ಮೈಸೂರಿಗೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ

ಮೈಸೂರು: ಕಾರ್ಯನಿಮಿತ್ತ ಮೈಸೂರಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಸ್ಥಳೀಯ ನಾಯಕರು ಅಭಿನಂದಿಸಿದರು.

ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಬರಮಾಡಿಕೊಂಡು ಹೂ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಶಿವಣ್ಣ, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಕಾರ್ಮಿಕ ವಿಭಾಗದ ಫ್ರಾನ್ಸಿಸ್ ಹಾಗೂ ನಾಗವಾಲ ಮಹೇಶ್ ಉಪಸ್ಥಿತರಿದ್ದರು.

ಮೈಸೂರಿಗೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ Read More