ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ:ತುರ್ತು ಭೂ ಸ್ಪರ್ಷ!

ಮುಂಬೈ: ಬಾಂಬ್ ಬೆದರಿಕೆ ಬಂದ ಕಾರಣ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಬೇಕಾಯಿತು.

ವಿಮಾನವನ್ನು ಮುಂಬೈ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ನಲ್ಲಿ ವಿಮಾನ ಲ್ಯಾಂಡಿಂಗ್ ಆದಾಗ ರಿಮೋಟ್ ಕಂಟ್ರೋಲ್ ನಿಯಂತ್ರಿತ ಸ್ಫೋಟಕ ಸಾಧನಗಳನ್ನು ಬಳಸಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಅನಾಮದೇಯ ಶಕ್ತಿಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇಮೇಲ್ ಕಳುಹಿಸಿದ್ದವು.

ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು,ಆದರೆ ಭದ್ರತಾ ಪರಿಶೀಲನೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ:ತುರ್ತು ಭೂ ಸ್ಪರ್ಷ! Read More

ಬಾಲಿವುಡ್ ದಿಗ್ಗಜ ಧರ್ಮೇಂದ್ರ ‌ವಿಧಿವಶ

ಮುಂಬೈ: ಬಾಲಿವುಡ್ ಚಿತ್ರರಂಗದ ಹೆಸರಾಂತ ಹಿರಿಯ ನಟ ಮತ್ತು ಮಾಜಿ ಸಂಸದ ಧರ್ಮೇಂದ್ರ ಅವರು ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು.ತೀವ್ರ ಉಸಿರಾಟದ ತೊಂದರೆ ಹಾಗೂ ವಯೊಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಬಾಲಿವುಡ್ ನಲ್ಲಿ ಸುಮಾರು ಆರು ದಶಕಗಳ ಕಾಲ ಮಿಂಚಿದ್ದ ಧರ್ಮೇಂದ್ರ, 2004ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಸುಮಾರು ಐವತ್ತು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು.

ಎರಡನೆ ಪತ್ನಿ ಹೇಮಾಮಾಲಿನಿ ಕೂಡಾ ಸಂಸದರಾಗಿದ್ದಾರೆ, ಮೂರು ಬಾರಿ ಪತ್ನಿಯನ್ನು ಗೆಲ್ಲಿಸಲು ಅವರು ಪ್ರಚಾರ ಮಾಡಿದ್ದರು.

2009ರ ನಂತರ, ಧರ್ಮೇಂದ್ರ ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿದಿದ್ದರು.

ಧರ್ಮೇಂದ್ರ 1935ರ ಡಿಸೆಂಬರ್‌ 8ರಂದು ಪಂಜಾಬ್‌ನ ಲುಧಿಯಾನದ ಸಣ್ಣ ಹಳ್ಳಿಯಲ್ಲಿ ಜನಿಸಿದ್ದರು, ಕಿರಿಯ ವಯಸ್ಸಿನಲ್ಲೇ ಪ್ರಕಾಶ್ ಕೌರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಚಿಕ್ಕ ವಯಸ್ಸಿನಿಂದಲೇ ನಟನಾಗಬೇಕು ಎಂಬ ಹಂಬಲ ಹೊಂದಿದ್ದ ಧರ್ಮೇಂದ್ರ ನಟಿಸುವುದಕ್ಕಾಗಿಯೇ ಮನೆ ಬಿಟ್ಟು ಬಂದರು. 1960ರಲ್ಲಿ ʻದಿಲ್ ಬಿ ತೇರಾ ಹಮ್ ಬಿ ತೇರೆʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ʻಶೋಲೆʼ ಸಿನಿಮಾ ಮೂಲಕ ದೇಶಾದ್ಯಂತ ಹೆಸರು ಮಾಡಿದರು. ಇವರ ಕಲಾ ಸೇವೆಗೆ 2012ರಲ್ಲಿ ಪದ್ಮ ಭೂಷಣ ಪ್ರಶಸ್ತಿಯೂ ಒಲಿದುಬಂದಿತು.

ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಗೋವಿಂದ, ರಿತೇಶ್‌ ದೇಶ್‌ಮುಖ್‌, ಜೆನಿಲಿಯಾ ದೇಶ್‌ಮುಖ್‌, ಅಮೀಷಾ ಪಟೇಲ್‌ ಸೇರಿದಂತೆ ಸ್ಟಾರ್‌ ನಟ-ನಟಿಯರು ಮುಂಬೈನ್‌ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿ ಧರ್ಮೇಂದ್ರ ಅವರ ಆರೋಗ್ಯವನ್ನ ವಿಚಾರಿಸಿದ್ದರು. ಇದಾದ ಬಳಿಕ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಮಾಡಿಸಿ, ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು.

ಧರ್ಮೇಂದ್ರ ಅವರ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್ ಕೂಡಾ‌ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ.

ಸಿನಿಮಾ ರಂಗಕ್ಕೆ ಇವರು ನೀಡಿರುವ ಕೊಡುಗೆ ಅಪಾರ, 300ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದ ಧರ್ಮೇಂದ್ರ ʻಶೋಲೆʼ, ʻಚುಪ್ಕೆ ಚುಪ್ಕೆʼ, ʻಸೀತಾ ಔರ್ ಗೀತಾʼ ದಂತಹ ಸೂಪರ್ ಹಿಟ್ ಸಿನಿಮಾಗಳು ಮನೆ ಮಾತಾಗಿವೆ.

ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’ ಧರ್ಮೇಂದ್ರ ಅವರ ನಟನೆಯ ಕೊನೆಯ ಚಿತ್ರ. ಇದು ಡಿಸೆಂಬರ್‌ 25ರಂದು ತೆರೆ ಕಾಣಬೇಕಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ ನಟಿಸುತ್ತಿದ್ದಾರೆ.

ಬಾಲಿವುಡ್ ದಿಗ್ಗಜ ಧರ್ಮೇಂದ್ರ ‌ವಿಧಿವಶ Read More

ಹೃದಯಾಘಾತದಿಂದ ನಟಿ ಶೆಫಾಲಿ ಜರಿವಾಲಾ ನಿಧನ

ಮುಂಬೈ: ಕಳೆದ ಒಂದೆರಡು ವರ್ಷಗಳಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ,ಅದರಲ್ಲೂ‌ ಹರೆಯದವರು,ಮಧ್ಯವಯಸ್ಕರಲ್ಲೇ ಅತೀ ಹೆಚ್ಚು.

ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಮೇ ತಿಂಗಳಿಂದ ಜೂನ್ 25‌ ರ ವರಗೆ ನಾಲ್ಕೈದು ಮಂದಿ ಯುವಜನರು ಹೃದಯಾಘಾತಕ್ಕೆ ಬಲಿಯಾದ ಉದಾಹರಣೆ ಇದೆ.

ಅಭಿಷೇಕ್ ಮೇ.20,ಸಂಧ್ಯ ಮೇ,ನಿಶಾಂತ್ ಜೂನ್, ಸುಪ್ರೀತಾ ಜೂನ್ 25,ಚೇತನ್, ಹೀಗೆ ಹಲವು ಮಂದಿ ಯುವಜನರೇ ಹೃದಯಾಘಾತದಿಂದ ನಿಧನರಾಗಿದ್ದು ಆತಂಕ ಸಹಾ ಮೂಡಿದೆ.

ಇದೀಗ ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಕೂಡಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

42 ವರ್ಷದ ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ ಅಷ್ಟರಲ್ಲೆ ಮೃತಪಟ್ಟಿದ್ದರು.

