ಹೊದಿಕೆ ವಿತರಣಾ ಅಭಿಯಾನ 6ನೇದಿನಕ್ಕೆ

ಮೈಸೂರು: ಮೈಸೂರಿನ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ
ಚಳಿಗಾಲದ ಹೊದಿಕೆ ವಿತರಣಾ ಅಭಿಯಾನವು 6ನೇದಿನ ಕೂಡಾ ಮುಂದುವರೆಯಿತು.

ಚಾಮರಾಜ ಜೋಡಿ ರಸ್ತೆ, ಅಗ್ರಹಾರ ರಸ್ತೆಯಲ್ಲಿ ರಸ್ತೆ ಬದಿ ಮಲಗಿರುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಯಿತು.
ಹೊದಿಕೆ ವಿತರಣೆ ಕೈಜೋಡಿಸಿದ
ಯುವ ಭಾರತ್ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು,ಬೆಳಕು ಸಂಸ್ಥೆಯ ಅಧ್ಯಕ್ಷರಾದ ಕೆಎಂ ನಿಶಾಂತ್ ಅವರಿಗೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಹೊದಿಕೆ ವಿತರಣಾ ಅಭಿಯಾನ 6ನೇದಿನಕ್ಕೆ Read More

ತಿರುಪತಿ ಲಡ್ಡುಗೆ ನಕಲಿ ತುಪ್ಪ: ಕಠಿಣ ಶಿಕ್ಷೆಗೆಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಗ್ರಹ

ಮೈಸೂರು: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು,ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು
ಆಗ್ರಹಿಸಿದ್ದಾರೆ.

ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ತಹಸಿಲ್ದಾರರಾದ ಶಿವಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿ ಈ ಆಗ್ರಹ ಮಾಡಿದರು.

ಈ ವೇಳೆ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಮಾತನಾಡಿ,ಹಿಂದೂಗಳ
ಭಾವನೆಗಳಿಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣ ಇದಾಗಿದೆ ಎಂದು ತಿಳಿಸಿದರು.

ಲಡ್ಡು ಪ್ರಸಾದದಲ್ಲಿ 250 ಕೋಟಿಗೂ ಅಧಿಕ ಮೌಲ್ಯದ 68 ಲಕ್ಷ ನಕಲಿ ತುಪ್ಪವನ್ನು ಬಳಸಿರುವುದು ಬಯಲಾಗಿದೆ.ಆಂಧ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ನಡೆದ ಕೃತ್ಯವಿದು. ಅಕ್ರಮಕ್ಕೆ ಕಾರಣರಾದವರ ವಿರುದ್ಧ ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತನಿಖೆಯ ಆಧಾರದ ಮೇಲೆ ಸೂಕ್ತ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಲಡ್ಡುಗಳಲ್ಲಿ ಕೊಬ್ಬಿನ ಅಂಶ ಮಾಂಸದ ಅಂಶವಿರುವ ಕಳಪೆ ಪದಾರ್ಥ ಗಳನ್ನು ಬಳಸಲಾಗಿದೆ ಎಂಬುದೂ ತನಿಖೆಯಲ್ಲಿ ದೃಢವಾಗಿದೆ. ಉತ್ತರಾಖಂಡ ಮೂಲದ ಬೋಲ್ ಬಾಬಾ ಎಂಬ ಸಂಸ್ಥೆಯಿಂದ ಕಳಪೆ ತುಪ್ಪ ತರಿಸಿಕೊಂಡು ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.

ಪ್ರಸಾದದ ಗುಣಮಟ್ಟ ಕಾಪಾಡಲು ಕೆಎಂಎಫ್ ತುಪ್ಪವನ್ನೇ ಬಳಸಬೇಕು ಎಂದು ವಿಕ್ರಮ ಅಯ್ಯಂಗಾರ್ ಮತ್ತಿತರರು ಆಗ್ರಹಿಸಿದರು.

ಮುಖಂಡರುಗಳಾದ ಪ್ರಮೋದ್ ಗೌಡ,ಸಂದೇಶ್, ಗುರುರಾಜ್ ಶೆಟ್ಟಿ, ಎಸ್ ಎನ್ ರಾಜೇಶ್, ಪ್ರಶಾಂತ್, ಅಮಿತ್, ಸಚಿನ್ ನಾಯಕ್ ಮತ್ತಿತರರು ಮನವಿ ಸಲ್ಲಿಕೆ ವೇಳೆ ಹಾಜರಿದ್ದರು.

