ಷೇತ್ರವನ್ನು ಹಾಳು ಮಾಡಲು ವ್ಯವಸ್ಥಿತ ಸಂಚುಗಳನ್ನು ರೂಪಿಸುತ್ತಿದ್ದಾರೆ‌ ಎಂದು ಪ್ರತಿಭಟನಾ ನಿರತರು ಗಂಭೀರ ಆರೋಪ ಮಾಡಿದರು.

ಧರ್ಮಸ್ಥಳದಲ್ಲಿದ್ದ ಈ ಅನಾಮಿಕ ವ್ಯಕ್ತಿಗೆ ಇಷ್ಟು ವರ್ಷಗಳಾದ ಮೇಲೆ ಪಾಪ ಪ್ರಜ್ಞೆ ಮೂಡಿ, ಈಗ ಜಾಗ ತೋರಿಸಲು ಬಂದಿರುವುದು ಅನುಮಾನಾಸ್ಪದವಾಗಿದೆ ಈ ವ್ಯಕ್ತಿ ತೋರಿಸಿರುವ 16-17 ಜಾಗಗಳಲ್ಲಿ, ಎಲ್ಲೂ ಸರಿಯಾಗಿ ಅಸ್ತಿಗಳು ಸಿಗುತ್ತಿಲ್ಲ. ದಿನಕ್ಕೊಂದು ಜಾಗ ತೋರಿಸಿ ಎಸ್ ಐ ಟಿ ಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಜತೆಗೆ ಈಗ ಇಬ್ಬರು ಬಂದು ಅವನು ಆಗ ಹೂತು ಹಾಕಿದ್ದನ್ನು ನೋಡಿದ್ದೇವೆ ಎನ್ನುತ್ತಿರುವುದು ಹಾಸ್ಯಸ್ಪದ. ಏಕೆಂದರೆ ಮುಖ ತೋರಿಸದ, ಮಾಸ್ಕ್ ಹಾಕಿರುವ ಈ ವ್ಯಕ್ತಿಯನ್ನು ಇವರು ಹೇಗೆ ಗುರುತು ಹಿಡಿದರು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ರಾಜ್ಯ ಸರ್ಕಾರ ಯಾರೋ ಅನಾಮಿಕ ವ್ಯಕ್ತಿ ಹೇಳಿದ ಎಂದು ಹೇಳಿ ದಿನಕ್ಕೆ 3-4 ಲಕ್ಷ ಸಾರ್ವಜನಿಕರ ತೆರಿಗೆ ಹಣವನ್ನು ಇದಕ್ಕೆ ಪೋಲು ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಜತೆಗೆ ಸರ್ಕಾರ ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಒಳಪಡಿಸಿಕೊಳ್ಳಲು ಅವರೊಂದಿಗೆ ಸಂಚು ರೂಪಿಸುತ್ತಿರುವ ಹಾಗಿದೆ. ಈ ಕೂಡಲೇ ಸರ್ಕಾರ ಅನಾಮಿಕ ವ್ಯಕ್ತಿಯನ್ನು ಎಸ್‌ಐಟಿ ವಶಕ್ಕೆ ಪಡೆದುಕೊಂಡು, ಅವನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ನಿಜ ತಿಳಿಯಬೇಕು ಹಾಗೂ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿ, ಕಪ್ಪು ಮಸಿ ಬಳಿಯಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಆಗ್ರಸಿದರು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಜ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದರು.

ಗೋಲ್ಡನ್ ಸುರೇಶ್, ಪ್ರಭುಶಂಕರ್, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ಮಧುವನ ಚಂದ್ರು, ವರಕೂಡು ಕೃಷ್ಣೇಗೌಡ, ಶಿವಲಿಂಗಯ್ಯ, ನೇಹಾ, ಮಹದೇವಸ್ವಾಮಿ, ಪದ್ಮ, ಹೊನ್ನೇಗೌಡ, ಡಾ. ಶಾಂತರಾಜೇ ಅರಸ್, ನಾರಾಯಣ ಗೌಡ, ಹನುಮಂತಯ್ಯ, ರಾಧಾಕೃಷ್ಣ, ನಾಗರಾಜು, ಸುಬ್ಬೇಗೌಡ, ರಘು ಅರಸ್, ನಂದಕುಮಾರ್ , ಅಶೋಕ್, ಬಸವರಾಜು, ಕುಮಾರ್, ಗೀತಾ ಗೌಡ, ಎಳನೀರು ರಾಮಣ್ಣ, ದರ್ಶನ್ ಗೌಡ, ಪ್ರದೀಪ್, ಆನಂದ್ ಗೌಡ, ಭಾನುಪ್ರಕಾಶ್, ಶಿವನಾಯಕ್, ರವಿ ನಾಯಕ್, ರವೀಶ್, ಸ್ವಾಮಿ ಗೌಡ, ಪ್ರಭಾಕರ್, ವಿಷ್ಣು ಮತ್ತಿತರರು ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ: ಪ್ರತಿಭಟನೆ Read More

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ಮೈಸೂರು: ಶ್ರೀಮನ್ಮಹಾರಾಜ ರಾಜಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಭುಗಳಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂ‌ ಎಲ್‌ ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿರೋಧಿಸಿ ಹಳೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಸೇನಾಪಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಾಲ್ವಡಿಯವರ ಇತಿಹಾಸ ತಿಳಿಯದ ಡಾ. ಯತೀಂದ್ರ ಅವರ ಮಾತು ಕೇಳಿದರೆ ನಗು ಬರುತ್ತದೆ. ನಾಲ್ವಡಿ ಅವರಿಗಿಂತ ಮೈಸೂರಿಗೆ ತಮ್ಮಪ್ಪನದೇ ಜಾಸ್ತಿ ಕೊಡುಗೆ ಎಂದು ಹೇಳಿರುವುದು ಖಂಡನೀಯ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಯತೀಂದ್ರ ಅವರಿಗೆ ಬಹುಶಃ ನಾಲ್ವಡಿ ಅವರು ನಮ್ಮ ರಾಜ್ಯಕ್ಕೆ ನೀಡಿರುವ ನೂರಾರು ಕೊಡುಗೆಗಳು ತಿಳಿದಿಲ್ಲ. ಶಿಕ್ಷಣ, ನೀರಾವರಿ, ಕೈಗಾರಿಕೆ, ಕಾರ್ಖಾನೆಗಳು, ಪ್ರಜೆಗಳಿಗೆ ಸಾಮಾಜಿಕ ನ್ಯಾಯ ನೀಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಲ್ವಡಿರವರು ರಾಜ್ಯಕ್ಕೆ ನೀಡದ ಕೊಡುಗೆಗಳಿಲ್ಲ ಇದನ್ನೆಲ್ಲ ತಿಳಿದುಕೊಂಡು ಮಾತನಾಡಲಿ ಎಂದು ತಾಕೀತು ಮಾಡಿದರು.

