ಕ್ಷುಲ್ಲಕ ವಿಚಾರಕ್ಕೆ ಕೌಟುಂಬಿಕ ಕಲಹ:ತಂಗಿಯ ಕೊಂದ ಅಣ್ಣ

(ವರದಿ: ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ, ಜ.2: ಕ್ಷುಲ್ಲಕ ವಿಚಾರಕ್ಕೆ ಕೌಟುಂಬಿಕ ಕಲಹ ನಡೆದು ಅಣ್ಣನೇ ತನ್ನ ಸಹೋದರಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿರುವ ಘಟನೆ ಪಟ್ಟಣದ ಈದ್ದಾ ಮೊಹಲ್ಲಾದಲ್ಲಿ ನಡೆದಿದೆ.

ಪಟ್ಟಣದ ಈದ್ಗಾ ಮೊಹಲ್ಲಾದ ಸೈಯದ್ ಪಾಷಾ ಅವರ ನಾಲ್ಕನೇ ಮಗಳು ಐಮನ್ ಬಾನು (23) ಕೊಲೆಯಾದ ಯುವತಿ. ಈಕೆಯ ಅಣ್ಣ ಫರ್ಮನ್ ಪಾಷಾ ಕೊಲೆ ಮಾಡಿದ ಆರೋಪಿ.

ರಾತ್ರಿ ಅಣ್ಣ,ತಂಗಿ ಜಗಳವಾಡಿದ್ದಾರೆ‌ ಅದನ್ನು ಬಿಡಿಸಲು ಬಂದ ತಂದೆ, ಅತ್ತಿಗೆ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಸೈಯದ್ ಪಾಷಾ ಅವರಿಗೆ ಮೂರು ಹೆಣ್ಣು ಎರಡು ಗಂಡು ಒಟ್ಟು ಐದು ಮಕ್ಕಳು. ದೂರುದಾರರ ಹಿರಿಯ ಮಗ ಸೈಯದ್ ರೋಶನ್ ಅವರು ರಾತ್ರಿ ಮಗು ಮಲಗಿಕೊಳ್ಳುವ ವಿಚಾರ ಎತ್ತಿದ್ದಾರೆ.ಆಗ ಆರೋಪಿ ಫರ್ಮನ್ ಪಾಷಾ ನಾನು ಊಟ ಮಾಡುವವರೆಗೆ ಮಗು ಮಲಗಿಕೊಳ್ಳುವುದು ಬೇಡ ಎಂದು ತಗಾದೆ ತೆಗೆದಿದ್ದಾನೆ.

ಇದಕ್ಕೆ ಮೃತ ಐಮನ್ ಬಾನು ಎಲ್ಲಾ ಇವನು ಹೇಳಿದ ಹಾಗೆ ನಡೆಯಬೇಕು ಮಲಗಿಕೊಳ್ಳಲಿ ಬಿಡು ಎಂದು ಹೇಳಿದ್ದಾಳೆ ಈ ವೇಳೆ ಸಣ್ಣದಾಗಿ ಗಲಾಟೆ ಶುರುವಾಗಿ ಜೋರಾಗಿದೆ. ಈ ವೇಳೆ ಕೋಪದಲ್ಲಿ ಸಹೋದರಿ ಐಮನ್ ಬಾನು ಮೇಲೆ ಫರ್ಮನ್ ಪಾಷಾ ಹಲ್ಲೆ ಮಾಡಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಕೊಲೆ ಮಾಡಿದ್ದಾನೆ.

ಈ ವೇಳೆ ಜಗಳ ಬಿಡಿಸಲು ಬಂದ ಅತ್ತಿಗೆ ತಸ್ಲಿಮ್ ತಾಜ್ ಳ ಕುತ್ತಿಗೆಗೂ ಚಾಕುವಿನಿಂದ ಕುಯ್ದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಾಗೂ ತಡೆಯಲು ಬಂದ ತಂದೆ ಸೈಯದ್ ಪಾಷಾ ಮೇಲೂ ಹಲ್ಲೆ ನಡೆಸಿ ಕೈ ಮುರಿದಿದ್ದಾನೆ. ಗಾಯಗೊಂಡ ತಸ್ಲಿಮ್ ತಾಜ್, ಸೈಯದ್ ಪಾಷಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರು ಹಾಗೂ ಚಾಮರಾಜನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಮನ್ ಬಾನು ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ವರ್ಷಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಈ ಸಂಬಂಧ ಮೃತಳ ಹಿರಿಯ ಸಹೋದರ ಸೈಯದ್ ರೋಷನ್ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಕೌಟುಂಬಿಕ ಕಲಹ:ತಂಗಿಯ ಕೊಂದ ಅಣ್ಣ Read More

ಭಾವಮೈದುನನ ಕೊಂದ ಭಾವ

ಮೈಸೂರು: ಕುಡಿದ ಮತ್ತಲ್ಲಿ ಬಾಮೈದನನ್ನು ಭಾವ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ನಡೆದಿದೆ.

ಮೈಸೂರಿನ ಮೇಟಗಳ್ಳಿಯಲ್ಲಿ ಈ ಘಟನೆ ನಡೆದಿದ್ದು,ಮೈಸೂರು ಜಿಲ್ಲೆ
ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ.ಮನೋಜ್ ( 26) ಕೊಲೆಯಾದ ದುರ್ದೈವಿ.ವಿನೋದ್ ಬಾಮೈದನನ್ನ ಕೊಲೆಗೈದ ಬಾವ.

ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು.ಕುಡಿದು ಮನೋಜ್ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ,
ಮನೋಜ್ ನ ಉಪಟಳ ತಾಳಲಾರದೆ ವಿನೋದ್ ಕೊಲೆ ಮಾಡಿದ್ದಾನೆ.

ಟ್ರೂ ಸ್ಪಿರಿಟ್ ಬಾರ್ ನಲ್ಲಿ ಕುಡಿದು ಗಲಾಟೆ ನಡೆದ ನಂತರ ವಿನೋದ್ ಈ ಹತ್ಯೆ ಮಾಡಿದ್ದಾನೆ.

ಬಾರ್ ನಲ್ಲಿ ರೂಮ್ ಬಾಡಿಗೆ ಪಡೆದು ಬಾವಾ,ಬಾಮೈದನ ಜೊತೆಯಲ್ಲೆ ಕುಡಿದಿದ್ದಾರೆ.ಕಂಠಪೂರ್ತಿ ಕುಡಿಸಿ ಪ್ರಜ್ಞೆ ತಪ್ಪಿದ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಾವ ವಿನೋದ್ ಪರಾರಿಯಾಗಿದ್ದಾನೆ.

ಮೇಟಗಳ್ಳಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವಿನೋದ್ ಬಂಧನಕ್ಕೆ ಬಲೆ ಬೀಸಿದ್ದಾರೆ.

ಭಾವಮೈದುನನ ಕೊಂದ ಭಾವ Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಬುಧವಾರ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್‌ ಕುಮಾರ್‌ ಅವರ ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇದುವರೆಗೆ ನಡೆಸಿದ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ದೋಷಾರೋಪಣಾ ಪಟ್ಟಿಯು ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 7 ಸರಿಪುಟಗಳ 10 ಕಡತಗಳನ್ನು ಒಳಗೊಂಡಿದೆ.

ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ಕಲೆಹಾಕಲಾಗಿದ್ದು, ಇದರಲ್ಲಿ ಪ್ರತ್ಯಕ್ಷ ಸಾಕ್ಷಿದಾರರು 3, ಎಫ್ ಎಸ್‌ ಎಲ್/ಸಿಎಫ್‌ಎಸ್‌ಎಲ್‌ ಸಾಕ್ಷಿಗಳು 8, ಸಿಆರ್‌ಪಿಸಿ ಸೆಕ್ಷನ್‌ 161 ಮತ್ತು 164 ರ ಅಡಿಯಲ್ಲಿ 97 ಸಾಕ್ಷಿಗಳು (ಸಿಆರ್‌ಪಿಸಿ 164 ಅಡಿಯಲ್ಲಿ 27 ಜನ ಸಾಕ್ಷಿದಾರರು ಸೇರಿ), ಪಂಚರು 59, ಇತರೇ ಸರ್ಕಾರಿ ಅಧಿಕಾರಿಗಳು (ತಜಶೀಲ್ದಾರ್‌, ವೈದ್ಯರು, ಆರ್‌ಟಿಒ, ಅಭಿಯಂತರರು) 8 ಹಾಗೂ ಪೊಲೀಸರಿಂದ 56 ಸಾಕ್ಷಿಗಳನ್ನು ಸಂಗ್ರಹಿಸಿರುವುದಾಗಿ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್‌ ಆಯಿಕ್ತ ಬಿ.ದಯಾನಂದ್ ಹೆಚ್ಚುವರಿ ಆಯುಕ್ತ ಸತೀಶ್‌ ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್‌. ಗಿರೀಶ್, ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎನ್‌. ಚಂದನ್‌ ಕುಮಾರ್ ಹಾಗೂ ಅಧಿಕಾರಿ, ಸಿಬ್ಬಂದಿಯನ್ನೊಳಗೊಂಡ ತಂಡ ಭೇದಿಸಿದೆ.

ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ-173(8) ಸಿಆರ್‌ಪಿಸಿ ಅಡಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ Read More

ರೇಣುಕಾಸ್ವಾಮಿ ಕೊಲೆ ಪ್ರಕರಣ:2 ದಿನದಲ್ಲಿ ಚಾರ್ಜ್‌ ಶೀಟ್‌‌ ಸಲ್ಲಿಕೆ-ದಯಾನಂದ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ,ಇನ್ನೂ ಕೆಲವು ಎಫ್ ಎಸ್ ಎಲ್ ವರದಿಗಳು ಬರಬೇಕಿದೆ ಎಂದು ಹೇಳಿದರು.

ರಾಜ್ಯ ಎಫ್ ಎಸ್ ಎಲ್ ನಿಂದ ವರದಿಗಳು ಬಂದಿವೆ. ಎಲ್ಲಾ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಿದ್ಧವಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಚಾರ್ಜ್‌ಶೀಟ್ ನೀಡಿ ಅವರಿಂದ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್ ನೋಡಿರುವ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಹೈದರಾಬಾದ್​ನ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಹಲವು ವರದಿಗಳು ಇನ್ನೂ ಬರಬೇಕಿದೆ,ಹಾಗಾಗಿ ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ
ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು ಎಂದು ದಯಾನಂದ್ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ:2 ದಿನದಲ್ಲಿ ಚಾರ್ಜ್‌ ಶೀಟ್‌‌ ಸಲ್ಲಿಕೆ-ದಯಾನಂದ್ Read More