ಸದನದಲ್ಲಿ ಉತ್ತರ ಕರ್ನಾಟಕದಸಮಸ್ಯೆಗಳ ಬಗ್ಗೆ ಚರ್ಚೆ :ಸಿದ್ದರಾಮಯ್ಯ
ಗದಗ: ಸೋಮವಾರದಿಂದ ಬುಧವಾರದವರೆಗೆ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಗದಗ್ ಜಿಲ್ಲೆಯ ರೋಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಉತ್ತರ ಕರ್ನಾಟಕವಾಗಿ,ದಕ್ಷಿಣ ಕರ್ನಾಟಕ ವಾಗಲಿ ಎಲ್ಲಾ ಜಿಲ್ಲೆಗಳ ಸಮಸ್ಯೆ ಪರಿಹರಿಸುವುದು ಸರ್ಕಾರದ ಕರ್ತವ್ಯ ಎಂದು ತಿಳಿಸಿದರು.
ವಿಜಯೇಂದ್ರ ಬಗ್ಗೆ ಸಿಎಂ ಮಾಡಿರುವ ಆರೋಪ ಸುಳ್ಳು ಎಂದು ಮಾನಪ್ಪಾಡಿ ಹೇಳಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ,ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಸಿಎಂ ತಿಳಿಸಿದರು.
ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳುತ್ತಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ವರದಿಗಾರರ ಪ್ರಶ್ನೆಗೆ, ಹಾಗಿದ್ದರೆ ಸಿಬಿಐ ತನಿಖೆಗೆ ಆಗಲಿ ಎಂದು ಸಿದ್ದರಾಮಯ್ಯ ಹೇಳಿದರು.
ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಮರು ಪ್ರಶ್ನಿಸಿದರು.
ಸದನದಲ್ಲಿ ಉತ್ತರ ಕರ್ನಾಟಕದಸಮಸ್ಯೆಗಳ ಬಗ್ಗೆ ಚರ್ಚೆ :ಸಿದ್ದರಾಮಯ್ಯ Read More