ಸಹಜ ಸ್ಥಿತಿಗೆ ಮರಳಿದ ನಾಗಮಂಗಲ

ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ಉದ್ವಿಗ್ನ ಗೊಂಡಿದ್ದ ನಾಗಮಂಗಲ ಸಹಜ ಸ್ಥಿತಿಗೆ ಬಂದಿದೆ.

ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ ಭಾನುವಾರ ನಿಷೇಧಾಜ್ಞೆ ಕೂಡಾ ತೆರವುಗೊಳಿಸಲಾಗಿದೆ.

ಈ ಮಧ್ಯೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿದೆ.

ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್‌ ಮಾಡಲಾಗಿತ್ತಿ ಎಂಬ ಶಂಕೆ ವ್ಯಕ್ತವಾಗಿದೆ.

ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರು, ಪ್ರಕರಣದ 44ನೇ ಆರೋಪಿ ಯೂಸೂಫ್‌, 61ನೇ ಆರೋಪಿ ನಾಸೀರ್‌ ಇಬ್ಬರೂ ಕೇರಳ ರಾಜ್ಯದ ಮಲ್ಲಪುರಂ ನಿವಾಸಿಗಳು ಎಂದು ಗೊತ್ತಾಗಿದೆ.

ಈ‌ ಇಬ್ಬರು ಆರೋಪಿಗಳು ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದ್ದು,
ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮುಸ್ಲಿಮರ ಕೈವಾಡದ ಇದೆ,ಆದ್ದರಿಂದ ಈ ಪ್ರಕರಣದ ತನಿಖೆಯನ್ನ ಎನ್‌ಐಎ ಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದೆ.

ಸಹಜ ಸ್ಥಿತಿಗೆ ಮರಳಿದ ನಾಗಮಂಗಲ Read More

ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

ಶ್ರೀರಂಗಪಟ್ಟಣ: ಮಂಡ್ಯದ ನಾಗಮಂಗಲ ತಾಲೂಕಿನಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಹಿಂದು ಸಂಘಟನೆಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗಣಪತಿ ಸೇವಾ ಸಮಿತಿಯವರು ಹಾಗೂ ಹಿಂದೂ ಕಾರ್ಯಕರ್ತರು ಸಾರ್ವಜನಿಕರು ಒಗ್ಗೂಡಿ ಮಾನವ ಸರಪಳಿ ನಿರ್ಮಿಸಿ ಸರ್ಕಾರ ಹಾಗೂ ದುರುಳರ ವಿರುದ್ಧ ದಿಕ್ಕಾರ ಕೂಗಿದರು.

ಇದೇ ರೀತಿ ಹಿಂದುಗಳ ಮೇಲೆ ಅಟ್ಟಹಾಸ ಮೆರೆದರೆ ಉಗ್ರ ಹೋರಾಟಕ್ಕೆ ನಾವು ಸಿದ್ಧವಾಗಬೇಕಾಗುತ್ತದೆ ಎಂದು ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ನಾನು ಬ್ರಾಹ್ಮಣ, ನಾನು ಲಿಂಗಾಯಿತ, ನಾನು ಶೂದ್ರ, ನಾನು ವೈಶ್ಯ ಎಂದು ಕಿತ್ತಾಡಿಕೊಂಡರೆ
ನಮ್ಮ ಹಿಂದೂ ಧರ್ಮಕ್ಕೆ ಉಳಿಗಾಲವಿಲ್ಲ
ಆದ್ದರಿಂದ ನಮ್ಮ ಮನೆಯ ನಾಲ್ಕು ಗೋಡೆ ಮಧ್ಯ ಮಾತ್ರ ನಮ್ಮ ಜಾತಿ ಸೀಮಿತವಾಗಿರಬೇಕು ಮನೆಯಿಂದ ಹೊರಗೆ ಬಂದರೆ ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಮನೋಭಾವನೆ ಬೆಳೆಸಿಕೊಂಡರೆ ಮಾತ್ರ ಹಿಂದೂ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಹೇಳಿದರು.

