ಪೌರಕಾರ್ಮಿಕ ನಿವಾಸಿಗಳಿಗೆ ಕಂಬಳಿವಿತರಿಸಿ 68ನೇ ಪರಿನಿರ್ವಾಣ ದಿನ ಆಚರಣೆ

ಮೈಸೂರು: ಮೈಸೂರಿನ ಜೀವದಾರ
ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ
ಅಂಬೇಡ್ಕರ್ ಮಹಾ‌ ಪರಿನಿರ್ವಾಣ ದಿನವನ್ನು ವಿಶೇಷವಾಗಿ ಆಚರಿಸಲಾಯಿತು.

ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸುವ ಮೂಲಕ ಅಂಬೇಡ್ಕರ್ ಮಹಾ‌ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಮಾಡಲಾಯಿತು.

ಈ‌ ವೇಳೆ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,
ದೇಶದ ಶೋಷಿತರಿಗೆ ಸಮಾನತೆ ನೀಡಲು ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಹೃನ್ಮನಗಳಲ್ಲಿ ಸದಾ ಜೀವಂತ ಎಂದು ಬಣ್ಣಿಸಿದರು.

ದೇಶ, ವಿದೇಶಗಳಲ್ಲಿ ಶಿಕ್ಷಣ ಪಡೆದು ಶೋಷಿತರ ಸಮಾನತೆಗಾಗಿ ಶಾಸನ ಬದ್ಧ ಹಕ್ಕು ನೀಡಲು ಸಂವಿಧಾನ ರಚಿಸಿದರು. ಹಣ, ಅಧಿಕಾರದ ಲಾಲಸೆಗೊಳಗಾಗದೆ ನಿಸ್ವಾರ್ಥ ಸೇವೆ ಸಲ್ಲಿಸಿದರು. ವಿಶ್ವ ಸಂಸ್ಥೆ ಅವರ ಜನ್ಮ ದಿನವನ್ನು ವಿಶ್ವ ಜ್ಞಾನ ದಿನಾಚರಣೆಯನ್ನಾಗಿ ಆಚರಿಸಲು ಘೋಷಣೆ ಮಾಡಿದೆ. ಅವರನ್ನು ವಿಶ್ವ ಗುರುಗಳನ್ನಾಗಿ ಸ್ವೀಕರಿಸುವ ಮನಸ್ಸುಗಳು ಹುಟ್ಟಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಹಳ್ಳಿ ತಾಲೂಕ್ ಪಂಚಾಯಿತಿ ಸದಸ್ಯರಾದ ಸುರೇಶ್, ಉಮೇಶ್, ಮಮತಾ, ಸೂರಜ್, ಸದಾಶಿವ, ಚಂದ್ರು ಮತ್ತಿತರರು ಹಾಜರಿದ್ದರು.

ಪೌರಕಾರ್ಮಿಕ ನಿವಾಸಿಗಳಿಗೆ ಕಂಬಳಿವಿತರಿಸಿ 68ನೇ ಪರಿನಿರ್ವಾಣ ದಿನ ಆಚರಣೆ Read More

ಕೆಎಂಪಿಕೆ ಟ್ರಸ್ಟ್ ನಿಂದ ಹಾಡಿ ಜನರಿಗೆ ಹೋದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ

ಮೈಸೂರು: ಮಳೆ,ಚಳಿ ಹಿನ್ನೆಲೆಯಲ್ಲಿ
ಎಚ್ ಡಿ ಕೋಟೆಯ ಕಾಡಿನಲ್ಲಿ ಹಾಡಿ ಜನಾಂಗದವರಿಗೆ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ನಿಂದ ಹೊದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ಮಾತನಾಡಿ,ಇತ್ತೀಚಿಗೆ ಜಿಲ್ಲೆಯಲ್ಲಿ ವ್ಯಾಪಕವಾದ ಚಳಿ ಪ್ರಾರಂಭವಾಗಿದ್ದು ಮಳೆಯೂ ಸುರಿಯುತ್ತಿದೆ ಹಾಗಾಗಿ ವಾತಾವರಣದಲ್ಲಿನ ಉಷ್ಣಾಂಶ ಕಡಿಮೆಯಾಗಿದೆ ಹಾಗಾಗಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಆದ್ದರಿಂದ ಮುಂಜಾಗ್ರತೆ ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ. ಚಳಿಯ ತೀರ್ವತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಾಧ್ಯತೆ ಇದ್ದು ಪಾಶ್ರ್ವವಾಯು, ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ.ಹಾಗಾಗಿ ಆರೋಗ್ಯದ ‌ಬಗೆಗೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು.

