ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ:18 ಮಂದಿ‌ ದುರ್ಮರಣ

ಹಿಮಾಚಲ ಪ್ರದೇಶ: ಹಿಮಾಚಲ‌ ಪ್ರದೇಶದ ಬಿಲಾಸ್ಪುರ್ ಜಿಲ್ಲೆಯ ಝಂಡುತಾ ಉಪವಿಭಾಗದ ಬಾಲುಘಾಟ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಖಾಸಗಿ ಬಸ್ ಮೇಲೆ ಬಂಡೆಗಳು ಉರುಳಿ ಹದಿನೆಂಟು ಮಂದಿ ಮೃತಪಟ್ಟಿದ್ದಾರೆ.

ಭೂಕುಸಿತದ ನಂತರ ಖಾಸಗಿ ಬಸ್ ಮೇಲೆ ಬಂಡೆಗಳು ಮತ್ತು ಮಣ್ಣಿನಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಕ್ಷಣಾ ಕಾರ್ಯ‌ ಭರದಿಂದ ಸಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲಾಡಳಿತ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ. ಸಂಪೂರ್ಣ ಯಂತ್ರೋಪಕರಣಗಳನ್ನು ನಿಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯ ರಾಜಧಾನಿ ಶಿಮ್ಲಾದಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ:18 ಮಂದಿ‌ ದುರ್ಮರಣ Read More

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ

ಜಮ್ಮು: ಭಾರೀ ಮಳೆಯಿಂದ
ಜಮ್ಮು- ಕಾಶ್ಮೀರದ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾದ ಕೂಡಲೇ ಭೀತರಾದ ಜನರು, ಅಪಾಯದಿಂದ ತಪ್ಪಿಸಿಕೊಳ್ಳಲು ಅತ್ತಿತ್ತ ಓಡಲು ಹೆಣಗಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ವೀಡಿಯೋದಲ್ಲಿ ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ವಿಡಿಯೋದಲ್ಲಿ ಕಾಣುತ್ತದೆ.

ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥನ ದರ್ಶನ ಪಡೆದಿದ್ದಾರೆ.

ಭಾರೀ ಮಳೆಗೆ ಭೂ ಕುಸಿತ;ಅಮರನಾಥ ಯಾತ್ರೆ ಸ್ಥಗಿತ Read More

ಮೇಘಾಲಯದಲ್ಲಿ ಪ್ರವಾಹ,ಭೂಕುಸಿತಕ್ಕೆ 10 ಮಂದಿ ಬಲಿ

ಶಿಲ್ಲಾಂಗ್: ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಭೂಕುಸಿತ ಸಂಭವಿಸಿ ಏಳು ಮಂದಿ ಮೃತಪಟ್ಟ ಘಟನೆ ಮೆಘಾಲಯದಲ್ಲಿ ನಡೆದಿದೆ.

ಮೆಘಾಲಯದ ದಕ್ಷಿಣ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ,ಜತೆಗೆ ಭೂ ಕುಸಿತ ಸಂಭವಿಸಿ 7 ಜನ ಉಸಿರುಗಟ್ಟಿ ಮೃತಪಟ್ಟಿದ್ದಾರೆ,ಈ ವೇಳೆ ಹಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ಮೇಘಾಲಯ ಮುಖ್ಯ ಮಂತ್ರಿ ಕಾನ್ರಾಡ್ ಸಂಗ್ಮಾ ಸೂಚಿಸಿದ್ದು,ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆಯೂ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ದಲು ಪ್ರದೇಶದಲ್ಲಿ ಪ್ರವಾಹದಿಂದ ಮೂರು ಮಂದಿ ಮೃತಪಟ್ಟಿದ್ದಾರೆ,ರಕ್ಷಣಾ ಕಾರ್ಯ ಚುರುಕುಗೊಂಡಿದೆ.

ಮೇಘಾಲಯದಲ್ಲಿ ಪ್ರವಾಹ,ಭೂಕುಸಿತಕ್ಕೆ 10 ಮಂದಿ ಬಲಿ Read More