ಸಬರ್ಬನ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಕಳ್ಳತನ ಮಾಡುತ್ತಿದ್ದವರು ಅಂದರ್

ಮೈಸೂರು: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಯಾಮಾರಿಸಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಯ ಸಬರ್ಬನ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಕಳ್ಳತನ ಮಾಡುತ್ತಿದ್ದರು.

ಆರೋಪಿಗಳಿಂದ 12 ಲಕ್ಷ ರೂ ಮೌಲ್ಯದ 184 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ಡಿ. 16ರಂದು ಮೈಸೂರು ನಗರದ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಬರ್ಬನ್ ಬಸ್ ನಿಲ್ದಾಣದಲ್ಲಿ ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟು ಕೊಂಡಿದ್ದ 184 ಗ್ರಾಂ ಚಿನ್ನ ಒಡವೆಗಳು ಕಳ್ಳತನವಾಗಿದ್ದ ಬಗ್ಗೆ ಮಹಿಳೆ ದೂರು ದಾಖಲಿಸಿದ್ದರು.

ಆರೋಪಿ ಮತ್ತು ಮಾಲು ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಲಾಗಿತ್ತು,ಈ ತಂಡವು‌ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,ಪ್ರಕರಣಕ್ಕೆ ಸಂಬಂಧಪಟ್ಟ 12 ಲಕ್ಷ ರೂ. ಮೌಲ್ಯದ ಒಟ್ಟು 184 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿ ಕೊಂಡಿದೆ.

ಮೈಸೂರು ನಗರದ ಡಿ.ಸಿ.ಪಿ. ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪನವರ ನೇತೃತ್ವದಲ್ಲಿ ಲಷ್ಕರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ ಆರ್ ಪ್ರಸಾದ್, ಎಂ. ರಾಧಾ, ಅನಿಲ್‌ಕುಮಾ‌ರ್ ವನ್ನೂರ್ ಹಾಗೂ ಸಿಬ್ಬಂದಿಗಳಾದ ಸುರೇಶ, ರವಿಕುಮಾರ, ಗಿರೀಶ್, ಮಂಜುನಾಥ, ಚೌಡಪ್ಪ ಪಾಸೀಗರ್, ಅಬ್ದುಲ್ ರೆಹಮಾನ್, ಅಶ್ವಿನಿ ಹಳವಾರ ಹಾಗೂ ತಾಂತ್ರಿಕ ವಿಭಾಗದ ಕುಮಾರ್ ಅವರುಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಬರ್ಬನ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಕಳ್ಳತನ ಮಾಡುತ್ತಿದ್ದವರು ಅಂದರ್ Read More