ಸ್ವಚ್ಚತೆ ಕಾಪಾಡಿಕೊಳ್ಳಿ, ಜಂಕ್‍ಪುಢಗಳ ಸೇವನೆ ಮಾಡಬೇಡಿ. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳನ್ನು ಮಾಡಬೇಕು. ವಿಟಾಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಬಹುದಾಗಿದೆ ಎಂದು ತಿಳಿಹೇಳಿದರು.

ಮಧುಮೇಹ ಹೊಂದಿರುವವರು ತಪ್ಪದೇ ಔಷಧಿಗಳನ್ನು ತೆಗೆದುಕೊಳ್ಳಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು, ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ ಎಂದು ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್ ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ , ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಕ್ರಪಾಣಿ, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಮೋಹನ್ ಕುಮಾರ್ ಗೌಡ ಮತ್ತಿತರರು ಹಾಜರಿದ್ದರು.

ಕೆಎಂಪಿಕೆ ಟ್ರಸ್ಟ್ ನಿಂದ ಹಾಡಿ ಜನರಿಗೆ ಹೋದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ Read More

ಬೃಹತ್ ಶ್ರೀ ವೈಷ್ಣವ ಸಮಾವೇಶದಲ್ಲಿ ವಿಕ್ರಂ ಅಯ್ಯಂಗಾರ್ ಅವರಿಗೆ ಸನ್ಮಾನ

ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀ ಯದುಗಿರಿ ಯತಿರಾಜ ಮಠ ಹಾಗೂ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾ ಹಮ್ಮಿಕೊಂಡಿದ್ದ ಶ್ರೀ ರಾಮಾನುಜ ವಿಶ್ವವಿಜಯ ಮಹೋತ್ಸವ ಹಾಗೂ ಬೃಹತ್ ಶ್ರೀ ವೈಷ್ಣವ ಸಮಾವೇಶದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮೈಸೂರು ನಗರದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಅವರಿಗೆ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಯದುಗಿರಿ ಮಠದ ಶ್ರೀ ಯದುಗಿರಿ ಯತಿರಾಜ ರಾಮಾನುಜ ಜಿಯರ್ ಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದರು.

ಇದೇ ವೇಳೆ ಶಾಸಕ ಟಿ. ಎಸ್
ಶ್ರೀವತ್ಸ ಅವರು ವಿಕ್ರಂ ಅಯ್ಯಂಗಾರ್ ಅವರಿಗೆ ಶುಭ ಕೋರಿದರು.

ಯುವ ಮುಖಂಡ ಟಿ ಎಸ್ ಅರುಣ್ ಮತ್ತಿತತರರು ಹಾಜರಿದ್ದರು.

ಬೃಹತ್ ಶ್ರೀ ವೈಷ್ಣವ ಸಮಾವೇಶದಲ್ಲಿ ವಿಕ್ರಂ ಅಯ್ಯಂಗಾರ್ ಅವರಿಗೆ ಸನ್ಮಾನ Read More

ಬಸವರಾಜ್ ಬಸಪ್ಪ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಅಭಿನಂದನೆ

ಮೈಸೂರು: ಇತ್ತೀಚಿಗೆ ನಡೆದ ಕೆಆರ್ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ್ ಬಸಪ್ಪ ಅವರಿಗೆ ಕೆಎಂಪಿಕೆ ಟ್ರಸ್ಟ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಬಸವರಾಜ್ ಬಸಪ್ಪ ಅವರನ್ನು ಅಭಿನಂದಿಸಲಾಯಿತು

ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಜೇಶ್ ಪಳನಿ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ವಿನಯ್ ಕಣಗಾಲ್, ಶ್ರೀಕಾಂತ್ ಕಶ್ಯಪ್, ದೂರ ರಾಜಣ್ಣ, ಚಕ್ರಪಾಣಿ, ಶ್ರೀಕಾಂತ್ ಕಶ್ಯಪ್, ಮಂಜುನಾಥ್, ಸಚಿನ್ ನಾಯಕ್ ,ಶಿವು, ಸುಹಾಸ್, ರಾಕೇಶ್ ಮತ್ತಿತರರು ಹಾಜರಿದ್ದರು.

