ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ದಾಳಿ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ.

ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.

ಬೆಳ್ಳಂ ಬೆಳಿಗ್ಗೆ ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ ವಿವಿಧೆಡೆ ಎಫ್ಎಸ್ಎಲ್​ ತಂಡದೊಂದಿಗೆ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧನವಾಗಿತ್ತು.

ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು.ಆದರೆ ಜೈಲಿಂದ ಹರಬಂದ ನಂತರ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾದರು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ ಮೇಲ್ ಮಾಡಿದ್ದಾರೆ. ಹನಿಟ್ರ್ಯಾಪ್​ ಕೂಡ ಮಾಡಿಸಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು, ಮುನಿರತ್ನ ಅವರ ನಿವಾಸ ಮತ್ತು ಅವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ದಾಳಿ Read More

ಶಾಸಕ ಮುನಿರತ್ನ ವಿರುದ್ಧ ಬಹಳಷ್ಟು ಗಂಭೀರ ಪ್ರಕರಣಗಳಿವೆ:ಸಿಎಂ

ಮೈಸೂರು: ಶಾಸಕ ಮುನಿರತ್ನ ವಿರುದ್ಧ ಬಹಳಷ್ಟು ಗಂಭೀರ ಪ್ರಕರಣಗಳಿವೆ,
ಎಸ್ಐಟಿ ತನಿಖೆ ಮಾಡುವಂತೆ ಸಚಿವರು ಹಾಗೂ ಶಾಸಕರು ಪತ್ರ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ,
ಸಚಿವರು ಹಾಗೂ ಶಾಸಕರು ಕೊಟ್ಟಿರುವ
ಪತ್ರದ ಮೇಲೆ ಮುಂದಿನ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಮುನಿರತ್ನ ವಿರುದ್ದ ಬಹಳಷ್ಟು ಗಂಭೀರ ಪ್ರಕರಣಗಳಿವೆ,ಹಾಗಾಗಿ ವಿಶೇಷ ತನಿಖಾ ತಂಡದ ಅಗತ್ಯ ಇದೆ ಎಂದು ಸಚಿವರು ಕೆಲ ಶಾಸಕರು ಕೇಳಿದ್ದಾರೆ,ಈ ಬಗ್ಗೆ ಗೃಹ ಸಚಿವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ಗಣೇಶ ಮೂರ್ತಿ ಗಲಾಟೆಗಳು
ಪ್ರತಿ‌ನಿತ್ಯ ನಡೆದಿಲ್ಲ,
ಇದುವರೆಗೆ ಎರಡು ಪ್ರಕರಣ ನಡೆದಿವೆ,
ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಎಲ್ಲಾ ಕಡೆ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳಲು ತಿಳಿಸಿದ್ದೇನೆ,ಇನ್ನು
ನಾಗಮಂಗಲ ಪ್ರಕರಣದಲ್ಲಿ ಡಿವೈಎಸ್ಪಿ, ಇನ್ಸ್ಪೆಕ್ಟರ್ ಅಮಾನತು ಮಾಡಿದ್ದೇವೆ ಎಂದು ಮುಖ್ಯ ಮಂತ್ರಿ ಸಮರ್ಥಿಸಿಕೊಂಡರು.

ಎಚ್.ಡಿ ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,
ದಾಖಲೆಗಳನ್ನ ಸಚಿವರು ಬಿಡುಗಡೆ ಮಾಡಿದ್ದಾರೆ,ಆದರೆ ನಾನು ಆ ದಾಖಲೆಗಳನ್ನ ನೋಡಿಲ್ಲ,ನೋಡುತ್ತೇನೆ,ಆ ಭೂಮಿಯನ್ನ
ಕುಮಾರಸ್ವಾಮಿ ಅವರ ಭಾಮೈದನಿಗೆ ರಿಜಿಸ್ಟರ್ ಆಗಿದೆ,ಅತ್ತೆಗೆ ಜಿಪಿಎ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದು ಬಹಳ ಗಂಭೀರವಾದ ಪ್ರಕರಣ,
ನೋಡೊಣಾ ಆ ಫೈಲನ್ನ ತರಿಸಿ ಪರಿಶೀಲನೆ ಮಾಡುತ್ತೇನೆ ಎಂದ ಸಿದ್ದು,
ಕುಮಾರಸ್ವಾಮಿಯವರದು ಯಾವಗಲೂ ಹಿಟ್ ಅಂಡ್ ರನ್ ಕೇಸ್.
ತಮ್ಮ ಮೇಲಿನ ಎಲ್ಲಾ ಆರೋಪಕ್ಕೂ ಕೂಡ ಹಿಟ್ ಅಂಡ್ ರನ್ ರೀತಿ ಮಾತನಾಡಿ ಹೋಗುತ್ತಾರೆ ಎಂದು ಹೇಳಿದರು.

ಶಾಸಕ ಮುನಿರತ್ನ ವಿರುದ್ಧ ಬಹಳಷ್ಟು ಗಂಭೀರ ಪ್ರಕರಣಗಳಿವೆ:ಸಿಎಂ Read More