ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಸಿದ್ದರಾಮಯ್ಯ

ಮಂಗಳೂರು: ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.
ಪೇಸ್ ಗ್ರೂಪ್ನ ಸಂಸ್ಥಾಪಕರಾದ ಡಾ.ಪಿ.ಎ.ಇಬ್ರಾಹಿಂ ಅವರ ದೂರದೃಷ್ಟಿಯ ಫಲವಾಗಿ ಭಾರತ ಹಾಗೂ ವಿದೇಶಗಳಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗಿದ್ದು, ಸುಮಾರು 36,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ದೊಡ್ಡಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪೇಸ್ ಸಂಸ್ಥೆ , ಉತ್ತಮ ಗುಣಮಟ್ಟದ ವಿದ್ಯಾಸಂಸ್ಥೆಯಾಗಿದೆ ಎಂದು ಶ್ಲಾಘಿಸಿದರು.
ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ. ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಲೀ , ಅಂಧಶ್ರದ್ಧೆಯ ಪಾಲನೆಯಾಗಲಿ ಮಾಡಬಾರದು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ಕೃತಕ ಬುದ್ಧಿಮತ್ತೆ ಕಲಿತು ಹಣೆಬರಹ ಅಂದರೆ ಅದು ವಿದ್ಯೆಯೇ ಅಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತ ವಿದ್ಯೆ ಅಗತ್ಯವಿದೆ,ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನು ನಮ್ಮ ಸಂವಿಧಾನ ಸಾರುತ್ತದೆ. ನಾವು ಏನೇ ಕಲಿತರೂ ವೈಚಾರಿಕತೆ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಳ್ಳಬೇಕು . ಪ್ರತಿಯೊಬ್ಬರೂ ಮೊದಲು ಮಾನವನಾಗಬೇಕು ಎಂದು ತಿಳಿಸಿದರು.
ಪರಸ್ಪರ ಪ್ರೀತಿಸಬೇಕೆಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆದರೆ ನಮ್ಮ ಸಮಾಜದಲ್ಲಿ ಅಸಮಾನತೆ ತೊಲಗಿಸುವುದು ಸುಲಭ ಸಿಎಂ ನುಡಿದರು.

ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಸಿದ್ದರಾಮಯ್ಯ Read More

ಬಂಟ್ವಾಳದ ಬಿ ಸಿ ರೋಡ್ ವೃತ್ತದ ಬಳಿ ಅಪಘಾತ:ಮೂವರ ದುರ್ಮರಣ

ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಟ್ವಾಳ ತಾಲ್ಲೂಕಿನ ಬಿ ಸಿ ರೋಡ್ ವೃತ್ತದ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಒಂಬತ್ತು ಮಂದಿ ಇನೋವಾ ಕಾರಿನಲ್ಲಿ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಹೋಗುತ್ತಿದ್ದರು.

ಕಾರು ಬಂಟ್ವಾಳದ ಬಿ.ಸಿ. ರಸ್ತೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದಿದೆ.

ರವಿ (64), ನಂಜಮ್ಮ (75) ರಮ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಶೀಲಾ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಮತ್ತು ಚಾಲಕ ಸುಬ್ರಹ್ಮಣ್ಯ ತೀವ್ರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳದ ಬಿ ಸಿ ರೋಡ್ ವೃತ್ತದ ಬಳಿ ಅಪಘಾತ:ಮೂವರ ದುರ್ಮರಣ Read More

ನೀಮಲೋಬೋ ಅವರ ಅಭಿಸಾರಿಕೆ, ಮಾತು ಮುಗಿದ ಮೇಲು ಪುಸ್ತಕ ಬಿಡುಗಡೆ

ಮಂಗಳೂರು: ಉಡುಪಿ ಜಿಲ್ಲೆಯ ಶಂಕರಪುರದ ನೀಮಲೋಬೋ ಅವರ ಅಭಿಸಾರಿಕೆ ಮತ್ತು ಮಾತು ಮುಗಿದ ಮೇಲು ಪುಸ್ತಕ ಬಿಡುಗಡೆ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನೆರವೇರಿತು.