ಬಸವರಾಜ್ ಬಸಪ್ಪ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಅಭಿನಂದನೆ Read More

ಬಡವರಿಗೆ ಸಹಾಯ ಮಾಡಿ ಸಮಾಜಕ್ಕೆ ಕೊಡುಗೆ ನೀಡಿ: ಕೆ ಆರ್ ಸತ್ಯನಾರಾಯಣ್

ಮೈಸೂರು: ಉಳ್ಳವರು ಸ್ವ ಇಚ್ಛೆಯಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಡವರಿಗೆ ಸಹಾಯ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ ಆರ್ ಸತ್ಯನಾರಾಯಣ್ ತಿಳಿಸಿದರು.

ನಗರದ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆಎಂಪಿ ಕೆ ಟ್ರಸ್ಟ್ 18ನೇ ವಾರ್ಷಿಕೋತ್ಸವ ಅಂಗವಾಗಿ ಕೊಡಮಾಡಿದ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿ ಸತ್ಯನಾರಾಯಣ್ ಮಾತನಾಡಿದರು.

ಸಮಾಜ ನಮ್ಮನ್ನ ಬೆಳಸಿದ ಮೇಲೆ ಸಮಾಜದ ಋಣ ನಮ್ಮ ಮೇಲಿರುತ್ತದೆ ಹಾಗಾಗಿ ಅಶಕ್ತರಿಗೆ ನೆರವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಅವರನ್ನು ಬೆಂಬಲಿಸಿ ಬೆಳಸಬೇಕಿದೆ ಎಂದು ಅವರು ತಿಳಿಸಿದರು.

ಈ‌ ವೇಳೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್,ಎಂ ಆರ್ ಬಾಲಕೃಷ್ಣ, ನಾಗರಾಜ್, ಕಡಕೋಳ ಜಗದೀಶ್, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕರಾದ ಜಯಸಿಂಹ, ವಿಜಯ್ ಕುಮಾರ್, ಚಕ್ರಪಾಣಿ, ಲತಾ ಬಾಲಕೃಷ್ಣ, ನಾಗಶ್ರೀ ಸುಚಿಂದ್ರ, ವಿಜಯ ಮಂಜುನಾಥ್, ಗುರುರಾಜ್ ಮತ್ತಿತರರು ಹಾಜರಿದ್ದರು.

