ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ವಾಗ್ದಾಳಿ

ಪ್ರಯೋಗ್ ರಾಜ್: ಮಹಾ ಕುಂಭದಲ್ಲಿ ಜನಸಂದಣಿ ಕಡಿಮೆಯಾಗುತ್ತಿಲ್ಲ,ಈ ಬಗ್ಗೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತೊಮ್ಮೆ ಮಹಾ ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾ ಕುಂಭವು ಕೇವಲ ಒಂದು ಪದವಲ್ಲ,
ಮಹಾ ಕುಂಭ ಮತ್ತು ಮಹಾ ಆಯೋಗ ಹೆಸರಿನಲ್ಲಿ ಹಣವನ್ನು ಸಂಗ್ರಹಿಸ ಬೇಕಾಗಿರುವುದರಿಂದ ಹೊಸ ಪದವನ್ನು ರಚಿಸಲಾಯಿತು. ಹಣವನ್ನು ವ್ಯರ್ಥ ಮಾಡಲು ಅದರ ಹೆಸರನ್ನು ಮಹಾ ಕುಂಭ ಮತ್ತು ಮಹಾ ಆಯೋಗ ಎಂಬುದಾಗಿ ನೀಡಲಾಗಿದೆ ಎಂದು ಅಖಿಲೇಶ್ ಟೀಕಿಸಿದರು ‌
ಮಾಧ್ಯಮಗಳೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, 144 ವರ್ಷಗಳಿಗೊಮ್ಮೆ ಎಂದು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

144 ವರ್ಷಗಳ ನಂತರ ಇದು ನಡೆಯುತ್ತಿದೆ ಎಂದು ಅವರು ಯಾವ ದಿನಾಂಕದಿಂದ ನಿರ್ಧರಿಸುತ್ತಿದ್ದಾರೆ ಎಂದು ಯೋಗಿ ಸರ್ಕಾರವನ್ನು ಪ್ರಶ್ನಿಸಿದರು.

ನಮ್ಮ ಹಿಂದೂ ಧರ್ಮದಲ್ಲಿ, ನಕ್ಷತ್ರಪುಂಜ ಮತ್ತು ಸಮಯ ಎರಡು ಪ್ರಮುಖ ವಿಷಯಗಳಾಗಿವೆ, ಇದು ಶತಮಾನಗಳಿಂದ ನಡೆಯುತ್ತಿದೆ. ಭೂಮಿ ಯಾವಾಗ ರೂಪುಗೊಂಡಿತು ಮತ್ತು ಗ್ರಹಗಳು ಯಾವಾಗ ಅಸ್ತಿತ್ವದಲ್ಲಿದ್ದವು ಎಂಬುದು ಬಿಜೆಪಿಗೆ ತಿಳಿದಿದೆ. ಆದರೆ ಕುಂಭಮೇಳದ ಹೆಸರಿನಲ್ಲಿ ವೈಭವೀಕರಿಸಲಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.

ಧಾರ್ಮಿಕ ಕಾರ್ಯಕ್ರಮಗಳನ್ನು ಲಾಭಕ್ಕಾಗಿ ಆಯೋಜಿಸಲಾಗುವುದಿಲ್ಲ,ಆದರೆ, ನಮ್ಮ ಮುಖ್ಯಮಂತ್ರಿ 2 ಲಕ್ಷ ಕೋಟಿ ರೂಪಾಯಿಗಳ ವ್ಯಾಪಾರ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ವಾಸ್ತವವೆಂದರೆ ನಮ್ಮ ಉದ್ಯಮಿಗಳು ಹಾಳಾಗುತ್ತಿದ್ದಾರೆ. ಅಲ್ಲಿ ಅಂಗಡಿಗಳನ್ನು ಸ್ಥಾಪಿಸುವ ಉದ್ಯಮಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಅಂಗಡಿಗಳನ್ನು ತೆಗೆದುಕೊಂಡವರು ತಮ್ಮ ಸರಕುಗಳನ್ನು ಮಾರಾಟ ಮಾಡಲು ಸಾಧ್ಯವಾಗಲಿಲ್ಲ, ಅವರು ಭಾರಿ ನಷ್ಟವನ್ನು ಅನುಭವಿಸಿದ್ದಾರೆ ಎಂದು ಅಖಿಲೇಶ್ ಯಾದವ್ ದೂರಿದರು.

ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ವಾಗ್ದಾಳಿ Read More

ಹೆಚ್ ಡಿ ಕೆಗೆ ಒಳಿತಾಗಲೆಂದು ಕುಂಭ ಮೇಳದಲ್ಲಿ ಜೆಡಿಎಸ್ ಮುಖಂಡರ ಪ್ರಾರ್ಥನೆ

ಟಿ.ನರಸೀಪುರ: ಟಿ.ನರಸೀಪುರದಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಜೆಡಿಎಸ್ ಮುಖಂಡರು ಪುಣ್ಯ ಸ್ನಾನ ಮಾಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಎಚ್‌ ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ಇಂದು ಟಿ ನರಸೀಪುರ ಕುಂಭಮೇಳದಲ್ಲಿ ಭಾಗವಹಿಸಿ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಇನ್ನು ಮುಂದೆ ಹೆಚ್ಚಿನ ರೀತಿಯಲ್ಲಿ ಅಧಿಕಾರ ಸಿಗಲಿ ಹಾಗೂ 2028 ನೇ ಇಸವಿಯಲ್ಲಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ ಎಂದು ಮುಖಂಡರು ತಿಳಿಸಿದ್ದಾರೆ.

ಕುಂಬಮೇಳದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬೆಲವತ್ತ ರಾಮಕೃಷ್ಣಗೌಡರು ಹಾಗೂ ನಗರ ಅಧ್ಯಕ್ಷ ಕೆಆರ್ ಮಿಲ್ ಕಾಲೋನಿಯ ಆನಂದ್ ಗೌಡ್ರು ಹಾಗೂ ಪದಾಧಿಕಾರಿಗಳು ಪುಣ್ಯ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಹೆಚ್ ಡಿ ಕೆಗೆ ಒಳಿತಾಗಲೆಂದು ಕುಂಭ ಮೇಳದಲ್ಲಿ ಜೆಡಿಎಸ್ ಮುಖಂಡರ ಪ್ರಾರ್ಥನೆ Read More

ಕುಂಭಮೇಳ ಕಾಲ್ತುಳಿತ ಪ್ರಕರಣ:ಅರ್ಜಿ ವಜಾ

ನವದೆಹಲಿ: ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಡಿಸ್ಮಿಸ್ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕಾಲ್ತುಳಿತವು ದುರದೃಷ್ಟಕರ ಮತ್ತು ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದೆ.

ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‌ಗೆ ಮನವಿ ಸಲ್ಲಿಸಬಹುದು ಎಂದು ಪೀಠ ತಿಳಿಸಿದೆ.

ದೇಶಾದ್ಯಂತ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಜಾರಿಗೆ ತರಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಪಿಐಎಲ್ ಅನ್ನು ಪರಿಗಣಿಸಲು ಕೋರ್ಟ್‌ ನಿರಾಕರಿಸಿದೆ.

ಜ.29 ರಂದು ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು. 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು.ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿದ್ದರು.

ಕುಂಭಮೇಳ ಕಾಲ್ತುಳಿತ ಪ್ರಕರಣ:ಅರ್ಜಿ ವಜಾ Read More

ಮಹಾಕುಂಭಮೇಳ: ದರದ ಹೊರ ತಪ್ಪಿಸಿ-ಗಗನ್ ದೀಪ್

ಮೈಸೂರು: ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ರಾಜ್ಯದ ಜನರು ಭಾಗಿ ಆಗುತ್ತಿದ್ದಾರೆ.

ಇನ್ನೂ ಬಹಳಷ್ಟು ಮಂದಿ ಕುಂಭಮೇಳಕ್ಕೆ ಹೋಗಲು ಉತ್ಸುಕರಾಗಿದ್ದಾರೆ, ಆದರೆ ಅವರಿಗೆ ಬಸ್, ರೈಲು,ವಿಮಾನದ ಪ್ರಯಾಣ ದರ ಭಾರಿ ಹೊರೆಯಾಗಿದೆ,ಹಾಗಾಗಿ ಟಿಕೆಟ್ ದರ ಕಡಿಮೆ ಮಾಡಿ ಹೊರೆಯನ್ನು ತಪ್ಪಿಸಬೇಕು ಎಂದು ಸಮಾಜ ಸೇವಕರಾದ ಗಗನ್ ದೀಪ್ ಒತ್ತಾಯಿಸಿದ್ದಾರೆ.

