ಕಾಂಗ್ರೆಸ್‌ನಲ್ಲಿನ ಪವರ್‌ ಶೇರಿಂಗ್‌ ಚರ್ಚೆಯಿಂದ‌ ಅಭಿವೃದ್ಧಿ ಶೂನ್ಯ: ವಿಶ್ವನಾಥ್

ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್‌ ಶೇರಿಂಗ್‌ ಚರ್ಚೆಯೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್‌ ಟೀಕಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನ ಬೆಳಗಾದರೆ ಸಾಕು ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯ ಪ್ರವೇಶಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್‌ನಿಂದ ಸಿದ್ದರಾಮಯ್ಯ ಅವರನ್ನು ಹೊರಹಾಕಿದಾಗ ಆಶ್ರಯ ಕೊಟ್ಟಿದ್ದು ಕಾಂಗ್ರೆಸ ಪಕ್ಷ. ಆದರೆ ಈಗ ಸಿದ್ದರಾಮಯ್ಯ ಕಾಂಗ್ರೆಸ್‌ ಪಾರ್ಟಿಯನ್ನೇ ಮುಗಿಸಲು ಮುಂದಾಗಿದ್ದಾರೆ ಎಂದು ವಿಶ್ವನಾಥ್ ವ್ಯಂಗ್ಯವಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರ ಸಮಕ್ಷಮದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಡಿ.ಕೆ.ಸುರೇಶ್‌ ಸಹೋದರರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರು ಉಪಸ್ಥಿತರಿದ್ದರು. ಆದರೆ ಈ ಬಗ್ಗೆ ಯಾರೊಬ್ಬರೂ ಈಗ ಬಾಯಿ ಬಿಡುತ್ತಿಲ್ಲ ಎಂದು ಹೇಳಿದರು.

ಡಿಕೆಶಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಾರ್ಟಿ ಧೂಳಿಪಟವಾಗಲಿದೆ ಎಂದು ವಿಶ್ವನಾಥ್ ಎಚ್ಚರಿಸಿದರು.

ಕಾಂಗ್ರೆಸ್‌ನಲ್ಲಿನ ಪವರ್‌ ಶೇರಿಂಗ್‌ ಚರ್ಚೆಯಿಂದ‌ ಅಭಿವೃದ್ಧಿ ಶೂನ್ಯ: ವಿಶ್ವನಾಥ್ Read More

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ:ಡಾ.ಯತೀಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಸಿಎಂ ಬದಲಾವಣೆ ವಿಚಾರ ಮಾತನಾಡುತ್ತಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಸಿಎಂ ಬದಲಾವಣೆ ವಿಚಾರ ಬರುತ್ತಿದೆ ಇಂತಹ ವಿಚಾರಗಳಿಗೆ ವಿರಾಮ ಹಾಕಬೇಕು ಎಂದು ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಸಿಎಂ ಬದಲಾಬಣೆ ಬಗ್ಗೆ ಯಾರು ಮಾತನಾಡುತ್ತಿಲ್ಲ. ರಾಜಕೀಯದ ಯಾವ ವಿಷಯವನ್ನ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಪಕ್ಷದ ಆಂತರಿಕ ವಿಚಾರವನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಾ.ಯತೀಂದ್ರ ಹೇಳಿದರು.

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ:ಡಾ.ಯತೀಂದ್ರ Read More

ಸಿ.ಪಿ.ವೈ ರಾಜೀನಾಮೆ:ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ‌ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ‌ ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿ ಇದ್ದುದರಿಂದ ಸಿಪಿವೈ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಬೆಳಿಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಜೆಡಿಎಸ್‌ನಿಂದ ಸ್ಪರ್ಧಿಸಿದರೆ ಕಷ್ಟ ಆಗಲಿದೆ ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ, ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಹೇಳಿದರು.

ನಾನು ಕುಮಾರಸ್ವಾಮಿ ಅವರೊಂದಿಗೆ ಮೂರು ದಿನಗಳಿಂದ ಚರ್ಚೆ ಮಾಡಿದ್ದೇನೆ ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಆದರೆ ಅವರು ಆಗಲ್ಲ ಅಂತಿದ್ದಾರೆ ನೋಡೋಣ ಎಂದರು.

