ಮಹದೇಶ್ವರ ಬೆಟ್ಟದಲ್ಲಿ ಹೆಣ್ಣು ಹುಲಿ ಹತ್ಯೆ: ಕಠಿಣ ಕಾನೂನು ಜಾರಿಗೆ ತೇಜಸ್ವಿ ಆಗ್ರಹ

ಮೈಸೂರು: ಮಲೆಮಹದೇಶ್ವರ ವನ್ಯ ಅರಣ್ಯ ಧಾಮದಲ್ಲಿ ಹೆಣ್ಣು ಹುಲಿಯನ್ನು ಹತ್ಯೆ ಮಾಡಲಾಗಿದ್ದು,ಇದು ತೀರ್ವ ಬೇಸರ ತರುವ ಸಂಗತಿಯಾಗಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಒಂದು ಹೆಣ್ಣು ಹುಲಿ ಮತ್ತು ನಾಲ್ಕು ಹುಲಿ ಮರಿಗಳನ್ನು ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಹೆಣ್ಣು ಹುಲಿ ಯೊಂದನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಇದು ಅಕ್ಷಮ್ಯ ಎಂದು ಹೇಳಿದ್ದಾರೆ.

ಹುಲಿಗಳ ಹತ್ಯೆ ಪ್ರಕರಣದಲ್ಲಿ ಈಗಿರುವ ಕಾನೂನನ್ನು ಸರ್ಕಾರ ತಿದ್ದುಪಡಿ ಮಾಡಿ ಹೊಸ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕೆಂದು ಸರ್ಕಾರವನ್ನು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಈರೀತಿ ಕಾನೂನು ಜಾರಿಗೆ ತರುವ ಮೂಲಕ ಹುಲಿಗಳನ್ನು ದುಷ್ಕರ್ಮಿಗಳು ಹತ್ಯೆ ಮಾಡುವುದನ್ನು ನಿಲ್ಲಿಸ ಬಹುದಾಗಿದೆ ಇಲ್ಲದಿದ್ದರೆ ಹುಲಿಗಳ ಸಂತತಿ ಮುಂದಿನ ಪೀಳಿಗೆಗೆ ನಾಶವಾಗುವ ಸಂಭವವಿದೆ ಎಂದು ತೇಜಸ್ವಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಅರಣ್ಯಾಧಿಕಾರಿಗಳು ಹುಲಿಯನ್ನು ಹತ್ಯೆ ಮಾಡಿರುವವರನ್ನು ಬಂಧಿಸಬೇಕು ರಾಜ್ಯ ಸರ್ಕಾರ ಇವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಹೆಣ್ಣು ಹುಲಿ ಹತ್ಯೆ: ಕಠಿಣ ಕಾನೂನು ಜಾರಿಗೆ ತೇಜಸ್ವಿ ಆಗ್ರಹ Read More

ಬೈಕ್ ಗೆ ಬಸ್ ಡಿಕ್ಕಿ: ಇಬ್ಬರು ಯುವಕರು ಸಾವು

ಚಾಮರಾಜನಗರ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪ್ರದೀಪ್ (20) ಹಾಗೂ ಭವೀಶ್ (21) ಮೃತಪಟ್ಟ ನತದೃಷ್ಟರು.

ಈ ನತದೃಷ್ಟ ಯುವಕರು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ರಾಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೈಕ್ ಗೆ ಬಸ್ ಡಿಕ್ಕಿ: ಇಬ್ಬರು ಯುವಕರು ಸಾವು Read More

ಹೆಚ್ಎಎಲ್ ನಿಂದ ಬುಡಕಟ್ಟು ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ

ಮೈಸೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಒಡಂಬಡಿಕೆ ಪತ್ರದ ಮೂಲಕ ಮಲೆ ಮಹದೇಶ್ವರ ಬೆಟ್ಟದ ಗುಡ್ಡಗಾಡು ಪ್ರದೇಶದ ಬುಡಕಟ್ಟು ಸಮುದಾಯದ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ನಿರ್ಮಿಸಲು 4.77 ಕೋಟಿ ನೀಡಲಿದೆ.

