ಬೆಳಗಾವಿ: ಮಹಾರಾಷ್ಟ್ರದ ಮೀರಜ್ ಜಂಕ್ಷನ್ ಮತ್ತು ಬೆಳಗಾವಿ ನಡುವೆ ಸಂಚರಿಸುತ್ತಿದ್ದ ತಾತ್ಕಾಲಿಕ ರೈಲನ್ನು ಖಾಯಂಗೊಳಿಸಿದ್ದು ಜನತೆ ಇದರ ಉಪಯೋಗ ಪಡೆಯಬೇಕೆಂದು ಸಂಸದ ಜಗದೀಶ ಶೆಟ್ಟರ್ ಕರೆ ನೀಡಿದ್ದಾರೆ.
ಬೆಳಗಾವಿ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ – ಮಿರಜ್ ಬೆಳಗಾವಿ ನಡುವೆ ತಾತ್ಕಾಲಿಕವಾಗಿ ಸಂಚರಿಸುತ್ತಿದ್ದು ರೈಲು ಸೇವೆಯನ್ನು ಹುಬ್ಬಳ್ಳಿ ನೈರುತ್ಯ ರೇಲ್ವೆ ವಲಯವು ಇದೆ 15 ರಿಂದ ಖಾಯಂ ಆಗಿ ಸಂಚರಿಸುವಂತೆ ಸೇವೆಯನ್ನು ಒದಗಿಸಲಾಗಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.
ಬೆಳಗಾವಿ – ಮಿರಜ್ – ಬೆಳಗಾವಿ ನಡುವೆ ಈ ರೈಲು ಬೆಳಗಾವಿ ( ರೈಲು ಸಂಖ್ಯೆ: 51461) ಯನ್ನು ಬೆಳಿಗ್ಗೆ 5.45ಕ್ಕೆ ಬಿಟ್ಟು ಮಿರಜನ್ನು ಬೆಳ್ಳಗ್ಗೆ 9 ಗಂಟೆಗೆ ತಲುಪಿ ಪುನಃ ಮಿರಜ್ ನಿಂದ ( ರೈಲು ಸಂಖ್ಯೆ: 51462 ) ಬೆಳಿಗ್ಗೆ 9.55ಕ್ಕೆ ಹೊರಟು ಮಧ್ಯಾಹ್ನ 1.10 ಕ್ಕೆ ಬೆಳಗಾವಿಯನ್ನು ತಲುಪಲಿದೆ.
ಅದರಂತೆ ಇದೆ ರೈಲು ಬೆಳಗಾವಿ ( ರೈಲು ಸಂಖ್ಯೆ: 51463) ಯನ್ನು ಮಧ್ಯಾಹ್ನ 13.30ಕ್ಕೆ ಬಿಟ್ಟು ಮಿರಜ ನ್ನು ಸಂಜೆ 16.30 ಕ್ಕೆ ತಲುಪಿ ಪುನಃ ಮಿರಜ್ ನಿಂದ ( ರೈಲು ಸಂಖ್ಯೆ: 51441) ಸಂಜೆ 19.10 ಕ್ಕೆ ಬಿಟ್ಟು ಬೆಳಗಾವಿಯನ್ನು ರಾತ್ರಿ 22.25 ಕ್ಕೆ ತಲುಪಲಿದೆ.
ಸಾರ್ವಜನಿಕರ ಬೇಡಿಕೆಯಂತೆ ಹಲವಾರು ಸಾರಿ ಕೇಂದ್ರ ರೇಲ್ವೆ ಸಚಿವರಲ್ಲಿಯೂ ಹಾಗೂ ನೈರುತ್ಯ ರೇಲ್ವೆ ವಲಯ ಅಧಿಕಾರಿಗಳಲ್ಲಿ ಪ್ರಸ್ತಾಪಿಸಿದ್ದರ ಹಿನ್ನಲೆಯಲ್ಲಿ ಈ ರೈಲು ಸೇವೆಯನ್ನು ಒದಗಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಪ್ರವಾಹ ಉಂಟಾಗಿದೆ.
ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಗಂಗಾ ಮತ್ತು ದೂಧ್ ಗಂಗಾ ನದಿಗಳು ತುಂಬಿ ಹರಿಯುತ್ತಿವೆ ಜತೆಗೆ ನಿಪ್ಪಾಣಿ ತಾಲೂಕಿನ ದೂಧಗಂಗಾ ಸೇತುವೆ ಮುಳುಗಡೆಯಾಗಿದೆ.
ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಗೆ ಕೇವಲ ಒಂದೆರಡು ಅಡಿ ಬಾಕಿ ಇದೆ. 2,079.50 ಅಡಿ ಸಾಮರ್ಥ್ಯ ಹೊಂದಿರುವ ನವಿಲು ತೀರ್ಥ ಜಲಾಶಯದಲ್ಲಿ ಸದ್ಯ 2,077.50 ಅಡಿ ನೀರು ಸಂಗ್ರಹವಾಗಿದೆ.
ಜಲಾಶಯ ಸುರಕ್ಷತೆಯ ದೃಷ್ಟಿಯಿಂದ ನೀರಾವರಿ ಇಲಾಖೆ ಅಧಿಕಾರಿಗಳು ನೀರನ್ನು ಹೊರಕ್ಕೆ ಬಿಟ್ಟಿದ್ದಾರೆ. 7,170 ಕ್ಯೂಸೆಕ್ ಒಳಹರಿವು ಇದ್ದರೆ, 5,594 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಕ್ಕೆ ಬಿಡಲಾಗಿದೆ.
ಜಿಲ್ಲೆಯ ದೊಡ್ಡ ಜಲಾಶಯ ಹಿಡಕಲ್ ಡ್ಯಾಂ ಬಹುತೇಕ ಭರ್ತಿಯಾಗಿದೆ. 2,175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 2,174.66 ಅಡಿ ನೀರು ಸಂಗ್ರಹವಾಗಿದೆ. 13,337 ಕ್ಯೂಸೆಕ್ ನೀರು ಒಳಹರಿವು ಇದೆ. 5,290 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬಿಡುತ್ತಿರುವುದರಿಂದ ಮಲಪ್ರಭಾ, ಘಟಪ್ರಭಾ ನದಿ ಸೇರಿದಂತೆ ಇನ್ನಿತರ ನದಿಗಳ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಮಹಾರಾಷ್ಟ್ರ :23 ವರ್ಷದ ಯುವತಿಯನ್ನು ಅಪಹರಿಸಿ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರ ದ ಪುಣೆಯಲ್ಲಿ ನಡೆದಿದೆ.
ಲೋನಾವಾಲದ ತುಂಗಾರ್ಲಿ ಪ್ರದೇಶದ ಯುವತಿಯನ್ನು ಕಾಮುಕರು ಅಪಹರಿಸಿ ತಮ್ಮ ಕಾರಿನಲ್ಲಿ ಸ್ವಲ್ಪ ದೂರ ಸಾಗಿ ಬಳಿಕ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ರಸ್ತೆಯ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.
ತುಂಗರ್ಲಿ ಪ್ರದೇಶದ ನಾರಾಯಣಿ ಧಾಮ್ ದೇವಸ್ಥಾನದ ಬಳಿ ಯುವತು ನಡೆದು ಹೋಗುತ್ತಿದ್ದಾಗ, ಮೂವರು ಆರೋಪಿಗಳು ತನ್ನನ್ನು ಬಲವಂತವಾಗಿ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ನಂತರ, ನನ್ನ ಕೈಗಳನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.
ವಿವಿಧ ಸ್ಥಳಗಳಲ್ಲಿ ಹಲವು ಬಾರಿ ಕೃತ್ಯ ಎಸಗಿದ ಬಳಿಕ ತನ್ನನ್ನು ನಂಗರ್ಗಾಂವ್‌ನ ರಸ್ತೆ ಬದಿ ಎಸೆದು ಅದೇ ಕಾರಿನಲ್ಲಿ ಹೊರಟು ಹೋದರು ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಆಕೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಕ್ಷಣವೇ ತಂಡ ರಚಿಸಿ ಆರೋಪಿಗಳ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ತುಂಗಾರ್ಲಿಯ ಸುನಿಲ್ ಗಾಯಕ್ವಾಡ್ (35) ಎಂಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಂಧನಕ್ಕೆ ಬೀಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ ರಾಮ್‌ಘರೆ ಮಾಧ್ಯಮದವರಿಗೆ ತಿಳಿಸಿದ್ದಾರೆ.
