ಕಾವೇರಿ ಆರತಿಗೆ‌ ಸಿದ್ದತೆ ಪೂರ್ಣ: ಡಿಕೆಶಿ ಪರಿಶೀಲನೆ

ಮಂಡ್ಯ: ಕೆ.ಆರ್.ಎಸ್ ಬೃಂದಾವನದಲ್ಲಿ
ಸೆಪ್ಟೆಂಬರ್ 26 ರಿಂದ ಸಾಂಕೇತಿಕ ಕಾವೇರಿ ಆರತಿ ನಡೆಯಲಿದ್ದು ಸಿದ್ದತೆ ಪೂರ್ಣ
ಗೊಂಡಿದೆ.ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈ ಬಗ್ಗೆ ಪರಿಶೀಲನೆ ನಡೆಸಿದರು.

ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಪರಿಶೀಲನೆ ನಡೆಸಿದ ಡಿಕೆಶಿ, ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನಡೆಯಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ಆರತಿ ಸಮಿತಿ ಅಧ್ಯಕ್ಷರೂ ಆದ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತರಾದ ರಾಮ್ ಪ್ರಸಾತ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷೆ ಕುರಿತು ಡಿಸಿಎಂ ಅವರಿಗೆ ವಿವರಿಸಿದರು.

ಉಪಮುಖ್ಯಮಂತ್ರಿಗಳು ಕಾವೇರಿ ಆರತಿ ಪೂರ್ವ ತಾಲೀಮು ವೀಕ್ಷಣೆ ಮಾಡಿದರು.

ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸಾಥ್ ನೀಡಿದರು.

ಕಾವೇರಿ ಆರತಿಗೆ‌ ಸಿದ್ದತೆ ಪೂರ್ಣ: ಡಿಕೆಶಿ ಪರಿಶೀಲನೆ Read More

ವಾಲಿಬಾಲ್ ಪಂದ್ಯಾವಳಿ:ಬಿಜಿಎಸ್ ಆದಿಶಕ್ತಿ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಡ್ಯ: 14 ವರ್ಷದೊಳಗಿನ ತಾಲೋಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ
ಮಂಡ್ಯ ಜಿಲ್ಲೆ,ನಾಗಮಂಗಲ ತಾಲೋಕು ಆದಿಚುಂಚನಗಿರಿ ಬಿಜಿಎಸ್ ಆದಿಶಕ್ತಿ ಶಾಲೆ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಬಿಜಿಎಸ್ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆದ ಆದಿಶಕ್ತಿ ಶಾಲೆ, ಆದಿಚುಂಚನಗಿರಿ ಮಕ್ಕಳಿಗೆ, ಮುಖ್ಯಶಿಕ್ಷಕರು ಮತ್ತು ಶಾಲೆಯ ಎಲ್ಲ ಶಿಕ್ಷಕರು ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲೂ ಗೆಲುವು ಸಾಧಿಸಿ‌ ಶಾಲೆಗೆ ಕೀರ್ತಿ ತರುವಂತೆ ಶುಭ ಕೋರಿದರು.

ವಾಲಿಬಾಲ್ ಪಂದ್ಯಾವಳಿ:ಬಿಜಿಎಸ್ ಆದಿಶಕ್ತಿ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿವಾಹನ ಡಿಕ್ಕಿ: ಮಹಿಳೆ‌ ಸಾ*ವು

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾತ್ರಿ ರಸ್ತೆ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ‌ ಮೃತಪಟ್ಟ ಘಟನೆ ಮಂಡ್ಯ ಸಮೀಪ ನಡೆದಿದೆ.

