ಸಾಲ ಮರುಪಾವತಿಸದ ರೈತನ ಮನೆ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್!

ಮೈಸೂರು: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸ ಮುಂದುವರಿಸಿದ್ದು, ಬಡ ಕುಟುಂಬವೊಂದು ಬೀದಿಗೆ ಬಂದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ಸಾಲದ ಕಂತು ಕಟ್ಟಿಲ್ಲ ಎಂಬ ಕಾರಣಕ್ಕೆ ಮೈಕ್ರೋ ಫೈನಾನ್ಸ್ ನವರು ಮನೆ ಜಪ್ತಿ ಮಾಡಿದ್ದಾರೆ.

ನಂಜನಗೂಡು ತಾಲ್ಲೂಕಿನ ಕಂದೇಗಾಲ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದಿಂದ ಆದೇಶ ತಂದು ಮನೆ ಜಪ್ತಿ ಮಾಡಿದೆ,ಹಾಗಾಗಿ ಸಾಲ ಪಡೆದ ಕುಟುಂಬ ಬೀದಿಗೆ ಬಿದ್ದಿದೆ.

ಚಿನ್ನಸ್ವಾಮಿ ಎಂಬುವರು ಮನೆ ನಿರ್ಮಾಣ ಸಂಭಂದ ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ 2023 ರಲ್ಲಿ 2,70,000 ರೂ ಸಾಲ‌ಪಡೆದಿದ್ದರು.
ಈಗಾಗಲೆ 19 ಕಂತುಗಳಲ್ಲಿ 189000 ಸಾಲ‌ ಮರುಪಾವತಿಸಿದ್ದಾರೆ.

ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗಂಪು ಸಾಲ ಪಡೆದಿದ್ದರು.ಮನೆ ಸಾಲ‌ಮರುಪಾವತಿ ಕಂತಿನ ಹಣವನ್ನು ಗುಂಪುಸಾಲಕ್ಕೆ ಜಮೆ ಮಾಡಿಕೊಂಡಿದೆ ಎಂದು ಚಿನ್ನಸ್ವಾಮಿ ಆರೋಪಿಸಿದ್ದಾರೆ.

ತಮ್ಮ ಅನುಮತಿ ಪಡೆಯದೆ ಸುಮಾರು 60 ಸಾವಿರಕ್ಕೂ ಹೆಚ್ವು ಹಣ ಗುಂಪು ಸಾಲಕ್ಕೆ ಜಮೆ ಮಾಡಿಕೊಂಡಿದ್ದಾರೆ.ಇದೀಗ ಏಕಾಏಕಿ ಮನೆ ಸಾಲದ ಕಂತು ಕಟ್ಟಿಲ್ಲವೆಂದು ಮನೆ ಜಪ್ತಿ ಮಾಡಿದ್ದಾರೆ ಎಂದು ಅವರು ನೊಂದು ನುಡಿದಿದ್ದಾರೆ.

ಸಾಲ ಮರುಪಾವತಿಗಾಗಿ ಚಿನ್ನಸ್ವಾಮಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಾಲಾವಕಾಶ ಕೋರಿದ್ದರು ಜತೆಗೆ ಮನೆ ಜಪ್ತಿ ತಡೆಯುವಂತೆಯೂ ಮನವಿ ಮಾಡಿದ್ದರು.

ಆದರೆ ಯಾವುದಕ್ಕು ತಲೆಕೆಡೆಸಿಕೊಳ್ಳದ ಫೈನಾನ್ಸ್ ಸಾಲ ಮರುಪಾವತಿ ಮಾಡುವಂತೆ ತಾಕೀತು ಮಾಡಿತ್ತು.ನೆನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಜಪ್ತಿ ಮಾಡಿ ನೋಟಿಸ್ ಅಂಟಿಸಿ ಹೋಗಿದ್ದಾರೆ.

ಮನೆ ಜಪ್ತಿ ತೆರವು ಗೊಳಿಸುವಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಚಿನ್ನಸ್ವಾಮಿ ದೂರು ನೀಡಿದ್ದಾರೆ.

