ವಿಶ್ವವಿಖ್ಯಾತ ಕೆ.ಆರ್.ಎಸ್.ನಲ್ಲಿ ಸೈಕ್ಲಿಂಗ್:ಕೇಳೋರೇ ಇಲ್ಲ

ಮಂಡ್ಯ: ಜಿಲ್ಲೆಯ ಇತಿಹಾಸ ಪ್ರಸಿದ್ಧ
ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬಂದಿದೆ.

ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟ ಅಧಿಕಾರಿಗಳು ಏನೂ ಆಗಿಯೇ‌ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.

ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡಿರುವ ದೃಶ್ಯ ವೈರಲ್ ಆಗಿದೆ.

ಮುಖ್ಯ ಧ್ವಾರದ ಮುಂದೆ ಫೋಟೋಗೆ ಮೂವರು ಪೋಸ್ ಕೊಟ್ಟಿದ್ದಾರೆ. ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಸೈಕ್ಲಿಂಗ್ ಮಾಡಿದ್ದಾರೆ.

ಸಾಮಾನ್ಯ ಜನರಿಗೆ ಒಂದು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಎಂಬಂತಾಗಿದೆ, ಜನ ಇದನ್ನು ಕಾರವಾಗಿ ಪ್ರಶ್ನಿಸಿದ್ದಾರೆ.

ಕೆ ಆರ್ ಎಸ್ ಭದ್ರತೆಯ ಜವಾಬ್ದಾರಿ ಹೊತ್ತ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ, ಕಾವೇರಿ ನೀರಾವರಿ ನಿಗಮ, ಪೊಲೀಸ್ ಇಲಾಖೆ, ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

ವಿಶ್ವವಿಖ್ಯಾತ ಕೆ.ಆರ್.ಎಸ್.ನಲ್ಲಿ ಸೈಕ್ಲಿಂಗ್:ಕೇಳೋರೇ ಇಲ್ಲ Read More

ರಾಜಮಾತೆ ಆಭರಣ ಮಾರಾಟ ಮಾಡಿ ಕೆಆರ್‌ಎಸ್ ಕಟ್ಟಿಸಿದ್ದು:ಸುಬುಧೇಂದ್ರ ತೀರ್ಥ ಶ್ರೀ

ರಾಯಚೂರು: ಕಾವೇರಿ ಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂಬ ಉದ್ದೇಶದಿಂದ ಮೈಸೂರು ಸಂಸ್ಥಾನದ ಆಗಿನ ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶ ಕಟ್ಟಿಸಿದ್ದಾರೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎಂಬ ಸಚಿವ ಮಹಾದೇವಪ್ಪ ಹೇಳಿಕೆ ವಿಚಾರಕ್ಕೆ ಮೇಲಿನಂತೆ ಶ್ರೀಗಳು ಪ್ರತಿಕ್ರಿಯಿಸಿದರು.

ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ಪ್ರಸ್ತುತ ವಿಚಾರಗಳ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಧಾರ್ಮಿಕ ಸ್ಥಳ, ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಾದರೆ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಕ್ಷೇತ್ರದ ಮಹತ್ವಕ್ಕೆ ಜೋಡಣೆ ಮಾಡಬಾರದು. ಅಲ್ಲಿನ ವ್ಯವಸ್ಥೆ, ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಬೇಕು. ಕ್ಷೇತ್ರ ಅತ್ಯಂತ ಪವಿತ್ರವಾದದ್ದು, ನಮ್ಮೆಲ್ಲರಿಗೂ ಅತ್ಯಂತ ಭಕ್ತಿ, ಶ್ರದ್ಧೆಯ ಕೇಂದ್ರವಾಗಿದೆ. ಅಲ್ಲಿ ಯಾವುದೇ ಪ್ರಕರಣ,ವಿಚಾರಗಳು ಇದ್ದರೂ ಕೂಡ ಕಾನೂನು ವಿಚಾರಣೆ ನಡೆಸುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮಂತ್ರಾಲಯ ಭಕ್ತರಿಗೆ ತೊಂದರೆಯಾಗುವ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಸಾರಿಗೆ ಇಲಾಖೆಯವರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹಲವಾರು ಬಾರಿ ಅಹವಾಲು ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಅವರ ಅಹವಾಲನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸುತ್ತದೆ ಎಂಬ ಧೃಡ ವಿಶ್ವಾಸವಿದೆ ಎಂದು ಸುಬುದೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ರಾಜಮಾತೆ ಆಭರಣ ಮಾರಾಟ ಮಾಡಿ ಕೆಆರ್‌ಎಸ್ ಕಟ್ಟಿಸಿದ್ದು:ಸುಬುಧೇಂದ್ರ ತೀರ್ಥ ಶ್ರೀ Read More

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗುತ್ತಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ, ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಅರ್ಪಿಸಿ ನಂತರ ಅವರು ಮಾತನಾಡಿದರು.

ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಾನು ಭಕ್ತಿ, ವಿನಮ್ರತೆಯಿಂದ ಕೋರುತ್ತೇನೆ ಕಾವೇರಿ ಆರತಿಗೆ ಅಡ್ಡಿ ಪಡಿಸಬೇಡಿ,ಸಹಕಾರ ನೀಡಿ ಎಂದು ‌ಮನವಿ ಮಾಡಿದರು.

ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿಗೆ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ, ಯಾರದ್ದಾದರೂ ಅನುಮತಿ ಬೇಕೆ ಎಂದು ಡಿಸಿಎಂ ಪ್ರಶ್ನಿಸಿದರು

ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶ. ಮೈಸೂರು ದಸರಾ ರೀತಿ ಅತ್ಯುತ್ತಮ ದೀಪಾಲಂಕಾರ ಮಾಡಲಾಗಿದೆ. ಅತ್ಯುತ್ತಮ ಕಾರಂಜಿಗಳನ್ನು ತರಿಸಲಾಗಿದೆ. ವಿದೇಶಗಳಿಂದ ಅಲಂಕಾರಿಕ‌ ಸಸ್ಯಗಳನ್ನು ತರಿಸಲಾಗಿದೆ.‌ ನಮ್ಮ ಮುಖ್ಯಮಂತ್ರಿಗಳು ಇದನ್ನು ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕೆ ಖಾಸಗಿಯವರು ಬಂಡವಾಳ ಹೂಡಬಹುದು ಎಂದು ಆಹ್ವಾನ ಮಾಡಿದ್ದೇವೆ” ಎಂದು ಡಿಕೆಶಿ ಹೇಳಿದರು.

ರಾಜ್ಯದ ಅಣೆಕಟ್ಟುಗಳ ಗೇಟ್ ಗಳನ್ನು ದುರಸ್ತಿಗೊಳಿಸಲು ಈಗಾಗಲೇ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದ್ದೇವೆ. ಆ ಸಮಿತಿಯಿಂದ ವರದಿ ತೆಗೆದುಕೊಂಡು ಹಂತ, ಹಂತವಾಗಿ ರಾಜ್ಯದ ಅಣೆಕಟ್ಟುಗಳ ಗೇಟ್ ದುರಸ್ತಿಯನ್ನು ಮಾಡಬೇಕು ಎಂದು ಮುಂದಾಗಿದ್ದೇವೆ ಎಂದು ತಿಳಿಸಿದರು.

ಬಜೆಟ್ ಮಂಡಿಸಿ ಒಂದು ತಿಂಗಳಾಗಿದೆ ತಾಳ್ಮೆಯಿಂದ ಇದ್ದರೆ ಅನುದಾನ ಬಂದೇ ಬರುತ್ತದೆ. ನಾವು ಕೊಟ್ಟ ಮಾತನ್ನು ತಪ್ಪುವವರಲ್ಲ. ಆರ್ಥಿಕ ಇಲಾಖೆಯವರು ಆರ್ಥಿಕ ಶಿಸ್ತಿಗಾಗಿ ಹಂತ, ಹಂತವಾಗಿ ಹಣ ಬಿಡುಗಡೆ ಮಾಡುತ್ತಾರೆ. ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಕಾಲದಲ್ಲಿ ಬಜೆಟ್ ಗಿಂತ ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ, ನಮ್ಮನ್ನು ಟೀಕೆ ಮಾಡುವವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದೇ ವೇಳೆ ಕಾವೇರಿ ಕುರಿತು ಕವನ ವಾಚುಸುವ ಮೂಲಕ ಡಿಕೆಶಿ ಎಲ್ಲರ ಗಮನ ಸೆಳೆದರು.

ಮೈಸೂರು ರಾಜಮಾತೆ ತಮ್ಮ ಒಡವೆಗಳನ್ನು ಅಡವಿಟ್ಟು ಈ ಅಣೆಕಟ್ಟು ನಿರ್ಮಾಣಕ್ಕೆ ಮುನ್ನುಡಿ ಬರೆದರು. ಈ ಕಾರಣಕ್ಕೆ ಕಬ್ಬಿನ ಸಿಹಿ ಹಂಚಲಾಗುತ್ತಿದೆ, ಇಡೀ ಬೆಂಗಳೂರಿಗೆ, ತಮಿಳುನಾಡಿಗೆ ‌ನೀರು ನೀಡಲಾಗುತ್ತಿದೆ ಎಂದು ಹೇಳಿದರು.

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್ Read More