ಬೆಂಗಳೂರು ಮೈಸೂರು ಹೆದಾರಿಯಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಗೆ ವಾಹನ ಡಿಕ್ಕಿ ಹೊಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಹೆದ್ದಾರಿ ಗಸ್ತು ವಾಹನ ಮತ್ತು ಆಂಬುಲೆನ್ಸ್ ಧಾವಿಸಿ ಮೃತ ದೇಹವನ್ನ ಮಂಡ್ಯ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಹಿಳೆ‌ ಯಾರು,ವಿಳಾಸ‌ ಇನ್ನೂ ತಿಳಿದು ಬಂದಿಲ್ಲ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿವಾಹನ ಡಿಕ್ಕಿ: ಮಹಿಳೆ‌ ಸಾ*ವು Read More

ಗೊಲ್ಲರಹಳ್ಳಿ ಗ್ರಾಮದಲ್ಲಿ ಗ್ರಾಮ ದೇವರ ಪೂಜೆ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಹಲಗೂರು ಸಮೀಪದ ಗೊಲ್ಲರಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮ ದೇವರ ಪೂಜೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

ಪ್ರತಿ ವರ್ಷ ಊರಿನ ಸುಖ ಶಾಂತಿ ನೆಮ್ಮದಿಗಾಗಿ ಮತ್ತು ಯಾವುದೇ ಅವಘಡಗಳು ನಡೆಯಬಾರದೆಂದು ಪ್ರಾರ್ಥಿಸಿ ಗ್ರಾಮದೇವತೆ ಪೂಜೆ,ಮೆರವಣಿಗೆ ಮಾಡಿಕೊಂಡು ಬರಲಾಗುತ್ತಿದೆ.

ಅದರಂತೆ ಈ ಬಾರಿ ಕೂಡಾ ಹೆಬ್ಬೆಟರಾಯ,ಮಲೆ ಮಹದೇಶ್ವರ,ಕಾಳಮ್ಮ, ಶ್ರೀ ಸಿದ್ದಪ್ಪಾಜಿ ಕಂಡಾಯ, ನಂಜಾಪುರದ ಆಂಜನೇಯ ಸ್ವಾಮಿ ಹಾಗೂ ಶ್ರೀ ಕ್ಷೇತ್ರ ತಾಳವಾಡಿ ರಂಗನಾಥ ಸ್ವಾಮಿ ಯಾದಂತಹ ಬಂಟರು ಎಂದು ಹೆಸರು ಪಡೆದ ಶ್ರೀ ಕ್ಷೇತ್ರ ತಾಳವಾಡಿ ದೊಡ್ಡ ದೇವರುಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿದ ವಾಹನದಲ್ಲಿ ಇಟ್ಡು ಊರಿನಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.

ಗ್ರಾಮದ ಎಲ್ಲಾ ಜನತೆ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ಗೊಲ್ಲರಹಳ್ಳಿ ಗ್ರಾಮದಲ್ಲಿ ಗ್ರಾಮ ದೇವರ ಪೂಜೆ Read More

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗುತ್ತಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ, ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಅರ್ಪಿಸಿ ನಂತರ ಅವರು ಮಾತನಾಡಿದರು.

ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಾನು ಭಕ್ತಿ, ವಿನಮ್ರತೆಯಿಂದ ಕೋರುತ್ತೇನೆ ಕಾವೇರಿ ಆರತಿಗೆ ಅಡ್ಡಿ ಪಡಿಸಬೇಡಿ,ಸಹಕಾರ ನೀಡಿ ಎಂದು ‌ಮನವಿ ಮಾಡಿದರು.

ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿಗೆ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ, ಯಾರದ್ದಾದರೂ ಅನುಮತಿ ಬೇಕೆ ಎಂದು ಡಿಸಿಎಂ ಪ್ರಶ್ನಿಸಿದರು

ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶ. ಮೈಸೂರು ದಸರಾ ರೀತಿ ಅತ್ಯುತ್ತಮ ದೀಪಾಲಂಕಾರ ಮಾಡಲಾಗಿದೆ. ಅತ್ಯುತ್ತಮ ಕಾರಂಜಿಗಳನ್ನು ತರಿಸಲಾಗಿದೆ. ವಿದೇಶಗಳಿಂದ ಅಲಂಕಾರಿಕ‌ ಸಸ್ಯಗಳನ್ನು ತರಿಸಲಾಗಿದೆ.‌ ನಮ್ಮ ಮುಖ್ಯಮಂತ್ರಿಗಳು ಇದನ್ನು ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕೆ ಖಾಸಗಿಯವರು ಬಂಡವಾಳ ಹೂಡಬಹುದು ಎಂದು ಆಹ್ವಾನ ಮಾಡಿದ್ದೇವೆ” ಎಂದು ಡಿಕೆಶಿ ಹೇಳಿದರು.