ನಾಗ್ಪುರ: ನಾಗ್ಪುರ ಹಿಂಸಾಚಾರದಲ್ಲಿ ಉಂಟಾದ ಹಾನಿಯ ವೆಚ್ಚವನ್ನು ಗಲಭೆಕೋರರಿಂದಲೇ ವಸೂಲು ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು,ವೆಚ್ಚ ಪಾವತಿಸಲು ವಿಫಲವಾದಲ್ಲಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಮಾರಾಟ ಮಾಡುತ್ತೇವೆ ಎಂದು ತಿಳಿಸಿದರು.
ಘಟನೆಯ ಕುರಿತಾದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೊಗಳು ಮತ್ತು ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಈವರೆಗೆ 104 ಗಲಭೆಕೋರರನ್ನು ಗುರುತಿಸಲಾಗಿದೆ. 12 ಅಪ್ರಾಪ್ತ ವಯಸ್ಕರು ಸೇರಿದಂತೆ 92 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಹಿಂಸಾಚಾರದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿದ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗಲಭೆಕೋರರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವವರೆಗೆ ನಮ್ಮ ಸರ್ಕಾರ ವಿರಮಿಸುವುದಿಲ್ಲ ಎಂದು ಫಡ್ನವೀಸ್ ಎಚ್ಚರಿಸಿದರು.
ಮುಂಬೈ: ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಎಂಟು ವರ್ಷದ ಮಗಳನ್ನು 29ನೇ ಮಹಡಿಯ ಫ್ಲಾಟ್‌ನಿಂದ ತಳ್ಳಿ ನಂತರ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಘಟನೆ ಬುಧವಾರ ಪಲಸ್ಪೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಗಳನ್ನು ತಳ್ಳಿದ 37 ವರ್ಷದ ಮೈಥಿಲಿ ದುವಾ ಎಂಬ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳು ಎಂದು ವರದಿಯಾಗಿದೆ. ಮೈಥಿಲಿ ತನ್ನ ಮಗುವನ್ನು ತಳ್ಳಿ ನಂತರ ತಾನೂ ಜಿಗಿದಿದ್ದಾಳೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪನ್ವೇಲ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಮುಂಬೈ,ಮಾ.4: ಕೊಲೆ ಪ್ರಕರಣವೊಂದರಲ್ಲಿ ಆಪ್ತನ ಬಂಧನವಾಗುತ್ತಿದ್ದಂತೆ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ರಾಜೀನಾಮೆ ನೀಡಿದ್ದಾರೆ.
ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ಸರ್ಪಂಚ್ ಒಬ್ಬರ ಭೀಕರ ಹತ್ಯೆಯಾಗಿತ್ತು. ಮಸ್ಸಾಜೋಗ್ ಗ್ರಾಮದ ಸರ್ಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯಲ್ಲಿ ಪಾತ್ರ ವಹಿಸಿದ್ದ ಆರೋಪದ ಮೇಲೆ ಸಚಿವ ಧನಂಜಯ್ ಆಪ್ತ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿತ್ತು.
ಆಹಾರ ಮತ್ತು ನಾಗರಿಕ ಸರಬರಾಜು ಖಾತೆಗಳನ್ನು ಹೊಂದಿದ್ದ ಧನಂಜಯ್ ಮುಂಡೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ.