ನೂರಾರು ಜನ್ಮ ಎತ್ತಿದರೂ, ಯಾರೂ ನಾಲ್ವಡಿಯವರ ಕಾಲಿನ ಧೂಳಿಗೂ ಸಮನಾಗುವುದಿಲ್ಲ. ಅಂದು ದೂರ ದೃಷ್ಟಿಯ ಆಡಳಿತದಿಂದ ಅಕ್ಷರಶಃ ಸುವರ್ಣ ಯುಗವನ್ನು ಸೃಷ್ಟಿಸಿದ್ದರು. ನಾಲ್ವಡಿ ಭೂಪ- ಮನೆಮನೆ ದೀಪ ಎಂದು ಇಂದಿಗೂ ಕನ್ನಡಿಗರು ನೆನೆದುಕೊಳ್ಳುವ ಅಭಿವೃದ್ಧಿಯ ಹರಿಕಾರರಾದ ನಾಲ್ವಡಿ ಮಹಾರಾಜರೆಲ್ಲಿ, ಪ್ರತಿ ಕನ್ನಡಿಗರ ಮೇಲೆ ಸಾಲದ ಹೊರೆ ಹೊರೆಸಿರುವ ಹಾಗೂ ಎಲ್ಲಾ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿದ್ದರಾಮಯ್ಯರವರೆಲ್ಲಿ ಎಂದು ಕರ್ನಾಟಕ ಸೇನಾಪಡೆಯ ಸದಸ್ಯರು ಪ್ರಶ್ನಿಸಿದರು.

ಸಿದ್ದರಾಮಯ್ಯನವರು ರಾಜಕೀಯದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡು, ಪಕ್ಷಗಳನ್ನು ಬದಲಾವಣೆ ಮಾಡಿ, ರಾಜ್ಯದ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಜೀವನ ನಡೆಸಿ, ಜನರ ಹಣದಲ್ಲಿ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆಯೇ ಹೊರತು ಅವರ ಮನೆಯಿಂದ ಹಣ ತಂದು ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿಲ್ಲ, ಮಹಾರಾಜರು ಕಟ್ಟಿಸಿದ ಮೈಸೂರು ಮೆಡಿಕಲ್ ಕಾಲೇಜು, ಕೆ ಆರ್ ಆಸ್ಪತ್ರೆಗೆ ಸುಣ್ಣ ಬಣ್ಣವನ್ನು ಹೊಡಿಸಲು ಆಗಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.

ನಾಲ್ವಡಿ ಅವರು ರಾಜ್ಯದಲ್ಲಿ ಇನ್ನೆಂದು ಜನಿಸಲು ಅಥವಾ ಹೋಲಿಸಲು ಸಾಧ್ಯವಾಗದ ಒಂದು ದೈತ್ಯ ಹೆಸರು. ಯತೀಂದ್ರ ರ ಈ ಹೇಳಿಕೆಯನ್ನು ರಾಜ್ಯದ ಒಬ್ಬನೇ ಒಬ್ಬ ನಾಗರಿಕ, ಬುದ್ಧಿಜೀವಿಗಳು, ಯಾರು ಖಂಡಿತವಾಗಿ ಒಪ್ಪುವುದಿಲ್ಲ.

ಇದುವರೆಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸರಿಗೆ ಹೋಲಿಸಿಕೊಳ್ಳುತ್ತಿದ್ದವರು, ಇದೀಗ ಪದೋನ್ನತಿ ಪಡೆದುಕೊಂಡು ನಾಲ್ವಡಿ ಮಹಾರಾಜರೊಂದಿಗೆ ಹೋಲಿಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ,ಇದು ದುರಹಂಕಾರದ ಪರಮಾವಧಿ ಎಂದು ಕಿಡಿಕಾರಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಕೊಡುಗೆ ನಮ್ಮ ಜಿಲ್ಲೆಗೆ ನಿಜವಾಗಿ ಹೇಳಬೇಕೆಂದರೆ ಶೂನ್ಯ. ಶಿವಮೊಗ್ಗವನ್ನು ಯಡಿಯೂರಪ್ಪ , ಹಾಸನವನ್ನು ದೇವೇಗೌಡರು ಅಭಿವೃದ್ಧಿ ಮಾಡಿದಂತೆ ಸಿದ್ದರಾಮಯ್ಯರವರು ಮೈಸೂರನ್ನು ಏನು ಅಭಿವೃದ್ಧಿ ಮಾಡಿಲ್ಲ. ಕಳೆದ 3-4 ವರ್ಷಗಳಿಂದ ನಾವು ಮೈಸೂರಿನಲ್ಲಿ ಒಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಿ ಎಂದು ಮನವಿಗಳನ್ನು ನೀಡುತ್ತಿದ್ದರೂ, ಇನ್ನೂ ನೀಡಿಲ್ಲ. ಒಂದು ಕಾಲೇಜನ್ನೇ ನೀಡದವರು, ಮೈಸೂರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಕಾರವಾಗಿ ಪ್ರಶ್ನಿಸಿದರು.

ಕೇವಲ ತಮ್ಮ ರಾಜಕೀಯ ಪ್ರಚಾರಕ್ಕಾಗಿ, ಮನಬಂದಂತೆ ಹುಚ್ಚು ಹೇಳಿಕೆ ನೀಡುತ್ತಿರುವ ಎಂಎಲ್ಸಿ ಡಾ. ಯತೀಂದ್ರ ಅವರು ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಸೇನಾಪಡೆಯ ಸದಸ್ಯರು ಹಾಗೂ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು. ವಿಕ್ರಂ ಅಯ್ಯಂಗಾರ್, ಗೋಲ್ಡನ್ ಸುರೇಶ್, ಪ್ರಜೀಶ್, ಸಿಂದುವಳ್ಳಿ ಶಿವಕುಮಾರ್, ವರಕೂಡುಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನೇಹಾ, ಆನಂದ್ ಗೌಡ, ಡಾ. ಶಾಂತರಾಜೇ ಅರಸ್, ಭಾಗ್ಯಮ್ಮ, ನಂದಕುಮಾರ್, ಹೊನ್ನೇಗೌಡ, ತಾಯೂರು ಗಣೇಶ್, ರಾಧಾಕೃಷ್ಣ, ಎಳನೀರು ರಾಮಣ್ಣ, ಶಿವ ನಾಯ್ಕ, ರಘು ಅರಸ್, ಪ್ರಭಾಕರ್, ದರ್ಶನ್ ಗೌಡ, ಚಂದ್ರಶೇಖರ್, ಕುಮಾರ್, ಸ್ವಾಮಿ ಗೌಡ, ಮೂರ್ತಿ ಲಿಂಗಯ್ಯ, ರವೀಶ್, ವಿಷ್ಣು ಸೇರಿದಂತೆ ‌ಹಲವಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ Read More

