ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2. 53 ಕೋಟಿ ಸಂಗ್ರಹ

ಹನೂರು: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2 ಕೋಟಿ 53 ಲಕ್ಷ ರೂ ಸಂಗ್ರಹವಾಗಿದೆ.

ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಕಾರ್ಯದರ್ಶಿ ರಘು, ಎ. ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

28 ದಿನಗಳಲ್ಲಿ ಒಟ್ಟು ಮೊತ್ತ ರೂ.2,53,98,859.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 25 ಗ್ರಾಂ, ಬೆಳ್ಳಿ 01 ಕೆ.ಜಿ 253 ಗ್ರಾಂ ಹುಂಡಿಯಲ್ಲಿ ದೊರೆತಿದೆ.
ಕಾರ್ತಿಕ ಮಾಸ, ಭಾನುವಾರ, ರಜಾ ದಿನಗಳು ಸೇರಿದಂತೆ ವಿಶೇಷ ದಿನಗಳಲ್ಲಿ ಕೂಡ ಭಕ್ತರ ಸಂಖ್ಯೆ ಗಣನೀಯವಾಗಿತ್ತು.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಭಾಗ್ಯಮ್ಮ, ಕುಪ್ಯಾ , ಮರಿಸ್ವಾಮಿ, ಕಾಗಲವಾಡಿ, ಮಹದೇವಪ್ಪ ಕೀಳನಪುರ, ಕುಮಾರ ವಿಜಯ, ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಭಾರತಿ, ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2. 53 ಕೋಟಿ ಸಂಗ್ರಹ Read More

ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸಕ್ಕೆ ತೆರೆ

ಹನೂರು: ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನ ಭಕ್ತಸಾಗರವೇ ಹರಿದು ಬಂದಿತ್ತು.

ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 9:15 ರಿಂದ 9:55 ರ ಗಂಟೆಯಲ್ಲಿ ಸಲ್ಲುವ ಶುಭ ಲಗ್ನದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ಜರುಗಿತು.

ಸಂಜೆ 6:30 ರಲ್ಲಿ ಸಾಲೂರು ಮಠದ ಪೀಠಧ್ಯಕ್ಷರಾದ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು, ಡಿವೈಎಸ್ಪಿ ಧರ್ಮೇಂದ್ರ ಸೇರಿದಂತೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನಡೆಯಿತು.

ತೆಪ್ಪೋತ್ಸದ ವೇಳೆ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು.ತೆಪ್ಪೋತ್ಸವದ ಬಳಿಕ ದೀಪಾವಳಿ ಜಾತ್ರೆಗೆ ತೆರೆ ಬಿದ್ದಿತು.

ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸಕ್ಕೆ ತೆರೆ Read More

ಕಾಂಗ್ರೆಸ್ ಸರ್ಕಾರದಿಂದ ಗಂಧದಗುಡಿ ಕಸಾಯಿಖಾನೆ ಆಗುತ್ತಿದೆ:ಅಶೋಕ್

ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ ಎಂದು ‌ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆತಂಕ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಂತಾಗಿದೆ ಎಂದು ಅವರು ಬೇಸರ‌ ವ್ಯಕ್ತಪಡಿಸಿದ್ದಾರೆ.

ಮಲೈ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಪರಿಸ್ಥಿತಿ ಹೀಗೇ ಮುಂದುವರೆದರೆ,
ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ ಅಶೋಕ್.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಗಂಧದಗುಡಿ ಕಸಾಯಿಖಾನೆ ಆಗುತ್ತಿದೆ:ಅಶೋಕ್ Read More