ದಸರಾ ಉತ್ಸವ ನೋಡಿಕೊಂಡೇ ಬೆಳೆದವರು -ಕೆ.ವೆಂಕಟೇಶ್

ಮೈಸೂರು: ಮೈಸೂರು ದಸರಾ ಅತ್ಯಂತ ಜನಪ್ರಿಯವಾದದ್ದು, ನಾವೆಲ್ಲ ಚಿಕ್ಕಂದಿನಿಂದಲೂ ದಸರಾ ನೋಡಿಕೊಂಡೇ ಬೆಳೆದವರೂ ಎಂದು ಸಚಿವಕೆ. ವೆಂಕಟೇಶ್ ನುಡಿದರು.

ನಮ್ಮ ನಾಡ ಹಬ್ಬ ದಸರಾ ಕೇವಲ ಜಿಲ್ಲೆಗಳಿಗೆ ರಾಜ್ಯಕ್ಕೆ ಸೀಮಿತವಲ್ಲ, ದೇಶ ವಿದೇಶಗಳಿಗೂ ಜನಪ್ರಿಯವಾದ ಹಬ್ಬವಾಗಿದೆ ಎಂದು ಹೇಳಿದರು.

ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ, ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು,ಈ ನಾಡ ಹಬ್ಬವನ್ನು ಲಕ್ಷಾಂತರ ಜನ ಸಂತಸದಿಂದ ಕಣ್ ತುಂಬಿಕೊಳ್ಳುತ್ತಾರೆ. ಹಾಗೆ ಯುವ ಸಂಭ್ರಮವು ಕೂಡ ಒಂದು ಎಂದು ಬಣ್ಣಿಸಿದರು.

ಇದು ಯುವ ಪೀಳಿಗೆಗಳಿಗೆ ಅತ್ಯಂತ ಪ್ರಿಯವಾದ ಹಬ್ಬವಾಗಿದೆ ನಾಡಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ವಿವಿಧ ಜಿಲ್ಲೆಗಳಿಂದ ಕಾಲೇಜು ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಶಾಸಕ ಜಿ.ಟಿ ದೇವೇಗೌಡ ಅವರು ಮಾತನಾಡಿ ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ದಸರಾ ಮಹೋತ್ಸವದ ಮೊದಲನೇ ಕಾರ್ಯಕ್ರಮವಾದ ಯುವಸಂಭ್ರಮ ಕಾರ್ಯಕ್ರಮವನ್ನು ವಿಜೃಂಭಣೆಯಾಗಿ ಮಾಡಲು ಸರ್ಕಾರ ಕಾರಣ, ಅತಿ ಹೆಚ್ಚು ಅನುದಾನ ನೀಡಿ ಯುವಸಂಭ್ರಮ ಅವಿಸ್ಮರಣೀಯವಾಗುವಂತ ಕಾರ್ಯಕ್ರಮಗಳನ್ನು ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ತನ್ವೀರ್ ಸೆಟ್ ಅವರು ಮಾತನಾಡಿ ಯುವಸಂಭ್ರಮದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಲಿವೆ, ಅರ್ಥಪೂರ್ಣ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ನೋಡಬೇಕು. ಕಾರ್ಯಕ್ರಮ ನೀಡಲು ಬಂದಿರುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಅವರಲ್ಲಿ ಇನ್ನು ಹೆಚ್ಚಿನ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದು ಹೇಳಿದರು.

ಎಲ್ಲಾ ಯುವ ಪೀಳಿಗೆಗಳು ಅರಿತುಕೊಂಡು ಎಲ್ಲರಿಗೂ ಸಮಾನತೆಯನ್ನು ತಂದುಕೊಟ್ಟಿರುವ ಸಂವಿಧಾನದ ಆಶಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಬ್ರಾತೃತ್ವವನ್ನು ಬೆಳೆಸಬೇಕು ಎಂದು ಹೇಳಿದರು.

ಎಕ್ಕ ಸಿನಿಮಾ‌ ಖ್ಯಾತಿಯ ಯುವ ರಾಜ್ ಕುಮಾರ್ ಮಾತನಾಡಿ ತುಂಬಾ ಖುಷಿ ಆಗುತ್ತಿದೆ. ದಸರಾ ಅಂದರೆ ಎನರ್ಜಿ. ಅರಮನೆ, ರಾಜರು, ಕುವೆಂಪು ನೆನಪಾಗುತ್ತಾರೆ ಎಂದು ತಿಳಿಸಿದರು. ಬ್ಯಾಂಗಲ್ ಬಂಗಾರಿ ಗೀತೆಗೆ ನೃತ್ಯ ಮಾಡಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದರು.