ಪುನೀತ್ ರಾಜ್‌ಕುಮಾರ್ ಜೊತೆ ಹುಡುಗರು ಚಿತ್ರದಲ್ಲಿ ನಾ ಬೋರ್ಡು ಇರದ ಬಸ್ಸನು… ಹಾಡಿಗೆ ಶೆಫಾಲಿ ಮಸ್ತ್ ನೃತ್ಯ ಮಾಡಿ ಕನ್ನಡದಲ್ಲೂ ಸದ್ದು ಮಾಡಿದ್ದರು.

ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಮುಂಬೈನಲ್ಲಿ ಬೆಳೆದರು. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ವಿವಾಹವಾದರು.
ಬಳಿಕ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಮದುವೆಯಾಗಿ ಸಂಸಾರ ನಡೆಸುತ್ತಿದ್ದರು.

ಕಾಂತಾ ಲಗಾ ಹಾಡಿನ ಮೂಲಕ ಬಾಲಿವುಡ್ ನಲ್ಲೂ ಅವರು ಹೆಸರು ಮಾಡಿದ್ದರು. ಶುಕ್ರವಾರ ತಡರಾತ್ರಿ 11.15ರ ಸುಮಾರಿಗೆ ತೀವ್ರ ಹೃದಯಾಘಾತವಾಗಿದೆ, ಶೆಫಾಲಿ ಅವರನ್ನು ತಕ್ಷಣ ಪತಿ ಪರಾಗ್ ತ್ಯಾಗಿ ಮುಂಬೈನ ಬೆಲ್ಲೆವ್ಯೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಆದರೆ ಅಷ್ಟುಹೊತ್ತಿಗಾಗಲೇ ಶೆಫಾಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೃದಯಾಘಾತದಿಂದ ನಟಿ ಶೆಫಾಲಿ ಜರಿವಾಲಾ ನಿಧನ Read More

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾ ನಾಳೆ ಭಾರತಕ್ಕೆ

ಮುಂಬೈ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಗುರುವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಗುತ್ತಿದೆ.

ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ವಿಶೇಷ ತಂಡ ಈಗಾಗಲೇ ಅಮೆರಿಕದಿಂದ ವಿಮಾನದಲ್ಲಿ ಕರೆದುಕೊಂಡು ಬರುತ್ತಿದ್ದು ನಾಳೆ ಬೆಳಗ್ಗೆ ಭಾರತಕ್ಕೆ ಬರಲಿದ್ದಾರೆ.

ಅಮೆರಿಕದ ನ್ಯಾಯಾಲಯದ ಶಿಫಾರಸುಗಳಿಗೆ ಅನುಗುಣವಾಗಿ, ದೆಹಲಿ ಮತ್ತು ಮುಂಬೈನ ಎರಡು ಜೈಲುಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಜಾರಿ ಮಾಡಲಾಗಿದೆ. ಭಾರತಕ್ಕೆ ಬಂದ ನಂತರ ರಾಣಾನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಎನ್‌ಐಎ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹಸ್ತಾಂತರ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಂಡಿದ್ದಾರೆ.

ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿತ್ತು.

ಮುಂಬೈ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿತ್ತು.

ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು.

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹಾವೂರ್ ರಾಣಾಗೆ ಸೋಲು ಉಂಟಾಗಿತ್ತು. ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದ

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾ ನಾಳೆ ಭಾರತಕ್ಕೆ Read More

ಬಾಲಿವುಡ್ ಖ್ಯಾತ ನಟ ಮನೋಜ್ ಕುಮಾರ್ ವಿಧಿವಶ

ಮುಂಬೈ,ಏ.4: ಬಾಲಿವುಡ್ ಖ್ಯಾತ ನಟ,ದಿಗ್ಗಜ, ನಿರ್ದೇಶಕ ಮನೋಜ್ ಕುಮಾರ್ ಅವರು
ವಯೋಸಹಜ ಖಾಯಿಲೆಯಿಂದ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರು ದೇಶಭಕ್ತಿ ಚಲನಚಿತ್ರಗಳಲ್ಲೇ ಹೆಚ್ಚು ನಟಿಸಿ ಪ್ರಸಿದ್ದರಾಗಿದ್ದರು ಮತ್ತು ಭರತ್ ಕುಮಾರ್ ಎಂಬ ಅಡ್ಡ ಹೆಸರಿನಿಂದ ಹೆಸರುವಾಸಿಯಾಗಿದ್ದರು.