ರಾಜ್ಯದ ಅಣೆಕಟ್ಟುಗಳ ಗೇಟ್ ಗಳನ್ನು ದುರಸ್ತಿಗೊಳಿಸಲು ಈಗಾಗಲೇ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದ್ದೇವೆ. ಆ ಸಮಿತಿಯಿಂದ ವರದಿ ತೆಗೆದುಕೊಂಡು ಹಂತ, ಹಂತವಾಗಿ ರಾಜ್ಯದ ಅಣೆಕಟ್ಟುಗಳ ಗೇಟ್ ದುರಸ್ತಿಯನ್ನು ಮಾಡಬೇಕು ಎಂದು ಮುಂದಾಗಿದ್ದೇವೆ ಎಂದು ತಿಳಿಸಿದರು.

ಬಜೆಟ್ ಮಂಡಿಸಿ ಒಂದು ತಿಂಗಳಾಗಿದೆ ತಾಳ್ಮೆಯಿಂದ ಇದ್ದರೆ ಅನುದಾನ ಬಂದೇ ಬರುತ್ತದೆ. ನಾವು ಕೊಟ್ಟ ಮಾತನ್ನು ತಪ್ಪುವವರಲ್ಲ. ಆರ್ಥಿಕ ಇಲಾಖೆಯವರು ಆರ್ಥಿಕ ಶಿಸ್ತಿಗಾಗಿ ಹಂತ, ಹಂತವಾಗಿ ಹಣ ಬಿಡುಗಡೆ ಮಾಡುತ್ತಾರೆ. ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಕಾಲದಲ್ಲಿ ಬಜೆಟ್ ಗಿಂತ ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ, ನಮ್ಮನ್ನು ಟೀಕೆ ಮಾಡುವವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದೇ ವೇಳೆ ಕಾವೇರಿ ಕುರಿತು ಕವನ ವಾಚುಸುವ ಮೂಲಕ ಡಿಕೆಶಿ ಎಲ್ಲರ ಗಮನ ಸೆಳೆದರು.

ಮೈಸೂರು ರಾಜಮಾತೆ ತಮ್ಮ ಒಡವೆಗಳನ್ನು ಅಡವಿಟ್ಟು ಈ ಅಣೆಕಟ್ಟು ನಿರ್ಮಾಣಕ್ಕೆ ಮುನ್ನುಡಿ ಬರೆದರು. ಈ ಕಾರಣಕ್ಕೆ ಕಬ್ಬಿನ ಸಿಹಿ ಹಂಚಲಾಗುತ್ತಿದೆ, ಇಡೀ ಬೆಂಗಳೂರಿಗೆ, ತಮಿಳುನಾಡಿಗೆ ‌ನೀರು ನೀಡಲಾಗುತ್ತಿದೆ ಎಂದು ಹೇಳಿದರು.

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್ Read More

ಜೂನ್ 30 ಕೆ ಆರ್ ಎಸ್ ಗೆ ಸಿಎಂ ಬಾಗಿನ- ಚೆಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಜೂನ್ 30 ರಂದು ಬೆಳಿಗ್ಗೆ 10.30 ರ ನಂತರ ಕೆ‌ಆರ್.ಎಸ್ ಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ ಅಧಿಕಾರಿಗಳು ಅಗತ್ಯ ಸಿದ್ಧತೆ‌ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ವೇದಿಕೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.