ಅಮೃತ ಅಯ್ಯಂಗಾರ್ ಅವರು ಮಾತನಾಡಿ, ನಮ್ಮೂರಲ್ಲಿ ನಮ್ಮ ವೇದಿಕೆಯಲ್ಲಿ ನಿಂತು ಮಾತನಾಡಲು ಖುಷಿ ಆಗುತ್ತೆ. ಇದೇ ವೇದಿಕೆಯಲ್ಲಿ ನಾನು ನೃತ್ಯ ಮಾಡಿದ್ದೇನೆ. ಮೈಸೂರಿಗೆ ಬರಲು ಖುಷಿ ಆಗುತ್ತೆ. ದಸರಾಗೆ ಕಿಕ್ ಸ್ಟಾರ್ಟ್ ಕೊಡೊದು ಯುವ ಸಂಭ್ರಮ ಇದನ್ನ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ಬಳಿಕ ಮೊದಲ ದಿನ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ನೃತ್ಯಗಳು ನಡೆದವು.

ಕಾರ್ಯಕ್ರಮ ದಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ.ಎನ್‌.ಮಂಜೇಗೌಡ, ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ ಖಾನ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಡಾ ಪುಷ್ಪಾ ಅಮರ್ ನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್ ಮತ್ತಿತರರು ಉಪಸ್ಥಿತರಿದ್ದರು.

ದಸರಾ ಉತ್ಸವ ನೋಡಿಕೊಂಡೇ ಬೆಳೆದವರು -ಕೆ.ವೆಂಕಟೇಶ್ Read More

ಪ್ರತಿಯೊಬ್ಬರಿಗೂ ತಾರತಮ್ಯವಿಲ್ಲದೇ ಹಕ್ಕುಗಳನ್ನು ನೀಡುವುದೇ ಸಂವಿಧಾನದ ಉದ್ದೇಶ: ವೆಂಕಟೇಶ್

ಚಾಮರಾಜನಗರ: ದೇಶದ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ಸಮಾನತೆ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಮತ್ತಿತರೆ ಹಕ್ಕುಗಳನ್ನು ಯಾವುದೇ ತಾರತಮ್ಯವಿಲ್ಲದೇ ನೀಡವುದು ಸಂವಿಧಾನದ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವ ಕೆ. ವೆಂಕಟೇಶ್ ತಿಳಿಸಿದರು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ೭೬ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಜನವರಿ ೨೬ ೧೯೫೦ರಲ್ಲಿ ಭಾರತವು ಗಣತಂತ್ರ ದೇಶವೆಂದು ಘೋಷಿಸಿಕೊಂಡು ಇಂದಿಗೆ ೭೫ ವರ್ಷಗಳು ಸಂದಿವೆ. ಸಂವಿಧಾನ ಜಾರಿಗೊಳಿಸಿದ ದಿನವನ್ನು ದೇಶಾದ್ಯಂತ ಗಣರಾಜ್ಯೋತ್ಸವ ದಿನವನ್ನಾಗಿ ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಡೀ ಜಗತ್ತಿಗೆ ಮಾದರಿಯಾಗುವಂತಹ ಸಂವಿಧಾನ ರಚಿಸಿ ನಮಗೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಬಣ್ಣಿಸಿದರು.

ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯಲು ಸಂವಿಧಾನ ನೆರವಾಗಿದೆ. ಇಡೀ ವಿಶ್ವದಲ್ಲಿಯೇ ಶ್ರೇಷ್ಠವಾಗಿರುವ ಭಾರತ ಸಂವಿಧಾನದ ಘನತೆ, ಗೌರವವನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜಾನಪದ ಕಲೆ, ಸಂಸ್ಕೃತಿಗಳ ತವರೂರು ಆಗಿರುವ ಗಡಿಜಿಲ್ಲೆ ಚಾಮರಾಜನಗರದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯಸರ್ಕಾರವು ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಜನಪರ ಅಗತ್ಯತೆಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ವೆಂಕಟೇಶ್ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಲೋಕಸಭಾ ಸದಸ್ಯ ಸುನಿಲ್ ಬೋಸ್, ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ ಗಣ್ಯರು ರಾಷ್ಟ್ರನಾಯಕರಾದ ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ತಹಶೀಲ್ದಾರ್ ಗಿರಿಜ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಯೊಬ್ಬರಿಗೂ ತಾರತಮ್ಯವಿಲ್ಲದೇ ಹಕ್ಕುಗಳನ್ನು ನೀಡುವುದೇ ಸಂವಿಧಾನದ ಉದ್ದೇಶ: ವೆಂಕಟೇಶ್ Read More