ಹಸಿರು ಪಟಾಕಿ ಬಿಟ್ಟು ಬೇರೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು-ಖಂಡ್ರೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು,ಅದು ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ರದ್ದು ಪಡಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ ಎಂದು ತಿಳಿಸಿದರು.

ಸರ್ವೋಚ್ಚ ನ್ಯಾಯಾಲಯದ ‌ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ, ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ಕೊಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದು ಹೇಳಿದರು.

ಪರಿಸರ ಸ್ನೇಹಿ ಪಟಾಕಿ ಮಾಡುತ್ತೇವೆ ಅಂತ ಮುಚ್ಚಿಳಿಕೆ ಬರೆದು ಕೊಟ್ಟಿದ್ದಾರೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಲೈಸೆನ್ಸ್ ರದ್ದು ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಂಡ್ರೆ ತಿಳಿಸಿದರು.

ಹಸಿರು ಪಟಾಕಿ ಬಿಟ್ಟು ಬೇರೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು-ಖಂಡ್ರೆ Read More

ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ದಿನೇಶ್ ಗುಂಡೂರಾವ್ ಭೇಟಿ

ಮೈಸೂರು,ಸೆಪ್ಟೆಂಬರ್.1: ಮೈಸೂರಿನ ಕೆ ಆರ್ ಮೊಹಲ್ಲಾ ದಲ್ಲಿರುವ ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘದ ನವೀಕೃತ ಕಟ್ಟಡಕ್ಕೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ
ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿದರು.

ಸಂಘದ ಪದಾಧಿಕಾರಿಗಳು ದಿನೇಶ್ ಗುಂಡೂರಾವ್ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ಮಾತನಾಡಿದ ಸಚಿವರು,
ನವೀಕೃತ ಕಟ್ಟಡಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ನಮ್ಮ ತಂದೆಯವರಾದ ಆರ್. ಗುಂಡೂರಾಯರ ಅಚ್ಚುಮೆಚ್ಚಿನ ಪ್ರೀತಿಪಾತ್ರವಾದ ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘ, ಮೈಸೂರಿನಲ್ಲಿ 1924ರಲ್ಲೆ ನಿರ್ಮಾಣ ಮಾಡಿದ್ದ ವಿದ್ಯಾರ್ಥಿ ನಿಲಯವು ಶತಮಾನೋತ್ಸವ ಕಂಡಿದೆ, ನಮ್ಮ ತಂದೆಯವರು ಸಹ ಭೇಟಿ ನೀಡುತ್ತಿದ್ದರು ಎಂದು ಸ್ಮರಿಸಿದರು.

ನಾನು ಸಹ ತಂದೆ ತಾಯಿಯಿಂದ ರೂಡಿಸಿಕೊಂಡ ಸೇವಾಮನೋಭಾವದ ದೃಷ್ಟಿಯಿಂದ ಸದಾಕಾಲಕ್ಕೂ ಸಂಘದ ಚಟುವಟಿಕೆಗಾಗಿ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

ಮೈಸೂರಿನಲ್ಲಿ ನಮ್ಮ ವಿಪ್ರ ಸಮಾಜದ ನಾಯಕರಾಗಿರುವ ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಅವರು ಸಹ ವಿಪ್ರ ಸಮುದಾಯದ ಹಲಾವರು ಸಂಘ ಸಂಸ್ಥೆಗಳಿಗೆ ಸಹಕಾರವನ್ನ ಕೊಟ್ಟಿದ್ದಾರೆ ಅದರಂತೆಯೇ ಸಂಘದ ನವೀಕೃತ ಕಟ್ಟಡದ ಲೋಕಾರ್ಪಣೆ ನೇತೃತ್ವ ವಹಿಸಬೇಕೆಂದು ತಿಳಿಸಿದರು,

ನಂತರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಹೆಚ್.ವಿ ರಾಜೀವ್ ಅವರು ಮಾತನಾಡಿ ನಮ್ಮ ಸಮಾಜದ ಧೀಮಂತ ನಾಯಕರು ಕರ್ನಾಟಕ ರಾಜ್ಯದಲ್ಲಿ ಹಲವಾರು ಯೋಜನೆಗಳನ್ನ ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಗುಂಡೂರಾಯರು ಹಲವಾರು ವಿಪ್ರ ನಾಯಕರನ್ನ ರಾಜಕೀಯವಾಗಿ ಮುಖ್ಯವಾಹಿನಿಗೆ ಬರಲು ಬೆನ್ನುಲುಬಾಗಿ ನಿಂತು ಪ್ರೇರಣೆಯಾದರು ಎಂದು ತಿಳಿಸಿದರು.

