ಡಾ ಜಾನಪದ ಎಸ್ ಬಾಲಾಜಿ ಅವರಿಗೆಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಯನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಭಾರತ ಸರ್ಕಾರದ ಐಸಿಸಿ ಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ಅವರಿಗೆ ನೀಡಿ‌ಗೌರವಿಸಲಾಯಿತು.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕನ್ನಡ ಸಂಘದ ವತಿಯಿಂದ ಡಾ ಜಾನಪದ ಎಸ್ ಬಾಲಾಜಿ ಅವರಿಗೆ ಈ ಪ್ರಶಸ್ತಿ ಕೊಡಮಾಡಲಾಯಿತು.

ಮಾಜಿ ಮಹಾಪೌರರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹರೀಶ್, ಟಾಟಾ ಇನ್ಸ್ಟಿಟ್ಯೂಟ್ ವಿಜ್ಞಾನಿ ಶ್ರೀರಾಮಚಂದ್ರ ರಾವ್, ಕನ್ನಡ ಸಂಘದ ಅಧ್ಯಕ್ಷರು ಜಗದೀಶ್, ಹಾಗೂ ಸತೀಶ್ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ಡಾ ಜಾನಪದ ಎಸ್ ಬಾಲಾಜಿ ಅವರಿಗೆಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ Read More

ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಡಾ.ಬಾಲಾಜಿ ಆಯ್ಕೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಗೆ ಕನ್ನಡ ಜಾನಪದ ಪರಿಷತ್ ರಾಜ್ಯ ಅಧ್ಯಕ್ಷರಾದ ಜಾನಪದ ಡಾ.ಎಸ್ ಬಾಲಾಜಿ ಆಯ್ಕೆಯಾಗಿದ್ದಾರೆ‌

ಜಾನಪದ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಸೇವೆಯನ್ನು ಗುರುತಿಸಿ ಬಾಲಾಜಿ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಕನ್ನಡ ಸಂಘ ಆ. 21 ರಂದು ಸಂಜೆ 4 ಗಂಟೆಗೆ ಬೆಂಗಳೂರು ವಿಜ್ಞಾನ ಮಂದಿರದ ಡಾ ಸತೀಶ್ ದಾವನ್ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ನಾಡ ಪ್ರಭು ಕೆಂಪೇಗೌಡರ 516 ನೇ ಜನ್ಮದಿನದ ಪ್ರಯುಕ್ತ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರು ಜಾನಪದ ಎಸ್ ಬಾಲಾಜಿ ಅವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಮಾಹಿತಿಯನ್ನು ಬಾರತೀಯ ವಿಜ್ಞಾನ ಮಂದಿರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಡಿ ವಿ ಸತೀಶ್ ಪ್ರಕಾಟಣೆಯಲ್ಲಿ ತಿಳಿಸಿದ್ದಾರೆ.

ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಡಾ.ಬಾಲಾಜಿ ಆಯ್ಕೆ Read More