ಕುಸುಮಾರನ್ನ ಶಾಸಕಿ ಮಾಡಲು ನನ್ನ ಕೊಲೆಗೆ ಸಂಚು: ಮುನಿರತ್ನ ಆರೋಪ

ಬೆಂಗಳೂರು: ಕುಸುಮಾ ಅವರನ್ನು ಶಾಸಕಿ ಮಾಡಲು ಡಿ.ಕೆ ಸುರೇಶ್‌, ಡಿ.ಕೆ ಶಿವಕುಮಾರ್‌ ತಮ್ಮ ಕಡೆಯವರಿಂದ ನನ್ನ ಮೇಲೆ ಆಸೀಡ್‌ ದಾಳಿ ಮಾಡಿಸಿದ್ದಾರೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

ಬುಧವಾರ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ನೆ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾನು ತೆರಳುತ್ತಿದ್ದಾಗ ಏಕಾಏಕಿ ಕಲ್ಲು ಮತ್ತು ಮೊಟ್ಟೆಯಿಂದ ದಾಳಿ ಮಾಡಲಾಗಿದೆ,ಅಲ್ಲದೆ ಕಾರಿನ ಗಾಜಿನ ಮೇಲೆ ಕಲ್ಲು ಬಿದ್ದಿವೆ ಎಂದು ಶಾಸಕರು ದೂರಿದ್ದಾರೆ.

ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿ.ಕೆ ಸುರೇಶ್‌ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆ ಇದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ಮುನಿರತ್ನ ಆರೋಪಿಸಿದರು.

ಕುಸುಮಾರನ್ನ ಶಾಸಕಿ ಮಾಡಲು ನನ್ನ ಕೊಲೆಗೆ ಸಂಚು: ಮುನಿರತ್ನ ಆರೋಪ Read More

ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

82ನೇ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು.

ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.

ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು.

ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ Read More

ಬಿಜೆಪಿ ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವಬೆದರಿಕೆ, ಜಾತಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರದ ಮುಳಬಾಗಿಲ ನಂಗಳಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುನಿರತ್ನ ವಿರುದ್ಧ 2 ದೂರು ದಾಖಲಾಗಿದೆ. ದೂರು ನೀಡಿದರೂ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗುತ್ತಿಗೆದಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು.

ಬಿಜೆಪಿ ಶಾಸಕ ಮುನಿರತ್ನ ಬಂಧನ Read More