ಸಣ್ಣ ವ್ಯಾಪಾರಿಗಳಿಗೆ ಜಿ ಎಸ್ ಟಿ:ಸರ್ಕಾರದ ವಿರುದ್ಧ ‌ಕರ್ನಾಟಕ ಸೇನಾಪಡೆ ಪ್ರತಿಭಟನೆ

ಮೈಸೂರು: ಜಿ.ಎಸ್.ಟಿ. ವ್ಯಾಪ್ತಿಗೆ ಒಳಪಡದಿರುವ ಸಣ್ಣ ವ್ಯಾಪಾರಿಗಳ ನೆಮ್ಮದಿ ಕೆಡಿಸುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ಸದಸ್ಯರು ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಣ್ಣ ವ್ಯಾಪಾರಿಗಳಿಗೆ ರಾತ್ರೋರಾತ್ರಿ ಲಕ್ಷಾಂತರ ರೂ. ಜಿ ಎಸ್ ಟಿ ಪಾವತಿಸುವಂತೆ ರಾಜ್ಯ ಸರ್ಕಾರ ನೋಟಿಸ್ ನೀಡಿರುವುದನ್ನು ಪ್ರತಿಭಟನಾ ನಿರತರು ಖಂಡಿಸಿದರು.

ಜಿಎಸ್‌ಟಿ ಹೆಸರಿನಲ್ಲಿ ಹೆಚ್ಚು ತೆರಿಗೆ ವಿಧಿಸುವ ಮೂಲಕ ಸಣ್ಣ ವ್ಯಾಪಾರಿಗಳನ್ನು ಸರ್ಕಾರ ಸಂಕಷ್ಟಕ್ಕೆ ತಳ್ಳುತ್ತಿದೆ. ಹಾಲು, ಹೂ, ಹಣ್ಣು, ತರಕಾರಿ ವ್ಯಾಪಾರಿಗಳು ಇಂದು ಬಂಡವಾಳ ಹಾಕಿದರೆ ನಾಳೆ 500-1000 ರೂ ಲಾಭ ಬರುತ್ತದೆ. ಮೊದಲು ಟ್ಯಾಕ್ಸ್ ಎಂಬುದು ಶ್ರೀಮಂತರ ಮೇಲಿತ್ತು. ಈಗ ದಿನಗೂಲಿ ವ್ಯಾಪಾರಿಗಳ ಮೇಲೂ ಜಿ ಎಸ್ ಟಿ ಹೊರೆ ಹೊರಿಸುತ್ತಿರುವುದರಿಂದ ಸಣ್ಣ ವ್ಯಾಪಾರಿಗಳು ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದು ಕಿಡಿಕಾರಿದರು.

ಯುಪಿಐ ಆಧಾರಿತ ವಹಿವಾಟುಗಳ ಮೇಲೆ ಜಿಎಸ್‌ಟಿ ವಿಧಿಸುವ ವಿಚಾರ ರಾಜ್ಯದಲ್ಲಿ ಗೊಂದಲದ ಗೂಡಾಗಿದೆ. ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿರುವ ಸಣ್ಣ ವ್ಯಾಪಾರಿಗಳು ಜುಲೈ 23ರಿಂದ 25ರ ವರೆಗೆ ವ್ಯಾಪಾರ ವಹಿವಾಟು ಬಂದ್ ಗೆ ಕರೆ ನೀಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಈ ವೇಳೆ ಕರ್ನಾಟಕ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ತಿಳಿಸಿದರು.

ಇದರಿಂದ ಸಣ್ಣ ವ್ಯಾಪಾರಿಗಳು ಯುಪಿಐ ವಹಿವಾಟಿನ ಸ್ಕ್ಯಾನರ್ ತೆಗೆದು ಹರಿದು ಹಾಕಿ, ನಗದು ಪಾವತಿಗೆ ಆದ್ಯತೆ ನೀಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಎಲ್ಲಾ ವಹಿವಾಟು ನಗದಿನಲ್ಲೇ ನಡೆಸಿದರೆ ನಾವು ಮತ್ತೆ 5 ವರ್ಷ ಹಿಂದೆ ಹೋಗುತ್ತೇವೆ. ಇದರಿಂದ ಕಪ್ಪು ಹಣ ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಚಿಲ್ಲರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಚಿಕ್ಕಪುಟ್ಟ ಪೆಟ್ಟಿಗೆ ಅಂಗಡಿಗಳು ತರಕಾರಿ, ಹೂ ಮಾರಾಟಗಾರರಲ್ಲೂ ಸಹ ಈಗ ಯುಪಿಐ ಸ್ಕ್ಯಾನರ್ ಇದೆ. ಹೀಗಿರುವಾಗ ಶೇಕಡ 1% ಜಿಎಸ್ಟಿ ಗೋಸ್ಕರ ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳ ರಕ್ತ ಹೀರಲು ಹೋಗಬಾರದು. ರಾಜ್ಯ ಸರ್ಕಾರ ಈಗಾಗಲೇ ಬಿಟ್ಟಿ ಭಾಗ್ಯಗಳಿಗಾಗಿ ಎಲ್ಲಾ ವಸ್ತುಗಳ ಬೆಲೆ ಮತ್ತು ತೆರಿಗೆಗಳನ್ನು ಏರಿಸಿ, ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ ಈಗ ಸಣ್ಣ ವ್ಯಾಪಾರಿಗಳ ಮೇಲೂ ಕಣ್ಣಿಟ್ಟಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಯು, ಊಟಕ್ಕೂ ಪರದಾಡುವ ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೀಡಿರುವುದು ಸರಿಯಲ್ಲ. ಕೂಡಲೇ ಈ ಆದೇಶವನ್ನು ಮುಖ್ಯಮಂತ್ರಿಗಳು ಹಿಂಪಡೆದು ಸಣ್ಣ ವ್ಯಾಪಾರಿಗಳಿಗೆ ರಕ್ಷಣೆ ನೀಡಬೇಕು ಮತ್ತೆ ಯುಪಿಐ ವಹಿವಾಟುಗಳು ಸರಾಗವಾಗಿ ನಡೆಯುವಂತೆ ಸಹಕರಿಸಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಪ್ರಭುಶಂಕರ, ಗೋಲ್ಡನ್ ಸುರೇಶ್, ಸಿಂದುವಳ್ಳಿ ಶಿವಕುಮಾರ್, ಸುಬ್ಬೇಗೌಡ, ಬಸವರಾಜು, ಹೊನ್ನೇಗೌಡ, ಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನೇಹಾ, ಡಾ. ಶಾಂತರಾಜೇ ಅರಸ್, ಆನಂದ್ ಗೌಡ, ಭಾಗ್ಯಮ್ಮ ಹನುಮಂತಯ್ಯ, ತಾಯೂರು ಗಣೇಶ್, ಪ್ರದೀಪ್, ಪದ್ಮ, ರಾಧಾಕೃಷ್ಣ, ಎಳನೀರು ರಾಮಣ್ಣ, ರಘು ಅರಸ್, ದರ್ಶನ್ ಗೌಡ, ಚಂದ್ರಶೇಖರ್, ಕುಮಾರ್, ಸ್ವಾಮಿ ಗೌಡ, ಮೂರ್ತಿ ಲಿಂಗಯ್ಯ, ಗಣೇಶ್ ಪ್ರಸಾದ್, ರವೀಶ್, ವಿಷ್ಣು ಮುಂತಾದವರು ಪಾಲ್ಗೊಂಡಿದ್ದರು.

