ಎಲ್ಲಾ ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ಟಿಕೆಟ್ ದರ 200 ರೂ ಫಿಕ್ಸ್
ಬೆಂಗಳೂರು,ಮಾ.7: ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿನಿ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸಿನಿಮಾ ಪ್ರೇಮಿಗಳು ಬಹು ವರ್ಷಗಳಿಂದ ಮಲ್ಟಿಪ್ಲೆಕ್ಸ್ ಟಿಕೆಟ್ ದರ ನಿಯಂತ್ರಣ ಮಾಡುವಂತೆ ಒತ್ತಾಯುಸುತ್ತಲೇ ಇದ್ದರು,ಕಡೆಗೂ ಈ ಬೇಡಿಕೆ ಈಡೇರಿದೆ. ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ನಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು 200 ರೂಗೆ ನಿಗದಿಪಡಿಸಿದ್ದಾರೆ.
ನೆರೆ ರಾಜ್ಯಗಳಾದ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರ ಬಹುತೇಕ ಎರಡರಷ್ಟಿತ್ತು.
ಕೆಲ ತಿಂಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸಹ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಲ್ಟಿಪ್ಲೆಕ್ಸ್ ಟಿಕೆಟ್ ದರ ನಿಯಂತ್ರಣ ಮಾಡುವಂತೆ ಮನವಿ ಮಾಡಿದ್ದನ್ನು ಸ್ಮರಿಸಬಹುದಾಗಿದೆ.
ಅಂದು ಅವರಿಗೆ ಭರವಸೆ ನೀಡಿದ್ದಂತೆಯೇ ಸಿಎಂ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು 200 ರೂಗೆ ನಿಗದಿಪಡಿಸಿದ್ದಾರೆ.
ಎಲ್ಲಾ ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ಟಿಕೆಟ್ ದರ 200 ರೂ ಫಿಕ್ಸ್ Read More