ಬಡವರಿಗೆ ಸಹಾಯ ಮಾಡಿ ಸಮಾಜಕ್ಕೆ ಕೊಡುಗೆ ನೀಡಿ: ಕೆ ಆರ್ ಸತ್ಯನಾರಾಯಣ್ Read More

ಕೆ ಆರ್ ಸತ್ಯನಾರಾಯಣ್ ರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ

ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ 18ನೇ ವಾರ್ಷಿಕೋತ್ಸವ ಪ್ರಯುಕ್ತ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಕಾರ್ಯಕ್ರಮ ಸೆಪ್ಟೆಂಬರ್ 22ರ ಭಾನುವಾರ ಬೆಳಗ್ಗೆ 12 ಗಂಟೆಗೆ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ವೆಡ್ಡಿಂಗ್ ಬೆಲ್ಸ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಧಾರ್ಮಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹೊಯ್ಸಳ ಕರ್ನಾಟಕದ ಸಂಘದ ಅಧ್ಯಕ್ಷರು ಹಾಗೂ ಕಲ್ಯಾಣ ಮಂಟಪದ ಮಾಲೀಕರ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್ ಅವರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮೈಸೂರು ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ವೇದ ಬ್ರಹ್ಮಶ್ರೀ ಭಾನುಪ್ರಕಾಶ್ ಶರ್ಮಾ, ಮೇಲುಕೋಟೆ ವಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ,
ಶಾಸಕ ಟಿ ಎಸ್ ಶ್ರೀವತ್ಸ, ಮುಡಾ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ. ಟಿ ಪ್ರಕಾಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾಕ್ಟರ್ ನಟರಾಜ್ ಜೋಯಿಸ್,
ನಂ.ಶ್ರೀಕಂಠಕುಮಾರ್, ಆದರ್ಶ ಸೇವಾ ಸಂಘದ ಅಧ್ಯಕ್ಷ ಜಿ ಆರ್ ನಾಗರಾಜ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಕಾಂಗ್ರೆಸ್ ಮುಖಂಡರಾದ ಎನ್. ಎಂ ನವೀನ್ ಕುಮಾರ್,ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.

ಕೆ ಆರ್ ಸತ್ಯನಾರಾಯಣ್ ರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ Read More

ದಸರಾದಲ್ಲಿ ಅರ್ಜುನ ಆನೆ ಸ್ಮರಿಸಲು ಕೆಎಂಪಿಕೆ ಟ್ರಸ್ಟ್ ನಿಂದ ಡಿಸಿಗೆ ಮನವಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಅರ್ಜುನ ಆನೆಯ ಸ್ತಬ್ಧ ಚಿತ್ರ ಪ್ರದರ್ಶಿಸಬೇಕು ಹಾಗೂ ನಮ್ಮ ಅರ್ಜುನ ಗ್ಯಾಲರಿ ಸ್ಥಾಪಿಸಬೇಕೆಂದು ಕೆಎಂಪಿಕೆ ಟ್ರಸ್ಟ್
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ನೇತೃತ್ವದಲ್ಲಿ ಡಿಸಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಶಿವರಾಜು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಎಲ್ಲರ ಮನಗೆದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿದೆ.

2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿ ಸೇವೆಸಲ್ಲಿಸಿದೆ.

ರಾಜ್ಯ ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು,ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ ಎಂದು ಮನವಿ ಪತ್ರ ದಲ್ಲಿ ತಿಳಿಸಲಾಗಿದೆ.

ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ದೇಶವಿದೇಶದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ, ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಅರ್ಜುನನ ಸ್ಮರಿಸಬೇಕು ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮನವಿ ಮಾಡಿದ್ದಾರೆ.

90ದಿನಗಳು ನಡೆಯುವ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದ ಸರ್ಕಾರಿ ಮಳಿಗೆ ವಿಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರ್ಜುನ ಆನೆಯ ಸೇವೆ, ಭಾವಚಿತ್ರ ಮಾಹಿತಿಯುಳ್ಳ ‘ನಮ್ಮ ಅರ್ಜುನ’ ಸ್ಮರಿಸುವ ಗ್ಯಾಲರಿ ವಲಯ ನಿರ್ಮಿಸಲು ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಕೋರಲಾಗಿದೆ ಎಂದು ಈ ವೇಳೆ ವಿಕ್ರಮ್ ಅಯ್ಯಂಗಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ನಿಯೋಗದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಸಾಮಾಜಿಕ ಹೋರಾಟಗಾರ ನಜರ್ಬಾದ್ ಚರಣ್ ರಾಜ್, ಬೈರತಿ ಲಿಂಗರಾಜು, ಸುಚೇಂದ್ರ, ಚಕ್ರಪಾಣಿ, ಮೋಹನ್ ಕುಮಾರ್, ದುರ್ಗಾ ಪ್ರಸಾದ್, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜು ಮತ್ತಿತರರು ಹಾಜರಿದ್ದರು.

ದಸರಾದಲ್ಲಿ ಅರ್ಜುನ ಆನೆ ಸ್ಮರಿಸಲು ಕೆಎಂಪಿಕೆ ಟ್ರಸ್ಟ್ ನಿಂದ ಡಿಸಿಗೆ ಮನವಿ Read More