ಸಣ್ಣ ವ್ಯಾಪಾರಿಗಳಿಗೆ ಜಿ ಎಸ್ ಟಿ:ಸರ್ಕಾರದ ವಿರುದ್ಧ ‌ಕರ್ನಾಟಕ ಸೇನಾಪಡೆ ಪ್ರತಿಭಟನೆ Read More

ನಿಜವಾದ ಪ್ರಜಾಪ್ರಭುತ್ವ ಇದ್ದದ್ದು ಮಹಾರಾಜರ ಆಳ್ವಿಕೆಯಲ್ಲಿ:ಸಿ.ಎನ್.ಮಂಜೇಗೌಡ

ಮೈಸೂರು: ನಿಜವಾದ ಪ್ರಜಾಪ್ರಭುತ್ವ ಇದ್ದದ್ದು ಮಹಾರಾಜರ ಆಳ್ವಿಕೆಯಲ್ಲಿ, ಅದರಲ್ಲೂ ವಿಶೇಷವಾಗಿ ಮೈಸೂರು ಸಂಸ್ಥಾನ ಆಳಿದ ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌರು ಬಣ್ಣಿಸಿದರು.

ಕರ್ನಾಟಕ ಸೇನಾ ಪಡೆ ವತಿಯಿಂದ ಮಹಾರಾಜ ಕಾಲೇಜು‌ ಆವರಣದಲ್ಲಿ ಸಾಂಸ್ಕೃತಿಕ ಲೋಕಕ್ಕೆ ಅಪೂರ್ವ ಕೊಡುಗೆ ನೀಡಿದ ಮೈಸೂರು ರಾಜ್ಯವನ್ನಾಳಿದ ಮಹಾಪ್ರಭು ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 231ನೇ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಂಜೇಗೌಡರು ಮಾತನಾಡಿದರು.

ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಅಕ್ಷರಶಃ ಪ್ರಜಾಪ್ರಭುತ್ವವೇ ಮೆರೆದಿತ್ತು. ಹಾಗಾಗಿ ಇಡೀ ರಾಜ್ಯಕ್ಕೆ ಬೆಳಕನ್ನು ನೀಡಿದ ನಮ್ಮ ರಾಜರುಗಳು ಅವಿಸ್ಮರಣೀಯರು ಎಂದು ಹೇಳಿದರು.

ಕಲೆ ಸಾಹಿತ್ಯ ಸಂಗೀತಕ್ಕೆ ಒತ್ತು ನೀಡಿದ್ದರು‌ ಸ್ವತಹ ಕವಿಗಳಾಗಿದ್ದ ಮುಮ್ಮಡಿ ಅವರು, ಸುಮಾರು 54 ಕೃತಿಗಳನ್ನು ರಚಿಸಿದ್ದಾರೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹಿಂದುಳಿದವರಿಗೆ, ಮಹಿಳೆಯರಿಗೂ ಶಿಕ್ಷಣ ನೀಡಿದ್ದರು. ಆಧುನಿಕ ಮೈಸೂರಿನ ರೂವಾರಿಗಳು. ಹಾಗಾಗಿ ನಮ್ಮ ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರು ಯಾವತ್ತೂ ಕೂಡ ಅವಿಸ್ಮರಣೆಯರು ಎಂದು ಮಂಜೇಗೌಡರು ತಿಳಿಸಿದರು.

ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ, ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಮೈಸೂರು ರಾಜ್ಯಕ್ಕೆ ಅಪಾರ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮೈಸೂರು ನಾಡನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ನುಡಿದರು.

ಮೈಸೂರಿನ ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು ಸೇರಿದಂತೆ ಹಲವಾರು ಸಂಸ್ಥೆಗಳನ್ನು ಸ್ಥಾಪನೆ ಮಾಡಿದ ಇಂತಹ ಮಹನೀಯರ ಜಯಂತಿಯನ್ನು ಸರ್ಕಾರ – ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷ ಆಚರಣೆ ಮಾಡಬೇಕು ಹಾಗೂ ಇವರ ಜೀವನ ಚರಿತ್ರೆ, ಕೊಡುಗೆ ಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಬೇಕು ಎಂದು ತೇಜೇಶ್ ಲೋಕೇಶ್ ಗೌಡ ಆಗ್ರಸಿದರು.

ಹಿರಿಯ ಸಂಸ್ಕೃತಿ ಪೋಷಕರಾದ ಡಾ . ರಘುರಾಂ ಕೆ ವಾಜಪೇಯಿ ಅವರು ಜನತೆಗೆ ಸಿಹಿ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಧ್ಯಾ ಸುರಕ್ಷಾ ಟ್ರಸ್ಟ್ ಅಧ್ಯಕ್ಷ ಡಾ. ಬಿ ಆರ್ ನಟರಾಜ್ ಜೋಯ್ಸ್, ಕೆ ಪಿ ಸಿ ಸಿ ಸದಸ್ಯ ನಜರ್ ಬಾದ್ ನಟರಾಜ್, ಮಹಾರಾಜ ಕಾಲೇಜು ಪ್ರಾಂಶುಪಾಲ ಉದಯಶಂಕರ್, ಗೋಲ್ಡನ್ ಸುರೇಶ್, ಗಿರೀಶ್ ಕುಮಾರ್, ಪ್ರಭುಶಂಕರ್, ಸಿಂದುವಳ್ಳಿ ಶಿವಕುಮಾರ್, ಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ಭಾಗ್ಯಮ್ಮ, ಹನುಮಂತಯ್ಯ, ಮಾದರಾಜೇ ಅರಸ್, ಕೃಷ್ಣಪ್ಪ,ತಾಯೂರು ಗಣೇಶ್, ರಾಧಾಕೃಷ್ಣ, ಡಾ . ಶಾಂತರಾಜೇ ಅರಸ್, ರಘು ಅರಸ್, ಗಣೇಶ್ ಪ್ರಸಾದ್, ಚಂದ್ರು, ರಾಧಾಕೃಷ್ಣ, ಸಂಜಯ್, ರವಿ ನಾಯಕ್, ನಾಗರಾಜು, ರವೀಶ್, ವಿಷ್ಣು ಮತ್ತಿತರರು ಪಾಲ್ಗೊಂಡಿದ್ದರು.