ಸಾಲ ಮರುಪಾವತಿಸದ ರೈತನ ಮನೆ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್! Read More

ಬಲವಂತದ ಸಾಲ ವಸೂಲಿಗೆ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಹಾವಳಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕಡಕ್ ಎಚ್ಚರಿಕೆಗಳನ್ನು ನೀಡಿದ್ದಾರೆ.

ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದೆ,ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿ ಎಂದು ಸಿಎಂ ಸಲಹೆ ನೀಡಿದರು.

ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವುದೇ ನಮ್ಮ ಉದ್ದೇಶ ಎಂದು ತಿಳಿಸಿದರು.

ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದೆ, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಬಲವಂತದ ಸಾಲ ವಸೂಲಿಗೆ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ Read More

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಗೌರ್ನರ್ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ ಮೂಗುದಾರ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಿನೆಗೂ ಅನುಮೋದನೆ ನೀಡಿದ್ದಾರೆ.

ಕೆಲ‌ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮೈಕ್ರೋ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿತ್ತು. ಆದರೆ ರಾಜ್ಯಪಾಲರು ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು.

ನಂತರ ರಾಜ್ಯ ಸರ್ಕಾರ ಕೆಲ ಮಾರ್ಮಾಡು ಮಾಡಿ ಮತ್ತೊಮ್ಮೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಕಳುಹಿಸಿದ್ದು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅಂತಿಮವಾಗಿ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ಗೌರ್ನರ್ ಅನುಮೋದನೆ Read More

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ಗೌರ್ನರ್:ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತು ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.

ಹಲವು ಲೋಪದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸೂಚಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು, ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ, ಅಲ್ಲೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ಗೌರ್ನರ್:ಸರ್ಕಾರಕ್ಕೆ ಹಿನ್ನಡೆ Read More

ಮೈಕ್ರೋ ಫೈನಾನ್ಸ್ ಮೇಲೆ ಎಫ್ಐಆರ್ ದಾಖಲು

ಮೈಸೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (33) ಎಂಬವರು ವಾಸದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣಮೂರ್ತಿ ಮೈಕ್ರೋ ಫೈನಾನ್ಸ್ ನ ವಿವಿಧ ಸಂಘ ಸಂಸ್ಥೆಗಳಿಂದ 6 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟಲಾಗದೆ ಬೆದರಿ ಆತ್ಮತೆಗೆ ಶರಣಾಗಿದ್ದಾರೆ ಎಂಬ ದೂರು ಕೇಳಿ ಬಂದಿದೆ.

ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಕಿರುಕುಳ ನೀಡುತ್ತಿದ್ದ 5 ಮೈಕ್ರೋ ಫೈನಾನ್ಸ್ ಮೇಲೆ ಹುಲ್ಲಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಮಲ್ಕುಂಡಿ ಗ್ರಾಮದ ರೈತ ಕೃಷ್ಣಮೂರ್ತಿ ಪತ್ನಿ ಲತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮೈಕ್ರೋ ಫೈನಾನ್ಸ್ ಮೇಲೆ ಎಫ್ಐಆರ್ ದಾಖಲು Read More

ದೂರು ನೀಡಿದರೆ ಮೈಕ್ರೋಫೈನಾನ್ಸ್ ವಿರುದ್ಧ ಕಾನೂನು ಕ್ರಮ- ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು,
ಯಾರಾದರೂ ಅಂತಹವರ ವಿರುದ್ಧ ದೂರು ನೀಡಿದರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ನಿನ್ನೆ ಉನ್ನತಮಟ್ಟದ ‌ಸಭೆ ನಡೆಸಿ ಚರ್ಚೆ ನಡೆಸಲಾಗಿದೆ.ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಆದರೂ ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡುವ ತೊಂದರೆಗಳ ವಿರುದ್ಧ ಜನರು ದೂರು ನೀಡಿದರೆ ಖಂಡಿತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಗಾಗಲೇ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದು ‌ಸಿದ್ದರಾಮಯ್ಯ ತಿಳಿಸಿದರು.