ಈ ಸಂಬಂಧ ಹೆಚ್ಎಎಲ್ ಮತ್ತು ಸಾಲೂರು ಮಠದ ನಡುವೆ ಒಪ್ಪಂದವಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿ, ಸಮಾಜವನ್ನು ಉನ್ನತೀಕರಿಸಲು ಬಹಳ ಶ್ರಮವಹಿಸಿ ಈಗಲೂ ಈ ಪ್ರದೇಶದ ಜನಮಾನಸದಲ್ಲಿ ನೆಲೆಸಿರುವ ಪಟ್ಟದ ಶ್ರೀ ಗುರುಸ್ವಾಮಿಯವರ ‘ಪುಣ್ಯ ಸಂಸ್ಮರಣೋತ್ಸವ’ದ ಸಂದರ್ಭದಲ್ಲಿ ಈ ಘೋಷಣೆ ಮಾಡಲಾಗಿದೆ.

ಈ ಒಡಂಬಡಿಕೆ ಪತ್ರಕ್ಕೆ ಅಧಿಕೃತವಾಗಿ ಇದೇ ಶನಿವಾರ ಎಚ್ಎಎಲ್ ಮತ್ತು ಶ್ರೀ ಸಾಲೂರು ಮಠದ ಮಠಾಧೀಶ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರು ಸಹಿ ಹಾಕಿದರು.

ಇಂದಿನ ಆಧುನಿಕ ಡಿಜಿಟಲ್ ಯುಗದಲ್ಲೂ, ಮಲೆ ಮಹದೇಶ್ವರ ಬೆಟ್ಟ ಪ್ರದೇಶದ 18 ಹಳ್ಳಿಗಳು ವಿದ್ಯುತ್ ಮತ್ತು ರಸ್ತೆಯಂತಹ ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿವೆ.

ಇಲ್ಲಿನ ವಿದ್ಯಾರ್ಥಿಗಳಿಗೆ ಕಾಡಿನ ದಾರಿಯಲ್ಲಿ, ಬೆಟ್ಟಗಳನ್ನೇರಿ, ವಿದ್ಯಾಭ್ಯಾಸಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ಅನಿವಾರ್ಯತೆ ಇದೆ. ಶೈಕ್ಷಣಿಕ ಅವಕಾಶಗಳ ಕೊರತೆಯಿಂದಾಗಿ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನೇ ನಿಲ್ಲಿಸಿದ್ದಾರೆ. ಆದರೆ, ಈಗ ನಿರ್ಮಾಣಗೊಳ್ಳಲಿರುವ ನೂತನ ವಸತಿ ನಿಲಯ ಶಿಕ್ಷಣ ವಂಚಿತ ಸಮುದಾಯಗಳಿಗೆ ಆಶಾಕಿರಣವಾಗಲಿದೆ.

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕೃಪಾ ಶಿಕ್ಷಣ ಸಂಸ್ಥೆ ಎಚ್ಎಎಲ್ ಒದಗಿಸುವ ಹಣಕಾಸಿನ ನೆರವನ್ನು ಕಾರ್ಯರೂಪಕ್ಕೆ ತರಲಿದೆ.