ತಿರುಪತಿ ಲಡ್ಡುಗೆ ನಕಲಿ ತುಪ್ಪ: ಕಠಿಣ ಶಿಕ್ಷೆಗೆಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಗ್ರಹ Read More

ಸ್ವದೇಶಿ ಸುರಕ್ಷಿತ ಅಭಿಯಾನ:ಕೆಎಂಪಿಕೆ ಟ್ರಸ್ಟ್ ನಿಂದ ಮಣ್ಣಿನ ದೀಪ ವಿತರಣೆ

ಮೈಸೂರು: ದೀಪಾವಳಿ ಹಬ್ಬದ ಅಂಗವಾಗಿ
ಕೆಎಂಪಿಕೆ ಟ್ರಸ್ಟ್ ವತಿಯಿಂದ ಮಣ್ಣಿನ ದೀಪಗಳನ್ನು ವಿತರಿಸಲಾಯಿತು.

ನಗರದ ದೇವರಾಜ ಮಾರುಕಟ್ಟೆ ಮುಂಭಾಗದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಸ್ವದೇಶಿ ಸುರಕ್ಷಿತ ಅಭಿಯಾನದ ಭಾಗವಾಗಿ ಮಂಗಳವಾರ ಗ್ರಾಹಕರಿಗೆ ಮಣ್ಣಿನ ದೀಪಗಳನ್ನು ವಿತರಿಸಿ ಶುಭ ಕೋರಲಾಯಿತು.

ಈ ವೇಳೆ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಅವರು ಮಾತನಾಡಿ,
ಸ್ವದೇಶಿ ವಸ್ತುಗಳ ಬಳಕೆಯಿಂದ ದೇಶದ ಆರ್ಥಿಕತೆ ಬಲಪಡಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಆಟಿಕೆಗಳು, ಪಟಾಕಿಗಳು, ಗೊಂಬೆಗಳು, ಪೆನ್, ಪೆನ್ಸಿಲ್, ಮೊಬೈಲ್ ಸೇರಿದಂತೆ ಎಲ್ಲ ವಲಯಗಳಲ್ಲೂ ಚೀನಾ ಬ್ರಾಂಡ್‌ಗಳು ಮಾರುಕಟ್ಟೆ ಪ್ರವೇಶಿಸಿವೆ. ಇದರ ಪರಿಣಾಮವಾಗಿ ಚನ್ನಪಟ್ಟಣದ ಗೊಂಬೆ, ಇಳಕಲ್, ಮೊಳಕಾಲ್ಮುರು ರೇಷ್ಮೆ ಸೇರಿದಂತೆ ಸ್ವದೇಶಿ ಕುಶಲ ವಸ್ತುಗಳ ತಯಾರಿಕಾ ಘಟಕಗಳು ಮುಚ್ಚಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಆ ಕಾರಣಕ್ಕಾಗಿ ಈ ದೀಪಾವಳಿಯಲ್ಲಿ ಕುಂಬಾರರು ತಯಾರಿಸಿರುವ ಮಣ್ಣಿನ ದೀಪಗಳನ್ನು ಬಳಸಿ, ಸ್ವದೇಶಿ ಉತ್ಪನ್ನಗಳಿಗೆ ಬೆಂಬಲ ನೀಡೋಣ ಎಂದು ವಿಕ್ರಮ ಅಯ್ಯಂಗಾರ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್. ಎನ್. ರಾಜೇಶ್, ಚಾಮರಾಜ ಕ್ಷೇತ್ರದ ಬಿಜೆಪಿ ಸಂಚಾಲಕ ಸಚಿನ್ ನಾಯಕ್, ಮಹಾನ್ ಶ್ರೇಯಸ್, ದುರ್ಗಾ ಪ್ರಸಾದ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ಸ್ವದೇಶಿ ಸುರಕ್ಷಿತ ಅಭಿಯಾನ:ಕೆಎಂಪಿಕೆ ಟ್ರಸ್ಟ್ ನಿಂದ ಮಣ್ಣಿನ ದೀಪ ವಿತರಣೆ Read More

ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆ: ಪೋಸ್ಟರ್ ಬಿಡುಗಡೆ ಮಾಡಿದ ಯದುವೀರ್

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಯ ಪೋಸ್ಟರನ್ನು ಮಹಾರಾಜರೂ ಹಾಗೂ ಸಂಸದರಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ನಗರದ ಬಿಜೆಪಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ವೇಳೆ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಕೆ ಎಮ್ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್,ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯಲ್ಲಿ ಭಾಗವಹಿಸುವವರು 200 ರೂ ನೋಂದಣಿ ಶುಲ್ಕ ಕಟ್ಟಬೇಕಿದೆ ಎಂದು ‌ಹೇಳಿದರು.