ಅವರಂತೆ ಅವರ ಸುಪುತ್ರರು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರೂ ಸಹ ಸಮುದಾಯದ ಯಾವುದೇ ಸಮಸ್ಯೆಗಳಿದ್ದರೂ ಸ್ಪಂದಿಸುವ ನಾಯಕರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಾಹಾಸಭಾ ಸಂಘಟನಾತ್ಮಕವಾಗಿ ರಾಜ್ಯದಲ್ಲಿ ಬಲಿಷ್ಠವಾಗಲು ಗುಂಡೂರಾಯರ ಕುಟುಂಬ ಪ್ರಮುಖವಾದುದು, ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘದ ನವೀಕೃತ ಕಟ್ಟಡಕ್ಕೆ ಗುಂಡೂರಾಯರು ಮತ್ತು ವರಲಕ್ಷ್ಮಿ ಗುಂಡೂರಾಯರ ಹೆಸರನ್ನ ನಾಮಕರಣ ಮಾಡಲು ಮುಂದಾಗಿರುವ ಸಂಘದ ಪದಾಧಿಕಾರಿಗಳ ಕಾರ್ಯ ಸ್ವಾಗತಾರ್ಹ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್, ಕಾರ್ಯದರ್ಶಿ ಮಹೇಶ್ ಕುಮಾರ್, ಖಜಾಂಜಿ ಎಸ್ ಎಲ್ ನಾಗರಾಜ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ, ವಿನಯ್ ಕಣಗಾಲ್ ಸೇರಿದಂತೆ ‌ಅನೇಕ ಪದಾಧಿಕಾರಿಗಳು, ಹಿರಿಯರು ಹಾಜರಿದ್ದರು.

ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ದಿನೇಶ್ ಗುಂಡೂರಾವ್ ಭೇಟಿ Read More

ಜು ‌19 ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ:ಸಿದ್ದತೆ ವೀಕ್ಷಿಸಿದ ಮಹದೇವಪ್ಪ

ಮೈಸೂರು: ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ನಡೆಯುವ ಹಿನ್ನಲೆಯಲ್ಲಿ ಬುಧವಾರ ಮಹಾರಾಜ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ವೇದಿಕೆ ಸ್ಥಳ ಪರಿಶೀಲನೆ ನಡೆಸಿದರು.

ಸರ್ಕಾರದ 2 ವರ್ಷ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ.

ಸಾಧನ ಸಮಾವೇಶಕ್ಕೆ ಭರದ ಸಿದ್ದತೆ ನಡೆಸಲಾಗುತ್ತಿದ್ದು ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಹಾಕಲಾಗುತ್ತಿದೆ.ಆದ್ದರಿಂದ ಹೆಚ್.ಸಿ ಮಹದೇವಪ್ಪ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಭದ್ರತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂದು ಸರ್ಕಾರದ ಎರಡು ವರ್ಷದ ಸಾಧನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನ ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಸಾಧನಾ ಸಮಾವೇಶದ ಮೂಲಕ ತವರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೂ ಮುಂದಾಗಿದ್ದು, ಸಿದ್ದತೆ ಕಾರ್ಯ ವೀಕ್ಷಣೆ ಮಾಡಿದ ಸಚಿವ ಎಚ್ ಸಿ ಮಹದೇವಪ್ಪಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಪೋಲಿಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಗೆ 3 ದಿನ ಪ್ರವಾಸ ಬರುತ್ತಿದ್ದಾರೆ. ಮೈಸೂರಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಮಂಜೂರು ಆಗಿತ್ತು. ಕೆಲವೊಂದು ಉದ್ಘಾಟನೆ ಆಗಬೇಕು. ಇನ್ನು ಅನೇಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಬೇಕು. ಜಿಲ್ಲೆಗೆ ಸರ್ಕಾರದಿಂದ ಏನೆಲ್ಲಾ ಅನುದಾನ ಬಂದಿದೆ ಎಂಬ ‌ಬಗ್ಗೆ ಚರ್ಚೆ ಮಾಡಿದ್ದೇವೆ. 502 ಕೋಟಿ ಹಣ ಲೋಕೋಪಯೋಗಿ ಇಲಾಖೆಗೆ ಬಂದಿದೆ. ಜಲ ಸಂಪನ್ಮೂಲ ಇಲಾಖೆಗೆ 419 ಕೋಟಿ ಹಣ ಬಂದಿದೆ. ಸೆಸ್ಕ್ ಗೆ 408 ಕೋಟಿ ರೂಪಾಯಿ ಹಣ ಬಂದಿದೆ. ಸಣ್ಣ ಕೈಗಾರಿಕೆಗೆ 198 ಕೋಟಿ ಹಣ ಕೊಟ್ಟಿದ್ದಾರೆ. ಜಿಲ್ಲಾ ಕೋಶದಿಂದ 120 ಕೋಟಿ ಹಣ ಬಂದಿದೆ. ವೈದ್ಯಕೀಯ ಶಿಕ್ಷಣ ಇಲಾಖೆಗೆ 100 ಕೋಟಿ ಕೊಟ್ಟಿದೆ . ಇತರೆ ಇಲಾಖೆಗಳಿಗೆ ನೂರಾರು ಕೋಟಿ ಹಣ ಕೊಟ್ಟಿದ್ದೇವೆ. 2569 ಕೋಟಿ ಹಣ ಮೈಸೂರು ನಗರ ವ್ಯಾಪ್ತಿಗೆ ಸರ್ಕಾರದಿಂದ ಬಂದಿದೆ. ಹೀಗಾಗಿ ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಸಾಧನ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಜುಲೈ 19 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಮಾಡಲಿದ್ದಾರೆ ಎಂದು ಹೇಳಿದರು.

ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡುತ್ತಿದೆ. ಮೈಸೂರು ಸರ್ವಾಂಗೀಣ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಪಣ ತೊಟ್ಟಿದ್ದಾರೆ. ಕಾರ್ಯಕ್ರಮಕ್ಕೆ ಕೇಂದ್ರದಿಂದ ಮಲ್ಲಿಕಾರ್ಜುನ್ ಖರ್ಗೆ ಬರಲಿದ್ದಾರೆ ಎಂದು ಮಾಹಿತಿ ನೀಡಿದರು.

ಜು ‌19 ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ:ಸಿದ್ದತೆ ವೀಕ್ಷಿಸಿದ ಮಹದೇವಪ್ಪ Read More

ಸಿದ್ದರಾಮಯ್ಯ,ಡಿ.ಕೆ ಶಿವಕುಮಾರ್ ಅನ್ಯೋನ್ಯವಾಗಿದ್ದಾರೆ-ಚಲುವರಾಯಸ್ವಾಮಿ

ಮೈಸೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬಹಳ‌ ಅನ್ಯೂನ್ಯವಾಗಿದ್ದಾರೆ. ಯಾರು ಏನೇ ಕುತಂತ್ರ ಮಾಡಿದರೂ ಬೇರೆ ಮಾಡಲು ಆಗುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವರು, ಈ ನಾಡಿನ‌ ಎಲ್ಲಾ ರೈತರಿಗೆ ಒಳ್ಳೇ ಮಳೆ ಬೆಳೆಯಾಗಿದೆ. ಎಲ್ಲರಿಗೂ ಸಮೃದ್ದಿ ತರಲಿ ಎಂದು ತಾಯಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

ಸಿಎಂ ಬದಲಾವಣೆ ಕುರಿತು ಶಾಸಕರು ಬಹಿರಂಗ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಅವರವರ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಹಳ‌ ಅನೂನ್ಯವಾಗಿದ್ದಾರೆ, ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯಬೇಕಾ ಬೇಡವಾ ಎನ್ನುವುದನ್ನ ನಿರ್ಧಾರ ಮಾಡುವವರು ಹೈಕಮಾಂಡ್ ಎಂದು ಚಲುವರಾಯಸ್ವಾಮಿ‌ ತಿಳಿಸಿದರು.

ಸಿದ್ದರಾಮಯ್ಯ,ಡಿ.ಕೆ ಶಿವಕುಮಾರ್ ಅನ್ಯೋನ್ಯವಾಗಿದ್ದಾರೆ-ಚಲುವರಾಯಸ್ವಾಮಿ Read More

ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ ಎಚ್ಚರಿಕೆ

ಮೈಸೂರು: ಕ್ಷೇತ್ರ ಭೇಟಿಯಲ್ಲಿ,ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ,ಕರ್ತವ್ಯ ಲೋಪ ಎಸಗುವ ಅಧಿಕಾರಿ, ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಇನ್ನೂ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು.

ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ. ಶೇ 100 ರಷ್ಟು ಬಿತ್ತನೆಯಾಗುವಂತೆ ನೋಡಿಕೊಳ್ಳಿ ಎಂದು ಅವರು ಹೇಳಿದರು.