ಮನೋಜ್ ಕುಮಾರ್ ಅವರಿಗೆ 87 ವರ್ಷ ವಯಸ್ಸಾಗಿತ್ತು.ಜುಲೈ 24, 1937 ರಲ್ಲಿ ಹರಿಕೃಷ್ಣ ಗಿರಿ ಗೋಸ್ವಾಮಿಯಾಗಿ ಜನಿಸಿದ ಮನೋಜ್ ಕುಮಾರ್ ದೇಶಭಕ್ತಿ ಚಲನಚಿತ್ರಗಳಲ್ಲಿ ಹೆಚ್ಚು ನಟಿಸಿದ್ದರು.

ಮನೋಜ್ ಕುಮಾರ್ ಶಹೀದ್, ಉಪ್ಕಾರ್, ಪುರಬ್ ಔರ್ ಪಶ್ಚಿಮ್, ಮತ್ತು “ರೋಟಿ ಕಪಡಾ ಔರ್ ಮಕಾನ್ ಸೇರಿದಂತೆ ದೇಶಭಕ್ತಿಯ ಕಥಾವಸ್ತುವಿನ ಚಲನಚಿತ್ರಗಳಲ್ಲಿ ನಟಿಸಿದ್ದರು.

ಮನೋಜ್ ಕುಮಾರ್ ಅವರನ್ನು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ 1992 ರಲ್ಲಿ ಪದ್ಮಶ್ರೀ ಮತ್ತು 2015 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಬಾಲಿವುಡ್ ಖ್ಯಾತ ನಟ ಮನೋಜ್ ಕುಮಾರ್ ವಿಧಿವಶ Read More

ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಮುಂಬೈ: ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಎಂಟು ವರ್ಷದ ಮಗಳನ್ನು 29ನೇ ಮಹಡಿಯ ಫ್ಲಾಟ್‌ನಿಂದ ತಳ್ಳಿ ನಂತರ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಘಟನೆ ಬುಧವಾರ ಪಲಸ್ಪೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮಗಳನ್ನು ತಳ್ಳಿದ 37 ವರ್ಷದ ಮೈಥಿಲಿ ದುವಾ ಎಂಬ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳು ಎಂದು ವರದಿಯಾಗಿದೆ. ಮೈಥಿಲಿ ತನ್ನ ಮಗುವನ್ನು ತಳ್ಳಿ ನಂತರ ತಾನೂ ಜಿಗಿದಿದ್ದಾಳೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪನ್ವೇಲ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ Read More

ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ 4 ಕಾರ್ಮಿಕರ ದುರ್ಮರಣ

ಮುಂಬೈ,ಮಾ.9: ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಚಗೊಳಿಸಲು ಹೋದ ವೇಳೆ 4 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಾಗಪಡ ಪ್ರದೇಶದ ಡಿಮ್ಟಿಮ್ಕರ್ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಸ್ಪೇಸ್ ಕಟ್ಟಡದಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಸ್ಥಳದಲ್ಲಿದ್ದ ಇತರ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ,ತಕ್ಷಣ ಸರ್ಕಾರಿ ಜೆಜೆ ಆಸ್ಪತ್ರೆಗೆ ಉಸಿರುಗಟ್ಟಿದ ಕಾರ್ಮಿಕರನ್ನು ಕರೆದೊಯ್ಯಲಾಯಿತು.ಆದರೆ ವೈದ್ಯರು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೃಹನ್ಮುಂಬೈ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ 4 ಕಾರ್ಮಿಕರ ದುರ್ಮರಣ Read More

ಬಾಲಿವುಡ್ ನಟ‌ ಸೈಫ್ ಅಲಿ ಖಾನ್ ಡಿಸ್ಚಾರ್ಜ್

ಮುಂಬೈ:‌ ಚಾಕು ಇರಿತದಿಂದ ತೀವ್ರ ಗಾಯಗೊಂಡು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ.