ಆದರೆ, ನೂತನ ವಸತಿ ನಿಲಯ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಷ್ಟವನ್ನು ಪರಿಹರಿಸಲಿದ್ದು, ಅವರಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಠದ ವತಿಯಿಂದ ಈಗಾಗಲೇ ವಸತಿ ಶಿಕ್ಷಣ ಒದಗಿಸಲಾಗುತ್ತಿದೆ.ಎಚ್ಎಎಲ್ ಸಂಸ್ಥೆಯ ಉನ್ನತ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಎಚ್ಎಎಲ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಡಿ ಕೆ ಸುನಿಲ್ ಎಚ್ಎಎಲ್ ತಂಡದ ನೇತೃತ್ವ ವಹಿಸಿದ್ದರು. ಅವರೊಡನೆ, ರವಿ ಕೆ (ಕಾರ್ಯಾಚರಣಾ ನಿರ್ದೇಶಕರು), ಬಿ ಸೇನಾಪತಿ (ಹಣಕಾಸು ನಿರ್ದೇಶಕರು), ಎಂ.ಜಿ ಬಾಲಸುಬ್ರಹ್ಮಣ್ಯ (ಮಾನವ ಸಂಪನ್ಮೂಲ ನಿರ್ದೇಶಕರು) ಪಾಲ್ಗೊಂಡಿದ್ದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಏರೋಸ್ಪೇಸ್ ಕ್ಷೇತ್ರದ ಸಂಸ್ಥೆ ತಳಮಟ್ಟದ ಅಭಿವೃದ್ಧಿಗೆ ಇಳಿಯುವುದರ ಬಗ್ಗೆ ವಿವರಿಸಿ, ಇದು ಅಸಾಧಾರಣ ಬದಲಾವಣೆ ತರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಸಿಇಒ ಮೊನೋರೋಹಿತ್ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಶಾಸಕ ನರೇಂದ್ರಸ್ವಾಮಿ, ಹನೂರು ಶಾಸಕ ಮಂಜುನಾಥ್, ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ, ಮತ್ತು ತಮಿಳುನಾಡಿನ ಶಾಸಕ ಎ.ಜಿ ವೆಂಕಟಾಚಲಂ (ಅಂಡಿಯೂರು), ಮತ್ತು ಸದಾಶಿವಂ (ಮೆಟ್ಟೂರು)ಕರ್ನಾಟಕ ಸರ್ಕಾರದ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಎ ಇ ಉಪಸ್ಥಿತರಿದ್ದರು.

ಹೆಚ್ಎಎಲ್ ನಿಂದ ಬುಡಕಟ್ಟು ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ Read More

5 ಹುಲಿಗಳ ಅಸಹಜ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳ ಅಸಜ ಸಾವಿಗನ ಬಗ್ಗೆ
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ದುಃಖ ವ್ಯಕ್ತಪಡಿಸಿದ್ದಾರೆ.

ಜತೆಗೆ ಹುಲಿಗಳ ಸಾವು ಕುರಿತು ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 5 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ.

563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸಬೇಕು ಹಾಗೂ ಮೂರು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

5 ಹುಲಿಗಳ ಅಸಹಜ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ Read More

ಮೈಸೂರು ವಿಭಾಗಕ್ಕೆ ಭರಪೂರ ಕೊಡುಗೆ:ಸಚಿವ ಸಂಪುಟದಲ್ಲಿ ತೀರ್ಮಾನ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಮಲೆ ಮಹದೇಶ್ವರ ಬೆಟ್ಟ: ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ,ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ವಿವರಿಸಿದರು.

3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ ಮಾಡಲಾಗಿದೆ, ಪಿಡಬ್ಲ್ಯುಡಿ,ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆ ಮಾಡಲು ಹಣ ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು ‌

1787 ಕೋಟಿ ನೀರಾವರಿ,ಎಸ್ ಸಿ,ಎಸ್ ಟಿ ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು ‌

ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ ವೆಚ್ಚದಲ್ಲಿ ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು ಹಾಗೂ
ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ 250 ಬೆಡ್ ಗಳ
ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ,
ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕು ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ ಮಾಡಲಾಗುವುದು,ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ ನಿರ್ಮಿಸಲು ಮತ್ತು
ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ ಕೈಗೊಳ್ಳಲಾಗಿದೆ‌

40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ,ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲು,ಮೈಸೂರಿನ ಅಟಾರಾ ಕಚೇರಿಯಲ್ಲಿ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ ಪಡೆಯಲಾಗಿದೆ

ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚದ ಯೋಜನೆ,ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ,
ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ,
ಒಟ್ಟಾರೆ 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ವಿಭಾಗಕ್ಕೆ ಭರಪೂರ ಕೊಡುಗೆ:ಸಚಿವ ಸಂಪುಟದಲ್ಲಿ ತೀರ್ಮಾನ Read More

ಸಾಕು ಪ್ರಾಣಿಗಳ ರಕ್ಷಣೆಗೆ ಪ್ರಾರ್ಥಿಸಿಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಮಂಡ್ಯ: ಮಂಡ್ಯದ ಕಾರಸವಾಡಿ ಗ್ರಾಮದಿಂದ ಸುಮಾರು 200ಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಹೊರಟಿದ್ದಾರೆ.