ಈ ಕಾರ್ಯಕ್ರಮ ಮಂಗಳೂರಿನ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಥಾಬಿಂದು ಪ್ರಕಾಶನ ಪಿ.ವಿ. ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳು ಅದ್ದೂರಿಯಿಂದ ಬಿಡುಗಡೆಯಾಯಿತು.

ನೀಮಲೋಬೋ ಅವರು ಪ್ರಸ್ತುತ “ಒಂದು ಹೆಜ್ಜೆ ರಕ್ತದಾನಿ ಬಳಗ” ಉಡುಪಿ ಜಿಲ್ಲೆಯ ಅಧ್ಯಕ್ಷರು.ಹಾಗೂ ಸರ್ವಕಲಾ ಸೇವಾ ಟ್ರಸ್ಟ್ ಶಂಕರಪುರ ಇದರ ಅಧ್ಯಕ್ಷರು.

ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಅಲ್ಲದೆ ಸಮಾಜ ಸೇವಕಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಅಷ್ಟೇ ಅಲ್ಲದೆ ಸಾಮಾಜಿಕ ಮಾಧ್ಯಮವಾದ ಪ್ರತಿಲಿಪಿ ಎಂಬ ಜಾಲತಾಣದಲ್ಲಿ ವಿವಿಧ ಲೇಖನಗಳನ್ನು ಬರೆದು ಹದಿನಾರು ಸಾವಿರಕ್ಕಿಂತಲೂ ಅಧಿಕ ವಾಚಕರಿಂದ ಪ್ರಶಂಸೆ ಪಡೆದಿದ್ದಾರೆ.

ಅವರ ಪತಿ ಡಾ. ಜೋಸೆಫ್ ಲೋಬೊ ಮತ್ತು ಮಗಳು ಜನಿಷಾ ಅವರೊಂದಿಗೆ ಉಡುಪಿ ಜಿಲ್ಲೆಯ ಶಂಕರ್ ಪುರದಲ್ಲಿ ವಾಸಿಸುತ್ತಿದ್ದಾರೆ.

ನೀಮಲೋಬೋ ಅವರ ಅಭಿಸಾರಿಕೆ, ಮಾತು ಮುಗಿದ ಮೇಲು ಪುಸ್ತಕ ಬಿಡುಗಡೆ Read More

ಸಿಎಂ ಮುಂದುವರಿಕೆ; ಹೈಕಮಾಂಡ್ ತೀರ್ಮಾನ ಅಂತಿಮ-ಸಿದ್ದರಾಮಯ್ಯ

ಮಂಗಳೂರು: ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ, ಆದರೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಹೈಕಮಾಂಡ್
ತೆಗೆದುಕೊಳ್ಳುತ್ತಾರೆ,ಅದನ್ನು ನಾವೆಲ್ಲ ಪಾಲಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೆಲ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದು, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಿದ್ದರಾಮಯ್ಯ ಕಠಿಣವಾಗಿ ಹೇಳಿದರು.

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿ,ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಪ್ರಶ್ನೆಗೆ, ಎಸ್ ಐ ಟಿ ತನಿಖೆಗೆ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿದೆ ಎಂಬುದಾಗಿ ಗೃಹಸಚಿವರು ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಮುಂದುವರಿಕೆ; ಹೈಕಮಾಂಡ್ ತೀರ್ಮಾನ ಅಂತಿಮ-ಸಿದ್ದರಾಮಯ್ಯ Read More

ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆಯದು:ಗಿರೀಶ್‌ ಮಟ್ಟಣ್ಣನವರ್‌

ಮಂಗಳೂರು: ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆಯದಾಯಿತು ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಪೊಲೀಸ್ ಅಧಿಕಾರಿ ಗಿರೀಶ್‌ ಮಟ್ಟಣ್ಣನವರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಆತನ ಬಂಧನ ಒಳ್ಳೆಯದೇ,ಮೊದಲು
ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು ಹೇಳಿದರು.