ಜೀವದ ಹಂಗುತೊರೆದು ನಿತ್ಯ ಸಾವಿರಾರು ಜನರು ಭಕ್ತಿಯಿಂದ ಪ್ರಯಾಗರಾಜ್‌ಗೆ ತೆರಳಿ ಪುಣ್ಯಸ್ನಾನ ಮಾಡಿ, ಮೋಕ್ಷ ಪ್ರಾಪ್ತಿಗೆ ಪ್ರಾರ್ಥಿಸುತ್ತಾರೆ. ಅನೇಕರು ಗುಂಪು ಕಟ್ಟಿಕೊಂಡು ಪ್ರತ್ಯೇಕ ಖಾಸಗಿ ವಾಹನದ ಮೂಲಕ ಪಾಲ್ಗೊಳ್ಳುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಆದರೆ ಜನರ ಪ್ರಯಾಣಕ್ಕೆ ವಿಶೇಷ ವಾಹನ ವ್ಯವಸ್ಥೆ ಇಲ್ಲದಾಗಿದೆ. ಪ್ರಯಾಣ ದರ ಹೆಚ್ಚಿಸಲಾಗಿದ್ದು, ಸಾಮಾನ್ಯರಿಗೆ ಆರ್ಥಿಕ ಹೊರೆಯಾಗಿದೆ. ಪ್ರಯಾಣ ದರ ಎಲ್ಲರಿಗೂ ನಿಲುಕುವಂತೆ ಮಾಡ ಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಗಗನ್ ದೀಪ್ ಆಗ್ರಹಿಸಿದ್ದಾರೆ.

ಮಹಾಕುಂಭಮೇಳ: ದರದ ಹೊರ ತಪ್ಪಿಸಿ-ಗಗನ್ ದೀಪ್ Read More

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಪ್ರಧಾನಿ ಮೋದಿ ತೀವ್ರ ಸಂತಾಪ

ನವದೆಹಲಿ: ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಹೇಳಿದ್ದಾರೆ.

ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೂ ಮಾತನಾಡಿದ್ದೇನೆ, ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಪ್ರಧಾನಿ ಮೋದಿ ತೀವ್ರ ಸಂತಾಪ Read More

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ:ವದಂತಿಗಳಿಗೆ ಕಿವಿಗೊಡಬೇಡಿ-ಯೋಗಿ

ಪ್ರಯಾಗ್ರಾಜ್: ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ‌ವದಂತಿಗಳಿಗೆ ಕಿವಿಗೊಡಬೇಡಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ.

ಈ ಸಂಬಂಧ ಯೋಗಿ ಆದಿತ್ಯನಾಥ್ ಅವರು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದ್ದಾರೆ.

ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಯೋಗಿ ಅವರು, ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದರು.

ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಆಗಿದೆ, ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದಾಗ ಹಲವು ಭಕ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ಕಳೆದ ರಾತ್ರಿಯಿಂದ ಮೌನಿ ಅಮವಾಸ್ಯೆ ಮಹೂರ್ತ ಆರಂಭವಾದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ನಾಗ್ ವಾಸುಕಿ ಮಾರ್ಗ ಮತ್ತು ಸಂಗಮ್ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಇದೆ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬಾರದು,ಕುಂಭಮೇಳ ನಡೆಯುತ್ತಿರುವ ಪ್ರದೇಶದಲ್ಲಿ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರು ಸಂಗಮದ ಬಳಿ ಸಮೀಪದ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡಬಹುದು ಎಂದು ಮನವಿ ಮಾಡಿದರು.

ಅಲ್ಲಿಯೂ ಸಂಗಮದ ನೀರು ಬರುತ್ತಿದೆ. ಭಕ್ತರ ಅನುಕೂಲಕ್ಕಾಗಿ ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಭಕ್ತರನ್ನು ಅವರವರ ಸ್ಥಳಗಳಿಗೆ ಹಿಂತಿರುಗಿಸಲು ಪ್ರಯಾಗರಾಜ್ ಪ್ರದೇಶದ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳ ವ್ಯವಸ್ಥೆಗಳಿವೆ ಎಂದು ಹೇಳಿದರು.

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ:ವದಂತಿಗಳಿಗೆ ಕಿವಿಗೊಡಬೇಡಿ-ಯೋಗಿ Read More