ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ: ನಾಳೆಯಿಂದ ಬಿಜೆಪಿ ಪ್ರತಿಭಟನೆ

ಮೈಸೂರು: ದೇಶದ ಪ್ರಧಾನಿಯವರನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕೆಂದು ಆಗ್ರಹಿಸಿ ನಾಳೆಯಿಂದ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್‌, ಬಾಸಿಲ್‌, ಸಮೀರ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಯದುವೀರ್, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.

ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂತಹ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್‌ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ಯದುವೀರ್ ಹೇಳಿದ್ದಾರೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ: ನಾಳೆಯಿಂದ ಬಿಜೆಪಿ ಪ್ರತಿಭಟನೆ Read More

ಕೇಂದ್ರ ಪ್ರವಾಸೋದ್ಯಮ ಸಚಿವರ ಭೇಟಿ ಮಾಡಿದ ಯದುವೀರ್‌ ಒಡೆಯರ್

ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರನ್ನು
ಸಂಸದ ಯದುವೀರ್ ಒಡೆಯರ್ ಭೇಟಿ ಮಾಡಿ ಮೈಸೂರಿನ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಚರ್ಚಿಸಿದರು.

ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾತನಾಡಿದ ಯದುವೀರ್ ಒಡೆಯರ್,
ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ 2.0 ಯೋಜನೆಯಡಿ ಮೈಸೂರಿನಲ್ಲಿ ಎರಡು ಪ್ರಮುಖ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದ್ದಾರೆ.

ಈ ಎರಡೂ ಯೋಜನೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಲಭ್ಯ ನಿಗಮ ಅನುಷ್ಠಾನಕ್ಕೆ ತರಲಿದೆ ಎಂದು ಹೇಳಿದರು
ಮೈಸೂರಿನಲ್ಲಿ ಇಕಾಲಜಿಕಲ್ ಎಕ್ಸ್‌ಪೀರಿಯನ್ಸ್ ಝೋನ್ ಅಭಿವೃದ್ಧಿಗೆ 18.47 ಕೋಟಿ ರೂ. ಹಾಗೂ ಮೈಸೂರಿನ ಟಾಂಗಾ ರೈಡ್ ಎಕ್ಸ್‌ಪೀರಿಯನ್ಸ್ ಝೋನ್ ಅಭಿವೃದ್ಧಿಗೆ 271.60 ಲಕ್ಷ ರೂಪಾಯಿ ಅನುಮೋದನೆ ನೀಡಲಾಗಿದೆ ಎಂದು ಸಂಸದರು ಮಾಹಿತಿ ನೀಡಿದರು.

ಈ ಯೋಜನೆಗೆ ಅಂತಿಮ ಅನುಮೋದನೆ ದೊರಕಿರುವುದು ಸಂತಸ ತಂದಿದೆ, ಈ ಯೋಜನೆಗಳಿಂದ ಮೈಸೂರಿನಲ್ಲಿ ಪ್ರವಾಸೋದ್ಯಮ ಮತ್ತಷ್ಟು ವೃದ್ಧಿಯಾಗಲಿದೆ. ಯೋಜನೆಗಳ ಅನುಷ್ಠಾನಕ್ಕಾಗಿ ಭೂಮಿ ಪೂಜೆ ನಡೆಸಲು ಶೀಘ್ರ ದಿನಾಂಕ ನಿಗದಿಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಸಚಿವರಾದ ಗಜೆಂದ್ರ ಸಿಂಗ್ ಶೇಖಾವತ್ ಅವರು ಯೋಜನೆಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.
ಮೈಸೂರಿನ ಇನ್ನೂ ಕೆಲವು ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತದೆ ಎಂದು ತಿಳಿಸಿದರು.

ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಉತ್ತೇಜನಕ್ಕೆ ಎಲ್ಲ ರೀತಿಯಿಂದಲೂ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸಹಕಾರ ನೀಡಲಿದೆ. ಈ ಸಂಬಂಧ ನಾನು ಕೂಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಉನ್ನತಿಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಯದುವೀರ್‌ ಒಡೆಯರ್‌ ಭರವಸೆ ನೀಡಿದರು

ಕೇಂದ್ರ ಪ್ರವಾಸೋದ್ಯಮ ಸಚಿವರ ಭೇಟಿ ಮಾಡಿದ ಯದುವೀರ್‌ ಒಡೆಯರ್ Read More

ಫಿಟ್ ಇಂಡಿಯಾ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚು ಆದ್ಯತೆ:ಯದುವೀರ್