ಅಸ್ಥಿಪಂಜರ ಪತ್ತೆ ವಿಷಯದಲ್ಲಿ ಷಡ್ಯಂತ್ರ ಇದೆ ಎಂದು ಕೆಲವರು ಹೇಳುತ್ತಿದ್ದಾರೆ,ಅದು ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ ಎಂದು ‌ತಿಳಿಸಿದರು.

ಚನ್ನಯ್ಯನ ವಿಷಯವಾಗಿ ಎಸ್‌ಐಟಿ‌ ಅಧಿಕಾರಿಗಳು ಕರೆದರೆ ನನಗೆ ಮತ್ತು ಆತನಿಗೆ ಏನು ಸಂಬಂಧ ಇದೆ ಎನ್ನುವುದನ್ನು ತಿಳಿಸುತ್ತೇನೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದರು.

ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆಯದು:ಗಿರೀಶ್‌ ಮಟ್ಟಣ್ಣನವರ್‌ Read More

ಕಂಬಳ ಕ್ರೀಡೆಗೆ ಜಾತಿ-ಧರ್ಮದ ಬೇಲಿ ಇಲ್ಲ: ಸಿದ್ದರಾಮಯ್ಯ

ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ,ಇದು ಸರ್ವರ ಸಂಭ್ರಮ, ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ,ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಸಿಎಂ ತಿಳಿಸಿದರು.

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಹೇಳಿದರು.

ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದು ‌ಇದೇ ವೇಳೆ ಸಿಎಂ ಭರವಸೆ ನೀಡಿದರು.

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಹೇಳಿದರು.

ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅಷ್ಟೊಂದು ಪ್ರೀತಿ ಇದೆ ಖಾದರ್ ಅವರಿಗೆ ಎಂದು ಮುಖ್ಯ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಹಾಗೂ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಂಬಳ ಕ್ರೀಡೆಗೆ ಜಾತಿ-ಧರ್ಮದ ಬೇಲಿ ಇಲ್ಲ: ಸಿದ್ದರಾಮಯ್ಯ Read More

ಶ್ರೀ ನಂದಿಕೇಶ್ವರ ನಾಟಕ ಸಂಘದ41ನೇ ವಾರ್ಷಿಕೋತ್ಸವ: ಮುದುಕನ ಮದುವೆ ಉಚಿತ ನಾಟಕ ಪ್ರದರ್ಶನ

ಮೈಸೂರು: ಮಂಗಳೂರಿನ
ಶ್ರೀ ನಂದಿಕೇಶ್ವರ ನಾಟಕ ಸಂಘದ
41ನೇ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಈ ಸಂಘವು ಹಲವಾರು ಕಲಾವಿದರನ್ನು ಕಟ್ಟಿಕೊಂಡು ಕರ್ನಾಟಕ, ಮಹಾರಾಷ್ಟ್ರ, ಕೇರಳ, ಆಂಧ್ರ ಮತ್ತಿತರೆಡೆ ಹಲವಾರು ಪ್ರದರ್ಶನಗಳನ್ನು ನೀಡಿ ಸೈ ಎನಿಸಿಕೊಂಡಿದೆ.

ಚಿತ್ರರಂಗದ ಹಲವಾರು ಕಲಾವಿದರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸಿ, ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿ, 1994ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಸಂಘದ 41ನೇ ವರ್ಷದ ಸವಿನೆನಪಿಗಾಗಿ ಮೈಸೂರಿನ ಪುರ ಭವನದಲ್ಲಿ ಜನವರಿ 8ರ ಬುಧವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕರೋಕೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕರಾದ ಶೋಭಾ ರೈ, ರಾಘವೇಂದ್ರ ರೈ ತಿಳಿಸಿದರು.