ಸ್ಪರ್ಧೆಯಲ್ಲಿ ನಾಡಿನ ಸಂಸ್ಕೃತಿ, ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು, ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ತಿಳಿಸಿದರು.

ಕಡೆಯ ದಿನ ಅಕ್ಟೋಬರ್ 2. 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3 ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಎಂದು ಹೇಳಿದರು.

ಆನಂತರ ನುರಿತ ತೀರ್ಪುಗಾರರು ಸ್ಪರ್ಧಾಳುಗಳ ನಿವಾಸಕ್ಕೆ ತೆರಳಿ ಗೊಂಬೆ ಜೋಡಣೆ ವೀಕ್ಷಿಸಿ ಸಂಸ್ಕೃತಿ, ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಟಿ. ಎಸ್ ಶ್ರೀವತ್ಸ, ಮಾಜಿ ಮಹಾಪೌರರಾದ ಶಿವಕುಮಾರ್, ಮುಖಂಡರಾದ ಮಹೇಶ್ ರಾಜ ಅರಸ್,ಕಾರ್ತಿಕ್ ಮರಿಯಪ್ಪ,ಪರಿಕ್ಷಿತ್ ರಾಜ್ ಮತ್ತಿತರರು ಹಾಜರಿದ್ದರು.

ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆ: ಪೋಸ್ಟರ್ ಬಿಡುಗಡೆ ಮಾಡಿದ ಯದುವೀರ್ Read More

ಹಾವುಗಳ ಬಗ್ಗೆ ಭಯ ಬೇಡ-ಸ್ನೇಕ್ ಶ್ಯಾಮ್

ಮೈಸೂರು: ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ, ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 90000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಸ್ನೇಕ್ ಶ್ಯಾಮ್ ಅವರು ಅಭಿನಂದನೆ‌ ಸ್ವೀಕರಿಸಿ ನಂತರ ಶಾಲೆಯ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು.

ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ನಾಗರಹಾವು,ಕಾಳಿಂಗ ಸರ್ಪ ವಿಷಕಾರಿ, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.

ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ಮೊದಲು ಆ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಸ್ನೇಕ್ ಶ್ಯಾಮ್ ತಿಳಿಸಿದರು.

ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೆಯಿ ಮಾತನಾಡಿ ಹಾವನ್ನ‌ ನಾವು ಜೀವಭಯದಿಂದ ಹಿಡಿಯಬಾರದು, ವೈಜ್ಞಾನಿಕವಾಗಿ ಜೀವರಕ್ಷಣೆಯಿಂದ ಹಿಡಿಯಬೇಕು, ಹಬ್ಬ ಹರಿದಿನ ಇತಿಹಾಸದಲ್ಲೂ ಸಹ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಸಹ ನಮ್ಮ‌ ಪೂರ್ವಜರು ಪೂಜ್ಯ ಸ್ಥಾನ ನೀಡಿದ್ದಾರೆ, ಮಕ್ಕಳು ಸಣ್ಣ ವಯಸ್ಸಿನಲ್ಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ಕಾಂಗ್ರಸ್ ಮುಖಂಡ ಎನ್.ಎಂ ನವೀನ್ ಕುಮಾರ್ ಅವರು ಮಾತನಾಡಿ ಕೋವಿಡ್ ನಂತಹ ಕಷ್ಟ ಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗ ತಜ್ಞ ಸ್ನೇಕ್ ಶ್ಯಾಮ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ ಎಂದು ಹೇಳಿದರು.

ಅಷ್ಟೇ ಅಲ್ಲದೇ 85 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ, ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ, ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ಅವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಶಾಲೆಯ ಮುಖ್ಯ ಉಪಾಧ್ಯಾಯರಾದ ಸುಗುಣಾವತಿ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ಶ್ರೀನಿವಾಸ್, ಪ್ರವೀಣ್ ಕುಮಾರ್
ಮತ್ತಿತರರು ಭಾಗವಹಿಸಿದ್ದರು.

ಹಾವುಗಳ ಬಗ್ಗೆ ಭಯ ಬೇಡ-ಸ್ನೇಕ್ ಶ್ಯಾಮ್ Read More

ಆಲೂರು ವೆಂಕಟರಾಯರ ಕೊಡುಗೆ ಅಪಾರ: ಕೆ ರಘುರಾಮ್ ವಾಜಪಾಯಿ

ಮೈಸೂರು: ಕರ್ನಾಟಕದ ಏಕೀಕರಣಕ್ಕೆ ಆಲೂರು ವೆಂಟಕರಾಯರ ಕೊಡುಗೆ ಅಪಾರವಾಗಿದ್ದು ನಾಡಿನ ಗತ ವೈಭವದ ಬಗ್ಗೆ ತಿಳಿಸಿಕೊಡುವುದರ ಜೊತೆಗೆ ಏಕೀಕರಣದ ಕಿಚ್ಚನ್ನು ಹತ್ತಿಸಿ ಬಡಿದೆಬ್ಬಿಸಿದ ಕೀರ್ತಿ ಸಲ್ಲುತ್ತದೆ ಎಂದು ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ ತಿಳಿದರು‌.

