ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ-ಯದುವೀರ್

ಮಡಿಕೇರಿ: ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಜನತೆ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ಅವರಿಗೆ ಬಿಟ್ಡದ್ದು, ಆದರೆ ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಯದುವೀರ್ ತಿಳಿಸಿದರು.

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ-ಯದುವೀರ್ Read More

ಮಹಿಳೆ ಮೇಲೆ ಹಲ್ಲೆ ನಡೆಸಿ ಕರಿಮಣಿ ಸರ ದೋಚಿದ್ದವನಿಗೆ ಕಠಿಣ ಶಿಕ್ಷೆ

ಕೊಡಗು: ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ಮಾಡಿ ಮಾಂಗಲ್ಯ ಸರ ದೋಚಿದ್ದ ಅಪರಾಧಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

ಕೊಡಗು ಜಿಲ್ಲೆ,ಮಡಿಕೇರಿಯ ಐ ಡಿಬಿಐ ಬ್ಯಾಂಕ್ ಎದುರಿಗಿನ ಮನೆಯಲ್ಲಿ ವಾಸವಾಗಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಹಲ್ಲೆ ಮಾಡಿ, ಚಿನ್ನದ ಕರಿಮಣಿ ಸರ, ಉಂಗುರ ದೋಚಿದ್ದ ಆರೋಪಿಗೆ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

15 ಸಾವಿರ ದಂಡ ಕೂಡಾ ವಿಧಿಸಿದ್ದು, ಒಂದು ವೇಳೆ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಅಧಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದ ಆರೋಪಿ.

5-11-2023 ರಂದು ಮಡಿಕೇರಿ ನಗರದ ಐಡಿಬಿಐ ಬ್ಯಾಂಕ್ ಎದುರು ಮನೆಯಲ್ಲಿ ಒಂಟಿಯಾಗಿ ಸಾಕಮ್ಮ ಪ್ರಭಾಕರ್ ಎಂಬ ಮಹಿಳೆ ವಾಸವಿದ್ದರು.

ಆರೋಪಿ ಬಹುದಿನಗಳಿಂದ ಹೊಂಚು ಹಾಕಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿ, ತೀವ್ರವಾಗಿ ಗಾಯಗೊಳಿಸಿ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಉಂಗುರವನ್ನು ದೋಚಿ ಪರಾರಿಯಾಗಿದ್ದ.

ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು 6-11-2023 ರಂದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಹೆಡ್ ಕಾನ್ಸ್ ಟೇಬಲ್ ಗಳಾದ ಎ.ವಿ. ಕಿರಣ್ ಮತ್ತು ಡಿ. ಹೆಚ್. ಸುಮಿತಾ ಹಾಗೂ ಸಿಬ್ಬಂದಿ ಪ್ರಕರಣಕ್ಕೆ ಸಂಭಂಧಿಸಿದಂತೆ ತನಿಖೆ ಕೈಗೊಂಡು 2-01-2024 ರಂದು ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ. ಪ್ರಶಾಂತಿ ಅವರು ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ದಿನಾಂಕ ಆರೋಪಿ ವಿಕಾಸ್ ಜೋರ್ಡಿಯಾನನಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ.

ಮಹಿಳೆ ಮೇಲೆ ಹಲ್ಲೆ ನಡೆಸಿ ಕರಿಮಣಿ ಸರ ದೋಚಿದ್ದವನಿಗೆ ಕಠಿಣ ಶಿಕ್ಷೆ Read More

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು,ಏ.4: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ತೀವ್ರ ಬೇಸರದಿಂದ ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ಬೆಂಗಳೂರಿನ ನಾಗವಾರದ ಕಚೇರಿಯಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ

ಹಿಂದೆ ವಿನಯ್ ಸೋಮಯ್ಯ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಅವರ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು.

ಪೋಸ್ಟ್‌ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು.ಆ ನಂತರ ಅವರು ಮನನೊಂದಿದ್ದರು ಎಂದು ವಿನಯ್‌ ಕಡೆಯವರು ಹೇಳಿದ್ದಾರೆ.

ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್‌ ಅವರಿಗೆ ಮದುವೆಯಾಗಿ ಮಗು ಇದೆ.ಅವರು ಕುಟುಂಬ ದೊಂದಿಗೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಾಗಿದ್ದರು.

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More

ಸಾಂಸ್ಕೃತಿಕ ನಗರಿಯಲ್ಲಿ‌ ಯುವತಿಯ ಮೇಲೆ ಸ್ನೇಹಿತರಿಂದ ಗ್ಯಾಂಗ್ ರೇಪ್

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೇಯ ಘಟನೆ ನಡೆದಿದೆ.

ಕಳೆದ ಮೂರು ವರ್ಷಗಳ ಹಿಂದೆ‌ ನಡೆದಿದ್ದ‌ ಗ್ಯಾಂಗ್ ರೇಪ್ ಪ್ರಕರಣವೇ ನಗರದ ಜನರಲ್ಲಿ ಇನ್ನೂ ಮಾಸಿಲ್ಲ,ಈ‌ಗ ಮತ್ತೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಯುವತಿಯ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಮಾಡಿದರೆಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಮಡಿಕೇರಿ ಮೂಲದ ಯುವತಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ
ಖುದ್ದು ಹಾಜರಾಗಿ ದೂರು ನೀಡಿದ್ದಾಳೆ.

ಮಡಿಕೇರಿಯಿಂದ ಬಂದ ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಳು. ಈ ವೇಳೆ ಜೊತೆಗೆ ಇದ್ದ ಸ್ನೇಹಿತರೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಸಾಂಸ್ಕೃತಿಕ ನಗರಿಯಲ್ಲಿ‌ ಯುವತಿಯ ಮೇಲೆ ಸ್ನೇಹಿತರಿಂದ ಗ್ಯಾಂಗ್ ರೇಪ್ Read More