ಅಲ್ಲದೆ 9 ರಂದು ಗುರುವಾರ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ದಿ| ಪಿ. ಬಿ. ದುತ್ತರಗಿ ವಿರಚಿತ ಮುದುಕನ ಮದುವೆ ಎಂಬ ಹಾಸ್ಯ ಉಚಿತ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಶ್ರೀ ಯೋಗ ನರಸಿಂಹ ಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್. ಶ್ರೀನಿವಾಸ್,ಶಾಸಕ ಟಿ. ಎಸ್. ಶ್ರೀವತ್ಸ, ಶ್ರೀರಾಮೇ ಗೌಡ್ರು ಹಿರಿಯ ಕಲಾವಿದರಾದ ರಾಮೇ ಗೌಡ್ರು ಉದ್ಘಾಟನೆ ನೆರವೇರಿಸಲಿದ್ದಾರೆ.

ನಿವೃತ್ತ ಲೆಕ್ಕಪರಿಶೋಧನಾ ಅಧಿಕಾರಿಗಳು ಹಾಗೂ ನಾಟಕ ರಚನೆಕಾರರು ಕಲಾವಿದರಾದ ಎಸ್. ಎಸ್. ಪುಟ್ಟೆ ಗೌಡ್ರು ಅಧ್ಯಕ್ಷತೆ ವಹಿಸುವರು.ಅಲ್ಲದೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ವಿವರಿಸಿದರು.

ಶ್ರೀ ನಂದಿಕೇಶ್ವರ ನಾಟಕ ಸಂಘದ41ನೇ ವಾರ್ಷಿಕೋತ್ಸವ: ಮುದುಕನ ಮದುವೆ ಉಚಿತ ನಾಟಕ ಪ್ರದರ್ಶನ Read More

ಉಳ್ಳಾಲದ ಖಾಸಗಿ ರೆಸಾರ್ಟ್ ನ ಈಜು ಕೊಳದಲ್ಲಿ ಮುಳುಗಿ ಮೈಸೂರಿನ 3 ಯುವತಿಯರು ಸಾವು

ಮಂಗಳೂರು: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋಗಿ ಮೈಸೂರಿನ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಲ್ಲಾಳದ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ.

ಮೈಸೂರಿನ ಕುರುಬರಹಳ್ಳಿ ನಾಲ್ಕನೆ ಕ್ರಾಸ್ ನಿವಾಸಿ ನಿಷಿತ ಎಂ. ಡಿ(21) ಕೆ.ಆರ್ ಮೊಹಲ್ಲ ರಾಮಾನುಜ ರಸ್ತೆ‌ ವಾಸಿ ಪಾರ್ವತಿ ಎಸ್(20), ದೇವರಾಜ ಮೊಹಲ್ಲಾದ ಕೀರ್ತನ ಎನ್(21) ಮೃತಪಟ್ಟ ದುರ್ದೈವಿಗಳು.

ಮಂಗಳೂರಿನ ಉಳ್ಳಾಲದ ಉಚ್ಚಿಲ ಬೀಚ್ ಬಳಿ ಇರುವ ಖಾಸಗಿ ರೆಸಾರ್ಟ್​ನ ಈಜುಕೊಳದಲ್ಲಿ ಈ ಮೂರೂ ಯುವತಿಯರು ಮುಳುಗಿ ಮೃತಪಟ್ಟಿದ್ದು ಘಟನೆ ಸುಮಾರು 9.30ರ ವೇಳೆಯಲ್ಲಿ ನಡೆದಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಸಮೀಪ ಇರುವ ವಾಸ್ಗೊ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ.

