ವಯನಾಡಿಗೆ ತೆರಳುವ ಮುನ್ನ ಮೈಸೂರಿನ ಕಾಂಗ್ರೆಸ್ ನಾಯಕರ ಭೇಟಿಯಾದ ರಾಹುಲ್
ಮೈಸೂರು : ಲೋಕಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ಸಂಸದ ರಾಹುಲ್ ಗಾಂಧಿ ಅವರು ಮೈಸೂರು ಮೂಲಕ ವಯನಾಡಿಗೆ ತೆರಳಿದರು.
ರಾಹುಲ್ ಗಾಂಧಿ ಅವರು ಸೋಮವಾರ ಮಧ್ಯಾಹ್ನ 12.30 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಈ ವೇಳೆ ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದರು ನಂತರ ವಿಮಾನದಲ್ಲಿ ವಯನಾಡಿಗೆ ಪ್ರಯಾಣ ಬೆಳೆಸಿದರು.
ವಯನಾಡು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿರುವ ಸಹೋದರಿ ಪ್ರಿಯಾಂಕಾ ವಾದ್ರಾ ಪರವಾಗಿ ಪ್ರಚಾರ ನಡೆಸಲು ರಾಹುಲ್ ತೆರಳಿದರು.
ತೆರಳುವ ಮುನ್ನ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ ಆನಂತರ ಹೊರಟರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಸುಧೀಂದ್ರ ಎಸ್ ಎ, ಎನ್ ಎಸ್ ಯು ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕರಿಯಪ್ಪ, ಕೆ ಆರ್ ಕ್ಷೇತ್ರದ ಯುವ ಕಾಂಗ್ರೆಸ್ ಮುಖಂಡ ಹೊಯ್ಸಳ, ರೋಹಿತ್ ಸಿಂಗ್, ಮತ್ತಿತರ ಮುಖಂಡರು ಹಾಜರಿದ್ದರು.
ವಯನಾಡಿಗೆ ತೆರಳುವ ಮುನ್ನ ಮೈಸೂರಿನ ಕಾಂಗ್ರೆಸ್ ನಾಯಕರ ಭೇಟಿಯಾದ ರಾಹುಲ್ Read More