ಮೈಸೂರು: ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕೆಂಬ ಮುಖ್ಯ ಆಶಯದೊಂದಿಗೆ ಪ್ರಧಾನಿ ಮೋದಿ ಅವರು ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಸಂಸದರ ಕ್ರೀಡೋತ್ಸವ ಅಂಗವಾಗಿ ಮೈಸೂರು ವಿ.ವಿ ದೈಹಿಕ ಶಿಕ್ಷಣ ವಿಭಾಗ, ಮೈಸೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ಫೋನಿಕ್ಸ್ ಇಂಟರ್‌ನ್ಯಾಷನಲ್ ಅಕಾಡೆಮಿ, ಸೈಕ್ಲೋಪೀಡಿಯಾ, ಫನ್ ಪ್ಯಾಲೇಸ್, ಸನ್‌ಪ್ಯೂರ್, ಲಿಟ್ಲ್ ಎಲ್ಲಿ, ಬುಕ್ಸ್ ಅಂಡ್ ಬ್ರೇನ್ಸ್ ಜಂಟಿ ಸಹಯೋಗದಲ್ಲಿ ಮಾನಸಗಂಗೋತ್ರಿಯಲ್ಲಿ ಆಯೋಜಿಸಿದ್ದ ಕಿಡ್ಸ್ ಸೈಕ್ಲೊಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಫಿಟ್ ಇಂಡಿಯಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಂದೋಲನವಾಗಿದೆ. ಕಿರಿಯ ವಯಸ್ಸಿನಿಂದಲೇ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಪ್ರಧಾನಮಂತ್ರಿಯವರ ಆಶಯದಂತೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ವಿವಿಧ ಕ್ರೀಡೋತ್ಸವ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಆರೋಗ್ಯ ಕುರಿತು ಜಾಗೃತಿ ಮೂಡಿಸುವುದು ನಮ್ಮ ಮುಖ್ಯ ಧ್ಯೇಯ. ಕಿರಿಯ ವಯಸ್ಸಿನಿಂದಲೇ ಕ್ರೀಡೆಗೆ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿಯೂ ಪಸರಿಸಬಹುದು,ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಗಾಧ ಅವಕಾಶವಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಅವರಿಗೆ ವೇದಿಕೆ ಕಲ್ಪಿಸಲು ಬದ್ಧನಿದ್ದೇನೆ ಎಂದು ಯದುವೀರ್ ತಿಳಿಸಿದರು.

ಫಿಟ್ ಇಂಡಿಯಾ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚು ಆದ್ಯತೆ:ಯದುವೀರ್ Read More

ಡಿ.ಕೆ ಶಿವಕುಮಾರ್ ಹೇಳಿಕೆ ಹಾಸ್ಯಾಸ್ಪದ-ಯದುವೀರ್

ಮೈಸೂರು: ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನಿಜಕ್ಕೂ ಹಾಸ್ಯಾಸ್ಪದ
ಎಂದು ಸಂಸದ ಯದುವೀರ್‌ ಒಡೆಯರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿ.ಕೆ.ಶಿವಕುಮಾರ್ ಅವರ ಇಂತಹ ಹೇಳಿಕೆ ಹಿಂದೂ‌ ಭಾವನೆಗೆ ಧಕ್ಕೆ ತರುವ ವಿಚಾರ ಎಂದು ತಿಳಿಸಿದರು.

ಸಾವಿರಾರು ವರ್ಷಗಳ ಹಿಂದೆ ಮರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು, ಸಾವಿರಾರು ವರ್ಷಗಳಿಂದ ಚಾಮುಂಡಿ ಬೆಟ್ಟ ಇರುವುದು ಕೂಡ ಉಲ್ಲೇಖ ಇದೆ ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು ಎಂದು ಹೇಳಿದರು.

ಆಧುನಿಕ‌ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು, ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ.ಧರ್ಮ ಉಳಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇವೆ,ಜತೆಗೆ ಕಾನೂನು ಚೌಕಟ್ಟಿನಲ್ಲೂ ಹೋರಾಡುತ್ತೇವೆ, ನಾವು ಎಲ್ಲ ಧರ್ಮ ಒಪ್ಪಿಕೊಳ್ಳುತ್ತೇವೆ ಹಾಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು ಎಂದು ತಿಳಿಸಿದರು.

