ಮೆಲ್ಬೋರ್ನ್ ನಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಹಾನಿ
ಮೆಲ್ಬೋರ್ನ್: ಆಸ್ಟ್ರೇಲಿಯಾ ಮೆಲ್ಬೋರ್ನ್ ನಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಇದರಿಂದಾಗಿ ಅಲ್ಲಿನ ಭಾರತೀಯರಲ್ಲಿ ಆತಂಕ ಮನೆಮಾಡಿದೆ.
ಭಾರತೀಯ ದೂತವಾಸ ಕಚೇರಿ ಆವರಣದ ಮುಂಭಾಗದ ಪ್ರವೇಶದ್ವಾರದಲ್ಲಿ ಇರುವ
ಫಲಕಗಳ ಮೇಲೆ ಕಿಡಿಗೇಡಿಗಳು ಗೀಚುವ ಮೂಲಕ ಹಾನಿ ಮಾಡಿದ್ದಾರೆ.

ಕಿಡಿಗೇಡಿಗಳ ಈ ಕೃತ್ಯದ ಬಗ್ಗೆ ಕ್ಯಾನ್‌ಬೆರಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಆಸ್ಟ್ರೇಲಿಯಾ ಸರಕಾರಕ್ಕೆ ದೂರು ಸಲ್ಲಿಸಿದೆ.
ಮೆಲ್ಬರ್ನ್ ನಲ್ಲಿ ಹಿಂದೂ ದೇವಾಲಯಗಳು ಮತ್ತು ಕಚೇರಿಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವುದರಿಂದ ಭಾರತ ಮೂಲದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೆಲ್ಬೋರ್ನ್ ನಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಹಾನಿ Read More