ನಿಜವಾದ ಪ್ರಜಾಪ್ರಭುತ್ವ ಇದ್ದದ್ದು ಮಹಾರಾಜರ ಆಳ್ವಿಕೆಯಲ್ಲಿ:ಸಿ.ಎನ್.ಮಂಜೇಗೌಡ Read More

ಕೆಂಪೇಗೌಡರ ಕೊಡುಗೆ ರಾಜ್ಯಕ್ಕೆ ದೇಶಕ್ಕೆ ಅಪಾರ-ಸಿ. ಎನ್ ಮಂಜೇಗೌಡ

ಮೈಸೂರು: ಕೆಂಪೇಗೌಡರ ಕೊಡುಗೆ ರಾಜ್ಯಕ್ಕೆ ದೇಶಕ್ಕೆ ಅಪಾರ ಎಂದು ವಿಧಾನ ಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ ತಿಳಿಸಿದರು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಹಮ್ಮಿಕೊಂಡಿದ್ದ ನಾಡು ಕಟ್ಟಿದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ವೇಳೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಕೆಂಪೇಗೌಡರು ಆಗಿನ ಕಾಲದಲ್ಲಿಯೇ ಎಲ್ಲಾ ವರ್ಗದ ಜನರಿಗೆ ಅವರವರ ಕಸುಬುಗಳಿಗೆ ತಕ್ಕಂತೆ ಬಳೆಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ದೊಡ್ಡಪೇಟೆ, ಅಕ್ಕಿಪೇಟೆ, ಮುಸ್ಲಿಮರಿಗೆ ಸುಲ್ತಾನ್ ಪೇಟೆ ಈ ರೀತಿ ಎಲ್ಲಾ ಸಮುದಾಯವರಿಗೂ ಸುಮಾರು 64 ಕ್ಕೂ ಹೆಚ್ಚು ಪೇಟೆಗಳನ್ನು ನಿರ್ಮಿಸಿ ಕೊಟ್ಟರು. ಈಗ ನಾವೆಲ್ಲ ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಜನರ, ಬಡವರ ಪರವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಸೇನಾ ಪಡೆ ತೇಜೇಶ್ ಲೋಕೇಶ್ ಗೌಡ ಮಾತನಾಡಿ, ನಮ್ಮ ರಾಜ್ಯ ದೇಶವನ್ನಾಳಿದ ಹಲವಾರು ನಾಯಕರುಗಳಲ್ಲಿ ಮಹಾರಾಜರಗಳು, ಸುಲ್ತಾನರು, ಮೊಘಲರು ಇವರೆಲ್ಲರುಗಳಲ್ಲಿ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವವುಳ್ಳ, ಜನಪರ ಕಾಳಜಿ ಉಳ್ಳ ಮಹಾನ್ ವ್ಯಕ್ತಿ ನಾಡಪ್ರಭು ಕೆಂಪೇಗೌಡರು ಎಂದು ಬಣ್ಣಿಸಿದರು.

ಎಲ್ಲಾ ವರ್ಗದವರನ್ನು ಸಮನಾಗಿ ಕಂಡು ಬೆಂಗಳೂರು ಸುತ್ತಮುತ್ತ ಸಾವಿರಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದರು ಎಂದು ಹೇಳಿದರು.

ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿ ಅವರು ಕೋಟೆಯ ದಿಡ್ಡಿ ಬಾಗಿಲು ನಿಲ್ಲದಾಗ ತಾವೇ ಆಹುತಿ ಆಗಿ ತಮ್ಮ ಜೀವವನ್ನು ಅರ್ಪಿಸಿಕೊಂಡರು,ಅಂತಹ ವ್ಯಕ್ತಿತ್ವ ಕೆಂಪೇಗೌಡರ ಕುಟುಂಬದ್ದು. ಇಂತಹ ಮಹನೀಯರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೆರದಿದ್ದವರಿಗೆ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜಿ ಗಂಗಾಧರ್ ಅವರು ಸಿಹಿ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಲಕ್ಷ್ಮೀದೇವಿ, ಚೇತನ್ ಪ್ರಭುಶಂಕರ್, ಶಾಂತರಾಜೇಅರಸ್, ಹನುಮಂತಯ್ಯ, ಭಾಗ್ಯಮ್ಮ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ಶಿವಲಿಂಗಯ್ಯ, ಸುಶೀಲ ನಂಜಪ್ಪ, ಗುರುರಾಜ್, ಕೃಷ್ಣೇಗೌಡ , ಕುಮಾರ್, ದರ್ಶನ್ ಗೌಡ, ನಂದಕುಮಾರ್, ಗಣೇಶ್ ಪ್ರಸಾದ್, ಪ್ರಭಾಕರ, ರಘು ಅರಸ್, ರವಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಕೆಂಪೇಗೌಡರ ಕೊಡುಗೆ ರಾಜ್ಯಕ್ಕೆ ದೇಶಕ್ಕೆ ಅಪಾರ-ಸಿ. ಎನ್ ಮಂಜೇಗೌಡ Read More

ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ನಿಯಮ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಮೈಸೂರು,ಮಾ.5: ರಾಜ್ಯ ಸರ್ಕಾರ ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯ ನಿಯಮವನ್ನು ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ‌
ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿತು.

ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ,ರಾಜ್ಯಪಾಲರು,ಕೃಷಿ ಮಾತುಕಟ್ಟೆ ಸಚಿವರು,ಮುಖ್ಯ ಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ರವಾನಿಸಲಾಯಿತು.

ಈ‌ ವೇಳೆ‌ ತೇಜೇಶ್ ಲೋಕೇಶ್ ಗೌಡ ಮಾತನಾಡಿ, 1965-66ರ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯ ನಿಯಮವನ್ನು ಪ್ರಸ್ತುತ ಅಧಿವೇಶನದಲ್ಲಿ ತರಾತುರಿಯಲ್ಲಿ ತಿದ್ದುಪಡಿ ಮಾಡಲು ಹೊರಟಿರುವುದನ್ನು ಖಂಡಿಸುತ್ತೇವೆ ಎಂದು ಹೇಳಿದರು.

ರೈತರಿಗೆ ಹಾಗೂ ಸಗಟು ಮಾರಾಟಗಾರರಿಗೆ ಅನುಕೂಲವಾಗಿರುವ ಪ್ರಸ್ತುತ ಚಾಲ್ತಿಯಲ್ಲಿರುವ ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ತಿದ್ದುಪಡಿ ಮಾಡಬಾರದೆಂದು ಒತ್ತಾಯಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇರುವುದು ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗಲಿ ಹಾಗೂ ಸಗಟು ಅಂದರೆ ಹೋಲ್ ಸೇಲ್ ಮಾರಾಟಗಾರರಿಗೆ, ಅದರಲ್ಲೂ ವಿಶೇಷವಾಗಿ, ರೈತರು ತಾವು ಬೆಳೆದ ಬೆಳೆಗಳನ್ನು ನೇರವಾಗಿ ತಂದು ಇಲ್ಲಿ ಸಗಟು ಮಾರಾಟ ಮಾಡಲು.ಆದರೆ ಇಲ್ಲಿ ತಂಬಾಕು ಉತ್ಪನ್ನ ಗಳು, ಕೊಕೊಕೋಲಾ ಮತ್ತಿತರ ಕೂಲ್ ಡ್ರಿಂಕ್ಸ್ ಮಾರಾಟ ಮಾಡಲಾಗುತ್ತಿದೆ.ಇದರಿಂದ ರೈತರಿಗೆ ಅನ್ಯಾಯ ಆಗುತ್ತಿದೆ ಎಂದು ದೂರಿದರು.