ಸರ್ಕಾರ ಇ- ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಅವಶ್ಯಕವಿರುವ ಲ್ಯಾಪ್ ಟಾಪ್ ಗಳನ್ನು ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಒದಗಿಸಿದ್ದು,ಇಂದು ಸಂಕೇತಿಕವಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಚಲುವರಾಯಸ್ವಾಮಿ ಲ್ಯಾಪ್‌ ಟಾಪ್ ವಿತರಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಲ್ಲಿ ಸರ್ಕಾರಿ ಕೆಲಸಗಳನ್ನು ಇ- ಆಫೀಸ್ ಮೂಲಕ ನಿರ್ವಹಿಸಬೇಕಿದ್ದು, ಕೆಲಸವನ್ನು ಪಾರದರ್ಶಕ ಹಾಗೂ ದಕ್ಷತೆಯಿಂದ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕಾ.ನೀ.ನಿ.ನಿ ಅಧೀಕ್ಷಕ‌ ಅಭಿಯಂತರ ರಘುರಾಮ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಜೂನ್ 30 ಕೆ ಆರ್ ಎಸ್ ಗೆ ಸಿಎಂ ಬಾಗಿನ- ಚೆಲುವರಾಯಸ್ವಾಮಿ Read More

ಇನ್ಸ್ಟಾಗ್ರಾಂ ನಲ್ಲಿ ಪರಿಚಯ,ಪ್ರೀತಿ:ವಿವಾಹಿತೆಯ ಕೊಂದ ಯುವಕ!

ಮಂಡ್ಯ: ಇತ್ತೀಚೆಗೆ ಈ ಸಾಮಾಜಿಕ ಜಾಲತಾಣಗಳಿಂದ ಪರಿಚಿತರಾಗೋದು,ನಂತರ ಪ್ರೀತಿ,ಪ್ರೇಮ ಮೋಸ ಕಡೆಗೆ ಕೊಲೆಯಲ್ಲಿ ಅಂತ್ಯ.ಇದೆಲ್ಲ ಸಾಮಾನ್ಯ ಆಗಿಬಿಟ್ಟಿದೆ.

ಇಂತಹ ಪ್ರಕರಣಗಳು ಆಗಿಂದ್ದಾಗ್ಗೆ ಮಾಧ್ಯಮಗಳಲ್ಲಿ ಬರುತ್ತಿದ್ದರೂ ಜನ ಎಚ್ಚೆತುಕೊಳ್ಳದೆ ತಾವಾಗಿಯೇ ಅಪಾಯ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.ಇದಕ್ಕೆ ಏನು ಹೇಳಬೇಕೊ ತಿಳಿಯದಾಗಿದೆ.

ಇಂತಹದ್ದೇ ಮತ್ತೊಂದು ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ವಿವಾಹಿತ ಮಹಿಳೆಯನ್ನು ಇನ್ಸ್ಟಾಗ್ರಾಂ ನಲ್ಲಿ ಪರಿಚಯಿಸಿಕೊಂಡ ಯುವಕ ಪ್ರೀತಿಯ ನಾಟಕವಾಡಿ ಆಕೆಯೊಂದಿಗೆ ಚೆಕ್ಕಂದವಾಡಿ ಹತ್ತೇ ದಿನಗಳಲ್ಲಿ ಅವಳನ್ನು ಕೊಂದು ದೇಹವನ್ನು ತನ್ನದೇ ಜಮೀನಿನಲ್ಲೇ ಬಚ್ಚಿಟ್ಟ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಕರೋಟಿ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಕೊಲೆ ಆದ ವಿವಾಹಿತ ಮಹಿಳೆ.

ಕರೋಟಿ ಗ್ರಾಮದ ಪುನೀತ್ ಕೊಲೆ ಮಾಡಿ ಆಕೆಯ ದೇಹವನ್ನು ತನ್ನ ಜಮೀನಿನಲ್ಲೇ ಬಚ್ಚಿಟ್ಟಿದ್ದ.

ಇನ್ಸ್ಟಾಗ್ರಾಂ ನಲ್ಲಿ ಪ್ರೀತಿಯನ್ನ ಪುನೀತ್ ಪರಿಚಯ ಮಾಡಿಕೊಂಡು ಪ್ರೀತಿ-ಪ್ರೇಮ ಶುರು ಮಾಡಿದ್ದಾನೆ.