ಪುಣೆ: ಚೆನ್ನಾಗಿ ಓದಿ ಪರೀಕ್ಷೆ ಪಾಸು ಮಾಡಿ ಮುಂದಕ್ಕೆ ಬಾ ಎಂದು ಬುದ್ದಿ ಮಾತು ಹೇಳಿದ ತಂದೆ,ತಾಯಿಯನ್ನೇ ನೀಚ ಮಗ ಹಣದ
ಇಂಜಿನಿಯರಿಂಗ್ ಎಕ್ಸಾಂನಲ್ಲಿ ಫೇಲ್ ಆಗಿದ್ದ ಮಗನಿಗೆ ಚೆನ್ನಾಗಿ ಓದಿ ಮುಂದೆ ಬಾ ಎಂದು ಬುದ್ದಿ ಹೇಳಿದ್ದಕ್ಕೆ ಕೋಪಗೊಂಡ ಮಗ ತಂದೆ ತಾಯಿಯನ್ನೆ ಕೊಲೆ ಮಡಿರುವ ಅತ್ಯಂತ ಹೇಯ ಘಟನೆಮಹಾರಾಷ್ಟ್ರದ ನಾಗುರದಲ್ಲಿ ನಡೆದಿದೆ.
ಲೀಲಾತ್ಕರ್ ದಾಕೋಲೆ ಹಾಗೂ ಅರುಣಾ ದಾಕೋಲೆ ಮಗನಿಂದ ಕೊಲೆಯಾದ ತಂದೆ,ತಾಯಿ.
ಡಿ.26 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಗ ಉತ್ಕರ್ಶ್ ದಾಕೋಲೆ ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ಕರ್ಶ್ ಕೆಲವು ಸಭೆಕ್ಟ್ ನಲ್ಲಿ ಫೇಲ್ ಆಗಿದ್ದ. ಚೆನ್ನಾಗಿ ಓದುವಂತೆ ಪೋಷಕರು ಹೇಳುತ್ತಿದ್ದರು.ಜತೆಗೆ ಮಗ ಓದುತ್ತಿರುವ ಕಾಲೇಜು ಬದಲಾವಣೆ ಮಾಡುವಂತೆ ಸೂಚಿಸಿದ್ದರು. ಇದಕ್ಕೆ ಕೋಪಗೊಂಡಿದ್ದ ಉತ್ಕರ್ಶ್ ಚಾಕುವಿನಿಂದ ಇರಿದು ಅಪ್ಪ ಹಾಗೂ ಅಮ್ಮನನ್ನು ಕೊಲೆ ಮಾಡಿದ.
ತಂಗಿಯನ್ನ ಸಂಬಂಧಿಕರ ಮನೆಗೆ ಕಳುಹಿಸಿ,ಅಒ್ಪ,ಅಮ್ಮ ಮೆಡಿಟೇಶನ್ ತರಬೇತಿಗೆ ಬೇರೆಕಡೆ ಹೋಗಿದ್ದಾರೆ ಎಂದು ಹೇಳುದ್ದ.
ಆದರೆ ಒಂದೆರಡು ದಿನದಲ್ಲಿ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಬಂದಾಗ ಕೊಲೆ ವಿಷಯ ಬೆಳಕಿಗೆ ಬಂದಿದೆ.
ಬೆಳಗಾವಿ: ಬೆಳಗಾವಿ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮ, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅಲ್ಲಿನವರ ಮೂರ್ಖತನ ಎಂದು ಸಿಎಂ ಸಿದ್ದರಾಮಯ್ಯ ಕಟುವಾಗಿ ಹೇಳಿದರು.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂಬ ಒತ್ತಾಯವನ್ನು ಮಹಾರಾಷ್ಟ್ರ ಶಾಸಕರು ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಹೀಗೆ ನೀಡಲಾಗುತ್ತಿರುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಕಡಕ್ ಎಚ್ಚರಿಕೆ ನೀಡಿದರು.
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ, ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದು ಸಿಎಂ ಹೇಳಿದರು.
ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ದಕ್ಷ ಆಡಳಿತಗಾರರಾಗಿದ್ದವರು.ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ , ರಾಜ್ಯಪಾಲರಾಗಿ ಕೆಲಸ ಮಾಡಿರುವ ಸಜ್ಜನ ರಾಜಕಾರಣಿಯಾಗಿದ್ದರು ಎಂದು ಸಿದ್ದರಾಮಯ್ಯ ಬಣ್ಣಿಸಿದರು.
