ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಿಸಿದ ನಕ್ಸಲರು; ಎಂಟು ಜವಾನರು ಚಾಲಕ ಸಾವು
ಛತ್ತೀಸ್ಗಡ: ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿ ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲರು ನಡೆಸಿದ ಪ್ರಬಲ ಐಇಡಿ ಸ್ಫೋಟಕ್ಕೆ
ಎಂಟು ಡಿಆರ್‌ಜಿ ಜವಾನರು, ಚಾಲಕ ಸೇರಿ 9 ಮಂದಿ ಮೃತಪಟ್ಟಿದ್ದಾರೆ.
ಎಂಟು ದಾಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಯೋಧರು ವಾಪಸಾಗುತ್ತಿದ್ದಾಗ ಸ್ಫೋಟ ಸಂಭವಿಸಿದೆ.
ವಾಹನವು ಸ್ಫೋಟಕ ಸಾಧನಕ್ಕೆ ತಾಗಿದ್ದರಿಂದ ಚಾಲಕ ಸೇರಿ ವಾಹನದಲ್ಲಿದ್ದ ಎಲ್ಲಾ ಒಂಬತ್ತು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಜಿಲ್ಲೆಯ ಇನ್ಸ್‌ಪೆಕ್ಟರ್ ಜನರಲ್ ತಿಳಿಸಿದ್ದಾರೆ.
ಇತ್ತೀಚೆಗೆ ಭದ್ರತಾ ಸಿಬ್ಬಂದಿ ಮೇಲೆ ನಕ್ಸಲೀಯರು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ
2023 ಏಪ್ರಿಲ್ 26 ರಂದು, ನೆರೆಯ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ಪಡೆಯ ವಾಹನವನ್ನು ಗುರಿಯಾಗಿಸಿ ನಕ್ಸಲರು ಸ್ಫೋಟಿಸಿದ ಪರಿಣಾಮ ಹತ್ತು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಚಾಲಕ ಸಾವನ್ನಪ್ಪಿದ್ದರು.
ಈ ಮಧ್ಯೆ, ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದ್ದು, ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಶನಿವಾರ ಸಂಜೆ ನಡೆದ ಎನ್‌ಕೌಂಟರ್, ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ.
ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಿಸಿದ ನಕ್ಸಲರು; ಎಂಟು ಜವಾನರು ಚಾಲಕ ಸಾವು Read More