ಒಬ್ಬ ಯುವತಿ ಮುಳುಗುತ್ತಿದ್ದನ್ನು ಕಂಡು ಆಕೆಯ ರಕ್ಷಣೆಗೆ ಹೋದ ಮತ್ತಿಬ್ಬರು ಯುವತಿಯರು ಮೃತಪಟ್ಟಿದ್ದಾರೆ.

ರಜೆ ಇದ್ದ ಕಾರಣ ಪ್ರವಾಸಕ್ಕೆ ಉಳ್ಳಾಲಕ್ಕೆ ಆಗಮಿಸಿದ್ದ ಯುವತಿಯರು ರೆಸಾರ್ಟ್‌ನಲ್ಲಿ ತಂಗಿದ್ದರು‌. ಬೆಳಿಗ್ಗೆ ಮೂವರೂ ಈಜುಕೊಳಕ್ಕೆ ಇಳಿದಿದ್ದು ಇದರ ವಿಡಿಯೋ ಸೆರೆ ಹಿಡಿಯಲು ತಮ್ಮ ಮೊಬೈಲ್​ ರೆಕಾರ್ಡ್ ಮೋಡ್‌ನಲ್ಲಿಟ್ಟಿದ್ದರು. ಯುವತಿಯರು ಈಜುಕೊಳದಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವಿಡಿಯೋ ರೆಸಾರ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಳ್ಳಾಲ ಪೊಲೀಸ್​​ ಇನ್ಸ್‌ಪೆಕ್ಟರ್​ ಹೆಚ್.ಎನ್.ಬಾಲಕೃಷ್ಣ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಉಳ್ಳಾಲದ ಖಾಸಗಿ ರೆಸಾರ್ಟ್ ನ ಈಜು ಕೊಳದಲ್ಲಿ ಮುಳುಗಿ ಮೈಸೂರಿನ 3 ಯುವತಿಯರು ಸಾವು Read More

ಮಾಜಿ ಶಾಸಕ ಮೊಯುದ್ದೀನ್ ಬಾವ ಅವರ ಸಹೋದರ ನಾಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಝ್ ಅಲಿ ಅವರು ನಾಪತ್ತೆಯಾಗಿದ್ದು, ಲವು ಅನುಮಾನಗಳಿಗೆ ಎಡೆಮಾಡಿದೆ.

ಅವರ ಕಾರು ಮಂಗಳೂರಿನ ಕೂಳೂರು ಸೇತುವೆ ಮೇಲೆ ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮುಂಜಾನೆ 3 ಗಂಟೆ ವೇಳೆಗೆ ಬಿ.ಎಂ. ಮುಮ್ತಾಝ್ ಅಲಿ ಮನೆಯಿಂದ ಕಾರಿನಲ್ಲಿ ತೆರಳಿ ನಗರದ ಹಲವೆಡೆ ಕಾರಿನಲ್ಲಿ ಸುತ್ತಾಡಿದ್ದಾರೆ. ನಂತರ ಕೂಳೂರು ಸೇತುವೆ ಬಳಿ ಕಾರಿಗೆ ಆಕ್ಸಿಡೆಂಟ್ ಆದ ಸ್ಥಿತಿಯಲ್ಲಿದೆ.

ಆದರೆ‌ ಅವರು ಎಲ್ಲೂ ಕಾಣುತ್ತಿಲ್ಲ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಸೇತುವೆಗೆ ಅವರು ಹಾರಿರುವ ಶಂಕೆ ಇರುವುದರಿಂದ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಹಾಗೂ ಕೋಸ್ಟ್ ಗಾರ್ಡ್ ತಂಡದ ಸಹಾಯದೊಂದಿಗೆ ಶೋಧ ನಡೆಸುತ್ತಿದ್ದೇವೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಆಯುಕ್ತರು ಹೇಳಿದ್ದಾರೆ.

ಮಾಜಿ ಶಾಸಕ ಮೊಯುದ್ದೀನ್ ಬಾವ ಅವರ ಸಹೋದರ ನಾಪತ್ತೆ Read More