ಐದು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿದುಕೊಂಡು ಆರೋಗ್ಯ ಸುಧಾರಣೆಯಾದ ಕಾರಣ ಅವರು ಮನೆಗೆ ಮರಳಲಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಜ.16 ರಂದು ಇರಿತಕ್ಕೊಳಗಾಗಿದ್ದ ನಟ ಸೈಫ್ ಅಲಿ ಖಾನ್, ಲೀಲಾವತಿ ಆಸ್ಪತ್ರೆಯಲ್ಲಿ ಐದು ಗಂಟೆಗಳ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರು ಗಾಯಗಳಾಗಿದ್ದು ಎರಡು, ಮೂರು ಗಾಯಗಳು ತುಂಬಾ ಆಳವಾಗಿದ್ದವು.

ಅವರು ಆಸ್ಪತ್ರೆಗೆ ಸೇರಿದ ದಿನವೇ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು ಅದಾದ ಬಳಿಕ ಅವರನ್ನು ಐಸಿಯುದಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಈಗ ಮನೆಗೆ ಕರೆದುಕೊಂಡು ಹೋಗಲಾಯಿತು.

ಆಸ್ಪತ್ರೆಯಿಂದ ಸೈಫ್ ಆರಾಮವಾಗಿ ನಡೆದುಕೊಂಡೇ ಕಾರಿನ ಬಳಿಗೆ ಬಂದರು.
ಇದನ್ನು ಕಂಡು ಸೈಫ್ ಫ್ಯಾನ್ ಗಳು ಫುಲ್ ಖುಷಿಯಾಗಿದ್ದಾರೆ.

ಬಾಲಿವುಡ್ ನಟ‌ ಸೈಫ್ ಅಲಿ ಖಾನ್ ಡಿಸ್ಚಾರ್ಜ್ Read More

ಅಸಕಸ್ಮಿಕ ಗುಂಡು ತಗುಲಿ ಗಾಯಗೊಂಡ ನಟ ಗೋವಿಂದ

ಮುಂಬೈ : ಆಕಸ್ಮಿಕವಾಗಿ ಗುಂಡು ತಗುಲಿ ಬಾಲಿವುಡ್ ನಟ ಗೋವಿಂದ ಗಾಯಗೊಂಡಿದ್ದಾರೆ.

ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮ್ಮದೇ ಗನ್ ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಸಕಸ್ಮಿಕ ಗುಂಡು ತಗುಲಿ ಗಾಯಗೊಂಡ ನಟ ಗೋವಿಂದ Read More

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರತಿಷ್ಟಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದಿದ್ದಾರೆ,

ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.

ಮಿಥುನ್ ಚಕ್ರವರ್ತಿ
ಕಲ್ಕತ್ತಾದಲ್ಲಿ ಜನಿಸಿದ್ದಾರೆ, 1976ರ ಮೃಗಯಾ ಸಿನಿಮಾದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾದ ಅತ್ಯುತ್ತಮ ನಟನೆಯಿಂದಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ತಂದುಕೊಟ್ಟಿತು. ಬಳಿಕ 1992 ರಲ್ಲಿ ತೆರೆ ಕಂಡ ತಹದರ್ ಕಥಾ ಹಾಗೂ 1998ರಲ್ಲಿ ತೆರೆ ಕಂಡಿದ್ದ ಸ್ವಾಮಿ ವಿವೇಕಾನಂದ ಸಿನಿಮಾದ ಪಾತ್ರಗಳಿಗಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಇತ್ತೀಚಿಗೆ ತೆರೆ ಕಂಡಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್‌ನಲ್ಲೂ ಅವರು ಇದ್ದರು.

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ Read More