ಕುಮಾರಸ್ವಾಮಿಯವರ ಮನಸ್ಸಿನಲ್ಲಿ ಅವರ ಮಗನಿಗೆ ಅಥವಾ ತಮ್ಮ ಕುಟುಂಬದವರಿಗೆ ಟಿಕೆಟ್ ಕೊಡಬೇಕು ಎಂಬ ಆಸೆ ಇದೆ. ಅವರ ಮನಸಲ್ಲೇ ಆ ತರಹ ಇದ್ದರೆ ನಾನು ಏನು ಮಾಡೋದಕ್ಕಾಗುತ್ತೆ ಎಂದು ಪ್ರಶ್ನಿಸಿದರು ಸಿಪಿವೈ.

ಜೆಡಿಎಸ್ ಚಿನ್ಹೆಯಲ್ಲಿ ನಿಲ್ಲಿ ಎಂದು ಅವರು ಮುಕ್ತವಾಗೇನೂ ಹೇಳಿಲ್ಲ, ಅವರ ಪಕ್ಷದ ಮುಖಂಡರು ಬಂದಾಗ ಹೇಳಿದ್ದರು ಅಷ್ಟೇ. ನಾನು ನನ್ನ ತಾಲೂಕಿನ ಜನರ ಜೊತೆಗೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ,ಬಹಳ ಭಿನ್ನಾಭಿಪ್ರಾಯ ಬಂದಿದೆ ಎಂದು ತಿಳಿಸಿದರು.

ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಮೈತ್ರಿ ಆಗಿದೆ. ಈಗ ಅನಾವಶ್ಯಕವಾಗಿ ಜೆಡಿಎಸ್‌ಗೆ ಹೋಗುವುದು ಬೇಡ ಅಂತ ತಾಲೂಕಿನಲ್ಲಿ ಅಭಿಪ್ರಾಯ ಬಂದಿದೆ. ಮೊದಲೇ ನನಗೆ ಪಕ್ಷಾಂತರಿ ಎಂದು ಕರೆಯುತ್ತಾರೆ. ಹಾಗಾಗಿ ಬಿಜೆಪಿಯಿಂದಲೇ ನಿಲ್ಲಿ ಎಂದು ಹೇಳುತ್ತಿದ್ದಾರೆ. ನಾನು ಬಿಜೆಪಿಯಿಂದಲೇ ನಿಲ್ಲಲು ನಿರ್ಧರಿದ್ದೇನೆ. ಆದರೆ ನನಗೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂದು ಯೋಗೇಶ್ವರ್ ತೀವ್ರ ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆಂಬ ಹೆಚ್‌ಡಿಕೆ ಆರೋಪಕ್ಕೆ ಪ್ರತಿಕ್ರಿಯುಸಿ, ನನ್ನ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಟಿಕೆಟ್ ಕೊಡದಿದ್ದರೆ ನಿಮ್ಮ ಮಗನಿಗೇ ಕೊಡಿ. ಆದರೆ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೆ ಎಂದು ಹೇಳಬೇಡಿ, ನಾನು ಇಲ್ಲಿಯವರೆಗೆ ಕಾಂಗ್ರೆಸ್‌ನ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ.ಆದರೆ ಭೇಟಿ ಮಾಡಿದರೆ ತಪ್ಪೇನಿಲ್ಲ ಭೇಟಿ ಮಾಡಬೇಕೆನಿಸಿದರೆ ಭೇಟಿ ಆಗುತ್ತೇನೆ. ಮುಚ್ಚುಮರೆ ಮಾಡಲ್ಲ. ಆದರೆ ಈವರೆಗೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದು ಯಡಿಯೂರಪ್ಪ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಅಂತಹ ಹೇಳಿಕೆ ಕೊಡುವ ಅಗತ್ಯವಿರಲಿಲ್ಲ, ಆದರೆ ಕುಮಾರಸ್ವಾಮಿ ಅವರಿಗೆ ದೊಡ್ಡ ಮನಸು ಇದ್ದಿದ್ದರೆ ಅನುಕೂಲ ಆಗುತ್ತಿತ್ತು ಎಂದು ಹೇಳಿದರು.

