ಜು ‌19 ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ:ಸಿದ್ದತೆ ವೀಕ್ಷಿಸಿದ ಮಹದೇವಪ್ಪ

ಮೈಸೂರು: ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ನಡೆಯುವ ಹಿನ್ನಲೆಯಲ್ಲಿ ಬುಧವಾರ ಮಹಾರಾಜ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ವೇದಿಕೆ ಸ್ಥಳ ಪರಿಶೀಲನೆ ನಡೆಸಿದರು.

ಸರ್ಕಾರದ 2 ವರ್ಷ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ.

ಸಾಧನ ಸಮಾವೇಶಕ್ಕೆ ಭರದ ಸಿದ್ದತೆ ನಡೆಸಲಾಗುತ್ತಿದ್ದು ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಹಾಕಲಾಗುತ್ತಿದೆ.ಆದ್ದರಿಂದ ಹೆಚ್.ಸಿ ಮಹದೇವಪ್ಪ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಭದ್ರತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂದು ಸರ್ಕಾರದ ಎರಡು ವರ್ಷದ ಸಾಧನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನ ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಸಾಧನಾ ಸಮಾವೇಶದ ಮೂಲಕ ತವರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೂ ಮುಂದಾಗಿದ್ದು, ಸಿದ್ದತೆ ಕಾರ್ಯ ವೀಕ್ಷಣೆ ಮಾಡಿದ ಸಚಿವ ಎಚ್ ಸಿ ಮಹದೇವಪ್ಪಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಪೋಲಿಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಗೆ 3 ದಿನ ಪ್ರವಾಸ ಬರುತ್ತಿದ್ದಾರೆ. ಮೈಸೂರಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಮಂಜೂರು ಆಗಿತ್ತು. ಕೆಲವೊಂದು ಉದ್ಘಾಟನೆ ಆಗಬೇಕು. ಇನ್ನು ಅನೇಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಬೇಕು. ಜಿಲ್ಲೆಗೆ ಸರ್ಕಾರದಿಂದ ಏನೆಲ್ಲಾ ಅನುದಾನ ಬಂದಿದೆ ಎಂಬ ‌ಬಗ್ಗೆ ಚರ್ಚೆ ಮಾಡಿದ್ದೇವೆ. 502 ಕೋಟಿ ಹಣ ಲೋಕೋಪಯೋಗಿ ಇಲಾಖೆಗೆ ಬಂದಿದೆ. ಜಲ ಸಂಪನ್ಮೂಲ ಇಲಾಖೆಗೆ 419 ಕೋಟಿ ಹಣ ಬಂದಿದೆ. ಸೆಸ್ಕ್ ಗೆ 408 ಕೋಟಿ ರೂಪಾಯಿ ಹಣ ಬಂದಿದೆ. ಸಣ್ಣ ಕೈಗಾರಿಕೆಗೆ 198 ಕೋಟಿ ಹಣ ಕೊಟ್ಟಿದ್ದಾರೆ. ಜಿಲ್ಲಾ ಕೋಶದಿಂದ 120 ಕೋಟಿ ಹಣ ಬಂದಿದೆ. ವೈದ್ಯಕೀಯ ಶಿಕ್ಷಣ ಇಲಾಖೆಗೆ 100 ಕೋಟಿ ಕೊಟ್ಟಿದೆ . ಇತರೆ ಇಲಾಖೆಗಳಿಗೆ ನೂರಾರು ಕೋಟಿ ಹಣ ಕೊಟ್ಟಿದ್ದೇವೆ. 2569 ಕೋಟಿ ಹಣ ಮೈಸೂರು ನಗರ ವ್ಯಾಪ್ತಿಗೆ ಸರ್ಕಾರದಿಂದ ಬಂದಿದೆ. ಹೀಗಾಗಿ ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಸಾಧನ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಜುಲೈ 19 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಮಾಡಲಿದ್ದಾರೆ ಎಂದು ಹೇಳಿದರು.

ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡುತ್ತಿದೆ. ಮೈಸೂರು ಸರ್ವಾಂಗೀಣ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಪಣ ತೊಟ್ಟಿದ್ದಾರೆ. ಕಾರ್ಯಕ್ರಮಕ್ಕೆ ಕೇಂದ್ರದಿಂದ ಮಲ್ಲಿಕಾರ್ಜುನ್ ಖರ್ಗೆ ಬರಲಿದ್ದಾರೆ ಎಂದು ಮಾಹಿತಿ ನೀಡಿದರು.

ಜು ‌19 ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ:ಸಿದ್ದತೆ ವೀಕ್ಷಿಸಿದ ಮಹದೇವಪ್ಪ Read More

ಕುಸ್ತಿ ಪಂದ್ಯಗಳಿಗೆ 250 ಜೋಡಿಗಳ ಆಯ್ಕೆ

ಮೈಸೂರು: ದಸರಾ‌ ವೇಳೆ ನಾಡ ಕುಸ್ತಿ ಕೂಡಾ ಗಮನ ಸೆಳೆಯಲ್ಲಿದ್ದು, ಈ ಭಾರಿ ಅ.3 ರಿಂದ ಅ. 9ರವರೆಗೆ ನಡೆಯಲ್ಲಿರುವ ಕುಸ್ತಿ ಪಂದ್ಯಗಳಿಗೆ 250 ಜೋಡಿಗಳನ್ನು ಆಯ್ಕೆ ಮಾಡಲಾಗಿದೆ.