ಆದರೆ ಈಗ ನಿವೇಶನ ಪಡೆದ ವ್ಯಾಪಾರಿಗಳು ಎಪಿಎಂಸಿ ಇಲಾಖೆಯ ನಕ್ಷೆ ,ಪ್ಲಾನ್, ಕಾಯ್ದೆ, ನಿಯಮದ ಆಶೋತ್ತರಗಳಿಗೆ ವಿರುದ್ಧವಾಗಿ, ನಿವೇಶನವನ್ನು ಹಲವಾರು ಭಾಗಗಳನ್ನಾಗಿ ವಿಂಗಡಿಸಿ, ಮಳಿಗೆಗಳನ್ನು ನಿರ್ಮಿಸಿ ಅಧಿಸೂಚಿತವಲ್ಲದ ವ್ಯಾಪಾರ ವಹಿವಾಟು ನಡೆಸಲು, ಕಾನೂನು ಬಾಹಿರವಾಗಿ ಬಾಡಿಗೆಗೆ ನೀಡಿರುವುದು ಕಂಡುಬಂದಿದೆ ಎಂದು ಹೇಳಿದರು.

ಎಪಿಎಂಸಿ ಲೈಸೆನ್ಸ್ ಹೊಂದಿರುವ ವ್ಯಾಪಾರಿಯು ಸತತವಾಗಿ ಮೂರು ವರ್ಷ ಗಳು ವ್ಯಾಪಾರ, ವಹಿವಾಟು ನಡೆಸದೆ ಹಾಗೂ ಆರ್‌ಎಂಸಿ ಶುಲ್ಕ (ಸೆಸ್) ಪಾವತಿಸದೆ ಇದ್ದಲ್ಲಿ, ಎಪಿಎಂಸಿಯು ವ್ಯಾಪಾರಿಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಿ ನಿವೇಶನದಲ್ಲಿ ನಿರ್ಮಿಸಿರುವ ಕಟ್ಟಡವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಪೂರ್ಣ ಅಧಿಕಾರ ಹೊಂದಿದೆ ಎಂದು ಗುತ್ತಿಗೆಯ ಕರಾರು ಒಪ್ಪಂದ ಪತ್ರದಲ್ಲಿ ತಿಳಿಸಿರುತ್ತದೆ.

ಮೈಸೂರಿನ ಸ್ಥಳೀಯ ರೈತರ ಭೂಮಿಯನ್ನು ವಶಪಡಿಸಿಕೊಂಡು ಇಲ್ಲಿ ಎಪಿಎಂಸಿ ಮಾರುಕಟ್ಟೆ ಸ್ಥಾಪನೆಯಾಗಿದೆ. ಈಗ ನೋಡಿದರೆ ಸ್ಥಳೀಯ ಸಗಟು ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ನಿವೇಶನವನ್ನು ಮಂಜೂರು ಮಾಡದೆ, ಲಕ್ಷಾಂತರ ರೂ ಲಂಚ ನೀಡಿರುವ ಹಾಗೂ ಜ್ಯೇಷ್ಠತೆ ಹೊಂದಿಲ್ಲದವರಿಗೆ ಅಕ್ರಮವಾಗಿ, ಚಿಲ್ಲರೆ ದಿನಸಿ ವ್ಯಾಪಾರಿಗಳಿಗೆ, ತಂಬಾಕು ಉತ್ಪನ್ನ ವ್ಯಾಪಾರಿಗಳಿಗೆ, ಪ್ಲಾಸ್ಟಿಕ್ ವ್ಯಾಪಾರಿಗಳಿಗೆ, ಕಬ್ಬಿಣದ ವ್ಯಾಪಾರಿಗಳಿಗೆ, ತಂಪು ಪಾನೀಯ ವ್ಯಾಪಾರಿಗಳಿಗೆ ಹಾಗೂ ಇನ್ನಿತರ ಎಪಿಎಂಸಿ ಕಾಯ್ದೆಯ ವ್ಯಾಪ್ತಿಗೆ ಒಳಪಡದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ತೇಜೇಶ್ ದೂರಿದರು.

ರಾಜ್ಯ ಸರ್ಕಾರ ಈ ಅಕ್ರಮಗಳನ್ನು ಮುಚ್ಚಿ ಹಾಕಲು ಎಪಿಎಂಸಿಯಲ್ಲಿ ಈಗ ಚಿಲ್ಲರೆ ವ್ಯಾಪಾರಿಗಳಿಗೂ ವ್ಯಾಪಾರ ಮಾಡಲು ಅವಕಾಶ ಕುರಿತು ಕಾಯ್ದೆಯನ್ನೇ ತಿದ್ದುಪಡಿ ಮಾಡಲು ಹೊರಟಿದೆ.ಹಾಗೊಂದು ವೇಳೆ ತಿದ್ದುಪಡಿ ಮಾಡಿದರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದಯಾನಂದ್ ಎಂ ವಿ, ರಾಜ್ಯ ರೈತಸಂಘದ ವರಕೂಡು ಕೃಷ್ಣೇಗೌಡ, ಸಿಂದುವಳ್ಳಿ ಶಿವಕುಮಾರ್, ಹನುಮಂತಯ್ಯ ಶಿವರಾಂ ಗೌಡ, ನಾಗರಾಜು, ಕೃಷ್ಣಪ್ಪ, ರವೀಶ್ ಮತ್ತಿತರರು ಪಾಲ್ಗೊಂಡಿದ್ದರು.

ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ನಿಯಮ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ Read More

ಎಂಇಎಸ್ ಪುಂಡರ ದೌರ್ಜನ್ಯ ಖಂಡಿಸಿಕರ್ನಾಟಕ ಸೇನಾ ಪಡೆ ಪ್ರತಿಭಟನೆ

ಮೈಸೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರು, ಕೆಎಸ್ಆರ್ಟಿಸಿ ಬಸ್ ಗಳು ನಿರ್ವಾಹಕ, ಚಾಲಕರುಗಳಿಗೆ ಕಪ್ಪು ಮಸಿ ಬಳಿದು ದೌರ್ಜನ್ಯ ಎಸಗುತ್ತಿರುವುದು ಸರಿಯಲ್ಲ ಎಂದು ಕರ್ನಾಟಕ ಸೇನಾ ಪಡೆ ಆಕ್ರೋಶ‌ ವ್ಯಕ್ತಪಡಿಸಿದೆ.