ದೂರು ನೀಡಿದರೆ ಮೈಕ್ರೋಫೈನಾನ್ಸ್ ವಿರುದ್ಧ ಕಾನೂನು ಕ್ರಮ- ಸಿದ್ದರಾಮಯ್ಯ Read More

ಮೈಕ್ರೋ ಫೈನಾನ್ಸ್ ಮಾಲಿಕರ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು: ಬಲವಂತದ ಸಾಲ ವಸೂಲಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಕ್ ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಫೈನಾನ್ಸ್ ಕಂಪನಿಯವರು ಕಡ್ಡಾಯ ನಿಯಮ ಪಾಲನೆ ಮಾಡಲೇಬೇಕು, ಬಲವಂತದ ಸಾಲ ವಸೂಲಿ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಎಂದು ಎಚ್ಚರಿಸಿದರು.

ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ, ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಶೀಘ್ರ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ತಿಳಿಸಿದರು ‌

ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು,ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.

ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತು ಜನರಿಗೆ ಸೂಕ್ತ ತಿಳುವಳಿಕೆ ನೀಡಬೇಕು

ಈ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ ತೊಂದರೆಗೊಳಗಾದವರು ಇಲ್ಲಿ ದೂರು ನೀಡಬಹುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಕ್ರೋ ಫೈನಾನ್ಸ್ ಮಾಲಿಕರ ವಿರುದ್ಧ ಸಿದ್ದರಾಮಯ್ಯ ಗರಂ Read More

ಮೈಕ್ರೋ ಫೈನಾನ್ಸ್ :ರೈತರ ಆತ್ಮಹತ್ಯೆಗೆ ಸರ್ಕಾರ ಹೊಣೆ ಮು.ಮಂ ಚಂದ್ರು

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ಮೈಕ್ರೋ ಫೈನಾನ್ಸ್ ಗಳ ವಸೂಲಿ ದಂಧೆಗಳಿಗೆ ರೈತರು ಆತ್ಮಹತ್ಯೆ ಮಾರ್ಗ ಹಿಡಿದಿರುವುದಕ್ಕೆ ರಾಜ್ಯ ಸರ್ಕಾರ ಹೊಣೆ ಹೊರಬೇಕು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಚಂದ್ರು,ಮೈಕ್ರೋ ಫೈನಾನ್ಸ್‌ ಹಾವಳಿಗೆ ಕೂಡಲೇ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಅಕ್ರಮ ಕಂಪನಿಗಳು ಸ್ಥಳೀಯ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಾಗಿ ರೈತಾಪಿ ಮಕ್ಕಳ ಮೇಲೆ ಆರ್ ಬಿ ಐ ನಿಯಮಾವಳಿಗಳು ಹಾಗೂ ಈ ನೆಲದ ಕಾನೂನುಗಳನ್ನು ಉಲ್ಲಂಘಿಸಿ ಅಕ್ರಮ ವಸೂಲಿ, ಬೆದರಿಕೆ, ಅಪಮಾನ ದಂತಹ ಕ್ರಿಮಿನಲ್ ಮಾರ್ಗಗಳಿಂದ ಚಕ್ರ ಬಡ್ಡಿ ವಸೂಲಿ ಮಾಡುತ್ತಿರುವುದು ರಾಜ್ಯದಲ್ಲಿ ಪೊಲೀಸ್ ಇಲಾಖೆ ವೈಫಲ್ಯಗೊಂಡಿರುವುದರ ಸಂಕೇತವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸಹಕಾರಿ ಸಂಸ್ಥೆಗಳು ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಹಣಕಾಸು ನೆರವು ನೀಡದೆ ಕೇವಲ ಪ್ರಭಾವಿಗಳ, ಸ್ಥಳೀಯ ಶಾಸಕರುಗಳ ಬಿಗಿ ಮುಷ್ಟಿಯಲ್ಲಿ ಸಿಲುಕಿಕೊಂಡಿವೆ. ಮತ್ತೊಂದು ಕಡೆ ಸರ್ಕಾರದಿಂದ ರೈತಾಪಿ ವರ್ಗಗಳಿಗೆ ಬೆಳೆ ನಷ್ಟ ಪರಿಹಾರಗಳಿಗೆ ಪರಿಣಾಮಕಾರಿ ಯಾದ ಯೋಜನೆಗಳು ತಲುಪದೇ ಅನಿವಾರ್ಯವಾಗಿ ರೈತರು ಸಾಲಕ್ಕಾಗಿ ಇಂತಹ ಅಕ್ರಮ ಫೈನಾನ್ಸ್ ಕಂಪನಿಗಳ ಮೊರೆ ಹೋಗಿ ತಮ್ಮ ಜೀವಗಳನ್ನೇ ಬಲಿ ಕೊಡುವಂತಹ ವಾತಾವರಣ ಹಾಗೂ ಸಂದರ್ಭಗಳು ರಾಜ್ಯದಲ್ಲಿ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯ ಕಣ್ಮುಚ್ಚಿ ಕುಳಿತಿರುವುದು ಬೇಸರದ ಸಂಗತಿಯಾಗಿದೆ. ಆರಂಭದಲ್ಲೇ ಈ ಕಂಪನಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದರೆ ರೈತರ ಜೀವವನ್ನು ಉಳಿಸಬಹುದಾಗಿತ್ತು. ಆದರೆ ಹಲವು ತಿಂಗಳುಗಳಿಂದ ಸರ್ಕಾರ ಹಾಗೂ ವಿಪಕ್ಷಗಳು ಇಲ್ಲಸಲ್ಲದ ರಾಜಕೀಯ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ,ಹಾಗಾಗಿ ರೈತರ ಆತ್ಮಹತ್ಯೆಗೆ ತಾವುಗಳೇ ನೇರ ಹೊಣೆ ಹೊರಬೇಕೆಂದು ಒತ್ತಾಯಿಸಿದ್ದಾರೆ.