ರಾಜ್ಯದಲ್ಲಿ‌ ಹಲವು ಸಮಸ್ಯೆಗಳಿವೆ, ಅವುಗಳನ್ನ ಮುಚ್ಚಿ‌ ಹಾಕಲು ಇಂತಹ ಹೇಳಿಕೆ ಸರಿಯಲ್ಲಾ‌ ಎಂದು ಹೇಳಿದರು.

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದು ಇದೇ ಕಾಂಗ್ರೆಸ್ ಸರ್ಕಾರ, ಬೆಟ್ಟವನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನ ತೆಗೆದುಕೊಳ್ಳುತ್ತಾರೆ, ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ‌ ಹಾಗೆ ಮಾಡಿದರು ಯಾವಾಗಲೂ ಹಿಂದುಗಳಿಗೆ ವಿರುದ್ಧದ ಹೇಳಿಕೆ ನೀಡುತ್ತಿದ್ದಾರೆ ಎಂದು ಯದುವೀರ್ ಬೇಸರ‌ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್‌ ಅವರು ಆರ್ ಎಸ್ ಎಸ್ ಹಾಡು ಹಾಡಿ ಜಾಗೃತಿ ಎಂದು ಹೇಳಿ ಬಳಿಕ ಸ್ವಪಕ್ಷದವರ ವಿರೋಧಕ್ಕೇ ಗುರಿಯಾದರು. ಅದನ್ನ ಸಮತೋಲನಕ್ಕೆ ತರಲು ಕ್ಷಮೆ ಯಾಚಿಸಿದರು. ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು ಎಂದು ಯದುವೀರ್‌ ವಿಶ್ಲೇಷಿಸಿದರು.

ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು‌ ಕಾಂಗ್ರೆಸ್ ನವರು ಏನೇನೊ ಹೇಳಿಕೆ ನೀಡುತ್ತಾರೆ ಎಂದು ಆಕ್ಷೇಪಿಸಿದರು.

ಚಾಮುಂಡಿ ಬೆಟ್ಟ ಧಾರ್ಮಿಕ ಸ್ಥಳ,ಬೆಟ್ಟ ಹಿಂದುಗಳ ಆಸ್ತಿ, ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತದೆ ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಬದಲಾವಣೆ ಆಗಲಾರದು ಎಂದು ಯದುವೀರ್ ಒಡೆಯರ್ ಟಾಂಗ್ ನೀಡಿದರು.

ಡಿ.ಕೆ ಶಿವಕುಮಾರ್ ಹೇಳಿಕೆ ಹಾಸ್ಯಾಸ್ಪದ-ಯದುವೀರ್ Read More

ಆರೋಗ್ಯಕರ ಜೀವನಕ್ಕೆ ಯೋಗ ಸಹಕಾರಿ: ಜಗದೀಶ್ ಶೆಟ್ಟರ್

ಬೆಳಗಾವಿ: ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ ಎಂದು ಸಂಸದ
ಜಗದೀಶ್ ಶೆಟ್ಟರ್ ತಿಳಿಸಿದರು.

ಯೋಗದಿಂದ ಶಾರೀರಿಕ, ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಬಹುದು. ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬಹುದು ಎಂದು ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಟ್ಟರ್ ಮಾತನಾಡಿದರು.

ಈ ಬಾರಿ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. 2014 ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಗ ದಿನಾಚರಣೆ ಜಾರಿಗೆ ತಂದರು. ಜಗತ್ತಿನ ಎಲ್ಲ ರಾಷ್ಟ್ರದಲ್ಲೂ ಯೋಗ ದಿನಾಚರಣೆಯಲ್ಲಿ ಜನರು ಪಾಲ್ಗೊಳ್ಳುತ್ತಿದ್ದಾರೆ. ಆರೋಗ್ಯದಲ್ಲಿ ಉತ್ತಮ ಬದಲಾವಣೆ ತರುವ ನಿಟ್ಟಿನಲ್ಲಿ ಇಡೀ ಜಗತ್ತಿಗೆ ಯೋಗದ ಮಹತ್ವ ತಿಳಿಸಲಾಗಿದೆ ಎಂದು ತಿಳಿಸಿದರು.

ಯೋಗ ಋಷಿಮುನಿಗಳ ಕಾಲದ ಇತಿಹಾಸ ಹೊಂದಿದೆ. ಇದು ವೈದಿಕ ಕಾಲದಿಂದಲೂ ಬೆಳೆದುಬಂದಿದೆ, ಋಗ್ವೇದ ಮತ್ತು ಉಪನಿಷತ್ತುಗಳಲ್ಲಿ ಯೋಗಾಭ್ಯಾಸ ಉಲ್ಲೇಖಿಸಲಾಗಿದೆ. ಪ್ರತಿಯೊಬ್ಬರು ದಿನನಿತ್ಯ ಯೋಗಾಭ್ಯಾಸ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಗದೀಶ್ ಶೆಟ್ಟರ ಸಲಹೆ ನೀಡಿದರು.