ಕರ್ನಾಟಕ ಸೇನಾ ಪಡೆ ಎಂಇಎಸ್ ಪುಂಡರ‌ ದೌರ್ಜನ್ಯ ಖಂಡಿಸಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿತು.

ದಿನೇ ದಿನೇ ಬೆಳಗಾವಿಯಲ್ಲಿ ಎಂಇಎಸ್ ನವರ ದಬ್ಬಾಳಿಕೆ ಹೆಚ್ಚಾಗಿದ್ದು, ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ತದನಂತರ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವುದು ಅತ್ಯಂತ ಖಂಡನೀಯ. ಇದನ್ನು ಕರ್ನಾಟಕ ಸೇನಾ ಪಡೆ ಅತ್ಯಂತ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಹೇಳಿದರು.

ನಾವು ಕನ್ನಡಿಗರು ಶಾಂತಿ ಪ್ರಿಯರು, ಎಲ್ಲಾ ರಾಜ್ಯದ ಜನರನ್ನು ಗೌರವಿಸಿ,ನಮ್ಮ ರಾಜ್ಯದಲ್ಲಿ ಜಾಗ ನೀಡಿದ್ದೇವೆ. ನಮ್ಮ ಸಹನೆ, ಶಾಂತಿಯನ್ನು ಕೆಣಕಬೇಡಿ ಎಂದು ಮರಾಠಿಗರಿಗೆ ಕಠಿಣ ಎಚ್ಚರಿಕೆ ನೀಡಿದರು.

ರಾಜ್ಯದ ಗಡಿಯಲ್ಲಿ ಸೌಹಾರ್ದತೆ ಹಾಳು ಮಾಡಿ, ಎರಡು ರಾಜ್ಯಗಳ ನಡುವೆ ಅಶಾಂತಿ ಉಂಟು ಮಾಡುತ್ತಿರುವ ಈ ಎಂಇಎಸ್ ಸಂಘಟನೆಯನ್ನು ಸರ್ಕಾರ ಈ ಕೂಡಲೇ ಬ್ಯಾನ್ ಮಾಡಬೇಕು. ಹಾಗೂ ಕಾನೂನು ವ್ಯವಸ್ಥೆಗೆ ಭಂಗ ತರುತ್ತಿರುವ ಇವರುಗಳ ವಿರುದ್ಧ ಗೃಹ ಸಚಿವರು ಸೂಕ್ತ ಕ್ರಮ ಕೈಗೊಂಡು ಇದಕ್ಕೆ ಶಾಶ್ವತವಾಗಿ ಅಂತ್ಯ ಹಾಡಬೇಕು ಹಾಗೂ ಕನ್ನಡ ನಾಡು, ನುಡಿ, ಸಂಸ್ಕೃತಿ ಭಾಷೆ ಬಗ್ಗೆ ಅಭಿಮಾನವಿಲ್ಲದ ಹೊರ ರಾಜ್ಯಗಳ ಐಎಎಸ್, ಐಪಿಎಸ್ ಅಧಿಕಾರಿಗಳ ಬದಲು ನಮ್ಮ ಕನ್ನಡ ನಾಡಿನ ಅಧಿಕಾರಿಗಳನ್ನು ಗಡಿ ಜಿಲ್ಲೆಗಳಿಗೆ ನೇಮಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಯಾವೊಬ್ಬ ಚುನಾಯಿತ ಪ್ರತಿನಿಧಿಗಳು, ಬೆಳಗಾವಿ ಸಚಿವರು ಕಂಡಕ್ಟರ್ ಹಾಗೂ ಕನ್ನಡಿಗರ ಪರವಾಗಿ ಮಾತನಾಡದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಕನ್ನಡಿಗರನ್ನು ನಿರ್ಲಕ್ಷಿಸುವ ರಾಜಕಾರಣಿಗಳು ಮುಂಬರುವ ಚುನಾವಣೆಗಳಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಕೂಡಲೇ ಮರಾಠಿಗಳ ಪುಂಡಾಟಿಕೆ ಅಟ್ಟಹಾಸಕ್ಕೆ ಬ್ರೇಕ್ ಕಾಕಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಿ, ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲಿನ ದಾಳಿಯನ್ನು ಸಮಗ್ರವಾಗಿ ತನಿಖೆಗೆ ಒಳಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡಬೇಕೆಂದು ಆಗ್ರಹಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.ಪ್ರಭು ಶಂಕರ್, ಕೃಷ್ಣಪ್ಪ, ಪ್ರಜೀಶ್, ಕುಮಾರ್ ಗೌಡ, ಬೋಗಾದಿ ಸಿದ್ದೇಗೌಡ, ಶಿವಲಿಂಗಯ್ಯ, ಮಧುವನ ಚಂದ್ರು, ವರಕೂಡು ಕೃಷ್ಣೇಗೌಡ, ಸಿಂಧುವಳ್ಳಿ ಶಿವಕುಮಾರ್, ನಾಗರಾಜು, ನೇಹಾ, ಅಂಬಾ ಅರಸ್, ಭಾಗ್ಯಮ್ಮ, ಡಾ. ಶಾಂತರಾಜೇ ಅರಸು, ನಾರಾಯಣಗೌಡ, ಸುನಿಲ್ ಅಗರ್ವಾಲ್, ಆನಂದ್ ಗೌಡ, ರಘು ಅರಸ್, ಬಸವರಾಜು, ಪರಿಸರ ಚಂದ್ರು, ಪ್ರದೀಪ್, ದರ್ಶನ್ ಗೌಡ, ಪ್ರಭಾಕರ್, ರಘು, ಹನುಮಂತೇಗೌಡ, ಶಿವರಾಂ ಗೌಡ, ಗಣೇಶ್ ಪ್ರಸಾದ್, ರಾಮಕೃಷ್ಣೇಗೌಡ, ಸ್ವಾಮಿ ಗೌಡ, ಅಕ್ಬರ್, ವಿಷ್ಣು ಮತ್ತಿತರರು ಪಾಲ್ಗೊಂಡಿದ್ದರು.

ಎಂಇಎಸ್ ಪುಂಡರ ದೌರ್ಜನ್ಯ ಖಂಡಿಸಿಕರ್ನಾಟಕ ಸೇನಾ ಪಡೆ ಪ್ರತಿಭಟನೆ Read More

ದೇಶ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಕೆಂಗಲ ಹನುಮಂತಯ್ಯ:ಶ್ರೀವತ್ಸ

ಮೈಸೂರು: ಕೆಂಗಲ್ ಹನುಮಂತಯ್ಯ ನವವರು ನಾಡು, ದೇಶ ಕಂಡ ಶ್ರೇಷ್ಠ ಅಪರೂಪದ ಮುತ್ಸದ್ದಿ ರಾಜಕಾರಣಿ ಎಂದು ಶಾಸಕ ಟಿ.ಎಸ್.‌ಶ್ರೀವತ್ಸ ಬಣ್ಣಿಸಿದರು.