ದಸರಾ ಕುಸ್ತಿ ಉಪ ಸಮಿತಿಯ ವಿಶೇಷಾಧಿಕಾರಿ ಹಾಗೂ ಅಪರ ಪೊಲೀಸ್ ಅಧೀಕ್ಷಕರಾದ ನಾಗೇಶ್ ಕುಸ್ತಿ ಪಂದ್ಯಗಳ ಬಗ್ಗೆ ಮಾಹಿತಿ ನೀಡಿದರು.

ವಸ್ತುಪ್ರದರ್ಶನ ಆವರಣದ ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ದಸರಾ ಕುಸ್ತಿ ಉಪ ಸಮಿತಿಯಿಂದ ನಾಡ ಕುಸ್ತಿಗೆ ಜೋಡಿ ಕಟ್ಟುವ ಪ್ರಕ್ರಿಯೆಗೆ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಚಲಾನೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಾಗೇಶ್ ಅವರು,ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಕುಸ್ತಿಪಟುಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು ಎಂದು ತಿಳಿಸಿದರು.

ಕುಸ್ತಿಪಟುಗಳ ವಯಸ್ಸು, ತೂಕದ ಆಧಾರದಲ್ಲಿ 250 ಜೊತೆ ಕುಸ್ತಿ ಪಟುಗಳನ್ನು ಆಯ್ಕೆ ಮಾಡಲಾಗಿದೆ.7 ದಿನಗಳ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ಪ್ರತಿ ದಿನ 35-40 ಜೋಡಿಗಳಂತೆ ಸ್ಪರ್ಧೆ ನಡೆಯಲಿದೆ. ಕಳೆದ ಬಾರಿ 220 ಜೋಡಿಗಳು ಪಾಲ್ಗೊಂಡಿದ್ದವು, ಇದೇ ಮೊದಲ ಬಾರಿಗೆ 17 ವರ್ಷ ವಯಸ್ಸಿನೊಳಗಿನವರ ವಿಭಾಗದಲ್ಲೂ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ನಾಡ ಕುಸ್ತಿ ಜೊತೆಗೆ ಪಾಯಿಂಟ್ ಕುಸ್ತಿ, ಪಂಜಾ ಕುಸ್ತಿ ಸ್ಪರ್ಧೆಗಳೂ ನಡೆಯಲಿವೆ. ಪುರುಷ ಹಾಗೂ ಮಹಿಳೆಯರೂ ಸೇರಿ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ,ಈ ಬಾರಿಯ ದಸರಾ ಕುಸ್ತಿಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಯುವಕರನ್ನು ಕುಸ್ತಿಯತ್ತ ಸೆಳೆಯಲು 17 ವರ್ಷದ ಒಳಗಿನವರ ವಿಭಾಗವನ್ನೂ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಸಚಿವ ಮಹದೇವಪ್ಪ ಮಾತನಾಡಿ ಮೈಸೂರು ಮಹಾರಾಜರು ಕುಸ್ತಿಯನ್ನು ಪ್ರೊತ್ಸಾಹ ಮಾಡಿದ್ದರಿಂದ ಹಳೇ ಮೈಸೂರು ಭಾಗದಲ್ಲಿ ಜಗಜಟ್ಟಿ ಪೈಲ್ವಾನರು ಬೆಳಕಿಗೆ ಬಂದರು ಎಂದು ಸ್ಮರಿಸಿದರು.

ರುದ್ರ ಮೂಗ, ಬಾಲಾಜಿ, ಉರಿಬತ್ತಿ ನಂಜಯ್ಯ, ದಿಲ್ದಾರ್ ರಿಯಾಜ್ ಮೊದಲಾದವರು ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದರು. ಆದರೆ ಇತ್ತೀಚೆಗೆ ಮೈಸೂರಿನಲ್ಲೇ ಕುಸ್ತಿಪಟುಗಳು ಕಡಿಮೆಯಾಗುತ್ತಿದ್ದಾರೆ ವಿಷಾದಿಸಿದರು.

ಕುಸ್ತಿಯನ್ನು ಉಳಿಸಿ ಬೆಳೆಸಲು ಇಲ್ಲಿನ ಗರಡಿ ಮನೆಗಳನ್ನು ಸದೃಢಗೊಳಿಸಿ, ಅಲ್ಲಿ ನುರಿತ ತರಬೇತುದಾರರನ್ನು ನೇಮಕ ಮಾಡಲು ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಎನ್.ಸಿ. ವೆಂಕಟರಾಜು, ರಾಜ್ಯ ಕುಸ್ತಿ ಸಂಘದ ತಾಂತ್ರಿಕ ಅಧಿಕಾರಿ ಕೆ. ವಿನೋದ್‌ಕುಮಾರ್, ಹಿರಿಯ ಪೈಲ್ವಾನರಾದ ರಂಗಪ್ಪ, ನಂಜಪ್ಪ, ಛೋಟ ರಫೀಕ್, ಕೆಂಪೇಗೌಡ, ಅಮೃತ ಪುರೋಹಿತ ಉಪಸ್ಥಿತರಿದ್ದರು.

ಕುಸ್ತಿ ಪಂದ್ಯಗಳಿಗೆ 250 ಜೋಡಿಗಳ ಆಯ್ಕೆ Read More