ಕೂಡಲೇ ಕಾನೂನಿನ ಬಿಗಿ ಕುಣಿಕೆಯನ್ನು ಹಣಕಾಸು ಕಂಪನಿಗಳ ವಿರುದ್ಧ ಪ್ರಯೋಗಿಸಬೇಕು ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯಕ್ಕೆ ಕ್ರಮ ತೆಗೆದುಕೊಳ್ಳಲು ಶೀಘ್ರ ಶಿಫಾರಸ್ಸು ಮಾಡಿ ರೈತರ ಆತ್ಮಹತ್ಯೆ,ಶೋಷಣೆಗಳನ್ನು ತಪ್ಪಿಸಬೇಕೆಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಮುಖ್ಯ ಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಮೈಕ್ರೋ ಫೈನಾನ್ಸ್ :ರೈತರ ಆತ್ಮಹತ್ಯೆಗೆ ಸರ್ಕಾರ ಹೊಣೆ ಮು.ಮಂ ಚಂದ್ರು Read More

ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಡೆಗೆ ಕಠಿಣ ಕಾನೂನು ತರ ಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿವೆ, ಮೈಕ್ರೋ ಫೈನಾನ್ಸ್ ಸಂಬಂಧ ಈಗ ಇರುವ ನಿಯಮಗಳು ಅಷ್ಟು ಕಠಿಣವಾಗಿಲ್ಲ ಎಂಬಯದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಅದೇ ರೀತಿ ಅವರ ರಕ್ಷಣೆ ಮಾಡಲೂ ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ಕಠಿಣವಾಗಿಲ್ಲ ಅಂತ ನಮ್ಮ ಇಲಾಖೆಯಿಂದ ಅನೇಕ ವರದಿಗಳು ಬಂದಿವೆ ಹಾಗಾಗಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ತರುವ ಅಗತ್ಯವಿದೆ.ನಮ್ಮ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣಕ್ಕೆ ಕಠಿಣ ಕಾನೂನು ತರಲಿದೆ ಎಂದು ಭರವಸೆ ನೀಡಿದರು.