ಡಾ. ರಾಜ್ ಕುಮಾರ್ ಅವರ ಅಪಹರಣದ ಸವಾಲನ್ನು ಸಮರ್ಥವಾಗಿ ಎದುರಿಸಿದ್ದರು. 92 ವರ್ಷದ ಎಸ್ ಎಂ ಕೃಷ್ಣ ಅವರು ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದಿಂದ ರಾಜ್ಯ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರೆಯಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅಂತ್ಯಕ್ರಿಯೆಯಲ್ಲಿ ನಾನು ಭಾಗವಹಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಮುಂಬೈ: ಮಹಾರಾಷ್ಟ್ರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವಿರೋಧವಾಗಿ ಆಯ್ಕೆಯಾಗಿದ್ದು,ಗುರುವಾರ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.
ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು.
ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಯಶಸ್ಸನ್ನು ಸಾಧಿಸಿದೆ. ರಾಜ್ಯದ 288 ವಿಫಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದಿದೆ. ಇದು ಇದುವರೆಗಿನ ಅತ್ಯುತ್ತಮ ಸಾಧನೆ ಎಂದು ಹೇಳಬಹುದು.
ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಗ್ಗೆ ಪತ್ರಿಕೆಗಳಿಗೆ ಸುಳ್ಳು ಜಾಹಿರಾತು ನೀಡಿದ ಬಿಜೆಪಿ ವಿರುದ್ಧ ಕೇಸು ದಾಖಲಿಸಲು ಕಾರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿದ್ದು ಮಾತನಾಡಿದರು.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಪಂಡರಪುರ ಮಂಗಲ್ ವೇಡ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ, ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಇದು ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂತಹ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದು ಹೇಳಿದರು.
ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಸಿದ್ದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಮವನ್ನೂ ರೂಪಿಸಲಿಲ್ಲ, ಅಚ್ಛೇ ದಿನ್ ಆಯೆಗಾ ಎಂದರು. ಕಹಾಂ ಹೈ ಅಚ್ಛೆ ದಿನ್, ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ ನೇರ ಸವಾಲು ಹಾಕಿದರು.
ನಿಮಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಎಂದು ಮೋದಿಯವರಿಗೆ ಕರೆ ನೀಡಿದರು.
ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದುಭ್ರಷ್ಟಾಚಾರದ್ದು ಅಲ್ವಾ, ಆ ಹಣ ಎಲ್ಲಿಂದ ಬಂತು ಎಂಬುದನ್ನು ಮಹಾರಾಷ್ಟ್ರ ಜನತೆಗೆ ಹೇಳಬಲ್ಲಿರಾ ಎಂದು ಪ್ರಶ್ನಿಸಿದರು.
ಆಪರೇಷನ್ ಕಮಲದ ಬಿಜೆಪಿಯ ಹೊಲಸು ಸಂಸ್ಕಾರವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ. ಈಗ ಮಹಾರಾಷ್ಟ್ರ ಜನತೆಯ ಸರದಿ. ನೀವೂ ಆಪರೇಷನ್ ಕಮಲದ ಸಂಸ್ಕಾರವನ್ನು ತಿರಸ್ಕರಿಸಿ ಸೆಡ್ಡು ಹೊಡೆಯಿರಿ ಎಂದು ಕರೆ ನೀಡಿದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ ಆಗದೆ ಕಾಂಗ್ರೆಸ್ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹಿರಾತು ನೀಡಿದೆ,ಇವರಿಗೆ ನಾಚಿಕೆ ಇಲ್ಲ. ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ,ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನನ್ನ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ
ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಹೇಳಿದರು.
ಲಕ್ಷಾಂತರ ಭಕ್ತರ ಸನ್ನಿಧಿಯಾಗಿರುವ ಮಂಗಳವೇಡಾ ಮಹಾಲಿಂಗರಾಯ ಕ್ಷೇತ್ರಕ್ಕೆ ಬರುವ ಭಕ್ತರಿಗಾಗಿ ರಾಜ್ಯ ಸರ್ಕಾರ ಯಾತ್ರಿ ನಿವಾಸ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಸಂಸದೆ ಪ್ರಣತಿ ಶಿಂಧೆ, ಸಚಿವರಾದ ಎಂ.ಬಿ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.