ಬಿಗ್ ಬಾಸ್ ಸೀಸನ್ 12 ಕ್ಕೂ ಕಿಚ್ಚನೇ ಆಂಕರ್!

ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12ಕ್ಕೆ ಕೆಲವು ತಿಂಗಳು ಬಾಕಿ ಇರುವಾಗಲೇ ಬಿಗ್‌ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ಅಪ್‌ಡೇಟ್ ಸಿಕ್ಕಿದ್ದು ಅಭಿಮಾನಿಗಳು ಸಕತ್ ಖುಷಿಯಾಗಿದ್ದಾರೆ

ಹೌದು ಇದು ನಿಜ, ಕಿಚ್ಚ ಸುದೀಪ್ ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ನೀಡಿದ್ದಾರೆ.ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್‌ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

11ನೇ ಸೀಸನ್‌ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ನಡೆದವು. ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅಂದಿದ್ದರು. ಇದೀಗ ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಬಿಗ್ ಬಾಸ್ ಸೀಸನ್ 12 ಕ್ಕೂ ಕಿಚ್ಚನೇ ಆಂಕರ್! Read More

ಬಿಗ್ ಬಾಸ್‌ಗೆ ಗುಡ್ ಬೈ ಹೇಳಿದ ಕಿಚ್ಚ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಗುಡ್ ಬೈ ಹೇಳಿದ್ದಾರೆ.

ಈ ಬಗ್ಗೆ ನಟ ಸುದೀಪ್‌ ಅವರೇ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಕಳೆದ 11 ಸೀಸನ್‌ಗಳಿಂದ ನಾನು ಬಿಗ್ ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು, ಮುಂಬರುವ ಫೈನಲ್ ಆತಿಥೇಯನಾಗಿ ನನ್ನ ಕೊನೆಯದು, ಇದು ಮರೆಯಲಾಗದ ಪ್ರಯಾಣ, ಇದನ್ನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ಈ ಅವಕಾಶ ನೀಡಿದ ಕಲರ್ಸ್‌ ಕನ್ನಡಗೆ ಧನ್ಯವಾದಗಳು ಹಾಗೂ ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಅತಿದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್‌ ಬಾಸ್‌ ಕಾರ್ಯಕ್ರಮವನ್ನ ನಟ ಕಿಚ್ಚ ಸುದೀಪ್‌ ಅವರು ನಡೆಸಿಕೊಟ್ಟಿದ್ದಾರೆ, ಬಿಗ್ ಬಾಸ್ ಕನ್ನಡದ ಹೋಸ್ಟ್ ಆಗಿ 11 ಸೀಸನ್​ಗಳನ್ನು ನಡೆಸಿಕೊಟ್ಟಿದ್ದಾರೆ. ಇದು ನನ್ನ ಕೊನೆಯ ಸೀಸನ್ ಎಂದು ಸುದೀಪ್‌ ಈ ಮೊದಲೇ ಹೇಳಿದ್ದರು. ಈಗ ಅವರು ಅಧಿಕೃತವಾಗಿ ಬಿಗ್ ಬಾಸ್ ತೊರೆಯುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ.

ಕಳೆದ ಬಿಗ್‌ ಬಾಸ್ ಸೀಸನ್​ ನಡೆಯುವಾಗ ನನ್ನ ಸಿನಿಮಾದ ಶೂಟಿಂಗ್​‌ ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯುತ್ತಿತ್ತು. ಚೆನ್ನೈನಿಂದ ಅಲ್ಲಿಗೆ ಹೋಗಲು ಒಂದೂವರೆ ಗಂಟೆ ಬೇಕು. ಬೆಂಗಳೂರಿನಿಂದ ನಾನು ಅಲ್ಲಿಗೆ ಹೋಗಿ, ಅಲ್ಲಿ ಶೂಟಿಂಗ್ ಮಾಡಿ, ಮಧ್ಯರಾತ್ರಿ ಶೂಟಿಂಗ್ ಮುಗಿಸಿ, ಖಾಸಗಿ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ಬಂದು ಬಿಗ್ ಬಾಸ್ ಎಪಿಸೋಡ್​ ನೋಡಿ, ವೀಕೆಂಡ್​ ಸಂಚಿಕೆ ಶೂಟ್ ಮಾಡಬೇಕು. ಇದರಿಂದ ನನಗೆ ತುಂಬ ಸುಸ್ತಾಗುತ್ತಿತ್ತು. ನಾನು ಬೆಂಗಳೂರಿನಲ್ಲಿ ಇದ್ದರೆ ಯಾವುದೇ ಸಮಸ್ಯೆ ಇಲ್ಲ. ಬೇರೆ ಕಡೆ ಸಿನಿಮಾ ಶೂಟಿಂಗ್‌ ಇದ್ದಾಗ ಈ ಶೋ ಮಾಡಲು ಕಷ್ಟ ಆಗುತ್ತದೆ ಎಂದು ಖಾಸಗಿ ಸಂದರ್ಶನದಲ್ಲಿ ನಟ ಸುದೀಪ್‌ ಅವರು ತಿಳಿಸಿದ್ದರು.