ಕೆಎಂಪಿಕೆ ಟ್ರಸ್ ವತಿಯಿಂದ
ನಗರದ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಯೋಜಿಸಿದ್ದ ಆಲೂರು ವೆಂಕಟರಾಯರ 145 ನೇ ಜನುಮದಿನ ಆಚರಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು,

ಏಕೀಕರಣಕ್ಕೂ ಮೊದಲ ಕರ್ನಾಟಕ ರಾಜ್ಯ ಹೈದರಾಬಾದ್‌ ಕರ್ನಾಟಕ ಮುಂಬೈ ಕರ್ನಾಟಕ, ಮದ್ರಾಸ್‌ ಕರ್ನಾಟಕಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದರಂತೆ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚಾಗಿ ಮರಾಠಿ ಶಿಕ್ಷಣ ನೀಡಲಾಗುತ್ತಿತ್ತು. ಇದನ್ನು ಮನಗಂಡ ವೆಂಕಟರಾಯರು ಏಕೀಕರಣ ಚಳವಳಿ ನಡೆಸಲು ತಮ್ಮ ಶಾಲಾ ವಿದ್ಯಾರ್ಥಿ ಸಮಯದಲ್ಲೇ ಮುಂದಾಗಿದ್ದರು
ನಾಡಿನಲ್ಲಿ ರಾಜ್ಯದ ಒಗ್ಗೂಡಿಕೆಗೆ ಪೂರಕ ಕಾರ್ಯಕ್ರಮ ನಡೆಸಿದರು ಎಂದು ಸ್ಮರಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಮಾತನಾಡಿ, ವೆಂಕಟರಾಯರು ರಾಷ್ಟ್ರೀಯ ಶಾಲೆ ಪ್ರಾರಂಭಿಸಿ ಕನ್ನಡಿಗರಿಗೆ ಸ್ವ ಉದ್ಯೋಗ ಮಾಡುವ ಅವಕಾಶ ಮಾಡಿಕೊಟ್ಟಿದ್ದರು. ಕರ್ನಾಟಕ ಏಕೀಕರಣ ಪರಿಷತ್‌ ಮೂಲಕ ಕರ್ನಾಟಕದ ಏಕೀಕರಣ ಮಾಡುವ ಮಹತ್ಕಾರ್ಯ ಮಾಡಿದ್ದರು. ತಮ್ಮ ಬಹುಮುಖ ವ್ಯಕ್ತಿತ್ವದ ಮೂಲಕ ಕನ್ನಡಿಗರನ್ನು ಒಂದುಗೂಡಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮ್ ಪ್ರಸಾದ್ ಮಾತನಾಡಿ ಕನ್ನಡದ ಮಹಾನ್ ಚೇತನ ,ಕನ್ನಡ ಕನ್ನಡಿಗ ಕರ್ನಾಟಕ ಇರುವತನಕ ಮರೆಯದ ಮರೆಯಲಾಗದ ವ್ಯಕ್ತಿತ್ವ ,25ಕ್ಕೂ ಹೆಚ್ಚು ಕೃತಿಗಳನ್ನು ರಚನೆ ಮಾಡಿದ ಆಲೂರು ವೆಂಕಟರಾಯರು ಬಾಲಗಂಗಾಧರ ತಿಲಕರ ಗೀತಾ ರಹಸ್ಯವನ್ನ ಕನ್ನಡಕ್ಕೆ ಅನುವಾದಿಸಿ ಕನ್ನಡ ಸಾಹಿತ್ಯಕ್ಕೆ ಘನತೆ ಗೌರವ ತಂದುಕೊಟ್ಟವರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ಮಿರ್ಲೆ ಪನೀಶ್, ಸುಚಿಂದ್ರ,
ಚಕ್ರಪಾಣಿ,ರಾಘವೇಂದ್ರ,
ಪುರುಷೋತ್ತಮ್, ಸದಾಶಿವ ಮತ್ತಿತರರು ಹಾಜರಿದ್ದರು.