ಬೆಳಿಗ್ಗೆ ಮೈಸೂರು, ಮಂಡ್ಯದಲ್ಲಿ ಜಾಲಿ ರೈಡ್ ಮಾಡಿದ್ದಾರೆ.ಸಂಜೆ ಪ್ರಿಯತಮೆ ಮೈಮೇಲಿದ್ದ ಚಿನ್ನಾಭರಣ ದೋಚಿ ಬರ್ಬರ ಹತ್ಯೆ ಮಾಡಿದ್ದಾನೆ.

ಗಂಡ, ಮಕ್ಕಳಿದ್ದರೂ ಪುನೀತ್ ಜೊತೆ ಪ್ರೀತಿ ಲವ್ ನಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾಳೆ.

ಭಾನುವಾರ ಮೈಸೂರಿಗೆ ಒಟ್ಟಿಗೆ ಇಬ್ಬರೂ ಕಾರಿನಲ್ಲಿ ತೆರಳಿದ್ದರು. ಮೈಸೂರು, ಮಂಡ್ಯ ಪ್ರವಾಸಿ ಸ್ಥಳಗಳಲ್ಲಿ ಸುತ್ತಾಡಿದ್ದಾರೆ.

ನಂತರ ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶಕ್ಕೆ ಬಂದಿದ್ದಾರೆ.ಅದೇನಾಯಿತೊ ಇಬ್ಬರ ನಡುವೆ ಜಗಳ ಆಗಿದೆ.

ಆಗ ಪುನೀತ್ ಅಲ್ಲೆ ಕೊಲೆಗೈದು ಚಿನ್ನಾಭರಣ ದೋಚಿ ಬಳಿಕ ಪ್ರೀತಿಯ ದೇಹ ತಂದು ಕರೋಟಿ ಗ್ರಾಮದ ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದಾನೆ.

ಪ್ರೀತಿಯ ಪೋನ್ ಗೆ ಬಂದ ಕಾಲ್ ನಿಂದ ಪುನೀತ್ ಸಿಕ್ಕಿಬಿದ್ದಿದ್ದಾನೆ.
ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈಗ ಕಂಬಿ ಎಣಿಸುತ್ತಿದ್ದಾನೆ.

ಇನ್ಸ್ಟಾಗ್ರಾಂ ನಲ್ಲಿ ಪರಿಚಯ,ಪ್ರೀತಿ:ವಿವಾಹಿತೆಯ ಕೊಂದ ಯುವಕ! Read More

ಸಧ್ಯದಲ್ಲೇ ಕೆ ಆರ್ ಎಸ್ ಭರ್ತಿ!

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಜಲಾಶಯಗಳಿಗೆ ಹೆಚ್ಚು ನೀರು ಹರಿದು ಬರುತ್ತಿದ್ದು ಬಹುತೇಕ ಜಲಾಶಯಗಳು ಭರ್ತಿ ಆಗುತ್ತಿವೆ.

ಕಾವೇರಿ ಜಲಾನಯನ ಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.

ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ 124 ಅಡಿಯಿರವ ಕೆಆರ್ ಎಸ್ ಜಲಾಶಯ ಈಗಾಗಲೇ 120 ಅಡಿ ಭರ್ತಿಯಾಗಿದ್ದು,ಪೂರ್ತಿ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ.

ಇನ್ನೊಂದು ವಾರದಲ್ಲಿ ಭರ್ತಿಯಾಗುವ ಸಾಧ್ಯತೆ ಇದ್ದು ಹಾಗೇನಾದರೂ ಆದರೆ ಇದೇ ಮೊದಲ ಬಾರಿಗೆ ಕೆಆರ್ ಎಸ್ ಜಲಾಶಯ ಜೂನ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಂತಾಗುತ್ತದೆ.

ಕೆಆರ್ ಎಸ್ ಜಲಾಶಯದ ನೀರಿನ ಸಂಗ್ರಹ ಮಟ್ಟ 43 ಟಿಎಂಸಿ. ಇಂದು 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಕೊಡಗು, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಧ್ಯದಲ್ಲೇ ಕೆ ಆರ್ ಎಸ್ ಭರ್ತಿ! Read More

ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ ದೃಶ್ಯ ಸೆರೆ ಹಿಡಿದ ನೀಚರು!