ಕೆ.ಎಲ್.ಇ ಪ್ರಭಾಕರ ಕೋರೆ ಆಸ್ಪತ್ರೆಯ ಯೋಗ ತರಬೇತಿದಾರರಾದ ಆರತಿ ಸಂಕೇಶ್ವರಿ ಅವರು ಯೋಗ ವಿವಿಧ ಆಸನಗಳ ಕುರಿತು ತರಬೇತಿ ನೀಡಿದರು.

ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಸೌಮ್ಯ ಬಾಪಟ, ಏರ್ಫೋರ್ಸ್ ಲೆಪ್ಟಿನೆಂಟ್ ಕರ್ನಲ್ ನಿಖಿತಾ ಸಿಂಗ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್ ಸೊಬರದ,
ಜಿಲ್ಲಾ ಆಯುಷ್ ಅಧಿಕಾರಿ ಡಾ. ಶ್ರೀಕಾಂತ ಸುಣಧೋಳಿ, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಯೋಗಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆರೋಗ್ಯಕರ ಜೀವನಕ್ಕೆ ಯೋಗ ಸಹಕಾರಿ: ಜಗದೀಶ್ ಶೆಟ್ಟರ್ Read More

ಮೈಸೂರಿಗೆಸಂಸದ ಸುನಿಲ್ ಬೋಸ್ ಭೇಟಿ

ಮೈಸೂರು,ಮಾ.4: ಮೈಸೂರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ಭೇಟಿ ನೀಡಿದರು.

ಮೈಸೂರಿನ ಜಲ ದರ್ಶಿನಿ ಅತಿಥಿಗೃಹಕ್ಕೆ ಆಗಮಿಸಿದ ಸಂಸದ ಸುನಿಲ್ ಬೋಸ್ ರವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಸಂಸದರ ಆಪ್ತ ಕಾರ್ಯದರ್ಶಿ ಹಾಜರಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಸುನಿಲ್ ಬೋಸ್ ಆಲಿಸಿದರು.

ಮೈಸೂರಿಗೆಸಂಸದ ಸುನಿಲ್ ಬೋಸ್ ಭೇಟಿ Read More

ಮುಡಾ ಹಗರಣ:ಸಿದ್ದು ರಾಜೀನಾಮೆಗೆ ಯದುವೀರ್ ಆಗ್ರಹ

ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಲೋಕಸಭಾ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯದುವೀರ್, ಮುಡಾ ಪ್ರಕರಣವನ್ನು ಸಿಬಿಐ ನಂತಹ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಮೂಡಾ ಹಗರಣದ ಬಗ್ಗೆ ಮಾಹಿತಿ ನೀಡುವಂತೆ ಇಡಿ ಮುಡಾ ಅಧಿಕಾರಿಗಳಿಗೆ 3 ಬಾರಿ ನೋಟಿಸ್ ನೀಡಿದ್ದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ದಾಳಿ ಹಿಂದೆ ಯಾವುದೇ ರಾಜಕೀಯ ದ್ವೇಷ ಇಲ್ಲ ಎಂದು ಹೇಳಿದರು.

ಮುಡಾದಲ್ಲಿ ನಡೆದಿದೆ ಎನ್ನಲಾದ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿಯವರಿಗೆ ನೀಡಲಾಗಿರುವ 14 ಸೈಟ್ ಗಳ ಕುರಿತು ಮಾತ್ರ ಅಲ್ಲ ಮುಡಾದಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆಯೂ ಸಿಬಿಐ ತನಿಖೆ ನಡೆಯಬೇಕು ಎಂದು ಯದುವೀರ್ ಒತ್ತಾಯಿಸಿದರು.

ಮೈಸೂರು ಏರ್ಪೋರ್ಟ್ ನಲ್ಲಿ ರನ್ ವೇ ಕಾರ್ಯ ನಡೆಯುತ್ತಿರುವುದರಿಂದ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳು ಆಗಮಿಸುತ್ತಿಲ್ಲ ಎಂದು ಸಂಸದರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ನಾಗೇಂದ್ರ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಮುಡಾ ಹಗರಣ:ಸಿದ್ದು ರಾಜೀನಾಮೆಗೆ ಯದುವೀರ್ ಆಗ್ರಹ Read More