ಇನ್ನೂ ಎರಡು ದಿನ ಕಾದು ನೋಡುತ್ತೇನೆ, ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ,ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಹೇಳಿದ್ದಾರೆ, ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಯೋಗೇಶ್ವರ್ ತಿಳಿಸಿದ್ದರು.

ಇದೀಗ ಯೋಗೇಶ್ವರ್ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದಾರೆ, ಚನ್ನಪಟ್ಟಣ ಟಿಕೆಟ್ ಬಗ್ಗೆ ಮುಂದೇನು ಎಂಬುದನ್ನು ಕಾದು ನೋಡಬೇಕಿದೆ.

ಸಿ.ಪಿ.ವೈ ರಾಜೀನಾಮೆ:ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆ Read More

ಜಾತಿಗಣತಿ ಜಾರಿ ಮಾಡಲೇಬೇಕು: ಬಿ.ಕೆ.ಹರಿಪ್ರಸಾದ್‌ ಆಗ್ರಹ

ಬೆಂಗಳೂರು: ಜಾತಿಗಣತಿ ಜಾರಿಯನ್ನು ಸರ್ಕಾರ ಜಾರಿ ಮಾಡಲೇಬೇಕೆಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಮ್ಮದೇ ಪಕ್ಷದ‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮೀಸಲಾತಿಯ ಒಳಮುಖ ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮೀಸಲಾತಿಯನ್ನು ಉಳಿಸುವುದು, ಜಾತಿ ಹಾಗೂ ಜನಗಣತಿಯನ್ನು ನಡೆಸುವುದು ನಮ್ಮ ಪಕ್ಷದ ಆದ್ಯ ಕರ್ತವ್ಯ.ಅಧಿಕಾರಕ್ಕಾಗಿ ಮೀಸಲಾತಿ ವಿಷಯದಲ್ಲಿ ರಾಜಿಯಾಗಲು ಎಂದೂ ಸಾಧ್ಯವಿಲ್ಲ ಎಂದು ಹೇಳಿದರು.

ಚುಣಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಜಾತಿಗಣತಿ ಜಾರಿ ವಿಚಾರ
ಇರುವುದರಿಂದ ಕೂಡಲೇ ಜಾರಿ‌ ಮಾಡಬೇಕೆಂದು ಹೇಳಿದರು.

ಜಾತಿಗಣತಿ ಜಾರಿ ಮಾಡಿದರೆ ಸರ್ಕಾರ ಬಿದ್ದು ಹೋಗಲಿದೆ ಎಂಬ ಭಯ ಏಕೆ,ಯಾವುದಕ್ಕೂ ಅಂಜದೆ ಜಾತಿಗಣತಿ ಜಾರಿಯಾಗಲೇಬೇಕು ಎಂದು ಹೇಳಿದ್ದಾರೆ.

ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆಯೊ ಗೊತ್ತಿಲ್ಲ,
ಜಾತಿಗಣತಿಯಿಂದ ಎಲ್ಲಾ ಸಮುದಾಯಗಳಿಗೂ ಅನುಕೂಲ ಆಗಲಿದೆ ಹಾಗಾಗಿ ಜಾತಿಗಣತಿ ಜಾರಿಯಾಗಲೇಬೇಕು ಎಂದು ಹರಿಪ್ರಸಾದ್ ಕಡಕ್ಕಾಗೇ ಹೇಳಿದರು.