ಗಲಭೆ ವೇಳೆ ದುರುಳರು ಹಿಂದೂ ಧಾರ್ಮಿಕ ಮನೋಭಾವನೆಗಳ ಮೇಲೆ ಧಕ್ಕೆ ಮಾಡಿದ್ದಾರೆ, ಕಲ್ಲು ಗುಂಡುಗಳು ಮಚ್ಚು ತಲ್ವಾರ್ ಗಳಿಂದ ಹಲ್ಲೆ ನಡೆಸಿ ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಅಲ್ಲದೆ ಪೊಲೀಸರ ಮೇಲೂ ದಾಳಿ ಮಾಡಿದ್ದಾರೆ ಇದನ್ನು ಖಂಡಿಸುತ್ತೇವೆ ಎಂದು ಪ್ರತಿಭಟನಾ ನಿರತರು ಆಕ್ರೋಶ‌ ವ್ಯಕ್ತಪಡಿಸಿದರು.

ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ Read More

ನಾಗಮಂಗಲದಲ್ಲಿ ಶಾಂತಿ ಮರು ಸ್ಥಾಪನೆಗೆ ಕ್ರಮ ಕೈಗೊಳ್ಳಿ-ಹೆಚ್ ಡಿ ಕೆ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಗ್ರವಾಗಿ ಖಂಡಿಸಿದ್ದಾರೆ.

ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯಿಂದ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಮಾಡಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ಮೂಲಕ ದುಸ್ಸಾಹಸ ಮಾಡಿ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯಕ್ಕೆ ಕಾರಣರಾಗಿದ್ದಾರೆ‌ ಎಂದು ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೂ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಗರಂ ಆಗಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ್ದರ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ ಎಂದು ಹೆಚ್ ಡಿ ಕೆ ಜರಿದಿದ್ದಾರೆ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿರುವ ಕುಮಾರಸ್ವಾಮಿ, ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಾಗಮಂಗಲದಲ್ಲಿ ಶಾಂತಿ ಮರು ಸ್ಥಾಪನೆಗೆ ಕ್ರಮ ಕೈಗೊಳ್ಳಿ-ಹೆಚ್ ಡಿ ಕೆ ಆಗ್ರಹ Read More

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಅಶೋಕ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳು ಶಾಂತಿ ಕದಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬುಧವಾರ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಖಂಡಿಸಿರುವ ಅಶೋಕ್, ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಗೆ ಇದು ಮತ್ತೂಂದು ನಿದರ್ಶನವಾಗಿದೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತದ್ದೇ ಘಟನೆ ನಡೆದಿತ್ತು,ಆದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದರಿಂದಲೇ ಘಟನೆ ಮರುಕಳಿಸಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಕೆಲ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ, ಚಪ್ಪಲಿ ಎಸೆದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗಿದ್ದಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಕಾನೂನಿನ ಭಯವೇ ಇಲ್ಲದಂತಾಗಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೂ ಈ ಮತಾಂಧ ಪುಂಡರು ದಬ್ಬಾಳಿಕೆ ನಡೆಸಿರುವುದು ನೋಡಿದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ ದೊರಕುತ್ತಿದೆ ಎಂಬುದನ್ನು ಊಹಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಮರುಕಳಿಸುತ್ತಿರುವುದಕ್ಕೆ ನೇರ ಕಾರಣ ಎಂದು ಕಟುವಾಗಿ ಹೇಳಿದ್ದಾರೆ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

ನಾಗಮಂಗಲ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಅಶೋಕ್ ಆಕ್ರೋಶ Read More

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲತಾ ರಾಜಶೇಖರ್ ಅಧ್ಯಕ್ಷರಾಗಲಿ: ತೇಜಸ್ವಿ ಆಗ್ರಹ

ಮೈಸೂರು: ಮಂಡ್ಯದಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲತಾ ರಾಜಶೇಖರ್ ರವರನ್ನು ಅಧ್ಯಕ್ಷರಾಗಿ ನೇಮಿಸಬೇಕೆಂದು‌‌‌ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷತೆಯನ್ನು ಕವಯತ್ರಿ ಲತಾ ರಾಜಶೇಖರ ಅವರನ್ನು ಸರ್ಕಾರ ಆಯ್ಕೆ ಮಾಡಬೇಕು ಎಂದು ತೇಜಸ್ವಿ ಆಗ್ರಹಿಸಿದ್ದಾರೆ.

ಲತಾ ರಾಜಶೇಖರ್ ರವರು ಮೂಲತಃ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯವರು.
ಇವರು ಹುಟ್ಟಿದ್ದು 1954 ಆಗಸ್ಟ್‌ 7ರಲ್ಲಿ. ತಾಯಿ ಕಾವೇರಮ್ಮ, ತಂದೆ ಕೃಷ್ಣಗೌಡ.

ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿರುವ ಅವರನ್ನು ಸೆಳೆದದ್ದು ಸಾಹಿತ್ಯ ಕ್ಷೇತ್ರ. ಕವನ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ಕೋಗಿಲೆ ಕೂಗಿದಂತೆ, ಬೆಳಕಿನ ಹನಿಗಳು, ಶೆಫಾಲಿಕಾ, ಹನಿಗಳು, ಈ ಸ್ನೇಹ ಈ ಜೀವನ (ಕಾದಂಬರಿ), ಬುದ್ಧ ಮಹಾದರ್ಶನ (ಮಹಾಕಾವ್ಯ) ಮುಂತಾದವು.

ಲತಾ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವಿಶ್ವಕವಿ ಪ್ರಶಸ್ತಿ, ಕೆಂಪೇಗೌಡ ರಾಷ್ಟ್ರೀಯ ಪುರಸ್ಕಾರ, ವಿಶ್ವಕರ್ಮ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.

ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲತಾ‌ ರಾಜಶೇಖರ್ ಅವರನ್ನು ಆಯ್ಕೆ ಮಾಡಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲತಾ ರಾಜಶೇಖರ್ ಅಧ್ಯಕ್ಷರಾಗಲಿ: ತೇಜಸ್ವಿ ಆಗ್ರಹ Read More

ಸೆ.14,15 ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವ:ನರೇಂದ್ರಸ್ವಾಮಿ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಆಯೋಜಿಸಲಾಗಿದೆ ಎಂದು ಶಾಸಕ ಪಿ.ಎಂ‌.ನರೇಂದ್ರಸ್ವಾಮಿ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಸೆಪ್ಟೆಂಬರ್ 14 ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿ ತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವ ದಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂದು ಅಭಿಪ್ರಾಯ ಪಟ್ಟರು.

ಜಲಪಾತೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕಾರ್ಯಕ್ರಮದ ಜೊತೆಗೆ ಉಚಿತ ಉಪಹಾರ, ಊಟದ ವ್ಯವಸ್ಥೆ ಮಾಡಲಾಗಿದೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಬೆಳಿಗ್ಗೆಯಿಂದ ರಾತ್ರಿಯವರೆಗೆ ಇರುತ್ತದೆ ಎಂದು ಮಾಹಿತಿ ನೀಡಿದರು.

ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸಾಕು ಪ್ರಣಿಗಳ ಪ್ರಾಣಿ ಸಂಗ್ರಾಹಲಯ, ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಚಿಂತಿಸಲಾಗಿದ್ದು ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ನರೇಂದ್ರ ಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗಿದ್ದು, ಬೆಳಗಿನ ಕಾರ್ಯಕ್ರಮವನ್ನು ಸ್ಥಳೀಯ ಕಲಾವಿದರಿಗೆ ನೀಡಲಾಗಿದೆ ಎಂದು ಹೇಳಿದರು.

ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಇದೇ ಮೊದಲ ಬಾರಿಗೆ ಲೈವ್ ಆಗಿ ಸೆ.15 ರಂದು ಕಾರ್ಯಕ್ರಮ ನೀಡುತ್ತಿದ್ದಾರೆ,
ಸೆ. 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ,ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30ರವರೆಗೆ ನಾಗೇಶ್ ಕಂದೇಕಾಲ ಮತ್ತು ತಂಡದಿಂದ ಭಾವಗೀತೆಗಳು,ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ.
ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ,15 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮದ್ಯಾಹ್ನ 2 ರಿಂದ ಸಂಜೆ 4.30ರವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದಿಂದಸಂಗೀತ ಕಾರ್ಯಕ್ರಮ,ಸಂಜೆ 4.30 ರಿಂದ 6 ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ,ಸಂಜೆ
6 ರಿಂದ ರಾತ್ರಿ 10.30ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿವರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಸಕರು ಗಗನಚುಕ್ಕಿ ಜಲಪಾತೋತ್ಸವದ ಲೋಗೋವನ್ನು ಅನಾವರಣಗಳಿಸಿದರು.

ಸೆ.14,15 ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವ:ನರೇಂದ್ರಸ್ವಾಮಿ Read More