ಮಂಡ್ಯ: ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿದ್ದ ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ ದೃಶ್ಯಗಳನ್ನು ಡ್ರೋನ್ ಬಳಸಿ ಸೆರೆ ಹಿಡಿದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದು ಎಲ್ಲೆಡೆ ತೀವ್ರ ಆಕ್ರೋಶ‌ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಂದಗೆರೆ ಸಮೀಪ ಈ ನೀಚ ಕೆಲಸ ನಡೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇಂತಹ ವಿಕೃತಿ ಮೆರೆದ ಪುಂಡರು ಕಾರು, ಬೈಕ್ ಗಳಲ್ಲಿ ಪರಾರಿಯಾಗಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನೂರಾರು ನರೇಗಾ ಕೂಲಿ ಕಾರ್ಮಿಕರು, ಮಹಿಳೆಯರು ಪ್ರತಿಭಟನೆ ನಡೆಸಿದರು.

ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವಿನಹಳ್ಳಿ ಅಮಾನಿಕೆರೆ ಹೂಳೆತ್ತುವ ಕಾರ್ಯ ನಡೆಯುತ್ತಿದೆ, ಸುತ್ತಲಿನ ವಿವಿಧ ಗ್ರಾಮಗಳ 100ಕ್ಕೂ ಅಧಿಕ ಮಹಿಳೆಯರು ಹೊಳೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ.

ಕಾಮಗಾರಿ ವೇಳೆ ಕೆಲವು ಮಹಿಳಾ ಕಾರ್ಮಿಕರು ಶೌಚಕ್ಕೆ ತೆರಳಿದಾಗ ವಿಕೃತ ಮನಸ್ಸಿನ ಕಿಡಿಗೇಡಿಗಳು ಕೆರೆ ಏರಿ ಮೇಲೆ ನಿಂತು ಡ್ರೋನ್ ಕ್ಯಾಮರಾ ಬಳಸಿ ಚಿತ್ರೀಕರಣ ಮಾಡಿದ್ದಾರೆ.

ಡ್ರೋನ್ ಹಾರಾಡುತ್ತಿರುವುದನ್ನು ಕಂಡ ಕೂಲಿ ಕಾರ್ಮಿಕ ಮಹಿಳೆಯರು ಕೂಗಿ ಬರುವಷ್ಟರಲ್ಲಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ,ಇಂತಹ ನೀಚ ಕೆಲಸ ಮಾಡಿದ ಪೋಕರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನ ಒತ್ತಾಯಿಸಿದ್ದಾರೆ.

ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ ದೃಶ್ಯ ಸೆರೆ ಹಿಡಿದ ನೀಚರು! Read More

ಕೇಂದ್ರ ಸರ್ಕಾರದ ಎಲ್ಲಾ ಸೂಚನೆ ಪಾಲಿಸಲಾಗುತ್ತಿದೆ-ಸಿಎಂ

ಮಂಡ್ಯ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮದ್ದೂರಿನ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮವದರೊಂದಿಗೆ ಮಾತನಾಡಿದ ಸಿಎಂ,ಅಣೆಕಟ್ಟುಗಳ ಸುರಕ್ಷತೆ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗಿದೆ ನಮ್ಮದೇಶದ ಸೈನಿಕರ ಹೆಸರಲ್ಲಿ ಪೂಜೆ ನಡೆದಿದೆ ಎಂದು ಮಾಧ್ಯಮದ ವರ ಪ್ರಶ್ನೆಗೆ ಸಿಎಂ ಉತ್ತರಿಸಿದರು.

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ,ಬಹಳಷ್ಟು ಮಂದಿಯನ್ನು ಗಡಿಪಾರು ಮಾಡಲಾಗಿದೆ.ಆದರೆ ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ ಎಂದು ಮುಖ್ಯ ಮಂತ್ರಿಗಳು ಸ್ಪಷ್ಟ ಪಡಿಸಿದರು.

ಕೇಂದ್ರ ಸರ್ಕಾರದ ಎಲ್ಲಾ ಸೂಚನೆ ಪಾಲಿಸಲಾಗುತ್ತಿದೆ-ಸಿಎಂ Read More