ಕರ್ನಾಟಕ ಸೇನಾ ಪಡೆ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸ್ವತಂತ್ರ ಭಾರತದ ಮುತ್ಸದ್ದಿ, ಧೀಮಂತ ರಾಜಕಾರಣಿ, ಕರ್ನಾಟಕ ಏಕೀಕರಣದ ರೂವಾರಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ 117 ನೇ ಜಯಂತಿ ಕಾರ್ಯಕ್ರಮದಲ್ಲಿ ಕೆಂಗಲ್ ಹನುಮಂತಯ್ಯ ನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕರ್ನಾಟಕದ ಏಕೀಕರಣವು ಕೆಂಗಲ್ಲರ ಮಹಾನ್ ಸಾಧನೆ,ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದೇ ರಾಜ್ಯವಾಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ನುಡಿದರು.

ಅವರು ವಿಧಾನ ಸೌಧ ನಿರ್ಮಾಣ ಮಾಡಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಾಮಫಲಕ ಹಾಕಿದ್ದರು. ಕೇಂದ್ರ ರೈಲ್ವೆ ಮಂತ್ರಿಗಳಾಗಿಯೂ ಸಹ ಕರ್ನಾಟಕಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲಾ ರಾಜಕಾರಣಿಗಳೂ ನಾವೆಲ್ಲರೂ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿ ಕೊಳ್ಳಬೇಕು, ಇಂತಹ ಮಹನೀಯರ ಜಯಂತಿ ಆಚರಣೆ ಶ್ಲಾಘನೀಯ ಎಂದು ಶ್ರೀವತ್ಸ ತಿಳಿಸಿದರು.

ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ ಆಗಿನ ಹಳೇ ಮೈಸೂರು ರಾಜ್ಯ ಒಕ್ಕಲಿಗರ ಪ್ರಾಬಲ್ಯ ಹೊಂದಿತ್ತು. ಏಕೀಕರಣ ಆದರೆ ಒಕ್ಕಲಿಗರ ಪ್ರಾಬಲ್ಯ ಹಾಗೂ ಮುಖ್ಯ ಮಂತ್ರಿ ಪದವಿ ಹೋಗುತ್ತದೆ ಎಂದು ಎಲ್ಲಾ ಮುಖಂಡರು ಹೇಳಿ ವಿರೋಧ ಮಾಡಿದರೂ ಕೆಂಗಲ್ ಹನುಮಂತಯ್ಯನವರು ಅದ್ಯಾವುದಕ್ಕೂ ಮಣಿಯದೆ ಅಖಂಡ ಕರ್ನಾಟಕ ಆಗಲೇಬೇಕು ಎಂದು ಏಕೀಕರಣ ಬೆಂಬಲಿಸಿ ತಮ್ಮ ಮುಖ್ಯಮಂತ್ರಿ ಪದವಿ ಯನ್ನೇ ಕಳೆದುಕೊಂಡ ಮಹಾನ್ ನಾಯಕ ಎಂದು ಕೊಂಡಾಡಿದರು.

ನಮ್ಮ ಭಾರತದಲ್ಲೇ ಎಲ್ಲೂ ಇಲ್ಲದಂತ ವಿಶ್ವ ಪ್ರಸಿದ್ಧ ವಿಧಾನ ಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಹುಟ್ಟು ಹಬ್ಬವನ್ನು ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಆಚರಣೆ ಮಾಡಬೇಕೆಂದು ಒತ್ತಾಯಿಸಿದರು.

ನೆರೆದಿದ್ದ ಜನರಿಗೆ ಹಿರಿಯ ಸಂಸ್ಕೃತಿ ಪೋಷಕರಾದ ಡಾ.ರಘುರಾಂ ಕೆ ವಾಜಪೇಯಿ ಅವರು ಸಿಹಿ ವಿತರಿಸಿದರು.

ನಂತರ ಮಾತನಾಡಿದ ಅವರು ಕೆಂಗಲ್ ಹನುಮಂತಯ್ಯ ಅವರು ದೇಶ ಕಂಡ ಪ್ರಾಮಾಣಿಕ ರಾಜಕಾರಣಿ, ಭವ್ಯವಾದ ವಿಧಾನಸೌಧವನ್ನು ಕಟ್ಟುವಾಗ ಕಟ್ಟಡದ ಇಂಜಿನಿಯರ್ ನ್ನು ಕೆಂಗಲ್ ಹನುಮಂತಯ್ಯನ ಸನ್ನಿಧಾನಕ್ಕೆ ಕರೆಸಿ ಹಾಲಿನ ಅಭಿಷೇಕ ಮಾಡಿಸಿ, ಆ ಹಾಲಿನ ಮೇಲೆ ಕೈ ಇಡಿಸಿ ನಾನು ಈ ವಿಧಾನಸೌಧವನ್ನು ಕಟ್ಟುವಾಗ ಪ್ರಾಮಾಣಿಕವಾಗಿ ಕಟ್ಟುತ್ತೇನೆ ಒಂದು ಪೈಸೆ ಹಣ ಮುಟ್ಟುವುದಿಲ್ಲ ಎಂದು ಪ್ರಮಾಣ ಮಾಡಿಸಿ ವಿಧಾನ ಸೌಧ ಕಟ್ಟಿಸಿದ ಮಹಾನ್ ಪುರುಷರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಗೋವಿಂದೇಗೌಡ, ಸಿ ಹೆಚ್ ಕೃಷ್ಣಯ್ಯ, ಪ್ರಭುಶಂಕರ್, ಶಿವಲಿಂಗಯ್ಯ, ನೇಹಾ, ವಿಜಯೇಂದ್ರ, ರಾಮಣ್ಣ, ಪ್ರಭಾಕರ, ಮೊಗಣ್ಣಾಚಾರ್, ಕುಮಾರ್ ಗೌಡ, ಸುಬ್ಬೇಗೌಡ, ಮಹದೇವಸ್ವಾಮಿ, ದರ್ಶನ್ ಗೌಡ, ಪದ್ಮ, ಸಿಂದುವಳ್ಳಿ ಶಿವಕುಮಾರ್, ಅಕ್ಬರ್, ರಾಮಕೃಷ್ಣೇಗೌಡ, ಲಕ್ಷ್ಮೇ ಗೌಡ, ಹನುಮಂತಯ್ಯ, ಜ್ಯೋತಿ, ಬಸವರಾಜು, ಗಣೇಶ್ ಪ್ರಸಾದ್, ವಿಷ್ಣು ಮುಂತಾದವರು ಉಪಸ್ಥಿತರಿದ್ದರು.

ದೇಶ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಕೆಂಗಲ ಹನುಮಂತಯ್ಯ:ಶ್ರೀವತ್ಸ Read More