ಭೂಮಿಯ ಫಲವತ್ತತೆ, ಪರಿಸರ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಮತ್ತು ‌ಕೀಟನಾಶಕಗಳ ಬಳಕೆ ಕಡಿಮೆ ಮಾಡಲು ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಿ ಎಂದು ಸಚಿವರು ನಿರ್ದೇಶನ ನೀಡಿದರು.

ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ.
ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಬಗ್ಗೆಯೂ ಮಾರ್ಗದರ್ಶನ ನೀಡಿ‌,ಕೃಷಿ ಯಾಂತ್ರಿಕರಣ,ಕೃಷಿ ಭಾಗ್ಯ ಯೋಜನೆ ಜಾರಿ,ಸಾವಯವ ಕೃಷಿ,ಸಮಗ್ರ ಬೇಸಾಯದ ಬಗ್ಗೆ ಜಾಗೃತಿ ಮೂಡಿಸಲು ಆದ್ಯತೆ ನೀಡಿ ಎಂದ ಅವರು ಹೇಳಿದರು.

ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಫಲ ರೈತರಿಗೆ ತಲುಪಿಸುವಲ್ಲಿ ಆಸಕ್ತಿ ವಹಿಸಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿ ಎಂದು ಚಲುವರಾಯಸ್ವಾಮಿ ಸಲಹೆ ನೀಡಿದರು.

ಸಭೆಯಲ್ಲಿ‌ ಕೃಷಿ ಆಯುಕ್ತ ವೈ.ಎಸ್ ಪಾಟೀಲ್, ನಿರ್ದೇಶಕ ಡಾ. ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮಹಮದ್ ಪರವೇಜ ಬಂಥನಾಳ,ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನುಪ್,ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ ಸದಾಶಿವ ಹಾಗೂ ಮೈಸೂರು, ಮಂಡ್ಯ,ಚಾಮರಾಜನಗರ, ಕೊಡಗು, ಹಾಸನ,ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಅಧಿಕಾರಿಗಳು ಪಾಲ್ಗೊಂಡಿದ್ದರು

ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ ಎಚ್ಚರಿಕೆ Read More

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದಿದ್ದರೆ ಕಠಿಣ ಕ್ರಮ- ಮಹದೇವಪ್ಪ

ತಿ.ನರಸೀಪುರ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಇದರಲ್ಲಿ
ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ‌ ಸಚಿವ‌‌
ಡಾ.ಹೆಚ್.ಸಿ.ಮಹದೇವಪ್ಪ
ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದರು.

ಟಿ.ನರಸೀಪುರ ತಾಲ್ಲೂಕಿನ ಪುರಸಭೆ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಈ ತಾಲ್ಲೂಕನ್ನು ಪ್ರತಿನಿಧಿಸುತ್ತೇವೆ, ಯಾವುದೇ ಕಾರಣಕ್ಕೂ ಇಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ‌. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಜವಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಎರಡು ದಿನ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರ್ಕಾರವು ಜನರ ಪರ ಇದೆ ಎಂಬ ಆತ್ಮವಿಶ್ವಾಸ ಮೂಡಿಸುವುದರಲ್ಲಿ ಅಧಿಕಾರಿಗಳ ಪಾತ್ರ ಹೆಚ್ಚಿದೆ. ಈ ನಿಟ್ಟಿನಲ್ಲಿ ಕಚೇರಿಯಲ್ಲಿ ಅಧಿಕಾರಿಗಳು ಕೂರಬಾರದು. ಜನರ ಬಳಿಗೆ ತೆರಳಬೇಕು. ಅವರ ಕಷ್ಟಗಳನ್ನು ಆಲಿಸಿ ಪರಿಹರಿಸಬೇಕು ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೌಲಭ್ಯ, ಪಡಿತರ ವಿತರಣೆ ಸೇರಿದಂತೆ ಎಲ್ಲಾ ಬಗೆಯ ಮೂಲಭೂತ ಸೌಕರ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕು ಎಂದು ಹೇಳಿದರು.

ತಾಲ್ಲೂಕಿನಲ್ಲಿ 44,136 ಹೆಕ್ಟೇರ್ ಸಾಗುವಳಿ ವಿಸ್ತೀರ್ಣವಿದೆ. ಕೃಷಿಗೆ ಉಪಯೋಗವಿರುವ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಬಿತ್ತನೆಗೆ ಕ್ರಮವಹಿಸಿ. ರಸಗೊಬ್ಬರ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಿ ಸಾವಯವ ಗೊಬ್ಬರ ಬಳಸುವಂತೆ ತಿಳಿಸಿ ಎಂದು ಸೂಚಿಸಿದರು.