ಜಾತಿಗಣತಿ ಜಾರಿ ಮಾಡಲೇಬೇಕು: ಬಿ.ಕೆ.ಹರಿಪ್ರಸಾದ್‌ ಆಗ್ರಹ Read More

ದಸರಾಗೆ 40 ಕೋಟಿ ಘೋಷಿಸಿ ಪ್ರಾಯೋಜಕರ ಹುಡುಕಾಟವೇಕೆ: ಹಳ್ಳಿಹಕ್ಕಿ ಪ್ರಶ್ನೆ

ಮೈಸೂರು: ದಸರಾ ಮಹೋತ್ಸವ ಆಚರಣೆಗೆ ಸರಕಾರವೇ 40 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿದೆ,ಆದರೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್‌, ಈ ಹಿಂದೆ 2003 ರಲ್ಲಿ ರಾಜ್ಯದಲ್ಲಿ ಕಂಡು ಕೇಳರಿಯದ ಭೀಕರ ಬರಗಾಲ ಇತ್ತು.ಆಗ ದುಂದು ವೆಚ್ಚ ಮಾಡಿ ದಸರಾ ಆಚರಣೆ ಮಾಡುವುದು ಬೇಡ ಎಂದು ರೈತ ಸಂಘಟನೆ ಹಾಗೂ ಕನ್ನಡ ಪರ ಹೋರಾಟಗಾರರು ಚಳವಳಿ ಆರಂಭಿಸಿದ್ದರು. ಆಗ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ನಾನು, ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮನವೊಲಿಸಿ ದಸರಾ ಆಚರಣೆಗೆ ಮುಂದಾದೆ ಎಂದು ಹೇಳಿದರು.

ಸರಕಾರದ ನಯಾ ಪೈಸೆಯೂ ಬೇಡ, ಪ್ರಾಯೋಕರ ಸಹಕಾರದಿಂದ ನಾಡಹಬ್ಬ ಮಾಡುವುದಾಗಿ ತಿಳಿಸಿದೆ.ಇದಕ್ಕೆ ಎಸ್. ಎಂ.ಕೃಷ್ಣ ಅವರು ಸಮ್ಮತಿಸಿದರು. ಅದರಂತೆ ಟಿವಿಎಸ್‌ ಕಂಪನಿ ಸೇರಿದಂತೆ ಪ್ರಮುಖವಾದ ಒಂದೆರೆಡು ಸಂಸ್ಥೆಗಳ ಸಹಭಾಗಿತ್ವದಲ್ಲಿ ಹಣ ಸಂಗ್ರಹಿಸಿ ದಸರಾ ಆಚರಿಸಿದೆವು ಎಂದು ತಿಳಿಸಿದರು.

ಅದೆಲ್ಲ ಮುಗಿದ ನಂತರ ಪ್ರಾಯೋಜಕತ್ವ ಪಡೆಯುವುದೇ ಒಂದು ಚಾಳಿ ಆಗೋಯ್ತು ಎಂದು ಬೇಸರ ವ್ಯಕ್ತಪಡಿಸಿದರು.

ಈಗ ರಾಜ್ಯ ಸರಕಾರವೇ ಈ ಬಾರಿ ಅದ್ದೂರಿ ದಸರಾ ಮಾಡುವುದಾಗಿ ಹೇಳಿಕೆ ನೀಡಿದ್ದಲ್ಲದೆ 40 ಕೋಟಿ ರೂ. ಅನುದಾನವನ್ನು ಘೋಷಿಸಿದೆ.ಆದರೂ ಪ್ರಾಯೋಜಕರ ಬಳಿ ಹಣ ಕೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ದಸರಾ ಪ್ರಾಯೋಜಕತ್ವ ಜಂಬೂ ಸವಾರಿ 2 ಕೋಟಿ, ಅಂಬಾರಿ 1 ಕೋಟಿ ಅಂತ ಹೇಳಿದ್ದಾರೆ ಅಂಬಾರಿಗೆ ಬ್ಯಾನರ್‌ ಕಟ್ತಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃವದಲ್ಲಿ ನಡೆದ ಪ್ರಾಯೋಜಕತ್ವದ ಸಭೆಯಲ್ಲಿ ಜಂಬೂವಾರಿಗೆ ಇಷ್ಟು ಕೋಟಿ, ಅಂಬಾರಿಗೆ ಇಷ್ಟು ಕೋಟಿ ಎಂದು ನಿಗಧಿ ಮಾಡಿದ್ದಾರೆ. ಜಂಬೂಸವಾರಿಯಲ್ಲೇ ತಾನೆ ಅಂಬಾರಿ ಸಾಗುವುದು,ಅದು ಹೇಗೆ ಎರಡಕ್ಕೂ ಪ್ರತ್ಯೇಕ ಪ್ರಾಯೋಜಕತ್ವ ಪಡೆಯುತ್ತಾರೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

ದಸರಾಗೆ 40 ಕೋಟಿ ಘೋಷಿಸಿ ಪ್ರಾಯೋಜಕರ ಹುಡುಕಾಟವೇಕೆ: ಹಳ್ಳಿಹಕ್ಕಿ ಪ್ರಶ್ನೆ Read More