ಪಹಲ್ಗಾಮ್ ಪ್ರವಾಸಿಗರ ಬಲಿ ಪಡೆದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಮಂದಿ ಪ್ರವಾಸಿಗರನ್ನು ಬಲಿ ತೆಗೆದುಕೊಂಡಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಬಂಧಿಸಲಾಗಿದೆ.

ಇವರಿಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು.

ತನಿಖೆ ವೇಳೆ, ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ.

ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಏಪ್ರಿಲ್ 22 ರಂದು, ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದಿದ್ದರು.

ಪಹಲ್ಗಾಮ್ ಪ್ರವಾಸಿಗರ ಬಲಿ ಪಡೆದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್ Read More

ಐಇಡಿ ಸ್ಪೋಟ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಸ್ಪೋಟಿಸಿದ ಐಇಡಿ ಯಿಂದಾಗಿ,ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಅಖ್ನೂರ್ ಸೆಕ್ಟರ್‌ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿ ಸೇನಾ ಕ್ಯಾಪ್ಟನ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ದಕ್ಕೂ ಉಗ್ರರು ಮಂಗಳವಾರ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಿಸಿದ್ದಾರೆ.

ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಪ್ರದೇಶಕ್ಕೆ ರವಾನಿಸಲಾಗಿದ್ದು, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆ ತಿಳಿಸಿದೆ.

ಐಇಡಿ ಸ್ಪೋಟ ಇಬ್ಬರು ಯೋಧರು ಹುತಾತ್ಮ Read More