ಬೀದಿ ದೀಪ, ರಸ್ತೆ, ಚರಂಡಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕು,ಸ್ವಚ್ಛತೆ ಕಾಪಾಡಬೇಕು, ಜವಜ್ದಾರಿಯಿಂದ ಕೆಲಸ ಮಾಡಿ ಎಂದು ಪುರಸಭೆ ಮುಖ್ಯಾಧಿಕಾರಿಗೆ ಸಚಿವರು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸಂಸದರಾದ ಸುನೀಲ್ ಬೋಸ್ ಅವರು ಹಕವು ಸಲಹೆ ಗಳನ್ನು ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಪುರಸಭೆ ಅಧ್ಯಕ್ಷರಾದ ವಸಂತ ಶ್ರೀಕಂಠ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ತಹಸಿಲ್ದಾರ್ ಸುರೇಶ್ ಆಚಾರ್, ತಾಲ್ಲೂಕು ಪಂಚಾಯತ್ ಇಒ ಆನಂತ ರಾಜು ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಕೆ.ಡಿ.ಪಿ ಸಭೆಯ ನಾಮನಿರ್ದೇಶಿತ ಸದಸ್ಯರು ಪಾಲ್ಗೊಂಡಿದ್ದರು.

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದಿದ್ದರೆ ಕಠಿಣ ಕ್ರಮ- ಮಹದೇವಪ್ಪ Read More

ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಸೇರಿ 25 ಪ್ರಮುಖರಿಗೆ ಹೆಚ್ಚಿನ ಭದ್ರತೆ

ನವದೆಹಲಿ: ಆಪರೇಷನ್ ಸಿಂಧೂರದ ಬಳಿಕ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಿಸಲಾಗಿದೆ.

ಅಷ್ಟೂ ಮಂದಿಗೂ ಬುಲೆಟ್ ಪ್ರೂಫ್ ಕಾರು, ಕಮಾಂಡೋ ಸೆಕ್ಯೂರಿಟಿಯನ್ನು ನೀಡಲಾಗಿದೆ.

ಏ.22ರಂದು ನಡೆದ ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಜೋರಾಗಿದ್ದು, ಕದನ ವಿರಾಮ ಘೋಷಣೆಯಾದ ಬಳಿಕ ವಿದೇಶಾಂಗ ಸಚಿವಾಲಯದ ವಿನಂತಿ ಮೇರೆಗೆ 25 ಪ್ರಮುಖರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

25 ವಿಐಪಿಗಳ ಪಟ್ಟಿಯನ್ನು ತಯಾರಿಸಲಾಗಿದ್ದು,ಈ ಪಟ್ಟಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಜೆ.ಪಿ ನಡ್ಡಾ, ಭೂಪೇಂದರ್ ಯಾದವ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಸುಧಾಂಶು ತ್ರಿವೇದಿ ಹಾಗೂ ಬಿಜೆಪಿಯ ಪ್ರಮುಖ ನಾಯಕ ಮುರಳಿ ಮನೋಹರ್ ಜೋಶಿ ಅವರ ಹೆಸರಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ Z ಸೆಕ್ಯೂರಿಟಿ ಹೊಂದಿರುವ ಜೈಶಂಕರ್ ಅವರಿಗೆ ಮತ್ತೆ ಭದ್ರತೆ ಹೆಚ್ಚಿಸಲಾಗಿದ್ದು, ಒಂದು ಬುಲೆಟ್ ಪ್ರೂಫ್ ಕಾರು, 4-6 ಕಮಾಂಡೋ ಸೇರಿ 22 ಸಿಬ್ಬಂದಿ, ಭದ್ರತೆಗೆ ಬೆಂಗಾವಲು ವಾಹನಗಳು, 33 ಸಿಆರ್‌ಪಿಎಫ್ ಕಮಾಂಡೋ ಹಾಗೂ ದಿನದ 24/7 ಭದ್ರತೆ ನೀಡಲಾಗಿದೆ. ಜೊತೆಗೆ ದೆಹಲಿಯಲ್ಲಿರುವ ಸರ್ಕಾರಿ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಭದ್ರತೆಗಾಗಿ ಒದಗಿಸುತ್ತಿರುವ ಕಾರುಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಇರಿಸುವಂತೆ ಹಾಗೂ ಭದ್ರತಾ ಸಿಬ್ಬಂದಿಗೆ ಫೈರಿಂಗ್ ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಕುರಿತು ತರಬೇತಿ ನೀಡುವಂತೆ ಸೂಚಿಸಲಾಗಿದೆ.