ಬಿಗ್ ಬಾಸ್‌ಗೆ ಗುಡ್ ಬೈ ಹೇಳಿದ ಕಿಚ್ಚ Read More

ಮ್ಯಾಕ್ಸ್ ಚಿತ್ರ ಯಶಸ್ವಿಯಾಗಲೆಂದು ಡಿ.23 ಸುದೀಪ್ ಅಭಿಮಾನಿಗಳ ಪೂಜೆ

ಮೈಸೂರು: ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿ ಬಳಗದ ವತಿಯಿಂದ
ಸುದೀಪ್ ನಾಯಕನಟನಾಗಿ ಅಭಿನಯಿಸಿರುವ ಮ್ಯಾಕ್ಸ್ ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥಿಸಿ ಗಣಪನಿಗೆ ಪೂಜೆ ಸಲ್ಲಿಸಲಿದ್ದಾರೆ

ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಡಿ 23ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮ್ಯಾಕ್ಸ್ ಚಿತ್ರ ಯಶಸ್ವಿಯಾಗಲೆಂದು
ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.

ಕಿಚ್ಚನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಿಚ್ಚ ಸುದೀಪ್ ಅಭಿಮಾನಿ ಬಳಗದ ಅಧ್ಯಕ್ಷ ಆಲನಹಳ್ಳಿ ಎಂ ಎನ್ ಚೇತನ್ ಗೌಡ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮ್ಯಾಕ್ಸ್ ಚಿತ್ರ ಯಶಸ್ವಿಯಾಗಲೆಂದು ಡಿ.23 ಸುದೀಪ್ ಅಭಿಮಾನಿಗಳ ಪೂಜೆ Read More

ಕಿಚ್ಚ ಸುದೀಪ್ ಹುಟ್ಟುಹಬ್ಬ:ಹಣ್ಣು,ದಿನಸಿ ಸಾಮಗ್ರಿ ವಿತರಣೆ

ಮೈಸೂರು: ಖ್ಯಾತ ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬದ ಅಂಗವಾಗಿ ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಜೆ.ಎಸ್.ಎಸ್. ಸಂಸ್ಥೆಯ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ನಿಲಯದವರಿಗೆ ಹಣ್ಣು, ದಿನಸಿ ಸಾಮಗ್ರಿ ವಿತರಿಸಲಾಯಿತು.

ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ದಿನಸಿ ಸಾಮಗ್ರಿ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್ ಕಾರ್ಯಾದಕ್ಷ ಪ್ರಕಾಶ್ ಪ್ರಿಯದರ್ಶನ್
ಸ್ಯಾಂಡಲ್‌ ವುಡ್ ಅಷ್ಟೇ ಅಲ್ಲದೇ ಬಾಲಿವುಡ್‌ ಸಿನಿಮಾಗಳಲ್ಲೂ ತಮ್ಮ ಅಮೋಘ ಅಭಿನಯದ ಮೂಲಕ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆ ಹಾರಿಸುತ್ತಿರುವ ಕಿಚ್ಚ ಸುದೀಪ್ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ವೇಳೆ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ,ಸುಬ್ರಮಣ್ಯ, ಛಾಯಾ, ಯಶವಂತ್ ಕುಮಾರ್, ವೀರಭದ್ರ ಸ್ವಾಮಿ, ಚಂದ್ರಶೇಖರ್ , ಮಹೇಶ್, ಮಹದೇವ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಿಚ್ಚ ಸುದೀಪ್ ಹುಟ್ಟುಹಬ್ಬ:ಹಣ್ಣು,ದಿನಸಿ ಸಾಮಗ್ರಿ ವಿತರಣೆ Read More