ಆಲೂರು ವೆಂಕಟರಾಯರ ಕೊಡುಗೆ ಅಪಾರ: ಕೆ ರಘುರಾಮ್ ವಾಜಪಾಯಿ Read More

ವಿದ್ಯಾರ್ಥಿಗಳಲ್ಲಿ ಕನ್ನಡದ ಜಾಗೃತಿ ಅಗತ್ಯ ಟಿ .ಎಸ್ ಶ್ರೀವತ್ಸ

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡ ಭಾಷೆ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯವಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.

ನಮೋ ಯೋಗ ಭವನದಲ್ಲಿ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100ಕ್ಕೂ ಹೆಚ್ಚು ಅಂಕಗಳಿಸಿದ
ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಶಾಸಕರು ಮಾತನಾಡಿದರು.

ಮಾತೃ ಭಾಷೆ ಬೆಳವಣಿಗೆಗೆ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ, ಇಂದಿನ ಹೊಸ ಪೀಳಿಗೆಯಲ್ಲಿ ಕನ್ನಡ ಭಾಷೆಯ ಅಭಿಮಾನದ ಕಿಚ್ಚು ಹಚ್ಚುವ ಮತ್ತು ಸಾಧನೆಯ ಹೊಸ ಕನಸು ಬಿತ್ತುವ ಪ್ರಾಮಾಣಿಕ ಕಾರ್ಯವನ್ನು ಕೆ ಎಂ ಪಿ ಕೆ ಟ್ರಸ್ಟ್ ಮಾಡುತ್ತಿದ್ದು ಶ್ಲಾಘನೀಯ ಎಂದು ಹೇಳಿದರು.

ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಪ್ರಜ್ಞೆ, ಜಾಗೃತಿಗೊಳಿಸುವ ಅಗತ್ಯವಿದೆ,
ಕನ್ನಡ ಕರ್ನಾಟಕದ ಜನರ ಬದುಕಿನ ಭಾಷೆ, ಜನ ಭಾಷೆ ಅಷ್ಟೇ ಅಲ್ಲ ಜನಸಾಮಾನ್ಯರ ಭಾಷೆಯಾಗಿದೆ.ಈ ಹಿನ್ನೆಲೆಯಲ್ಲಿ ಕನ್ನಡ ನಾಡಿನಲ್ಲಿ ಪ್ರತಿ ವಿದ್ಯಾರ್ಥಿಯು ಕನ್ನಡ ಪ್ರಜ್ಞೆಯನ್ನ ಬೆಳೆಸಿಕೊಳ್ಳಬೇಕು, ಅದು ಮುಂದೆ ಕನ್ನಡತನ ಬೆಳೆಯಲು ಸಹಾಯವಾ ಗುತ್ತದೆ ಎಂದು ಶ್ರೀವತ್ಸ ಹೇಳಿದರು

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ಮಾತನಾಡಿ ವಿದ್ಯಾರ್ಥಿ ಹಂತದಲ್ಲಿಯೇ ಕನ್ನಡ ಪ್ರೀತಿ ಜಾಗೃತಿಗೊಳಿಸುವ ಕೆಲಸ ಆಗಬೇಕಿದೆ, ಇದಕ್ಕಾಗಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗಿತ್ತಿರುವುದು ಶ್ಲಾಘನಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ನೂರಕ್ಕೂ ಹೆಚ್ಚು ಅಂಕ ಪಡೆದ ರಾಹುಲ್ ಗಾಂಧಿ, ಅಭಯ್,ಲಹರಿ ಜಿ ಆರ್, ರಾಜೇಶ್,ಪ್ರವೀಣ್,ಶಾಂಭವಿ,ಸ್ಪಂದನ, ಐಶ್ವರ್ಯ, ಗೌತಮ್,ಕಿರಣ್ ಕುಮಾರ್, ನಾಗರಾಜು ಅವರನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ನಗರಪಾಲಿಕೆ ಮಾಜಿ ಸದಸ್ಯ ಬಿ.ವಿ. ಮಂಜುನಾಥ್, ಕೆಪಿಸಿಸಿ ಸದಸ್ಯ ನಜರಬಾದ್ ನಟರಾಜ್,ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್,ನಿರೂಪಕ ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಸಮಾಜ ಸೇವಕರಾದ ಖುಷಿ ವಿನು, ರವಿಚಂದ್ರ, ಸುಚೇಂದ್ರ,ಶ್ರೀಕಾಂತ್ ಕಶ್ಯಪ್,
ಮಹಾನ್ ಶ್ರೇಯಸ್, ಚಕ್ರಪಾಣಿ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಕನ್ನಡದ ಜಾಗೃತಿ ಅಗತ್ಯ ಟಿ .ಎಸ್ ಶ್ರೀವತ್ಸ Read More