ಮಾದಪ್ಪನ ಬೆಟ್ಡಕ್ಕೆ ಪಾದಯಾತ್ರೆ ಮಾಡಿದರೆ ಮನೆಯಲ್ಲಿರುವ ಹಸು ಕರು ಕುರಿಗಳನ್ನು ರೋಗ ರುಜನ ಗಳಿಂದ ಕಾಪಾಡುತ್ತಾನೆ ಎಂಬುದು ಗ್ರಾಮಸ್ಥರ ನಂಬಿಕೆಯಾಗಿದೆ.

ಪಾದಯಾತ್ರೆ ಪ್ರಾರಂಭಿಸಿದ ಭಕ್ತರು ಮೊದಲು ಮಳವಳ್ಳಿಯ ದಾಸನಗೌಡ ದೊಡ್ಡಿಯಲ್ಲಿ ವಿಶ್ರಾಂತಿ ಪಡೆದು ನಂತರ ಅಂದರೆ ಬುಧವಾರ ಹನೂರು ಪಟ್ಟಣಕ್ಕೆ ತಲುಪಿದ್ದಾರೆ.

ನಾಳೆ‌ ನ.14‌ ರಂದು ತಾಳುಬೆಟ್ಟ ಸ್ವಾಮಿಯವರಿಗೆ ಪೂಜಿ ಸಲ್ಲಿಸಿ, 15 ರಂದು ಮುಂಜಾನೆ 5 ಗಂಟೆಗೆ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಸ್ವಾಮಿಯ ಸನ್ನಿಧಾನಕ್ಕೆ ತೆರಳಲಿದ್ದಾರೆ.

ಕಾರ್ತಿಕ ಸೋಮವಾರದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾರಸವಾಡಿ ಗ್ರಾಮಸ್ಥರು ಮಲೆ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿರುವುದು ವಿಶೇಷ.

ಊರಿನ ಗ್ರಾಮ ದೇವರು ಬೋರಪ್ಪ ದೇವರಿಗೆ ಪೂಜೆಯನ್ನು ಸಲ್ಲಿಸಿ ನಂತರ ಪಾದಯಾತ್ರೆ ಹೊರಟರು.

ಬಹಳ ಹಿಂದಿನಿಂದಲೂ ಗ್ರಾಮಸ್ಥರು ಕಾರ್ತಿಕ ಸೋಮವಾರದ ಪ್ರಯುಕ್ತ ಮಲೆ ಮಾದಪ್ಪನ ದರ್ಶನಕ್ಕೆ ಪಾದಯಾತ್ರೆ ಮೂಲಕ ಹೋಗುವುದು‌ ವಾಡಿಕೆಯಾಗಿದೆ.

ದೇವರ ಸನ್ನಿಧಾನಕ್ಕೆ ಬಂದು ತಮ್ಮ ಕೈಯಲ್ಲಾದ ಸೇವೆ ಮಾಡುತ್ತೇವೆ ಎಂದು
ಹರಕೆ ಹೊತ್ತು ಅದೇ ರೀತಿ ಪ್ರತಿವರ್ಷವೂ ಸೇವೆಯನ್ನು ನೆರವೇರಿಸ್ಕೊಂಡು ಬರುತ್ತಿದ್ದಾರೆ.

ಕಾಲ್ನಡಿಗೆಯಲ್ಲಿ ಹೋಗಿ ದೈವ ದರ್ಶನವನ್ನು ಮಾಡಿಕೊಂಡು ಪುನಹ ಪಾದಯಾತ್ರೆಯ ಮೂಲಕ ತಮ್ಮ ಗ್ರಾಮವನ್ನು ಸೇರುತ್ತಾರೆ.

ಸಾಕು ಪ್ರಾಣಿಗಳ ರಕ್ಷಣೆಗೆ ಪ್ರಾರ್ಥಿಸಿಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ Read More