ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಜಯ: ಮೈಸೂರು ಪಾಕ್ ವಿತರಿಸಿದ ಅಪೂರ್ವ ಸ್ನೇಹ ಬಳಗ
ಮೈಸೂರು: ಮೈಸೂರಿನ ಚಾಮುಂಡಿಪುರಂ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮೈಸೂರು ಪಾಕ್ ವಿತರಿಸಿ ಸಂಭ್ರಮಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ , ನಿತೀಶ್ ಕುಮಾರ್ ಅವರಿಗೆ ಜೈಕಾರ ಕೂಗಿ ಸಂಭ್ರಮಿಸಿದರು.
ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಮೈಸೂರು ನಗರ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮರಿಯಪ್ಪ, ಉದ್ಯಮಿ ಜಯರಾಮ್, ಆನಂದ್, ಸುಚೇಂದ್ರ, ಜತ್ತಿ ಪ್ರಸಾದ್, ಪುರುಷೋತ್ತಮ್, ಶಿವಲಿಂಗ ಸ್ವಾಮಿ, ಜಗದೀಶ್ ಮತ್ತಿತರರು ಹಾಜರಿದ್ದರು.
ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಜಯ: ಮೈಸೂರು ಪಾಕ್ ವಿತರಿಸಿದ ಅಪೂರ್ವ ಸ್ನೇಹ ಬಳಗ Read More