ಮೇ 7ರಂದು ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ನಲ್ಲಿ ಪಾಕ್‌ನ 9 ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಲಾಗಿತ್ತು.

ಪಾಕ್ ನಿಯಂತ್ರಣ ರೇಖೆ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿತು. ಮೇ 10ರಂದು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಇದರ ನಡುವೆ 25 ಮಂದಿಗೆ ಬಿಗಿ‌ ಭದ್ರತೆ ಹೆಚ್ಚಿಸಲಾಗಿದೆ.

ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಸೇರಿ 25 ಪ್ರಮುಖರಿಗೆ ಹೆಚ್ಚಿನ ಭದ್ರತೆ Read More

ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ನಾಯಕರು

ಬೆಂಗಳೂರು: ಬೆಂಗಳೂರಿನಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಮತ್ತಿತರರು ಭೇಟಿ ಮಾಡಿದರು.

ಇಂದು ವಿಧಾನಸೌಧದ ಆವರಣದಲ್ಲಿ ಕಾರ್ಯನಿಮಿತ್ತ ವಿಧಾನಸೌಧದ ತಮ್ಮ ಕಚೇರಿಗೆ ಸಾರ್ವಜನಿಕರ ಕುಂದು ಕೊರತೆ ಮತ್ತು ಹಾವಲು ಸ್ವೀಕರಿಸಲು ಆಗಮಿಸಿದ ರಹೀಮ್ ಖಾನ್ ಅವರನ್ನು ನಜರ್ ಬಾದ್ ನಟರಾಜ್ ಮತ್ತು ನಗರ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ರಾಮಪ್ಪ ರಮೇಶ್ ಭೇಟಿ ಮಾಡಿ ಕುಶಲೊಪರಿ ವಿಚಾರಿಸಿ ಶುಭ ಕೋರಿದರು.

ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ನಾಯಕರು Read More

ಸಿಎಂ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ

ಬೆಂಗಳೂರು, ಮಾ.12: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಡಾ.ಕೆ.ಪೊನ್ನುಮುಡಿ ಮತ್ತು ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಚರ್ಚಿಸಿದರು.

ಡಿ ಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಇಬ್ಬರೂ ಸಿದ್ದು ಬಳಿ ಮನವಿ ಮಾಡಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.

ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಸಿಎಂ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ Read More

ಕೊಲೆ ಕೇಸ್‌ನಲ್ಲಿ ಆಪ್ತ ಅರೆಸ್ಟ್: ಮಹಾರಾಷ್ಟ್ರ ಸಚಿವ ರಾಜೀನಾಮೆ

ಮುಂಬೈ,ಮಾ.4: ಕೊಲೆ ಪ್ರಕರಣವೊಂದರಲ್ಲಿ ಆಪ್ತನ ಬಂಧನವಾಗುತ್ತಿದ್ದಂತೆ ಮಹಾರಾಷ್ಟ್ರ ಸಚಿವ ಧನಂಜಯ್‌ ಮುಂಡೆ ರಾಜೀನಾಮೆ ನೀಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ಸರ್ಪಂಚ್‌ ಒಬ್ಬರ ಭೀಕರ ಹತ್ಯೆಯಾಗಿತ್ತು. ಮಸ್ಸಾಜೋಗ್ ಗ್ರಾಮದ ಸರ್ಪಂಚ್‌ ಸಂತೋಷ್ ದೇಶಮುಖ್ ಅವರ ಹತ್ಯೆಯಲ್ಲಿ ಪಾತ್ರ ವಹಿಸಿದ್ದ ಆರೋಪದ ಮೇಲೆ ಸಚಿವ ಧನಂಜಯ್‌ ಆಪ್ತ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿತ್ತು.

ಆಹಾರ ಮತ್ತು ನಾಗರಿಕ ಸರಬರಾಜು ಖಾತೆಗಳನ್ನು ಹೊಂದಿದ್ದ ಧನಂಜಯ್ ಮುಂಡೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ.

ಕೊಲೆ ಕೇಸ್‌ನಲ್ಲಿ ಆಪ್ತ ಅರೆಸ್ಟ್: ಮಹಾರಾಷ್ಟ್ರ ಸಚಿವ ರಾಜೀನಾಮೆ Read More