ಸಾಲ ತಗೊಂಡು ಸಾಲ ವಾಪಸ್ ಕಟ್ಟದೇ ಹೋದ್ರೆ ಸಾಲಗಾರರ ಬಳಿಯೇ ಕ್ರಮ ತೆಗೆದುಕೊಳ್ಳಬಹುದು ಅಂತ ಫೈನಾನ್ಸ್ ಅವರು ಸಹಿ ಹಾಕಿಸಿಕೊಂಡಿರುತ್ತಾರೆ. ಸಾಲ ತಗೋಳೋವಾಗ ಹತ್ತಾರು ಕಡೆ ಸಹಿ ತೆಗೆದುಕೊಂಡಿರುತ್ತಾರೆ. ಆ ಸಹಿ ಯಾಕೆ‌ ಮಾಡಿರುತ್ತೇವೆ ಅಂತಾನೂ ಗ್ರಾಹಕರಿಗೆ ಗೊತ್ತಿರೋದಿಲ್ಲ .ಅದು ಕಮಿಟ್ ಮೆಂಟ್ ಆಗಿರುತ್ತದೆ. ಆ ಆಧಾರದಲ್ಲಿ ಮನೆ ರೇಡ್ ಮಾಡೋದು, ಮನೆ ಸೀಜ್ ಮಾಡೋದು‌ ಎಲ್ಲಾ ಮಾಡ್ತಿದ್ದಾರೆ.ಇದಕ್ಕೆ ‌ಕಾನೂನಿನಲ್ಲೆ ಪರಿಹಾರ ಕಂಡುಹಿಡಿಯಬೇಕಿದೆ ಎಂದು ಪರಮೇಶ್ವರ್ ತಿಳಿಸಿದರು.

ಈಗಾಗಲೇ ಕಾನೂನು ಸಚಿವರು ಅದರ ಬಗ್ಗೆ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕಾನೂನು ಬದಲಾವಣೆ ಮಾಡಿ ಕಠಿಣ ನಿಯಮ ಜಾರಿ ಮಾಡುವುದಾಗಿ ಹೇಳಿದ್ದಾರೆ. ನಾಳೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್ Read More

ಮೈಕ್ರೋ ಫೈನಾನ್ಸ್ ಹಾವಳಿ, ಕ್ರಮಕ್ಕೆ ಹೇಮಾ ನಂದೀಶ್ ಆಗ್ರಹ

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮಿತಿಮೀರಿದ್ದು,ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಹೇಮಾನಂದೀಶ್ ಒತ್ತಾಯಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ವಸೂಲಾತಿ ದೌರ್ಜನ್ಯದಿಂದ ಸಾಲಗಾರ ಬಡವರು ತತ್ತರಿಸಿದ್ದಾರೆ. ಆ‌ರ್ ಬಿಐ ನಿಯಮಗಳನ್ನು ಗಾಳಿಗೆ ತೂರಿ ಮೀಟರ್ ಬಡ್ಡಿ ದಂಧೆಕೋರರಂತೆ ಮೈಕ್ರೋ ಫೈನಾನ್ಸ್‌ ಜಾಲ ಸಾಲಗಾರರ ಪ್ರಾಣ ಹಿಂಡಿ ವಸೂಲಾತಿಗೆ ನಿಂತಿರುವುದು ಸರಿಯಲ್ಲ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಮರ್ಯಾದೆಗೆ ಅಂಜಿ ಗ್ರಾಮೀಣ ಪ್ರದೇಶದ ಬಡವರು ಮನೆ ತೊರೆದು ಹೋಗುತ್ತಿದ್ದಾರೆ. ಇವರ ರಕ್ಷಣೆಗೆ ಸರಕಾರ ಜರೂರು ಕ್ರಮ ಕೈಗೊಳ್ಳಬೇಕಿದೆ. ನಿಯಮ ಉಲ್ಲಂಘಿಸುವ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದು ಹೇಮಾ ನಂದೀಶ್ ಆಗ್ರಹಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಹಾವಳಿ, ಕ್ರಮಕ್ಕೆ ಹೇಮಾ ನಂದೀಶ್ ಆಗ್ರಹ Read More